Headlines

‘100 ಸ್ಥಾನಗಳನ್ನು ಮುಟ್ಟಲು ಸಾಧ್ಯವಾಗಲಿಲ್ಲ’: ‘ಕಾಂಗ್ರೆಸ್ ಯಾಕೆ ಸಂಭ್ರಮಿಸುತ್ತಿದೆ?’ ಪ್ರಧಾನಿ ಮೋದಿ ಪ್ರಶ್ನೆ.!

ನವದೆಹಲಿ: NDA ಸಂಸದೀಯ ಪಕ್ಷದ ಸಭೆಯಲ್ಲಿ ನರೇಂದ್ರ ಮೋದಿ ಅವರನ್ನು ಬಿಜೆಪಿ, ಎನ್ಡಿಎ ಸಂಸದೀಯ ಪಕ್ಷ ಮತ್ತು ಲೋಕಸಭೆಯ ನಾಯಕರಾಗಿ ಆಯ್ಕೆ ಮಾಡಲಾಗಿದೆ. ಹೊಸದಾಗಿ ಆಯ್ಕೆಯಾದ ಸಂಸದರ ಸಭೆಯನ್ನುದ್ದೇಶಿಸಿ ಮಾತನಾಡಿದ ಮೋದಿ, ಪ್ರತಿಪಕ್ಷಗಳ ಮೈತ್ರಿಯನ್ನು ಟೀಕಿಸಿದರು, ಸಂಭ್ರಮಾಚರಣೆಗೆ ಕಾರಣಗಳನ್ನು ಪ್ರಶ್ನಿಸಿದರು. ಕಳೆದ ಮೂರು ಸಾರ್ವತ್ರಿಕ ಚುನಾವಣೆಗಳಲ್ಲಿ ಕಾಂಗ್ರೆಸ್ ಪಕ್ಷವು 100 ಸ್ಥಾನಗಳ ಗಡಿಯನ್ನು ತಲುಪಲು ಸಾಧ್ಯವಾಗಿಲ್ಲ ಎಂದು ಮೋದಿ ತಮ್ಮ ಭಾಷಣದಲ್ಲಿ ಗಮನಸೆಳೆದರು. “10 ವರ್ಷಗಳ ನಂತರವೂ ಕಾಂಗ್ರೆಸ್ 100 ಸ್ಥಾನಗಳ ಸಂಖ್ಯೆಯನ್ನು ಮುಟ್ಟಲು ಸಾಧ್ಯವಾಗಲಿಲ್ಲ. ನಾವು…

Read More

ಮೋದಿ ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ವಿದೇಶಿ ಗಣ್ಯರಿಗೆ ಆಹ್ವಾನ

ನವದೆಹಲಿ:  ವಾರಾಂತ್ಯದಲ್ಲಿ ನಡೆಯಲಿರುವ ಪ್ರಧಾನಿ ನರೇಂದ್ರ ಮೋದಿ ಅವರ ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ಶ್ರೀಲಂಕಾ, ಬಾಂಗ್ಲಾದೇಶ ಸೇರಿದಂತೆ ಹಲವು ನೆರೆಯ ರಾಷ್ಟ್ರಗಳ ನಾಯಕರನ್ನು ಆಹ್ವಾನಿಸುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ. ಲೋಕಸಭೆ ಚುನಾವಣೆಯಲ್ಲಿ ಭಾರತೀಯ ಜನತಾ ಪಾರ್ಟಿ ನೇತತ್ವದ ರಾಷ್ಟ್ರೀಯ ಪ್ರಜಾಸತ್ತಾತಕ ಒಕ್ಕೂಟ (ಎನ್‌ಡಿಎ) 293 ಸ್ಥಾನಗಳನ್ನು ಗೆಲ್ಲುವ ಮೂಲಕ ಐತಿಹಾಸಿಕ ಮೂರನೇ ಅವಧಿಗೆ ಪ್ರಧಾನಿಯಾಗಿ ಅಧಿಕಾರ ವಹಿಸಿಕೊಳ್ಳಲು ಮೋದಿ ಸಜ್ಜಾಗಿದ್ದಾರೆ. ಮೋದಿ ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ವಿದೇಶಿ ನಾಯಕರಲ್ಲಿ ಬಾಂಗ್ಲಾದೇಶ, ಶ್ರೀಲಂಕಾ, ಭೂತಾನ್‌,…

Read More

ಜೂನ್ 9 ರ ಭಾನುವಾರ ಸಂಜೆ 6 ಗಂಟೆಗೆ ಮೋದಿ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕಾರ.!

ನವದೆಹಲಿ: ಜೂನ್ 9 ರ ಭಾನುವಾರ ಸಂಜೆ 6 ಗಂಟೆಗೆ ನರೇಂದ್ರ ಮೋದಿ ಮೂರನೇ ಬಾರಿಗೆ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು ಬಿಜೆಪಿ ನಾಯಕ ಪ್ರಹ್ಲಾದ್ ಜೋಶಿ ಅವರು ಮಾಹಿತಿ ನೀಡಿದ್ದಾರೆ. ಅವರು ನಡೆದ ಎನ್‌ಡಿಎ ಸಂಸದೀಯ ಪಕ್ಷದ ಸಭೆಯಲ್ಲಿ ಎನ್‌ಡಿಎ ಮೈತ್ರಿಕೂಟದಲ್ಲಿ ಹೊಸದಾಗಿ ಆಯ್ಕೆಯಾದ ಸಂಸದರು ಶುಕ್ರವಾರ ಬೆಳಗ್ಗೆ ಸಂಸತ್ತಿನಲ್ಲಿ ಸಭೆ ಸೇರಿ ಮುಂಬರುವ ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೂ ಮುನ್ನ ಸಂಪುಟ ರಚನೆಯ ಸಿದ್ಧತೆಗಳ ಕುರಿತು ಚರ್ಚೆ ನಡೆಸಿದ ಬಳಿಕ ಈ ಬಗ್ಗೆ…

Read More

ಲೋಕಸಭಾ ಚುನಾವಣೆ: 105 ನೂತನ ಸಂಸದರ ವಿದ್ಯಾರ್ಹತೆ 5ರಿಂದ 12ನೇ ತರಗತಿ

ನವದೆಹಲಿ: ಲೋಕಸಭಾ ಚುನಾವಣೆಯಲ್ಲಿ ವಿಜೇತ ಅಭ್ಯರ್ಥಿಗಳಾಗಿ ಹೊರಹೊಮ್ಮಿರುವವರ ಪೈಕಿ 105 ಅಭ್ಯರ್ಥಿಗಳು(ಶೇ 19ರಷ್ಟು) ತಮ್ಮ ಶೈಕ್ಷಣಿಕ ಅರ್ಹತೆ 5ನೇ ತರಗತಿಯಿಂದ 12ನೇ ತರಗತಿ ಎಂದು ಘೋಷಿಸಿದ್ದು, 420 ಅಭ್ಯರ್ಥಿಗಳು(ಶೇ 77 ರಷ್ಟು) ತಮ್ಮ ಶೈಕ್ಷಣಿಕ ಅರ್ಹತೆ ಪದವಿ ಅಥವಾ ಅದಕ್ಕಿಂತ ಹೆಚ್ಚಿನದ್ದಾಗಿದೆ ಎಂದು ಘೋಷಿಸಿಕೊಂಡಿದ್ದಾರೆ ಎಂದು ಅಸೋಸಿಯೇಷನ್ ಫಾರ್ ಡೆಮಾಕ್ರೆಟಿಕ್ ರಿಫಾರ್ಮ್ಸ್‌(ಎಡಿಆರ್) ತಿಳಿಸಿದೆ. ವಿಜೇತ ಅಭ್ಯರ್ಥಿಗಳ ಪೈಕಿ 17 ಅಭ್ಯರ್ಥಿಗಳು ಡಿಪ್ಲೊಮಾ ಪದವೀಧರಾಗಿದ್ದು, 5ನೇ ತರಗತಿಯವರೆಗೆ ಓದಿರುವ ಇಬ್ಬರು ಅಭ್ಯರ್ಥಿಗಳಿದ್ದಾರೆ. ನಾಲ್ವರು 8ನೇ ತರಗತಿಯವರೆಗೆ ಓದಿರುವುದಾಗಿ ಘೋಷಿಸಿದ್ದಾರೆ….

Read More

ಮಸೀದಿಗಳಾಗಿ ಮಾರ್ಪಾಡಾದ ದೇವಾಲಗಳನ್ನು ಮರಳಿ ಪಡೆಯಲು ಕಾನೂನಾತ್ಮಕ ಹೋರಾಟ- ಪೇಜಾವರ ಶ್ರೀ

ಕಾಶಿ ಮತ್ತು ಮಥುರಾದಲ್ಲಿ ಮಸೀದಿಗಳಾಗಿ ಮಾರ್ಪಾಡು ಮಾಡಲಾದ ಕಾಶಿ ದೇವಾಲಯಗಳನ್ನು ಮರಳಿ ಪಡೆಯಲು ಕಾನೂನಾತ್ಮಕ ಹೋರಾಟ ಮಾಡಲಾಗುತ್ತಿದೆ ಎಂದು ಪೇಜಾವರ ಮಠದ ವಿಶ್ವಪ್ರಸನ್ನತೀರ್ಥ ಸ್ವಾಮೀಜಿ ಹೇಳಿದರು. ನಗರದಲ್ಲಿ ಗುರುವಾರ ಸುದ್ದಿಗಾರರ ಜೊತೆಗೆ ಮಾತನಾಡಿದ ಅವರು ಬೀದಿಯಲ್ಲಿ ಹೋರಾಡುವುದಕ್ಕಿಂತ ಕಾನೂನು ಹೋರಾಟ ಉತ್ತಮ ಎಂದು ನ್ಯಾಯಾಲಯಗಳು ಅಭಿಪ್ರಾಯಪಟ್ಟಿರುವ ಕಾರಣ ಅದನ್ನು ಅನುಸರಿಸಿದ್ದೇವೆ ಎಂದರು. ದೇವಾಲಯಗಳನ್ನು ಹಿಂಪಡೆಯುವ ನಮ್ಮ ಹೋರಾಟ ಎಲ್ಲ ರೀತಿಯಿಂದ ಸಮರ್ಥನೀಯ ಎಂದು ಅವರು ಈ ಹಿಂದೆ ನಮಗೆ ಆದ ಅನ್ಯಾಯವನ್ನು ಈಗಲಾದರೂ ಸರಿಪಡಿಸಬೇಕಾಗಿದೆ ಎಂದು ಅಭಿಪ್ರಾಯಪಟ್ಟರು….

Read More

ವಾಹನ ಸವಾರರ ಗಮನಕ್ಕೆ : ʻHSRPʼ ನಂಬರ್‌ ಪ್ಲೇಟ್‌ ಅಳವಡಿಕೆಗೆ ಐದೇ ದಿನ ಬಾಕಿ

ಬೆಂಗಳೂರು : ಹಳೇ ವಾಹನಗಳಿಗೆ ಅತಿ ಸುರಕ್ಷಿತ ನೋಂದಣಿ ಫಲಕ (HSRP) ಅಳವಡಿಸಲು ಸಾರಿಗೆ ಇಲಾಖೆ ನೀಡಿದ ಗಡುವು ಹೈಕೋರ್ಟ್‌ ಆದೇಶದ ಅನ್ವಯ ಜೂನ್‌ 12ರವರೆಗೆ ಇರಲಿದೆ. ಅದರ ಒಳಗೆ ಎಲ್ಲಾ ವಾಹನಗಳು ಹೊಸ ಫಲಕ ಅಳವಡಿಸಿಕೊಳ್ಳುವಂತೆ ಸಾರಿಗೆ ಇಲಾಖೆ ಸೂಚಿಸಿದೆ. 2019ರ ಏಪ್ರಿಲ್‌ 1ಕ್ಕಿಂತ ಹಿಂದಿನ ವಾಹನಗಳು ಎಚ್‌ಎಸ್‌ಆರ್‌ಪಿ ಅಳವಡಿಸಿಕೊಳ್ಳಬೇಕು. ರಾಜ್ಯದಲ್ಲಿ ಇಲ್ಲಿಯವರೆಗೆ ಸುಮಾರು 45 ಲಕ್ಷ ವಾಹನಗಳು ಎಚ್‌ಎಸ್‌ಆರ್‌ಪಿ ಅಳವಡಿಸಿಕೊಂಡಿದ್ದು, 1.55 ಕೋಟಿ ವಾಹನಗಳು ಇನ್ನೂ ಅಳವಡಿಸಿಕೊಂಡಿಲ್ಲ ಎಂದು ಮಾಹಿತಿ ನೀಡಿದೆ. ಏಪ್ರಿಲ್.1, 2019ಕ್ಕಿಂತ…

Read More

ಪ್ರಧಾನಿ ಹುದ್ದೆ ಕೊಟ್ಟರೂ ನಾನು ಕಾಂಗ್ರೆಸ್‌ ಜೊತೆ ಹೋಗಲ್ಲ – ಪವನ್ ಕಲ್ಯಾಣ್

ಹೈದರಾಬಾದ್- ನರೇಂದ್ರ ಮೋದಿ ನಮ್ಮ ದೇಶಕ್ಕೆ ಏನು ಮಾಡಿದ್ದಾರೆ ಎಂಬ ಬಗ್ಗೆ ಇಡೀ ದೇಶಕ್ಕೆ ಗೊತ್ತಿದೆ. ನನ್ನ ಬೆಂಬಲ ಎಂದೆಂದಿಗೂ ನರೇಂದ್ರ ಮೋದಿಗೆ. ಪ್ರಧಾನಿ ಹುದ್ದೆಯ ಆಫರ್ ಕೊಟ್ಟರೂ ನಾನು ಕಾಂಗ್ರೆಸ್‌ ಎಂದೆಂದೂ ಬೆಂಬಲ ನೀಡೋದಿಲ್ಲ ಎಂದು ಜನಸೇನಾ ನಾಯಕ ಹಾಗೂ ನಟ ಪವನ್ ಕಲ್ಯಾಣ್ ಹೇಳಿದ್ದಾರೆ. ಕಾಂಗ್ರೆಸ್ ಹಾಗೂ ‘ಇಂಡಿ’ ಮೈತ್ರಿಕೂಟವನ್ನು ಬೆಂಬಲಿಸಲು ನಮಗೆ ಅವರು ಬಹುದೊಡ್ಡ ಕೊಡುಗೆಯನ್ನೇ ನೀಡಬಹುದು. ಆದರೆ ನಾವು ದೇಶಕ್ಕಾಗಿ ನಾವು ಎಂದೆಂದೂ ಮೋದಿ ಅವರನ್ನೇ ಬೆಂಬಲಿಸುತ್ತೇವೆ ಎಂದು ಪವನ್ ಕಲ್ಯಾಣ್…

Read More

ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷರಾದ ಟಿ. ಎ. ನಾರಾಯಣ ಗೌಡ ರ ಹುಟ್ಟುಹಬ್ಬದ ಪ್ರಯುಕ್ತ ಸ್ನೇಹ ದೀಪ ಮಕ್ಕಳ ಕೇರ್ ಸೆಂಟರ್ ನಲ್ಲಿ ಅನ್ನದಾನ ಮತ್ತು ಸಿಹಿ ತಿಂಡಿ ವಿತರಣೆ

ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷರಾದ ಟಿ. ಎ. ನಾರಾಯಣ ಗೌಡ ರ ಹುಟ್ಟುಹಬ್ಬದ ಪ್ರಯುಕ್ತ ದಾಸ್ ಚಾರಿಟೇಬಲ್ ಸೇವಾ ಟ್ರಸ್ಟ್ ಹಾಗೂ ಕರ್ನಾಟಕ ರಕ್ಷಣಾ ವೇದಿಕೆ ಜಿಲ್ಲಾ ಘಟಕ ದ ವತಿಯಿಂದ ನಗರದ ಸ್ನೇಹ ದೀಪ ಮಕ್ಕಳ (HIV ) ಕೇರ್ ಸೆಂಟರ್ ನಲ್ಲಿ ಮದ್ಯಾಹ್ನ ಅನ್ನದಾನ ಮತ್ತು ಸಿಹಿ ತಿಂಡಿ ವಿತರಣೆ ಮಾಡಿ ಮಕ್ಕಳ ಜೊತೆಯಲ್ಲಿ ಹುಟ್ಟುಹಬ್ಬದ ಸಂಭ್ರಮಾಚಾರಣೆ ಯನ್ನು ಅರ್ಥ ಪೂರ್ಣ ವಾಗಿ ಆಚರಿಸಲಾಯಿತು. ಜಿಲ್ಲಾ ಅಧ್ಯಕ್ಷ ರಾದ ಲಯನ್ ಅನಿಲ್ ದಾಸ್, ಪ್ರಧಾನ…

Read More

ಕರ್ನಾಟಕ ಕಾಂಗ್ರೆಸ್ ಸರ್ಕಾರದ ಮೊದಲ ವಿಕೆಟ್ ಪತನ: ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಿ. ನಾಗೇಂದ್ರ

ಬೆಂಗಳೂರು : ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ಒಂದು ವರ್ಷ ಕಳೆದಿದೆ. ಇದೇ ಹೊತ್ತಿನಲ್ಲೇ ಕರ್ನಾಟಕ ಕಾಂಗ್ರೆಸ್ ಸರ್ಕಾರದ ಮೊದಲ ವಿಕೆಟ್ ಪತನಗೊಂಡಿದೆ. ಯುವಜನ ಸೇವೆ, ಕ್ರೀಡೆ ಹಾಗೂ ಪರಿಶಿಷ್ಟ ಪಂಗಡಗಳ ಸಚಿವ ಬಿ.ನಾಗೇಂದ್ರ ಸಚಿವ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ಇಂದು ಬೆಂಗಳೂರಿನ ಸಿಎಂ ಸಿದ್ದರಾಮಯ್ಯ ಗೃಹ ಕಚೇರಿ ಕೃಷ್ಣಗೆ ಆಗಮಿಸಿದ ಸಚಿವ ಬಿ.ನಾಗೇಂದ್ರ, ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರನ್ನು ಭೇಟಿ ಮಾಡಿ ಸಚಿವ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ಅಂದ ಹಾಗೇ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಕೋಟ್ಯಂತರ…

Read More

BIG NEWS: ಇಂದು ‘ಸಚಿವ ಸ್ಥಾನ’ಕ್ಕೆ ‘ಬಿ.ನಾಗೇಂದ್ರ’ ರಾಜೀನಾಮೆ: ಡಿ.ಕೆ ಶಿವಕುಮಾರ್

ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದ ಅವ್ಯವಹಾರ ಪ್ರಕರಣದಲ್ಲಿ ಸಚಿವ ಬಿ.ನಾಗೇಂದ್ರ ಇಂದು ರಾಜೀನಾಮೆ ನೀಡಲಿದ್ದಾರೆ ಎಂಬುದಾಗಿ ಡಿಸಿಎಂ ಡಿ.ಕೆ ಶಿವಕುಮಾರ್ ಸುಳಿವು ನೀಡಿದ್ದಾರೆ. ಇಂದು ಬೆಂಗಳೂರಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಸಚಿವ ಬಿ.ನಾಗೇಂದ್ರ ರಾಜೀನಾಮೆಗೆ ವಿಪಕ್ಷಗಳು ಒತ್ತಾಯ ಮಾಡುತ್ತಿವೆ. ಬಿ.ನಾಗೇಂದ್ರ ಜೊತೆಗೆ ನಾನು, ಗೃಹ ಸಚಿವ ಡಾ.ಜಿ ಪರಮೇಶ್ವರ್ ಮಾತನಾಡಿದ್ದೇವೆ. ಅವರು ನಾನು ವಾಲ್ಮೀಕಿ ಅಭಿವೃದ್ಧಿ ನಿಗಮದ ಅವ್ಯವಹಾರದಲ್ಲಿ ಭಾಗಿಯಾಗಿಲ್ಲ ಅಂತ ತಿಳಿಸಿದ್ದಾರೆ. ಹೀಗಾಗಿ ಸಚಿವ ನಾಗೇಂದ್ರ ರಾಜೀನಾಮೆ ಕೊಡುವ ಅಗತ್ಯವಿಲ್ಲ ಎಂದರು. ಆದರೇ ಪಕ್ಷ ಹಾಗೂ…

Read More