Headlines

ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ; ಮತ್ತೋರ್ವ ಆರೋಪಿಯನ್ನು ಬಂಧಿಸಿದ ‘NIA

ದಕ್ಷಿಣಕನ್ನಡ : ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಮುಂಬೈ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಎನ್​ಐಎ ಅಧಿಕಾರಿಗಳು ಮತ್ತೋರ್ವ ಆರೋಪಿಯನ್ನು ಸೆರೆ ಹಿಡಿದಿದ್ದಾರೆ. ಹೌದು ಆರೋಪಿಯು ಮುಂಬೈ ವಿಮಾನ ನಿಲ್ದಾಣದಿಂದ ವಿದೇಶಕ್ಕೆ ಹಾರಲು ಪ್ರಯತ್ನಿಸುತ್ತಿದ್ದ ಈ ವೇಳೆ ಎನ್ ಆಯಾಧಿಕಾರಿಗಳು ಖಚಿತ ಮಾಹಿತಿಯ ಮೇರೆಗೆ ಆರೋಪಿ ರಿಯಾಜ್ ಯೂಸಫ್ ಹಾರಳ್ಳಿಯನ್ನು ಬಂದಿಸಿದ್ದಾರೆ ಎಂದು ತಿಳಿದುಬಂದಿದೆ.ಈ ಮೂಲಕ ಬಂಧಿತ ಆರೋಪಿಗಳು ಸಂಖ್ಯೆ 19 ಕ್ಕೆ ಏರಿಕೆಯಾಗಿದೆ. ಒಂದು ತಿಂಗಳ ಹಿಂದೆ‌ಯಷ್ಟೇ ಸಕಲೇಶಪುರದಲ್ಲಿ ಮುಸ್ತಾಫಾ ಪೈಚಾರ್​ನನ್ನು…

Read More

ದ.ಕ.ಜಿಲ್ಲೆಯ ಬಿಜೆಪಿಯ ಗೆಲುವು, ಮೋದಿಯವರ, ಹಿಂದುತ್ವದ, ಸಂಘಟನೆಯ ಕಾರ್ಯಕರ್ತರ, ಜಿಲ್ಲಾಧ್ಯಕ್ಷರ ಗೆಲುವು- ಬ್ರಿಜೇಶ್ ಚೌಟ

ಮಂಗಳೂರು: ನವಯುಗ ನವಪಥದ ಆಧಾರದಲ್ಲಿ ಹಿಂದುತ್ವಕ್ಕೆ ಬದ್ಧತೆಯಿರಿಸಿ, ಅಭಿವೃದ್ಧಿಯನ್ನು ಆದ್ಯತೆಯಾಗಿರಿಸಿ ದ.ಕ.ಜಿಲ್ಲೆಯಲ್ಲಿ ಹೊಸಪರ್ವ, ಹೊಸಕನಸು, ಹೊಸ ಆಶೋತ್ತರಗಳನ್ನು ಜನರ ಮಧ್ಯೆ ಹುಟ್ಟಿಸುತ್ತೇನೆ. ಎಲ್ಲರ ಸಹಕಾರದೊಂದಿಗೆ ಜಿಲ್ಲೆಯನ್ನು ಅಭಿವೃದ್ಧಿ ಪಥದತ್ತ ಕೊಂಡೊಯ್ಯುತ್ತೇನೆ ಎಂದು ದ.ಕ.ಜಿಲ್ಲೆಯಲ್ಲಿ ಗೆಲುವು ಸಾಧಿಸಿದ ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ ಹೇಳಿದರು. ಗೆಲುವಿನತ್ತ ದಾಪುಗಾಲು ಹಾಕುತ್ತಿದ್ದಂತೆ ಸುರತ್ಕಲ್ ನ‌ ಮತ ಎಣಿಕಾ ಕೇಂದ್ರದಲ್ಲಿ ಮಾಧ್ಯಮದೊಂದಿಗೆ ಮಾತನಾಡಿದ ಅವರು, ದ.ಕ.ಜಿಲ್ಲೆಯ ಬಿಜೆಪಿಯ ಗೆಲುವು, ಮೋದಿಯವರ, ಹಿಂದುತ್ವದ, ಸಂಘಟನೆಯ ಕಾರ್ಯಕರ್ತರ, ಜಿಲ್ಲಾಧ್ಯಕ್ಷರ ಗೆಲುವು. ಸತ್ಯ, ಧರ್ಮ, ನ್ಯಾಯ, ಹಿಂದುತ್ವದ…

Read More

ವಾರಾಣಸಿ ಕ್ಷೇತ್ರದಿಂದ ಪ್ರಧಾನಿ ಮೋದಿ ಭರ್ಜರಿ ಗೆಲುವು

ವಾರಾಣಸಿ : ಪ್ರಧಾನಿ ಮೋದಿ ವಾರಾಣಸಿ ಕ್ಷೇತ್ರದಿಂದ ಭರ್ಜರಿ ಗೆಲುವು ಸಾಧಿಸಿದ್ದಾರೆ. ಸತತ ಮೂರನೇ ಬಾರಿಗೆ ಮೋದಿ ವಾರಾಣಸಿ ಕ್ಷೇತ್ರದಿಂದ ದಿಗ್ವಿಜಯ ಸಾಧಿಸಿದ್ದಾರೆ. ಕಾಂಗ್ರೆಸ್‌ ಅಭ್ಯರ್ಥಿ ಅಜಯ್ ರೈ ವಿರುದ್ಧ ಪ್ರಧಾನಿ ಮೋದಿ ಭರ್ಜರಿ ಗೆಲುವು ಕಂಡಿದ್ದಾರೆ. 1,52, 513 ಮತಗಳ ಅಂತರದಿಂದ ಪ್ರಧಾನಿ ಮೋದಿ ಗೆದ್ದಿದ್ದಾರೆ. ಮೋದಿ 6,12,970 ಮತಗಳನ್ನು ಪಡೆದರೆ, ಕಾಂಗ್ರೆಸ್ ಅಭ್ಯರ್ಥಿ ಅಜಯ್ ರೈ 4,60,457 ಮತಗಳನ್ನು ಪಡೆದಿದ್ದಾರೆ.

Read More

ಲೋಕಸಭಾ ಚುನಾವಣೆ ಫಲಿತಾಂಶ: ಬೆಂಗಳೂರಿನ 4 ಕ್ಷೇತ್ರಗಳಲ್ಲೂ ಬಿಜೆಪಿ ಭರ್ಜರಿ ಗೆಲುವು

ಬೆಂಗಳೂರು: ಇಂದು ಪ್ರಕಟವಾದಂತ ಲೋಕಸಭಾ ಚುನಾವಣೆ ಫಲಿತಾಂಶದಲ್ಲಿ ಬೆಂಗಳೂರಿನ ನಾಲ್ಕು ಕ್ಷೇತ್ರಗಳಲ್ಲೂ ಬಿಜೆಪಿ ಅಭ್ಯರ್ಥಿಗಳು ಭರ್ಜರಿ ಗೆಲುವು ಸಾಧಿಸಿದ್ದಾರೆ. ಈ ಮೂಲಕ ಕಾಂಗ್ರೆಸ್ ಪಕ್ಷಕ್ಕೆ ಭಾರಿ ಮಖಭಂಗ ಉಂಟಾಗಿದೆ. ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಬೆಂಗಳೂರಿನ 4 ಲೋಕಸಭಾ ಕ್ಷೇತ್ರದಲ್ಲಿ ಭಾರೀ ಮುಖಭಂಗವೇ ಉಂಟಾಗಿದೆ. ನಾಲ್ಕಕ್ಕೆ ನಾಲ್ಕು ಕ್ಷೇತ್ರಗಳನ್ನು ಬಿಜೆಪಿ ಗೆದ್ದುಕೊಂಡಿದೆ. ಬೆಂಗಳೂರು ಉತ್ತರ ಕ್ಷೇತ್ರದಿಂದ ಚಿಕ್ಕಮಗಳೂರು – ಉಡುಪಿ ಕ್ಷೇತ್ರವನ್ನು ತೊರೆದು ಶೋಭಾ ಕರಂದ್ಲಾಜೆ ಸ್ಪರ್ಧಿಸಿದ್ದರು. ಅವರು ಬೆಂಗಳೂರು ಉತ್ತರ ಕ್ಷೇತ್ರದಲ್ಲಿ ಲೋಕಸಭಾ…

Read More

ದಕ್ಷಿಣಕನ್ನಡ: ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೆಶ್‌ ಚೌಟ ಗೆಲುವು

ಕರಾವಳಿಯಲ್ಲಿ ಜಿದ್ದಾಜಿದ್ದಿನ ಕಣವಾಗಿ ಮಾರ್ಪಟ್ಟಿದ್ದ ದಕ್ಷಿಣಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿಯ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟ ಗೆಲುವಿನ ನಗೆ ಬೀರಿದ್ದಾರೆ. ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ ತಮ್ಮ ಪ್ರತಿಸ್ಪರ್ಧಿ ಕಾಂಗ್ರೇಸ್ ನ ಪದ್ಮರಾಜ್ ಅವರಿಗಂತ  138288 ಮತಗಳ ಅಂತರದಿಂದ ಗೆಲುವನ್ನು ಸಾಧಿಸಿದ್ದಾರೆ. ಭಾರೀ ಪೈಪೋಟಿ ಕ್ಷೇತ್ರವಾಗಿದ್ದ ದಕ್ಷಿಣಕನ್ನಡ ಜಿಲ್ಲೆಯಲ್ಲಿ ಈ ಬಾರಿ ಕಾಂಗ್ರೇಸ್ ಬಿಜೆಪಿಗೆ ಪ್ರಬಲ ಪೈಪೋಟಿ ಕೊಟ್ಟಿತ್ತು, ಆದರೆ ತಮ್ಮ ಭದ್ರಕೋಟೆಯಲ್ಲಿ ಮತ್ತೆ ಬಿಜೆಪಿ ಗೆಲುವನ್ನು ಸಾಧಿಸುವ ಮೂಲಕ ಮತ್ತೆ ಸೀಟ್ ನ್ನು ಉಳಿಸಿಕೊಂಡಿದೆ.

Read More

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಿಜೆಪಿ ಮುನ್ನಡೆ- 138288 ಲಕ್ಷ ಮತಗಳ ಅಂತರ

ಮಂಗಳೂರು: ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಮತ ಎಣಿಕಾ ಕಾರ್ಯ ನಡೆಯುತ್ತಿದ್ದು, ಬಿಜೆಪಿ ಮುನ್ನಡೆ ಕಾಯ್ದಿದೆ. ಮೊದಸ ಸುತ್ತಿನಲ್ಲಿ ಬಿಜೆಪಿಯ ಬ್ರಿಜೇಶ್ ಚೌಟ 624483 ಮತ ಪಡೆದು ಮುನ್ನಡೆ ಸಾಧಿಸಿದರೆ, ಕಾಂಗ್ರೆಸ್ ನ ಪದ್ಮರಾಜ್ ಆರ್ ಪೂಜಾರಿಯವರು 486195 ಮತ ಪಡೆದು ಹಿನ್ನಡೆ ಸಾಧಿಸಿದ್ದಾರೆ. ಈ ಮೂಲಕ ಬಿಜೆಪಿ  138288 ಮತಗಳ ಅಂತರದಿಂದ ಮುನ್ನಡೆ ಸಾಧಿಸಿದೆ. 19401 ನೋಟಾ ಮತ ಚಲಾವಣೆಯಾಗಿದೆ.

Read More

ಉಡುಪಿ: ಬಿಜೆಪಿ ಅಭ್ಯರ್ಥಿ ಕೋಟಾ ಶ್ರೀನಿವಾಸ ಪೂಜಾರಿ ಭರ್ಜರಿ ಗೆಲುವು

ಉಡುಪಿ- ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೋಟಾ ಶ್ರೀನಿವಾಸ ಪೂಜಾರಿ ಗೆಲುವು ಸಾಧಿಸಿದ್ದು, ಘೋಷಣೆಯೋಂದೇ ಬಾಕಿಯಿದೆ. ಕಾಂಗ್ರೆಸ್ ಅಭ್ಯರ್ಥಿ ಜಯಪ್ರಕಾಶ್ ಹೆಗ್ಡೆ ವಿರುದ್ಧ ಭರ್ಜರಿ ಮುನ್ನಡೆ ಸಾಧಿಸಿ ಕೋಟಾ ಗೆಲುವು ಸಾಧಿಸಿದ್ದಾರೆ. ಇನ್ನು ಬಿಜೆಪಿ ಕಾರ್ಯಕರ್ತರಿಂದ ಸಂಭ್ರಮಾಚರಣೆ ಆಚರಿಸಿದ್ದಾರೆ.

Read More

ದಕ್ಷಿಣ ಕನ್ನಡ: ಎಂಟನೇ ಸುತ್ತಿನಲ್ಲಿ  1 ಲಕ್ಷ ಮತಗಳಿಂದ ಮುನ್ನಡೆ ಸಾಧಿಸಿದ ಬಿಜೆಪಿಯ ಚೌಟ

ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಎಂಟನೇ ಸುತ್ತಿನ ಮತ ಎಣಿಕೆ ಮುಗಿದಿದ್ದು ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ 1 ಲಕ್ಷ ಮತಗಳಿಂದ ಮುನ್ನಡೆ ಸಾಧಿಸಿದ್ದಾರೆ.

Read More

5 ಲಕ್ಷ ಮತಗಳಿಂದ ಅಮಿತ್ ಶಾ ಭರ್ಜರಿ ಗೆಲುವು

ಲೋಕಸಭೆ ಚುನಾವಣೆಯ ಮತಎಣಿಕೆ ಕಾರ್ಯವು ಭರದಿಂದ ಸಾಗುತ್ತಿದ್ದು, ಒಟ್ಟು 543 ಕ್ಷೇತ್ರಗಳ ಪೈಕಿ ಎನ್‌ಡಿಎ ಮೈತ್ರಿಕೂಟವು 294 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ. ಅತ್ತ, ಇಂಡಿಯಾ ಒಕ್ಕೂಟವೂ ತೀವ್ರ ಪೈಪೋಟಿ ನೀಡುತ್ತಿದ್ದು, 230 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ. ಇದರ ಮಧ್ಯೆಯೇ, ಕೇಂದ್ರ ಗೃಹ ಸಚಿವ ಅಮಿತ್‌ ಶಾ ಬಿಜೆಪಿಗೆ ಮೊದಲ ಗೆಲುವು ತಂದುಕೊಟ್ಟಿದ್ದಾರೆ. ಅಮಿತ್‌ ಶಾ ಗುಜರಾತ್‌ನ ಗಾಂಧಿನಗರ ಲೋಕಸಭೆ ಕ್ಷೇತ್ರದಲ್ಲಿ 5 ಲಕ್ಷ ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ.

Read More

ಕರ್ನಾಟಕದಲ್ಲಿ ‘ಬಿಜೆಪಿ ಮೊದಲ ಖಾತೆ’ ಓಪನ್: ತುಮಕೂರಲ್ಲಿ ‘ವಿ.ಸೋಮಣ್ಣ’ ಭರ್ಜರಿ ಗೆಲುವು

ತುಮಕೂರು: ರಾಜ್ಯದಲ್ಲಿ ಬಿಜೆಪಿ ಮೊದಲ ಖಾತೆಯನ್ನು ತೆರೆದಿದೆ. ತುಮಕೂರಿನಲ್ಲಿ ಬಿಜೆಪಿ ಅಭ್ಯರ್ಥಿ ವಿ.ಸೋಮಣ್ಣ ಅವರು ಭರ್ಜರಿ ಗೆಲುವು ಸಾಧಿಸುವ ಮೂಲಕ, ಮೊದಲ ಖಾತೆಯನ್ನು ಕರ್ನಾಟಕದಲ್ಲಿ ಬಿಜೆಪಿ ತೆರೆದಂತೆ ಆಗಿದೆ. ತುಮಕೂರು ಲೋಕಸಭಾ ಕ್ಷೇತ್ರದ 15ನೇ ಸುತ್ತಿನಲ್ಲಿ ಮತಏಣಿಕೆ ಕಾರ್ಯದಲ್ಲಿ ಬಿಜೆಪಿ ಅಭ್ಯರ್ಥಿ ವಿ. ಸೋಮಣ್ಣ 94482 ಮತಗಳ ಅಂತರದಿಂದ ಮುನ್ನಡೆಯನ್ನು ಸಾಧಿಸಿದ್ದರು. ಇತ್ತೀಚಿನ ಮಾಹಿತಿಯಂತೆ ಅವರು ಭಾರೀ ಮತಗಳಿಂದ ಗೆಲುವು ಸಾಧಿಸಿದ್ದಾರೆ ಎಂಬುದಾಗಿ ತಿಳಿದು ಬಂದಿದೆ. ಬಿಜೆಪಿ ಅಭ್ಯರ್ಥಿ ವಿ.ಸೋಮಣ್ಣ ಅವರು ಕಾಂಗ್ರೆಸ್ ಅಭ್ಯರ್ಥಿ ಮುದ್ದಹನುಮೇಗೌಡ ವಿರುದ್ಧ…

Read More