ಅಯೋಧ್ಯೆ ರಾಮಲಲ್ಲಾನ ಪ್ರಾಣಪ್ರತಿಷ್ಠೆಯ ವಿಧಿವಿಧಾನ ನೆರವೇರಿಸಿದ್ದ ಅರ್ಚಕ ನಿಧನ
ಅಯೋಧ್ಯೆ: ಅಯೋಧ್ಯೆ ರಾಮಮಂದಿರದಲ್ಲಿ ರಾಮಲಲ್ಲಾನ ಪ್ರಾಣಪ್ರತಿಷ್ಠೆಯ ವಿಧಿವಿಧಾನಗಳನ್ನು ನೆರವೇರಿಸಿದ್ದ ಅರ್ಚಕ ಪಂಡಿತ್ ಲಕ್ಷ್ಮೀಕಾಂತ್ ದೀಕ್ಷಿತ್ ಅವರು ಶನಿವಾರ ಬೆಳಿಗ್ಗೆ ವಿಧಿವಶರಾಗಿದ್ದಾರೆ. ಅವರಿಗೆ 86 ವರ್ಷ ವಯಸ್ಸಾಗಿತ್ತು. ರಾಮ ಮಂದಿರದ ಶಂಕುಸ್ಥಾಪನೆಯಲ್ಲಿ ಪಾಲ್ಗೊಂಡಿದ್ದ 121 ವೈದಿಕ ಬ್ರಾಹ್ಮಣರ ನೇತೃತ್ವ ವಹಿಸಿದ್ದ ಕಾಶಿಯ ಪ್ರಧಾನ ಅರ್ಚಕ ಪಂಡಿತ್ ಲಕ್ಷ್ಮೀಕಾಂತ್ ದೀಕ್ಷಿತ್ ಅವರು ವಯೋಸಹಜ ಖಾಯಿಲೆಯಿಂದ ಬಳಲುತ್ತಿದ್ದರು ಇಂದು ಬೆಳಿಗ್ಗೆ ಕೊನೆಯುಸಿರೆಳೆದಿದ್ದಾರೆ. ಜನವರಿಯಲ್ಲಿ, ಪಂಡಿತ್ ಲಕ್ಷ್ಮೀಕಾಂತ್ ದೀಕ್ಷಿತ್ ಅವರು ಅಯೋಧ್ಯೆಯ ರಾಮಮಂದಿರದ ಪ್ರಾಣ ಪ್ರತಿಷ್ಠಾ ಪೂಜೆಯಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಅವರ ನೇತೃತ್ವದಲ್ಲಿಯೇ…

