ಉಡುಪಿ ಕೃಷ್ಣನಿಗೆ ಚಿನ್ನದ ಭಗವದ್ಗೀತೆ ಅರ್ಪಣೆ
ಉಡುಪಿ : ಪರ್ಯಾಯ ಪುತ್ತಿಗೆ ಮಠದ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರ ಪರ್ಯಾಯದ ಮಂಗಳೋತ್ಸವದ ಸಂದರ್ಭದಲ್ಲಿ ದೆಹಲಿಯ ನಿವೃತ್ತ ಐಎಎಸ್ ಅಧಿಕಾರಿ ಎಸ್. ಲಕ್ಷ್ಮೀನಾರಾಯಣನ್ ಅವರು 2 ಕೋಟಿ ರೂಪಾಯಿ ವೆಚ್ಚದಲ್ಲಿ ರಚಿಸಿರುವ ಚಿನ್ನದ ಭಗವದ್ಗೀತೆಯ ಕೃಷ್ಣಾರ್ಪಣಾ ಕಾರ್ಯಕ್ರಮವು ಗುರುವಾರ ಶ್ರೀಕೃಷ್ಣ ಮಠದ ರಾಜಾಂಗಣದಲ್ಲಿ ನಡೆಯಿತು. ವ್ಯಾಸರಾಜ ಮಠದ ಶ್ರೀ ವಿದ್ಯಾಶ್ರೀಶ ತೀರ್ಥ ಶ್ರೀಪಾದರು ಈ ಚಿನ್ನದ ಗೀತೆಯನ್ನು ಅಲಂಕೃತ ತೊಟ್ಟಿಲಿನಲ್ಲಿಟ್ಟು ತೂಗಿ ಕೃಷ್ಣನಿಗೆ ಸಮರ್ಪಿಸಿದರು. ಭಗವದ್ಗೀತೆಯ ಲೇಖನ ಮತ್ತು ಪಾರಾಯಣಕ್ಕೆ ಭಕ್ತರ ಇಚ್ಚೆ ಇನ್ನೂ ಹೆಚ್ಚಾಗಿರುವುದರಿಂದ…

