ಮಂಗಳೂರು: ಕಡಿದು ಬಿದ್ದ ವಿದ್ಯುತ್ ತಗುಲಿ ಇಬ್ಬರು ರಿಕ್ಷಾ ಚಾಲಕರು ಸಾವು..!
ಮಂಗಳೂರು: ವಿದ್ಯುತ್ ತಂತಿ ಕಡಿದು ಬಿದ್ದ ವಿದ್ಯುತ್ ತಗುಲಿದ ಪರಿಣಾಮ ಇಬ್ಬರು ರಿಕ್ಷಾ ಚಾಲಕರು ಮೃತಪಟ್ಟ ಘಟನೆ ಮಂಗಳೂರು ರೊಸಾರಿಯೋ ಬಳಿ ನಡೆದಿದೆ. ಮೃತಪಟ್ಟ ರಿಕ್ಷಾ ಚಾಲಕರನ್ನು ರಾಜು ಮತ್ತು ದೇವರಾಜು ಎಂದು ಗುರುತಿಸಲಾಗಿದೆ. ಒಬ್ಬರು ಪುತ್ತೂರು ಹಾಗೂ ಇನ್ನೊಬ್ಬರು ಸಕಲೇಶಪುರದವರು. ಇಬ್ಬರೂ ಪಾಂಡೇಶ್ವರದ ರೊಸಾರಿಯೋ ಚರ್ಚ್ ಹಿಂಬದಿ ಬಾಡಿಗೆ ರೂಂನಲ್ಲಿ ವಾಸವಾಗಿದ್ದರು. ಬೆಳಗ್ಗೆ 4.30 ರ ಸುಮಾರಿಗೆ ಒಬ್ಬರು ರಿಕ್ಷಾ ಸ್ವಚ್ಚ ಗೊಳಿಸಲು ಹೊರಬಂದಿದ್ದು, ರಿಕ್ಷಾ ತೊಳೆಯುವ ವೇಳೆ ಮಳೆಗೆ ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ…

