BREAKING: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಸ್ಥಾನಕ್ಕೆ ‘ಜೆ.ಪಿ ನಡ್ಡಾ’ ರಾಜೀನಾಮೆ

ನವದೆಹಲಿ: ಎನ್ ಡಿಎ ಸರ್ಕಾರ ಕೇಂದ್ರದಲ್ಲಿ ಅಸ್ತಿತ್ವಕ್ಕೆ ಇಂದು ಬರಲಿದೆ. ಮೋದಿ 3ನೇ ಅವಧಿಗೆ ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಇದೇ ಹೊತ್ತಿನಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಸ್ಥಾನಕ್ಕೆ ಜೆ.ಪಿ ನಡ್ಡಾ ರಾಜೀನಾಮೆ ನೀಡಿದ್ದಾರೆ. ಇದೀಗ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಸ್ಥಾನಕ್ಕೆ ಜೆ.ಪಿ ನಡ್ಡಾ ರಾಜೀನಾಮೆ ನೀಡಿದ್ದು, ಅವರ ರಾಜೀನಾಮೆಯಿಂದ ತೆರವಾದಂತ ಸ್ಥಾನಕ್ಕೆ ಯಾರನ್ನು ನೇಮಕ ಮಾಡುತ್ತಾರೆ ಎಂಬುದೇ ತೀವ್ರ ಕುತೂಹಲ ಮೂಡಿಸಿದೆ. ನವದೆಹಲಿ: ಮೋದಿ 3ನೇ ಬಾರಿಗೆ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕಾರಕ್ಕೆ ಕ್ಷಣಗಣನೆ ಆರಂಭಗೊಂಡಿದೆ. ಇದೇ…

Read More

ವಾಹನ ಸವಾರರೇ ಗಮನಿಸಿ : ʻHSRPʼ ನಂಬರ್‌ ಪ್ಲೇಟ್‌ ಅಳವಡಿಕೆಗೆ ಜೂ.12 ಕ್ಕೆ ಅಂತಿಮ ಗಡುವು

ಬೆಂಗಳೂರು: 2019ರ ಏಪ್ರಿಲ್ 1ನೇ ತಾರೀಖಿಗೆ ಮೊದಲು ನೋಂದಾಯಿಸಲಾದ ವಾಹನಗಳಿಗೆ ವಾಹನಗಳಿಗೆ ಹೈ-ಸೆಕ್ಯುರಿಟಿ ರಿಜಿಸ್ಟ್ರೇಶನ್ ಪ್ಲೇಟ್‌ಗಳ(ಎಚ್‌ಎಸ್‌ಆರ್‌ಪಿ) ಅಳವಡಿಸಲು ರಾಜ್ಯ ಸರ್ಕಾರ ಜೂನ್ 12ರವರೆಗೆ ಗಡುವು ನೀಡಿದ್ದು, ಇನ್ನು ಮೂರು ದಿನಗಳಲ್ಲಿ ಮುಕ್ತಾಯವಾಗಲಿದೆ. ಹಳೇ ವಾಹನಗಳಿಗೆ ಅತಿ ಸುರಕ್ಷಿತ ನೋಂದಣಿ ಫಲಕ (HSRP) ಅಳವಡಿಸಲು ಸಾರಿಗೆ ಇಲಾಖೆ ನೀಡಿದ ಗಡುವು ಹೈಕೋರ್ಟ್‌ ಆದೇಶದ ಅನ್ವಯ ಜೂನ್‌ 12ರವರೆಗೆ ಇರಲಿದೆ. ಅದರ ಒಳಗೆ ಎಲ್ಲಾ ವಾಹನಗಳು ಹೊಸ ಫಲಕ ಅಳವಡಿಸಿಕೊಳ್ಳುವಂತೆ ಸಾರಿಗೆ ಇಲಾಖೆ ಸೂಚಿಸಿದೆ. ಏಪ್ರಿಲ್.1, 2019ಕ್ಕಿಂತ ನೋಂದಾಯಿಸಿಕೊಂಡ ವಾಹನಗಳಿಗೆ…

Read More

ಕಿಸಾನ್‌ ಸಮ್ಮಾನ್‌ ನಿಧಿ 2,000 ರೂ. ಹೆಚ್ಚಳ: ಇನ್ನು ಸಿಗೋದು 8,000 ರೂ

ರಾಜಸ್ಥಾನದ ರೈತರಿಗೆ ರಾಜ್ಯ ಸರ್ಕಾರವು ಸಿಹಿ ಸುದ್ದಿ ನೀಡಿದೆ. ಕೇಂದ್ರ ಸರ್ಕಾರದ ಪಿಎಂ ಕಿಸಾನ್‌ ಸಮ್ಮಾನ್‌ ನಿಧಿ ಯೋಜನೆ ಅಡಿಯಲ್ಲಿ ವಾರ್ಷಿಕವಾಗಿ ರೈತರಿಗೆ ನೀಡುವ 6 ಸಾವಿರ ರೂ.ವನ್ನು ರಾಜ್ಯ ಸರ್ಕಾರವು8  ಸಾವಿರ ರೂ.ಗೆ ಏರಿಕೆ ಮಾಡಿದೆ. ಈ ಮೂಲಕ ರಾಜ್ಯದ ರೈತರು ವರ್ಷಕ್ಕೆ 8 ಸಾವಿರ ರೂ. ಪಡೆಯಲಿದ್ದಾರೆ. ಈ ಕುರಿತು ತಮ್ಮ ಎಕ್ಸ್‌ ಸಾಮಾಜಿಕ ಜಾಲತಾಣದಲ್ಲಿ ಮುಖ್ಯಮಂತ್ರಿ ಭಜನ್‌ಲಾಲ್‌ ಶರ್ಮಾ ಘೋಷಣೆ ಮಾಡಿದ್ದಾರೆ.

Read More

ನರೇಂದ್ರ ಮೋದಿ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಪಾಲ್ಗೊಳ್ಳಲು ದೆಹಲಿಗೆ ತೆರಳಿದ ರಜನಿಕಾಂತ್

ನವದೆಹಲಿ:ಜೂನ್ 9 ರಂದು ರಾಷ್ಟ್ರಪತಿ ಭವನದಲ್ಲಿ ನಡೆಯಲಿರುವ ನಿಯೋಜಿತ ಪ್ರಧಾನಿ ನರೇಂದ್ರ ಮೋದಿ ಅವರ ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕಾಗಿ ರಜಿನಿಕಾಂತ್ ಚೆನ್ನೈನಿಂದ ನವದೆಹಲಿಗೆ ತೆರಳಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನರೇಂದ್ರ ಮೋದಿ ಮೂರನೇ ಅವಧಿಗೆ ಪ್ರಧಾನಿಯಾಗಿ ಅಧಿಕಾರ ವಹಿಸಿಕೊಂಡಿರುವುದು ‘ದೊಡ್ಡ ಸಾಧನೆ’ ಎಂದು ಹೇಳಿದರು. ಇದು ಪ್ರಜಾಪ್ರಭುತ್ವದ ಆರೋಗ್ಯಕರ ಸಂಕೇತವಾಗಿದೆ ಎಂದು ಅವರು ಹೇಳಿದರು. ಭಾನುವಾರ ನಡೆಯಲಿರುವ ನರೇಂದ್ರ ಮೋದಿ ಮತ್ತು ಅವರ ಹೊಸ ಕ್ಯಾಬಿನೆಟ್ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ರಜನಿಕಾಂತ್ ಭಾಗವಹಿಸಲಿದ್ದಾರೆ. ಚೆನ್ನೈನಿಂದ…

Read More

ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ನಿರಾಸೆ – ಗ್ಯಾರಂಟಿ ಯೋಜನೆ ಸ್ಥಗಿತಗೊಳಿಸಲು ಚರ್ಚೆ

ಬೆಂಗಳೂರು : ಗ್ಯಾರಂಟಿ ಯೋಜನೆ ಜಾರಿಯಿಂದ ರಾಜ್ಯದಲ್ಲಿ ಲೋಕಸಭೆ ಚುನಾವಣೆಯಲ್ಲಿ ಹೆಚ್ಚಿನ ಸ್ಥಾನ ಗಳಿಸುವ ನಿರೀಕ್ಷೆಯಲ್ಲಿದ್ದ ಕಾಂಗ್ರೆಸ್ ಪಕ್ಷಕ್ಕೆ ನಿರಾಸೆಯಾಗಿದೆ. ಈ ಹಿನ್ನೆಲೆಯಲ್ಲಿ ಗ್ಯಾರಂಟಿ ಯೋಜನೆಗಳನ್ನು ಸ್ಥಗಿತಗೊಳಿಸಬೇಕೆಂಬ ಚರ್ಚೆ ಜೋರಾಗಿಯೇ ನಡೆದಿದೆ. ಆಡಳಿತ ಪಕ್ಷದ ಶಾಸಕರು, ಮುಖಂಡರು ಕೂಡ ಗ್ಯಾರಂಟಿ ಯೋಜನೆ ಸ್ಥಗಿತಗೊಳಿಸುವ ಬಗ್ಗೆ ಒತ್ತಾಯಿಸಿದ್ದಾರೆ. ಕಾಂಗ್ರೆಸ್ ಪಕ್ಷದ ಗ್ಯಾರಂಟಿಗಳನ್ನು ಟೀಕಿಸಿದ ಬಿಜೆಪಿ ಪರವಾಗಿ ಜನ ಮತ ಹಾಕಿದ್ದಾರೆ. ಹೀಗಾಗಿ, ಗ್ಯಾರಂಟಿ ಯೋಜನೆ ನಿಲ್ಲಿಸುವುದೇ ಒಳ್ಳೆಯದು ಎಂದು ಮೈಸೂರು -ಕೊಡಗು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿದ್ದ ಕೆಪಿಸಿಸಿ…

Read More

ಪ್ರಮಾಣವಚನ ಸ್ವೀಕಾರಕ್ಕೂ ಮುನ್ನ ವಾಜಪೇಯಿ ಸಮಾಧಿಗೆ ʻಮೋದಿʼ ನಮನ

ನವದೆಹಲಿ :ಪ್ರಧಾನಿ ನರೇಂದ್ರ ಮೋದಿ ಪ್ರಮಾಣವಚನ ಸ್ವೀಕಾರ ಸಮಾರಂಭಕ್ಕೂ ಮುನ್ನ ಇಂದು ಬೆಳಗ್ಗೆ ದೆಹಲಿಯಲ್ಲಿರುವ ಮಾಜಿ ಪ್ರಧಾನಿ ಅಟಲ್‌ ಬಿಹಾರಿ ವಾಜಪೇಯಿ ಅವರ ಸಮಾಧಿಗೆ ನಮನ ಸಲ್ಲಿಸಿದ್ದಾರೆ. 293ಸ್ಥಾನ ಗೆದ್ದಿರುವ ಬಿಜೆಪಿ ನೇತೃತ್ವದ ಎನ್‌ ಡಿಎ ಕೂಟದ ಕೇಂದ್ರ ಸರ್ಕಾರ ಇಂದಿನಿಂದ ಅಸ್ವಿತ್ವಕ್ಕೆ ಬರಲಿದೆ. ನಿಯೋಜಿತ ಪ್ರಧಾನಿ ನರೇಂದ್ರ ಮೋದಿ ಅವರ ಮಂತ್ರಿ ಮಂಡಲದ ಸದಸ್ಯರು ಇಂದು ಸಂಜೆ 7.15 ಕ್ಕೆ ರಾಷ್ಟ್ರಪತಿ ಭವನದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ನರೇಂದ್ರ ಮೋದಿ ಅವರು ಸತತ…

Read More

ಯುವತಿಯೊಂದಿಗೆ ಬಸ್ ನಲ್ಲಿ ಅಸಭ್ಯ ವರ್ತನೆ; ಯುವಕನಿಗೆ ಧರ್ಮದೇಟು ನೀಡಿದ ಸಾರ್ವಜನಿಕರು

ಮಂಗಳೂರು: ಖಾಸಗಿ ಬಸ್ ನಲ್ಲಿ ಯುವಕನೊಬ್ಬ ಯುವತಿಯೊಂದಿಗೆ ಅಸಭ್ಯವಾಗಿ ವರ್ತಿಸಿದ್ದು, ಕಾಮುಕನನ್ನು ಹಿಡಿದ ಸಾರ್ವಜನಿಕರು ಹಿಗ್ಗಾಮುಗ್ಗಾ ಥಳಿಸಿ ಪೊಲೀಸರಿಗೆ ಒಪ್ಪಿಸಿದ ಘಟನೆ ಮಂಗಳೂರಿನ ಬಲ್ಲಾಳ್ ಬಾಗ್ ಎಂಬಲ್ಲಿ ನಡೆದಿದೆ. ಯುವತಿ ನಾಗನೂರಿನಿಂದ ಬಸ್ ಹತ್ತಿ ಸ್ಟೇಟ್ ಬ್ಯಾಂಕ್ ಬಳಿ ಇಳಿದು ಬಳಿಕ ಮರೋಳಿ ಎಂಬ ಹೆಸರಿನ ಬಸ್ ನಲ್ಲಿ ಬಜಪೆ ಕಡೆ ತೆರಳುತ್ತಿದ್ದಳು. ಯುವತಿಯನ್ನು ಹಿಂಬಾಲಿಸಿಕೊಂಡು ಬಂದಿದ್ದ ಯುವಕ, ಯುವತಿ ಕುಳಿತಿದ್ದ ಹಿಂಬದಿಯ ಸೀಟಿನಲ್ಲಿ ಕುಳಿತುಕೊಂಡಿದ್ದ. ಅಲ್ಲದೇ ಯುವತಿಯ ಸೊಂಟಕ್ಕೆ ಕೈ ಹಾಕಿ ಕಿರುಕುಳ ನೀಡುತ್ತಿದ್ದ. ಯುವತಿ ಈ…

Read More

ಮೋದಿ ಪ್ರಮಾಣವಚನ ಸ್ವೀಕಾರ ಸಮಾರಂಭಕ್ಕೆ ಮಾಲ್ಡೀವ್ಸ್ ಅಧ್ಯಕ್ಷರಿಗೆ ಆಹ್ವಾನ

ನರೇಂದ್ರ ಮೋದಿ ಅವರು ಜೂನ್ 9ರಂದು 3ನೇ ಬಾರಿಗೆ ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಈ ಹಿನ್ನೆಲೆ ಭಾರತ ಹಾಗೂ ಮಾಲ್ಡೀವ್ಸ್ ನಡುವಿನ ರಾಜತಾಂತ್ರಿಕ ಬಿಕ್ಕಟ್ಟಿನ ನಡುವೆಯೂ ಮೋದಿ ಅವರ ಪ್ರಮಾಣವಚನ ಸ್ವೀಕಾರ ಸಮಾರಂಭಕ್ಕೆ ಮಾಲ್ಡೀವ್ಸ್ ಅಧ್ಯಕ್ಷ ಮೊಹಮ್ಮದ್ ಮುಯಿಝು ಅವರನ್ನು ಆಹ್ವಾನಿಸಲಾಗಿದೆ. ಭಾರತ ಸರ್ಕಾರದ ಮಂತ್ರಿಗಳ ಪರಿಷತ್ ನೀಡಿದ ಆಹ್ವಾನವನ್ನು ಸ್ವೀಕರಿಸಲಾಗಿದೆ ಎಂದು ಮಾಲ್ಡೀವ್ಸ್ ಅಧ್ಯಕ್ಷರ ಕಚೇರಿ ಪ್ರಕಟಣೆಯಲ್ಲಿ ತಿಳಿಸಿದೆ. ಭಾರತದ ಹೈಯರ್ ಕಮಿಷನರ್ ಮುನು ಮಹಾವರ್ ಅವರು ಮಾಲ್ಡೀವ್ಸ್ ಅಧ್ಯಕ್ಷರನ್ನು ಖುದ್ದಾಗಿ ಭೇಟಿ ಮಾಡಿ ಸಮಾರಂಭದ…

Read More

ಲೋಕಸಭಾ ಚುನಾವಣೆಯಲ್ಲಿ ‘NDA’ ಗೆದ್ದಿದ್ದಕ್ಕೆ ‘ಬೆರಳು ಕತ್ತರಿಸಿ’ ದೇವರಿಗೆ ಅರ್ಪಿಸಿದ ವ್ಯಕ್ತಿ 

ನವದೆಹಲಿ: ಬಿಜೆಪಿ ಪಕ್ಷ ಲೋಕಸಭಾ ಚುನಾವಣೆಯಲ್ಲಿ ಗೆಲುವು ಸಾಧಿಸಲಿ. ಮೋದಿ ಮತ್ತೊಮ್ಮೆ ಪ್ರಧಾನಿಯಾಗಲಿ ಅಂತ ಅನೇಕರು ಆಶಿಸಿದ್ದರು. ಕೆಲವರು ಇದಕ್ಕಾಗಿ ಹರಕೆ ಮಾಡಿಕೊಂಡಿದ್ದಾರೆ. ಹೀಗೆ ಲೋಕಸಭಾ ಚುನಾವಣೆಯಲ್ಲಿ ಎನ್ ಡಿಎ ಗೆದ್ದರೇ ಬೆರಳು ಕರ್ತರಿಸಿ ಅರ್ಪಿಸೋದಾಗಿ ದೇವರಿಗೆ ಹರಕೆಯನ್ನು ವ್ಯಕ್ತಿಯೊಬ್ಬ ಕಟ್ಟಿಕೊಂಡಿದ್ದನು. ಅದರಂತೆ ತನ್ನ ಬೆರಳು ಕತ್ತರಿಸಿ ದೇವರಿಗೆ ಅರ್ಪಿಸಿದ ಘಟನೆ ಛತ್ತೀಸ್ ಗಢದಲ್ಲಿ ನಡೆದಿದೆ. ಹೌದು ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ಎನ್ಡಿಎ ಬಹುಮತ ಪಡೆದ ನಂತರ ಛತ್ತೀಸ್ಗಢದ ಬಲರಾಂಪುರದಲ್ಲಿ 30 ವರ್ಷದ ವ್ಯಕ್ತಿಯೊಬ್ಬರು ತಮ್ಮ…

Read More