ವಾಲ್ಮೀಕಿ ನಿಗಮ ಅಕ್ರಮ ಪ್ರಕರಣ- ಸಿಬಿಐ ತನಿಖೆ, ಸಚಿವರ ರಾಜೀನಾಮೆಗೆ ಸಿ.ಟಿ.ರವಿ ಒತ್ತಾಯ
ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣಕಾಸು ಅವ್ಯವಹಾರದ ಹಗರಣವನ್ನು ಸಿಬಿಐ (CBI) ತನಿಖೆಗೆ ಒಪ್ಪಿಸಬೇಕು ಮತ್ತು ಸಚಿವ ನಾಗೇಂದ್ರ ಅವರ ರಾಜೀನಾಮೆ ಪಡೆಯಬೇಕು ಎಂದು ಮಾಜಿ ಸಚಿವ ಸಿ.ಟಿ. ರವಿ ಅವರು ಆಗ್ರಹಿಸಿದರು. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, 10 ಕೋಟಿಗಿಂತ ಹೆಚ್ಚು ಮೊತ್ತದ ಹಗರಣ ನಡೆದರೆ ಸ್ವಯಂಪ್ರೇರಿತವಾಗಿ ಸಿಬಿಐ ತನಿಖೆ ಕೈಗೆತ್ತಿಕೊಳ್ಳಲು ಅವಕಾಶವಿದೆ. ಇದು 10 ಲಕ್ಷ ರೂಪಾಯಿ ಹಗರಣವಲ್ಲ, 187 ಕೋಟಿ ರೂಪಾಯಿಯ ಹಗರಣ….

