ತಿರುಪತಿ ಕ್ಷೇತ್ರದಲ್ಲಿ ನಮೋ ವೆಂಕಟೇಶಾಯ ಮಾತ್ರ ಕೇಳಿಸ್ಬೇಕು; ಸಿಎಂ ನಾಯ್ಡು
ತಿರುಮಲವನ್ನು ಕೆಲವರು ಹಣ ಗಳಿಸಿರುವ ಕೇಂದ್ರವನ್ನಾಗಿ ಮಾಡಿದ್ದರು. ಭಕ್ತರಿಂದ ಸುಲಿಗೆ ಮಾಡ್ತಿದ್ದರು, ಕಾಳಸಂತೆಯಲ್ಲಿ ಟಿಕೆಟ್ ಮಾರಾಟಕ್ಕೆ ಅವಕಾಶ ನೀಡಿದ್ದರು. ನಮ್ಮ ಸರ್ಕಾರದಲ್ಲಿ ಇವುಗಳು ಇರೋದಿಲ್ಲ ಎಂದು ಚಂದ್ರಬಾಬು ನಾಯ್ಡು ಹೇಳಿದ್ದಾರೆ. ಆಂಧ್ರ ಪ್ರದೇಶ ಮುಖ್ಯಮಂತ್ರಿಗಳಾಗಿ ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಚಂದ್ರಬಾಬು ನಾಯ್ಡು ಅವರು ತಿರುಮಲ ತಿರುಪತಿ ಕ್ಷೇತ್ರಕ್ಕೆ ಭೇಟಿ ನೀಡಿ ತಿಮ್ಮಪ್ಪನ ದರ್ಶನ ಪಡೆದುಕೊಂಡರು. ಅಲ್ಲದೇ ಸಿಎಂ ಆದ ಬಳಿಕ ತಿರುಮಲದಲ್ಲೇ ಮೊದಲ ಸುದ್ದಿಗೋಷ್ಠಿಯನ್ನು ನಡೆಸಿದರು. ಶ್ರೀ ವೆಂಕಟೇಶ್ವರ ನಮ್ಮ ಕುಲದೈವ, ಅವರಿಂದಲೇ ಕಾರ್ಯಕ್ರಮ ಆರಂಭವಾಗುತ್ತದೆ. ತಿಮ್ಮಪ್ಪನ…

