Headlines

ಮೇ 26 ರಂದು ಕುಲಾಲ ಸುಧಾರಕ ಸಂಘ (ರಿ.) ಬಂಟ್ವಾಳ ಇದರ ವಾರ್ಷಿಕೋತ್ಸವ

ಬಂಟ್ವಾಳ: ಕುಲಾಲ ಸುಧಾರಕ ಸಂಘ (ರಿ.) ಬಂಟ್ವಾಳ ಇದರ 44 ನೇ ವಾರ್ಷಿಕ ಮಹಾಸಭೆ ಮತ್ತು ವಾರ್ಷಿಕೋತ್ಸವವು ದಿನಾಂಕ ಮೇ 26 ರಂದು ಕುಲಾಲ ಸಮುದಾಯ ಭವನ ಪೊಸಳ್ಳಿ ಬಿ.ಸಿ ರೋಡು ಇಲ್ಲಿ ನಡೆಯಲಿದೆ. ಬೆಳ್ಳಗೆ 9 ಗಂಟೆಯಿಂದ 11 ಗಂಟೆಯ ವರೆಗೆ ಸ್ವಜಾತಿ ಬಾಂಧವರಿಗಾಗಿ ವಿವಿಧ ಸ್ಪರ್ಧೆಗಳು ನಡೆಯಲಿದೆ. ವಿಶೇಷ ಆಕರ್ಷಣೆಯಾಗಿ ಸಂಜೆ 4 ಗಂಟೆಯಿಂದ ಕುಲಾಲ ಸಂಗೀತ ಸಂಜೆ, ಕುಸಾಲ್ದ ಗೊಂಚಿಲ್ ಹಾಸ್ಯ ನಾಟಕ, ಮತ್ತು ವಿವಿಧ ವಿನೋದಾವಳಿಗಳು ನಡೆಯಲಿದೆ.    

Read More

ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ರಾಮ ಮಂದಿರಕ್ಕೆ ಬೀಗ: ಪ್ರಧಾನಿ ಮೋದಿ

ಶಿಮ್ಲಾ: ಲೋಕಸಭಾ ಚುನಾವಣೆ ಬಳಿಕ ಕಾಂಗ್ರೆಸ್ ಪಕ್ಷವು ಅಧಿಕಾರಕ್ಕೇರಿದರೆ ಅಯೋಧ್ಯೆಯ ರಾಮ ಮಂದಿರಕ್ಕೆ ಬೀಗ ಜಡಿಯಲಾಗುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ಪುನರುಚ್ಚರಿಸಿದ್ದಾರೆ. ಹಿಮಾಚಲ ಪ್ರದೇಶದ ಸಿರ್ಮೌರ್ನಲ್ಲಿ ನಡೆದ ಚುನಾವಣಾ ಪ್ರಚಾರ ಸಮಾವೇಶದಲ್ಲಿ ಪಾಲ್ಗೊಂಡಿರುವ ಅವರು, ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ‘ಕಾಂಗ್ರೆಸ್ ಮಾಡಿರುವ ಷಡ್ಯಂತ್ರವನ್ನು ಆ ಪಕ್ಷದವರೇ ಬಹಿರಂಗಪಡಿಸಿದ್ದಾರೆ. ತಾವು ಅಧಿಕಾರಕ್ಕೆ ಬಂದರೆ, ರಾಮ ಮಂದಿರಕ್ಕೆ ಬೀಗ ಜಡಿದು, ಬಾಲರಾಮ ಟೆಂಟ್ನಲ್ಲಿ ಕೂರುವುದು ಅನಿವಾರ್ಯವಾಗುವಂತೆ ಮಾಡಲಿದ್ದಾರೆ. ಹೀಗಾಗಿ ಪ್ರತಿ ಮತಗಟ್ಟೆಯಿಂದ ಇವರನ್ನು ಗುಡಿಸಿಹಾಕಬೇಕಿದೆ.ನನ್ನ ಸ್ವಚ್ಛ ಭಾರತ…

Read More

ಮಂಗಳೂರು: ಮೇ 27 ರಂದು ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರ ನೇತೃತ್ವದಲ್ಲಿ ಮತದಾರರ ಸಂವಾದ ಕಾರ್ಯಕ್ರಮ

ಮಂಗಳೂರು: ಭಾರತೀಯ ಜನತಾ ಪಾರ್ಟಿಯ ನೈರುತ್ಯ ಪದವೀಧರರ ಮತ್ತು ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಬಿಜೆಪಿ ರಾಜ್ಯಾಧ್ಯಕ್ಷರಾದ ಬಿ.ವೈ. ವಿಜಯೇಂದ್ರ ಅವರ ನೇತೃತ್ವದಲ್ಲಿ ಮತದಾರರ ಸಂವಾದ ಕಾರ್ಯಕ್ರಮವು ದಿನಾಂಕ ಮೇ 27 ರಂದು ಬೆಳ್ಳಗೆ 10 ಗಂಟೆಗೆ ಸುಧೀಂದ್ರ ಸಭಾಭವನ ಡೊಂಗರಕೇರಿ ಇಲ್ಲಿ ನಡೆಯಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ಮಂಗಳೂರು: ನಾಗರಿಕರೇ ಗಮನಿಸಿ ನಾಳೆ (ಮೇ 25) ನಗರದಲ್ಲಿ ರಸ್ತೆ ಸಂಚಾರದಲ್ಲಿ ಬದಲಾವಣೆ

ಮಂಗಳೂರು : ವಿಧಾನಸಭೆಯ ಸ್ಪೀಕರ್ ಯು.ಟಿ.ಖಾದರ್ ಅವರ ಕುಟುಂಬಿಕರೊಬ್ಬರ ವಿವಾಹ ಮೇ 25ರಂದು ಎಂ.ಜಿ.ರಸ್ತೆಯ ಟಿಎಂಎ ಪೈ ಸಭಾಂಗಣದಲ್ಲಿ ನಡೆಯಲಿದೆ. ಈ ವಿವಾಹ ಕಾರ್ಯಕ್ರಮದಲ್ಲಿ ರಾಜ್ಯಪಾಲರು, ಸಿಎಂ ಹಾಗೂ ಹಲವಾರು ಪ್ರಮುಖ ವಿವಿಐಪಿಗಳು ಆಗಮಿಸಲಿದ್ದಾರೆ. ಈ ಹಿನ್ನೆಲೆಯಲ್ಲಿ ಇಲ್ಲಿನ ರಸ್ತೆಯಲ್ಲಿ ವಾಹನ ದಟ್ಟಣೆ ಅಧಿಕವಾಗುವ ಸಾಧ್ಯತೆಯಿದೆ. ಆದ್ದರಿಂದ ಪಿವಿಎಸ್ ನಿಂದ ಲೇಡಿಹಿಲ್ ಸರ್ಕಲ್ ಕಡೆಗೆ ಹೋಗುವ ಎಂ.ಜಿ.ರಸ್ತೆಯಲ್ಲಿನ ಎಲ್ಲಾ ಮೀಡಿಯನ್‌ಗಳನ್ನು ಮುಚ್ಚಲಾಗುತ್ತದೆ. (ಬೆಸೆಂಟ್ ಜಂಕ್ಷನ್, ಕೋಡಿಯಾಲ್‌ಗುತ್ತು ಕ್ರಾಸ್, ಬಲ್ಲಾಳ್‌ಬಾಗ್ ಜಂಕ್ಷನ್, ನೆಹರೂ ಅವೆನ್ಯೂ ಜಂಕ್ಷನ್). ಆದ್ದರಿಂದ ವಾಹನ…

Read More

ಹಲವು ಸಮಸ್ಯೆಗಳಿಗೆ ರಾಮಬಾಣ ಶಂಖಪುಷ್ಪ

ಶಂಖಪುಷ್ಪ ಹೂವಿನ ಬಗ್ಗೆ ನಾವೆಲ್ಲರೂ ಕೇಳಿದ್ದೇವೆ. ಈ ಹೂವನ್ನು ಮನೆಗಳ ಅಂಗಳಗಳಲ್ಲಿ ನೆಡಲಾಗುತ್ತದೆ ಮತ್ತು ಇದು ನೋಡಲು ಕೂಡ ಸುಂದರವಾಗಿ ಕಾಣುತ್ತದೆ. ಇತ್ತೀಚಿನ ದಿನಗಳಲ್ಲಿ ಮನೆಗಳ ಅಂದ ಹೆಚ್ಚಿಸಲು ಶಂಖಪುಷ್ಪ ಗಿಡವನ್ನು ಹೆಚ್ಚಾಗಿ ನೆಡಲಾಗುತ್ತಿದೆ. ಆದರೆ ಸುಂದರವಾಗಿ ಕಾಣುವ ಈ ಹೂವು ಆರೋಗ್ಯಕ್ಕೂ ಪ್ರಯೋಜನಕಾರಿ ಎಂಬುದು ನಿಮಗೆ ತಿಳಿದಿದೆಯೇ. ಹೌದು, ಆಯುರ್ವೇದದಲ್ಲಿ ಶಂಖಪುಷ್ಪದ ಹಲವು ಗುಣಗಳನ್ನು ಹೇಳಲಾಗಿದೆ. ಬಿಳಿ ಮತ್ತು ನೀಲಿ ಹೂವುಗಳನ್ನು ಹೊಂದಿರುವ ಶಂಖಪುಷ್ಪ ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿ. ತೂಕವನ್ನು ಕಡಿಮೆ ಮಾಡುವುದರಿಂದ ಹಿಡಿದು ರೋಗನಿರೋಧಕ…

Read More

ರಾಜ್ಯದ ಮದ್ಯಪ್ರಿಯರಿಗೆ ಬಿಗ್‌ ಶಾಕ್‌ : ಜೂನ್‌ ಮೊದಲ ವಾರ ಈ ಕಾರಣಕ್ಕೆ ಸಿಗೋದು ಇಲ್ಲ ಎಣ್ಣೆ..!

ಬೆಂಗಳೂರು: ಜೂನ್ 1 ರಿಂದ ರಾಜ್ಯದ ಮದ್ಯಪ್ರಿಯರಿಗೆ ಮದ್ಯ ಸಿಗುವುದು ಅನುಮಾನ ಎನ್ನಲಾಗಿದೆ. ಹೌದ, ಜೂನ್ 1 ರಿಂದ 6ರ ವರೆಗೆ ವೈನ್ ಶಾಪ್‌, ಎಂಆರ್‌ಪಿ ಔಟ್‌ಲೇಟ್‌ಗಳು ಬಂದ್ ಆಗುತ್ತಿದ್ದಾವೆ ಎನ್ನಲಾಗಿದೆ. ಪದವೀಧರ ಕ್ಷೇತ್ರದ ಚುನಾವಣೆ ಮತ್ತು ಲೋಕಸಭಾ ಚುನಾವಣೆಯ ಮತ ಎಣಿಕೆ ಸಲುವಾಗಿ ಬೆಂಗಳೂರು ಜಿಲ್ಲಾಡಳಿತ ಮದ್ಯ ಮಾರಾಟವನ್ನ ಬಂದ್ ಮಾಡುವಂತೆ ಆದೇಶವನ್ನು ಹೊರಡಿಸಲಾಗಿದೆ. ಇದಲ್ಲದೇ ಜೂನ್ 3 ರಂದು ಪದವೀಧರ ಕ್ಷೇತ್ರ ಚುನಾವಣೆಗೆ ಮತದಾನ ನಡೆಯುವುದರಿಂದ ಜೂನ್ 1ರ ಸಂಜೆ 4 ಗಂಟೆಯಿಂದಲೇ ಬಾರ್…

Read More

ಹಿರಿಯ ಪತ್ರಕರ್ತ ಚಿದಂಬರ ಬೈಕಂಪಾಡಿಗೆ ಯಕ್ಷಧ್ರುವ ಕಲಾ ಗೌರವ

ಮಂಗಳೂರು: ಹಿರಿಯ ಪತ್ರಕರ್ತ, ಸಾಹಿತಿ ಚಿದಂಬರ ಬೈಕಂಪಾಡಿ ಅವರು 2024 ಯಕ್ಷಧ್ರುವ ಕಲಾ ಗೌರವ ಪುರಸ್ಕಾರ ಪಡೆಯಲಿದ್ದಾರೆ. ಮೇ 26 ರಂದು ಅಡ್ಯಾರ್ ಗಾರ್ಡನ್ ನಲ್ಲಿ ನಡೆಯುವ ಪಟ್ಲ ಸಂಭ್ರಮದಲ್ಲಿ ಚಿದಂಬರ ಬೈಕಂಪಾಡಿ ಕಲಾ ಗೌರವ ಪುರಸ್ಕಾರ ಸ್ವೀಕರಿಸಲಿದ್ದಾರೆ. ಚಿದಂಬರ ಬೈಕಂಪಾಡಿ ಅವರು ವಡ್ಡರ್ಸೆ ರಘುರಾಮ ಶೆಟ್ಟಿಯವರ ಮುಂಗಾರು ಪತ್ರಿಕೆ, ಬಳಿಕ ಕನ್ನಡ ಪ್ರಭ ಹಾಗೂ ವಿವಿಧ ಮಾಧ್ಯಮದಲ್ಲಿ ದುಡಿದಿದ್ದಾರೆ. 40 ವರ್ಷಕ್ಕೂ ಮಿಕ್ಕಿ ಮಾಧ್ಯಮ ಕ್ಷೇತ್ರದಲ್ಲಿ ದುಡಿದಿರುವ ಚಿದಂಬರ್ ಬೈಕಂಪಾಡಿ ಅವರ ಹಿರಿತನ ಮತ್ತು ಪತ್ರಿಕೋದ್ಯಮ…

Read More

ಖಾಸಗಿ ಶಾಲೆಗಳ ಶುಲ್ಕದ ವಿವರ ನೋಟಿಸ್ ಬೋರ್ಡಿನಲ್ಲಿ ಪ್ರಕಟಿಸಲು ಆದೇಶ

ಬೆಂಗಳೂರು: ಖಾಸಗಿ ಶಾಲೆಗಳು ದಾಖಲಾತಿ ಪ್ರಕ್ರಿಯೆ, ದಾಖಲಾತಿ ಶುಲ್ಕ ಮತ್ತು ಇನ್ನಿತರ ಶುಲ್ಕವನ್ನು ಪಡೆಯುವ ವಿವರವನ್ನು ತಮ್ಮ ಶಾಲಾ ಜಾಲತಾಣದಲ್ಲಿ, ಶಾಲಾ ಸೂಚನಾ ಫಲಕದಲ್ಲಿ(ನೋಟೀಸ್ ಬೋರ್ಡ್) ಸಾರ್ವಜನಿಕರು ಮತ್ತು ಪೋಷಕರಿಗೆ ಲಭ್ಯವಾಗುವಂತೆ ಪ್ರಕಟಿಸಬೇಕು ಎಂದು ಶಾಲಾ ಶಿಕ್ಷಣ ಇಲಾಖೆ ಆದೇಶಿಸಿದೆ. ಶಾಲೆಗಳು ಶುಲ್ಕದ ವಿವರಗಳನ್ನು ಪ್ರಕಟಿಸುವುದು ಕಡ್ಡಾಯ ಎಂದು ಶಾಲಾ ಶಿಕ್ಷಣ ಆಯುಕ್ತರು ಸುತ್ತೋಲೆಯಲ್ಲಿ ತಿಳಿಸಿದ್ದಾರೆ. ಶಾಲೆಗಳು ಶುಲ್ಕ ವಿವರ ಪ್ರಕಟಿಸಲು ನಿರಾಕರಿಸಿದರೆ, ಅವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಸುತ್ತೋಲೆಯಲ್ಲಿ ತಿಳಿಸಲಾಗಿದೆ. ಅನೇಕ ಶಾಲೆಗಳು ಶುಲ್ಕವನ್ನು…

Read More

ವಿಧಾನ ಪರಿಷತ್ ಸ್ಥಾನಕ್ಕೆ ನಳಿನ್ ಕುಮಾರ್ ಕಟೀಲ್, ಸಿ.ಟಿ.ರವಿ ಹೆಸರು  

ಜೂನ್ 13ರಂದು ವಿಧಾನಸಭೆಯಿಂದ ವಿಧಾನ ಪರಿಷತ್‌ಗೆ ನಡೆಯಲಿರುವ 11 ಸ್ಥಾನಗಳಲ್ಲಿ ಬಿಜೆಪಿಗೆ ಲಭಿಸಲಿರುವ 3 ಸ್ಥಾನಗಳಿಗೆ 44 ಆಕಾಂಕ್ಷಿಗಳಿದ್ದು ಕೋರ್ ಕಮಿಟಿ 12 ಮಂದಿಯ ಪಟ್ಟಿಯನ್ನು ಹೈಕಮಾಂಡ್‌ಗೆ ರವಾನೆ ಮಾಡಿದೆ. ಇದರಲ್ಲಿ ದ.ಕ.ಸಂಸದರೂ ಆಗಿರುವ ರಾಜ್ಯ ಬಿಜೆಪಿ ಮಾಜಿ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರ ಹೆಸರೂ ಇದೆ ಎಂದು ಮೂಲಗಳಿಂದ ತಿಳಿದು ಬಂದಿದೆ.ಜಾತಿವಾರು ಹಾಗೂ ಪ್ರದೇಶವಾರು ಆಧರಿಸಿ 12 ಮಂದಿಯ ಅಂತಿಮ ಪಟ್ಟಿ ತಯಾರು ಮಾಡಲಾಗಿದ್ದು ಈ ಪೈಕಿ ಮೂವರನ್ನು ಹೈಕಮಾಂಡ್ ಆಯ್ಕೆ ಮಾಡಲಿದೆ. ರಾಜ್ಯ…

Read More

ಮೇ 26ರಂದು ಕಾಸರಗೋಡು ಜಿಲ್ಲಾ ಕುಲಾಲ ಸಂಘದ ಪ್ರಧಾನ ಕಚೇರಿ ಉದ್ಭಾಟನೆ

ಮಂಜೇಶ್ವರ: ಕುಂಜತ್ತೂರು ತೂಮಿನಾಡು ಶ್ರೀ ಮಹಾಕಾಳಿ ರಸ್ತೆ ಪರಿಸರದಲ್ಲಿರುವ ಕಾಸರಗೋಡು ಜಿಲ್ಲಾ ಕುಲಾಲ ಸಂಘದಜಿಲ್ಲಾ ಕುಲಾಲ ಸಮುದಾಯ ಭವನದ ನೆಲಮಹಡಿಯಲ್ಲಿ ಜಿಲ್ಲಾ ಕುಲಾಲಸಂಘದ ಪ್ರಧಾನ ಕಚೇರಿಯ. ಉದ್ಭಾಟನಾ ಸಮಾರಂಭವು ಮೇ26ರಂದು ಜರಗಲಿದೆ. ಜಿಲ್ಲಾ ಕುಲಾಲ ಸಂಘದ ಅಧ್ಯಕ್ಷ ರವೀಂದ್ರ ಮುನ್ನಿಪ್ಪಾಡಿ ಅಧ್ಯಕ್ಷತೆ ವಹಿಸುವರು. ಪುರುಷೋತ್ತಮ ಕುಲಾಲ್‌ ಕಲ್ಬಾವಿ ದೀಪ ಬೆಳಗಿಸುವರು. ಕಾರ್ಯಕ್ರಮದಲ್ಲಿ ಉದ್ಯಮಿ ಕಲ್ಬಾವಿ ಕುಲಾಲ್‌ ಮಂಗಳೂರು, ಪುಂಡರೀಕಾಕ್ಷ ಕೈರಂಗಳ, ನರಸಿಂಹ ಕುಲಾಲ್‌ ಕಡಂಬಾರು, ಹರೀಶ್‌ ಬಂಗೇರ, ಲೀಲಾವತಿ ಶಲಪಾಡಿ ಭಾಗವಹಿಸಿ ಶುಭಕೋರುವರು. ಬೆಳಗ್ಗೆ 9.30ರಿಂದ ಶ್ರೀ…

Read More