ಗನ್ ತೋರಿಸಿ ವಿಧವೆಯಿಂದ ಡಿಕೆಶಿ ನಿವೇಶನ ವಶ: HD ಕುಮಾರಸ್ವಾಮಿ ಗಂಭೀರ ಆರೋಪ
ಮೈಸೂರು ಚಲೋ ಪಾದಯಾತ್ರೆಯ ಮೂರನೇ ದಿನ ಚನ್ನಪಟ್ಟಣದಲ್ಲಿ ನಡೆದ ಬಹಿರಂಗ ಸಭೆಯಲ್ಲಿ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ಡಿಸಿಎಂ ಡಿಕೆ ಶಿವಕುಮಾರ್ ವಿರುದ್ಧ ವಾಗ್ದಾಳಿ ನಡೆಸಿದರು. ಕಂಡ ಕಂಡವರ ಆಸ್ತಿಗಳನ್ನು ಸರಣಿಯಾಗಿ ಕಬ್ಜಾ ಮಾಡುತ್ತಿರುವ ವ್ಯಕ್ತಿಯೊಬ್ಬ ನನ್ನ ಆಸ್ತಿ, ನನ್ನ ತಂದೆಯವರ ಆಸ್ತಿಯ ಬಗ್ಗೆ ಮಾತನಾಡುತ್ತಿದ್ದಾರೆ. ಆದರೆ, ಅವರು ಮಾಡುತ್ತಿರುವ ಅನಾಚಾರ, ಅಕ್ರಮಗಳ ಬಗ್ಗೆ ನೊಣವಿನಕೆರೆ ಅಜ್ಜಯ್ಯನ ಮುಂದೆ ಬಂದು ಪ್ರಮಾಣ ಮಾಡಲಿ ಎಂದು ಮತ್ತೆ ಸವಾಲು ಹಾಕಿದರು. ಸದಾಶಿವನಗರದಲ್ಲಿ ಐವರು ವಿಧವಾ ತಾಯಂದಿರ ಬಳಿ ನಿವೇಶನಗಳ…

