ಮಂಗಳೂರು: ಕಾನ್‌ಸ್ಟೇಬಲ್‌ನಿಂದಲೇ ಲಂಚ ಪಡೆಯುತ್ತಿದ್ದಾಗ ಕೆಎಸ್ಆರ್‌ಪಿ ಇನ್‌ಸ್ಪೆಕ್ಟರ್ ಲೋಕಾಯುಕ್ತ ಬಲೆಗೆ
ಮಂಗಳೂರು: ನಗರದ ಕೊಣಾಜೆಯ ಕೆಎಸ್ಆರ್‌ಪಿ 7ನೇ ಬೆಟಾಲಿಯನ್ ಇನ್‌ಸ್ಪೆಕ್ಟರ್ ಮಹಮ್ಮದ್ ಹ್ಯಾರೀಸ್ ಎಂಬಾತ 18ಸಾವಿರ ರೂ. ಲಂಚ ಪಡೆಯುತ್ತಿದ್ದಾಗಲೇ ಲೋಕಾಯುಕ್ತ ಪೊಲೀಸ್ ಬಲೆಗೆ ಬಿದ್ದಿದ್ದಾನೆ. ಕೆಎಸ್ಆರ್‌ಪಿ 7ನೇ ಬೆಟಾಲಿಯನ್‌ನ ಪೊಲೀಸ್ ಅತಿಥಿಗೃಹದಲ್ಲಿ ನಿರ್ವಾಹಕರಾಗಿ ಕರ್ತವ್ಯ ನಿರ್ವಹಿಸಲು ಮೀಸಲು ಪೊಲೀಸ್ ಕಾನ್ಸ್‌ಸ್ಟೇಬಲ್‌ರಿಂದ ಮಹಮ್ಮದ್ ಹ್ಯಾರೀಸ್ 20,000 ಲಂಚಕ್ಕೆ ಬೇಡಿಕೆಯಿಟ್ಟಿದ್ದ. ಜೊತೆಗೆ ಪ್ರತೀ ತಿಂಗಳು 6,000 ರೂ.ನಂತೆ ಹಣ ನೀಡಬೇಕೆಂದು ಲಂಚ ಕೇಳಿದ್ದ. ಅದರಂತೆ ಮೊದಲಿಗೆ 20000 ಹಣನೀಡಿ, ಬಳಿಕ ಪ್ರತಿ ತಿಂಗಳು 6,000ದಂತೆ ಲಂಚ ನೀಡುತ್ತಾ ಬಂದಿದ್ದಾರೆ. ಈ…

