Headlines

ಸಮವಸ್ತ್ರದಲ್ಲೇ ಹಾರೆ ಹಿಡಿದು ಗುಂಡಿ ಮುಚ್ಚಿದ ಪೊಲೀಸ್‌ ಸಬ್‌ ಇನ್‌ಸ್ಪೆಕ್ಟರ್‌

ಮಂಗಳೂರು: ರಾಷ್ಟ್ರೀಯ ಹೆದ್ದಾರಿ-66ರ ಕೆಪಿಟಿ ಜಂಕ್ಷನ್‌ ಬಳಿ ಉಂಟಾದ ಹೊಂಡಗಳನ್ನು ಸಂಚಾರಿ ಪೊಲೀಸರೇ ಕಾಂಕ್ರೀಟ್‌ ಹಾಕಿ ಮುಚ್ಚುವ ಕೆಲಸ ಮಾಡಿದ್ದಾರೆ! ಮಂಗಳವಾರ ಬೆಳಗ್ಗೆ ಸಂಚಾರ ಪೂರ್ವ (ಕದ್ರಿ) ಪೊಲೀಸ್‌ ಠಾಣೆಯ ಸಬ್‌ ಇನ್‌ಸ್ಪೆಕ್ಟರ್‌ ಈಶ್ವರ್‌ ಸ್ವಾಮಿ, ಸಿಬಂದಿ ಸಿದ್ದರಾಜು ಮತ್ತು ಮಂಜು ಅವರು ಕಾಂಕ್ರೀಟ್‌ನ್ನು ತರಿಸಿ ತಾವೇ ಹಾರೆ ಹಿಡಿದು ಹೊಂಡಕ್ಕೆ ಹಾಕಿ ಸಮತಟ್ಟುಗೊಳಿಸುವ ಪ್ರಯತ್ನ ನಡೆಸಿದ್ದಾರೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಈಶ್ವರ್‌ ಸ್ವಾಮಿಯವರು, ಇತ್ತೀಚೆಗೆ ಇಲ್ಲಿನ ರಸ್ತೆ ಹೊಂಡಕ್ಕೆ ಬಿದ್ದು ಸ್ಕೂಟರ್‌ ಸವಾರರಾದ ಹಿರಿಯ ನಾಗರಿಕರೋರ್ವರು…

Read More

ಮಲಹೊರುವ ಪದ್ಧತಿ ನಿಷೇಧ: ಮಾಹಿತಿ ನೀಡಲು ಹೈಕೋರ್ಟ್ ನಿರ್ದೇಶನ

ಬೆಂಗಳೂರು: ಮಲ ಹೊರುವ ಪದ್ಧತಿ ನಿಷೇಧ ಮತ್ತು ಪುನರ್ವಸತಿ ಕಾಯ್ದೆ – 2013ರ ಅಡಿಯಲ್ಲಿ ನಿಯಮಗಳ ಅನುಸಾರ ಕೈಗೊಂಡ ಕ್ರಮಗಳ ಕುರಿತು ಜುಲೈ 9ರಂದು ಉತ್ತರ ನೀಡುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶನ ನೀಡಿದೆ. ರಾಜ್ಯದಲ್ಲಿ ಮಲ ಹೊರುವ ಪದ್ಧತಿಯ ನಿರ್ಮೂಲನೆಗೆ ಅನುಷ್ಠಾನಗೊಳಿಸಲಾದ ಮಲ ಹೊರುವ ಜಾಡಮಾಲಿಗಳ ನಿಯೋಜನೆ ನಿಷೇಧ ಮತ್ತು ಪುನರ್ವಸತಿ ಕಾಯ್ದೆ ಅನುಸಾರ ಕೈಗೊಂಡ ಕ್ರಮಗಳ ಬಗ್ಗೆ ಮಾಹಿತಿ ಒದಗಿಸುವಂತೆ ಸೂಚನೆ ನೀಡಲಾಗಿದೆ. ನಿಷೇಧದ ನಡುವೆಯೂ ಮಲಹೊರುವ ಪದ್ಧತಿ ಜಾರಿಯಲ್ಲಿರುವ ಬಗ್ಗೆ ಸ್ವಯಂ ಪ್ರೇರಿತ ಪಿಐಎಲ್…

Read More

ದ.ಕ ಜಿಲ್ಲಾ ಎಸ್.ಪಿ ರಿಷ್ಯಂತ್ ವರ್ಗಾವಣೆ- ನೂತನ ಎಸ್ಪಿಯಾಗಿ ಯತೀಶ್ ಎನ್. ನೇಮಕ

ರಾಜ್ಯ ಸರ್ಕಾರ ರಾತ್ರೋರಾತ್ರಿ ಪೊಲೀಸ್ ಇಲಾಖೆಯಲ್ಲಿ ಮೇಜರ್ ಸರ್ಜರಿ ಮಾಡಿದೆ. 25 ಮಂದಿ ಅಧಿಕಾರಿಗಳ ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ದ.ಕ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಿಷ್ಯಂತ್ ವರ್ಗಾವಣೆಯಾಗಿ ನೂತನ ಎಸ್ಪಿಯಾಗಿ ಯತೀಶ್.ಎನ್ ನೇಮಕವಾಗಿದ್ದಾರೆ. ಮಂಡ್ಯ ಎಸ್ಪಿಯಾಗಿದ್ದ ಯತೀಶ್ ದಕ್ಷಿಣ ಕನ್ನಡಕ್ಕೆ ನೂತನ ಎಸ್ಪಿಯಾಗಿ ನೇಮಕವಾಗಿದ್ದು, ಬೆಂಗಳೂರು ವೈರ್ ಲೆಸ್ ವಿಭಾಗದ ಎಸ್ಪಿಯಾಗಿ ರಿಷ್ಯಂತ್‌ ವರ್ಗಾವಣೆಯಾಗಿದ್ದಾರೆ. 25 ಮಂದಿ ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ನೀಡಿದೆ. ಲಾಬೂರಾಮ್ : ಐಜಿಪಿ ಕೇಂದ್ರ ವಲಯಬಿ….

Read More

‘ವಿಪಕ್ಷ ನಾಯಕ ರಾಹುಲ್ ಗಾಂಧಿ’ ಒಬ್ಬ ‘ಚೈಲ್ಡ್’ ಇದ್ದಂತೆ: ಪ್ರಧಾನಿ ಮೋದಿ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಮಂಗಳವಾರ (ಜುಲೈ 2) ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ವಿರುದ್ಧ ಪರೋಕ್ಷ ವಾಗ್ದಾಳಿ ನಡೆಸಿದರು. ಅವರನ್ನು “ಮಗು” ಎಂದು ಬಣ್ಣಿಸಿದರು. ರಾಹುಲ್ ಗಾಂಧಿಯನ್ನು ಗುರಿಯಾಗಿಸಲು ಶಾಲಾ ಮಗುವಿನ ಕಥೆಯನ್ನು ಉಲ್ಲೇಖಿಸಿದ ಅವರು, ವಿಫಲರಾಗುವ ಮೂಲಕ ಅವರು “ಹೊಸ ವಿಶ್ವ ದಾಖಲೆ” ಮಾಡಿದ್ದಾರೆ ಎಂದು ಹೇಳಿದರು. “1984ರ ಚುನಾವಣೆಯನ್ನು ನೆನಪಿಸಿಕೊಳ್ಳೋಣ. ಆ ಚುನಾವಣೆಗಳ ನಂತರ, ಈ ದೇಶದಲ್ಲಿ 10 ಲೋಕಸಭಾ ಚುನಾವಣೆಗಳು ನಡೆದವು, ಆದರೆ ಕಾಂಗ್ರೆಸ್ ಒಮ್ಮೆಯೂ 250 ರ ಗಡಿಯನ್ನು ದಾಟಲು…

Read More

ಅಮೆರಿಕದಲ್ಲಿ ಮಂಗಳೂರಿಗರಿಂದ ಯಕ್ಷಗಾನ ಅಭಿಯಾನ

ಜುಲೈ 9ರಂದು ಯಕ್ಷದ್ರುವ ಪಟ್ಲ ಫೌಂಡೇಶನ್‌ ಟ್ರಸ್ಟ್‌ನ ಕಲಾವಿದರ ತಂಡ ಯಕ್ಷಗಾನ ಅಭಿಯಾನಕ್ಕಾಗಿ ಅಮೆರಿಕ ಪ್ರವಾಸ ಕೈಗೊಳ್ಳುತ್ತಿದೆ. ಪುತ್ತಿಗೆ ಮಠದ ಶ್ರೀ ಶ್ರೀ ಶ್ರೀ ಸುಗುಣೇಂದ್ರ ತೀರ್ಥ ಸ್ವಾಮೀಜಿಯವರ ಶುಭಾಶೀರ್ವಾದದಲ್ಲಿ ಯುಎಸ್‌ಎ ಘಟಕದ ಅಧ್ಯಕ್ಷ ಡಾ. ಅರವಿಂದ ಉಪಾಧ್ಯಾಯ, ಡಾ. ಶ್ರೀಧರ ಆಳ್ವ, ಮಹಾಬಲ ಶೆಟ್ಟಿ, ಉಳಿ ಯೋಗೇಂದ್ರ ಭಟ್‌, ಮುಂತಾದವರ ನೇತೃತ್ವದಲ್ಲಿ ನಡೆಯಲಿದೆ.ಎಂದು ಪಟ್ಲ ಫೌಂಡೇಶನ್‌ ಸ್ಥಾಪಕಾಧ್ಯಕ್ಷ ಪಟ್ಟ ಸತೀಶ್‌ ಶೆಟ್ಟಿ ನಗರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದ್ದಾರೆ.

Read More

ಬೆಳ್ತಂಗಡಿ ತಾಲೂಕು ಕಚೇರಿಗೆ ಶಾಸಕ ಹರೀಶ್ ಪೂಂಜಾ ಧಿಢೀರ್ ಭೇಟಿ..! ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಶಾಸಕರು

ಬೆಳ್ತಂಗಡಿ ತಾಲೂಕು ಕಚೇರಿಗೆ ಶಾಸಕ ಹರೀಶ್ ಪೂಂಜಾ ಧಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕಡತ ವಿಲೇವಾರಿಗೆ ಅಧಿಕಾರಿಗಳು ಸತಾಯಿಸುತ್ತಿದ್ದಾರೆ ಎಂಬ ಆರೋಪದ ಮೇಲೆ ದಿಢೀರ್ ಎಂದು ತಾಲೂಕು ಕಚೇರಿಗೆ ಆಗಮಿಸಿದ ಶಾಸಕ ಹರೀಶ್ ಪೂಂಜಾ ಸತಾಯಿಸುತ್ತಿದ್ದ ಅಧಿಕಾರಿಗಳ ಕ್ಲಾಸ್ ತೆಗೆದುಕೊಂಡಿದ್ದಾರೆ. ಬೆಳ್ತಂಗಡಿ ತಹಶೀಲ್ದಾರ್ ಪೃಥ್ವಿ ಸಾನಿಕಂಗೂ ಕ್ಲಾಸ್ ತೆಗೆದುಕೊಂಡ ಪೂಂಜ, ಕಚೇರಿಗೆ ಆಗಮಿಸಿದ ಜನರ ಸಮಸ್ಯೆಯನ್ನು ಆಲಿಸಿದರು.ಅಧಿಕಾರಿಗಳ ಸ್ಪಂದನೆ ಬಗ್ಗೆ , ಜನರಿಂದ ಮಾಹಿತಿ ಪಡೆದ ಶಾಸಕ , ಬಳಿಕ ರೆಕಾರ್ಡ್ ರೂಮ್ಗೆ ಭೇಟಿ ನೀಡಿ…

Read More

ರಾಹುಲ್‌ ಭಾಷಣಕ್ಕೆ ಹಿಂದೂಪರ ಸಂಘಟನೆಗಳು ಕಿಡಿ – ಕಾಂಗ್ರೆಸ್ ಕಚೇರಿಗೆ ಕಲ್ಲು..!

ಪ್ರತಿಪಕ್ಷ ನಾಯಕ ಹಾಗೂ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಹಿಂದುಗಳ ವಿರುದ್ಧ ನೀಡಿದ ಹೇಳಿಕೆ ಖಂಡಿಸಿ ಹಿಂದೂಪರ ಸಂಘಟನೆಗಳು ಗುಜರಾತ್ ರಾಜಧಾನಿ ಅಹಮದಾಬಾದ್ ನ ಕಾಂಗ್ರೆಸ್ ಕಚೇರಿಯ ಮೇಲೆ ಕಲ್ಲುತೂರಾಟ ನಡೆಸಿದ್ದಾರೆ. ಸೋಮವಾರ ರಾತ್ರಿ ಭಜರಂಗದಳ, ವಿಶ್ವ ಹಿಂದೂ ಪರಿಷತ್ ಮತ್ತು ಬಿಜೆಪಿ ಕಾರ್ಯಕರ್ತರು ಕಾಂಗ್ರೆಸ್ ಕಚೇರಿಯ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎಂದು ಕಾಂಗ್ರೆಸ್ ವಕ್ತಾರ ಹೆಮಾಂಗ್ ರಾವಲ್ ಆರೋಪಿಸಿದ್ದಾರೆ. ಅಹಮದಾಬಾದ್ ಪೊಲೀಸರು ಕಲ್ಲು ತೂರಾಟ ಪ್ರಕರಣವನ್ನು ದಾಖಲಿಸಿಕೊಂಡಿದ್ದಾರೆ. ಆದರೆ ಇದುವರೆಗೆ ಯಾರನ್ನೂ ಬಂಧಿಸಲಾಗಿಲ್ಲ. ಸೋಮವಾರ…

Read More

ಕರವೇ ವತಿಯಿಂದ ಕನ್ನಡಿಗರಿಗೆ ಉದ್ಯೋಗ ಮೀಸಲಾತಿ ಜಾರಿಯಾಗುವಂತೆ ರಾಜ್ಯ ಅಧ್ಯಕ್ಷರಾದ ಟಿ.ಎ.ನಾರಾಯಣ ಗೌಡರಿಂದ ಮುಖ್ಯ ಮಂತ್ರಿಗಳಿಗೆ ಮನವಿ

ಬೆಂಗಳೂರು : ಖಾಸಗಿ ವಲಯದಲ್ಲಿ ಕನ್ನಡಿಗರಿಗೆ ಅನ್ಯಾಯವಾಗುತ್ತಿದ್ದು, ಕಡ್ಡಾಯವಾಗಿ ಕನ್ನಡಿಗರಿಗೆ ಉದ್ಯೋಗ ಮೀಸಲಾತಿ ಕಲ್ಪಿಸಲು ಆಗ್ರಹಿಸಿ ನಿನ್ನೆ ರಾಜ್ಯಾದ್ಯಂತ ಕರ್ನಾಟಕ ರಕ್ಷಣಾ ವೇದಿಕೆಯ ರಾಜ್ಯಾಧ್ಯಕ್ಷ ಟಿ.ಎ ನಾರಾಯಣಗೌಡ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ.ಬೆಂಗಳೂರು ಸೇರಿದಂತೆ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಬೆಳಗ್ಗೆ 11 ಗಂಟೆಯಿಂದ ಸಂಜೆ 4ರವರೆಗೆ ಬೃಹತ್ ಪ್ರತಿಭಟನೆ ನಡೆಸಲಾಯಿತು. ಪ್ರತಿಭಟನೆಯಲ್ಲಿ ಕರವೇ ವತಿಯಿಂದ ಡಾ. ಸರೋಜಿನಿ ಮಹಿಷಿ ವರದಿ ಜಾರಿಯಾಗುವಂತೆ ಬೆಂಗಳೂರಿನ ಫ್ರಿಡಂ ಪಾರ್ಕನಲ್ಲಿ ಬೃಹತ್ ಪ್ರತಿಭಟನೆ ಮುಖಾಂತರ ಕನ್ನಡಿಗರಿಗೆ ಉದ್ಯೋಗ ಮೀಸಲಾತಿ ಕುರಿತು ಕ…

Read More

ಸೇನೆ ಸೇರಬಯಸುವವರಿಗೆ ಮತ್ತೊಂದು ಗುಡ್‌ ನ್ಯೂಸ್‌ : ʻಅಗ್ನಿವೀರ್ ವಾಯುʼ ಹುದ್ದೆಗಳಿಗೆ ಅರ್ಜಿ ಆಹ್ವಾನ

 ಭಾರತೀಯ ವಾಯು ಸೇನೆಯಲ್ಲಿ ಅಗ್ನಿಪಥ್ ಯೋಜನೆಯಡಿಯಲ್ಲಿ ಅಗ್ನಿವೀರ್ ವಾಯು ಹುದ್ದೆಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಅಹ್ವಾನಿಸಲಾಗಿದೆ. ಆಸಕ್ತರು ದಿನಾಂಕ:03-07-2004 ರಿಂದ 03-01-2008ರ ನಡುವೆ ಜನಿಸಿರುವ ಅ-ವಿವಾಹಿತ ಪುರುಷ ಹಾಗೂ ಮಹಿಳಾ ಅಭ್ಯರ್ಥಿಗಳು ವೆಬ್ ಸೈಟ್ https//agnipathvayu.cdac.in. ಮುಖಾಂತರ ನೋಂದಾಯಿಸಬಹುದಾಗಿದ್ದು, ಅರ್ಜಿ ಸಲ್ಲಿಸಲು 2024ರ ಜು.28ಕೊನೆಯ ದಿನವಾಗಿದೆ. ಹೆಚ್ಚಿನ ಮಾಹಿತಿಗಾಗಿ https//careerindianairforce.in / ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ಅಥವಾ ದೂರವಾಣಿ ಸಂಖ್ಯೆ 7795195171, 8073610442ಗೆ ಸಂಪರ್ಕಿಸುವAತೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯ ಉದ್ಯೋಗಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ಮಂಗಳೂರು ಸಬ್ ಜೈಲಿನಲ್ಲಿ ಖೈದಿಗಳ ನಡುವೆ ಹೊಡೆದಾಟ..! ಇಬ್ಬರು ಆಸ್ಪತ್ರೆಗೆ

ಮಂಗಳೂರು ಸಬ್ ಜೈಲಿನಲ್ಲಿ ಖೈದಿಗಳ ನಡುವೆ ಮಾರಾಮಾರಿ ನಡೆದಿದ್ದು, ಇಬ್ಬರು ಗಾಯಗೊಂಡು ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಳೆದ 20 ದಿನಗಳಿಂದ ವಿಚಾರಣಾಧೀನ ಖೈದಿಗಳಾಗಿ ಜೈಲು ಸೇರಿದ್ದ ಉಳ್ಳಾಲದ ಮಹಮ್ಮದ್ ಸಮೀರ್ ಹಾಗೂ ಮಹಮ್ಮದ್ ಮನ್ಸೂರ್ ಮೇಲೆ ಟೋಪಿ ನೌಫಾಲ್ ಹಾಗೂ ಇತರ ಹತ್ತು ರೌಡಿಗಳಿಂದ ಈ ದಾಳಿ ನಡೆಸಲಾಗಿದೆ. ಸಂಜೆ 6.45ರ ಸುಮಾರಿಗೆ ಈ ಘಟನೆ ನಡೆದಿದ್ದು,ಜೈಲಿನ ಅಡುಗೆ ರೂಮಿನಲ್ಲಿ ಹರಿತವಾದ ವಸ್ತುಗಳಿಂದ ದಾಳಿ ನಡೆಸಲಾಗಿದೆ. ಹಲ್ಲೆಗೊಳಗಾದ ಇಬ್ಬರಿಗೂ ತಲೆ,ಭುಜ ಸೇರಿದಂತೆ ದೇಹದ ಹಲವೆಡೆ ಗಾಯಗಳಾಗಿದ್ದು ಪ್ರಾಣಪಾಯದಿಂದ…

Read More