ಮುದ್ರಾ ಯೋಜನೆಯಲ್ಲಿ ಸಾಲ ಕೊಡಿಸುವುದಾಗಿ ನಂಬಿಸಿ ಹಲವರಿಗೆ ವಂಚನೆ
ಮಂಗಳೂರು: ವ್ಯಕ್ತಿಯೋರ್ವ ಕೇಂದ್ರ ಸರಕಾರದ ಮುದ್ರಾ ಯೋಜನೆಯಲ್ಲಿ ಸಾಲ ಕೊಡಿಸುವುದಾಗಿ ನಂಬಿಸಿ ಸಾರ್ವಜನಿಕರಿಗೆ 20.50 ಲಕ್ಷ ರೂ. ಪಡೆದು ವಂಚಿಸಿರುವ ಕುರಿತು ಕಂಕನಾಡಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಗರದ ಐಸ್‌ಕ್ರೀಂ ಪಾರ್ಲರ್‌ನಲ್ಲಿ ಕೆಲಸ ಮಾಡುತ್ತಿದ್ದ ಅನಿಲ್ ಎನ್ನುವವರಿಗೆ ಪರಿಚಯವಾಗಿದ್ದ ಪ್ರಕಾಶ್ ಪೂಜಾರಿ ಎಂಬಾತ ತಾನು ಮುದ್ರಾ ಯೋಜನೆಯ ಏಜೆಂಟ್ ಎಂದು ಪರಿಚಯಿಸಿ ಸಾಲ ಕೊಡಿಸುತ್ತೇನೆ ಎಂದು ತಿಳಿಸಿದ್ದಾನೆ. ಅನಿಲ್ ಅವರು ಬೇಡ ಎಂದರೂ, ವಿನಯದಿಂದ ಮಾತನಾಡಿ ಹಲವರಿಗೆ 15 ಲಕ್ಷ ರೂ. ವರೆಗೆ ಸಾಲ ತೆಗೆಸಿಕೊಟ್ಟಿದ್ದೇನೆ…

