Headlines

ಮಂಗಳೂರು: ಅಪ್ರಾಪ್ತ ಬಾಲಕನಿಗೆ ಸ್ಕೂಟರ್ ಚಲಾಯಿಸಲು ನೀಡಿದ‌‌ ತಾಯಿಗೆ 26 ಸಾವಿರ ದಂಡ

ಮಂಗಳೂರು: ದ್ವಿಚಕ್ರ ವಾಹನ ಚಲಾಯಿಸಲು ತಮ್ಮ ಅಪ್ರಾಪ್ತ ಮಗನಿಗೆ ನೀಡಿದ್ದಕ್ಕಾಗಿ ಆತನ ತಾಯಿಗೆ ಮಂಗಳೂರಿನ 4 ನೇ ಜೆ.ಎಂ.ಎಪ್.ಸಿ ನ್ಯಾಯಾಲಯ 26,000 ರೂ. ದಂಡ ವಿಧಿಸಿ ಆದೇಶಿದೆ. ಇದೇ ಅಕ್ಟೋಬರ್ 10ರಂದು ರಂದು ಬೈಕಂಪಾಡಿಯಲ್ಲಿ ಹತಿಜಮ್ಮ ಅವರು ತಮ್ಮ ಅಪ್ರಾಪ್ತ ಮಗನಿಗೆ ದ್ವಿಚಕ್ರ ವಾಹನ ಚಲಾಯಿಸಲು ನೀಡಿದ್ದಾರೆ. ಈ ಬಗ್ಗೆ ಉತ್ತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ನವೆಂಬರ್ 5ರಂದು ಈ ಪ್ರಕರಣದ ವಿಚಾರಣೆ ನಡೆಸಿದ ಮಂಗಳೂರಿನ 4 ನೇ ಜೆ.ಎಂ.ಎಪ್.ಸಿ ನ್ಯಾಯಾಲಯ, ಅಪ್ರಾಪ್ತ ಬಾಲಕನಿಗೆ ದ್ವಿಚಕ್ರ…

Read More

ಮಂಗಳೂರು: ಅಂಗಡಿ ಮಾಲೀಕರಿಂದ ಹಣದ ವಸೂಲಿ ಪ್ರಕರಣ – ಮೂವರ ವಿರುದ್ದ ಕೋಕಾ ಕಾಯ್ದೆ ಜಾರಿ

ಮಂಗಳೂರು: ಬಜ್ಪೆ ಪೊಲೀಸ್ ಠಾಣೆಯ ಕ್ರೈಂ ನಂ. 194/2025ರಲ್ಲಿ ಅಂಗಡಿ ಮಾಲೀಕರಿಂದ ಹಣದ ದಬ್ಬಾಳಿಕೆ (ಎಕ್ಸ್ಟೋರ್ಷನ್) ನಡೆಸಿದ ಪ್ರಕರಣದ ಹಿನ್ನೆಲೆಯಲ್ಲಿ ಪ್ರಸಾದ್, ಗಣೇಶ್ ಮತ್ತು ಅಶ್ವಿತ್ ವಿರುದ್ಧ ಕೆಸಿಒಸಿಎ (KCOCA) ಕಾಯ್ದೆ ಜಾರಿಗೊಳಿಸಲಾಗಿದೆ. ಪ್ರಶಾಂತ್ ಅಲಿಯಾಸ್ ಪಾಚು ವಿರುದ್ಧ ಒಟ್ಟು 14 ಪ್ರಕರಣಗಳು ದಾಖಲಾಗಿದ್ದು, ಅದರಲ್ಲೊಂದು ಕೊಲೆ ಮತ್ತು ನಾಲ್ಕು ಕೊಲೆ ಯತ್ನ ಪ್ರಕರಣಗಳಿವೆ. ಈ ಪ್ರಕರಣಗಳು ತನಿಖೆ ಮತ್ತು ವಿಚಾರಣೆಯ ವಿವಿಧ ಹಂತಗಳಲ್ಲಿ ಇವೆ. ಕೆಲವು ಪ್ರಕರಣಗಳಲ್ಲಿ ಅವನಿಗೆ ವಿನಾಯಿತಿ ದೊರೆತಿದೆ. ಗಣೇಶ್ ವಿರುದ್ಧ ನಾಲ್ಕು ಪ್ರಕರಣಗಳು…

Read More

ಮಂಗಳೂರು ಪೊಲೀಸ್ ಆಯುಕ್ತರ ಹೆಸರಿನಲ್ಲಿ ಫೇಸ್‌ಬುಕ್‌ ನಕಲಿ ಖಾತೆ

ಮಂಗಳೂರು: ನಗರ ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ಅವರ ಹೆಸರಿನಲ್ಲಿ ಫೇಸ್‌ಬುಕ್‌ನಲ್ಲಿ ವ್ಯಕ್ತಿಯೋರ್ವ ನಕಲಿ ಖಾತೆ ಸೃಷ್ಟಿಸಿದ ಕುರಿತು ವರದಿಯಾಗಿದೆ. ಕೆಲವು ದಿನಗಳ ಹಿಂದೆ ಈ ಖಾತೆಯನ್ನು ಸೃಷ್ಟಿಸಲಾಗಿದೆ. ಇದಕ್ಕೆ 9 ಮಂದಿ ಸೇರ್ಪಡೆಗೊಂಡಿದ್ದು, ಮಾಹಿತಿ ತಿಳಿದ ತಕ್ಷಣ ಪೊಲೀಸ್‌ ಆಯುಕ್ತರು ಸಂಬಂಧಪಟ್ಟ ಸಂಸ್ಥೆಗೆ ವರದಿ ಮಾಡಿದ್ದಾರೆ ಎಂದು ತಿಳಿದು ಬಂದಿದೆ. ನಕಲಿ ಖಾತೆ ಸೃಷ್ಟಿಸಿದ ವ್ಯಕ್ತಿಯು ತನ್ನ ಪ್ರೊಫೈಲ್ ಲಾಕ್ ಮಾಡಿರುವುದು ಕಂಡು ಬಂದಿದೆ ಎಂದು ತಿಳಿದು ಬಂದಿದೆ.

Read More

ನಂದಿನಿ ತುಪ್ಪದ ಬೆಲೆ ದಿಢೀರ್‌ 90 ರೂ. ಏರಿಕೆ

ಬೆಂಗಳೂರು: ಜಿಎಸ್‌ಟಿ ಇಳಿಕೆಯಿಂದಾಗಿ ಎಲ್ಲ ವಸ್ತುಗಳ ಬೆಲೆ ಇಳಿಕೆಯಾಗಿ ನಿರಾಳವಾಗಿದ್ದ ಜನತೆಗೆ ಕರ್ನಾಟಕ ಸಹಕಾರ ಹಾಲು ಉತ್ಪಾದಕರ ಮಹಾಮಂಡಳ (ಕೆಎಂಎಫ್‌) ನಂದಿನ ತುಪ್ಪದ ಬೆಲೆಯಲ್ಲಿ ಏಕಾಏಕಿ 90 ರೂ. ಏರಿಕೆ ಮಾಡಿ ದಿಢೀರ್‌ ಶಾಕ್‌ ಕೊಟ್ಟಿದೆ. ನಂದಿನಿ ತುಪ್ಪದ ದರ ಪ್ರತಿ ಕೆಜಿಗೆ 90 ರೂ. ಏರಿಕೆ ಮಾಡಿ ಆದೇಶ ಹೊರಡಿಸಿದ್ದು, ಇಂದಿನಿಂದಲೇ ನೂತನ ದರ ಜಾರಿಗೆ ಬರಲಿದೆ ಎಂದು ತಿಳಿಸಿದೆ. ಈ ಹಿಂದೆ 1 ಕೆಜಿ ತುಪ್ಪಕ್ಕೆ 610 ರೂ. ಇತ್ತು, ಸದ್ಯ 90 ರೂ….

Read More

ಮಂಗಳೂರು: ಗೋ ಅಕ್ರಮ ಸಾಗಾಟ ಆರೋಪಿಯ ಮನೆ ಮುಟ್ಟುಗೋಲು

ಮಂಗಳೂರು : ಕಾರಿನಲ್ಲಿ ಅಕ್ರಮವಾಗಿ ಮೂರು ದನಗಳನ್ನು ಸಾಗಾಟ ಮಾಡಿ ಪೊಲೀಸರಿಗೆ ಸಿಕ್ಕಿಬಿದ್ದಿದ್ದ ಇಬ್ಬರು ಆರೋಪಿಗಳಲ್ಲಿ ಒಬ್ಬನ ಮನೆಯನ್ನು ಧರ್ಮಸ್ಥಳ ಪೊಲೀಸರು ಮುಟ್ಟುಗೋಲು ಹಾಕಿ ಜಪ್ತಿ ಮಾಡಿದ್ದಾರೆ. ‌ನ.2ರಂದು ಪಟ್ರಮೆ ಗ್ರಾಮದ ಪಟ್ಟೂರು ರಸ್ತೆಯಲ್ಲಿ ಗೋ ಮಾಂಸ ಮಾಡಲು ಅಕ್ರಮವಾಗಿ ಮೂರು ದನಗಳನ್ನು KA-19-MC-5862 ನಂಬರಿನ ರಿಟ್ಜ್ ಕಾರಿನಲ್ಲಿ ಸಾಗಾಟ ಮಾಡುವಾಗ ಉಳ್ಳಾಲ ತಾಲೂಕಿನ ಮಹಮ್ಮದ್ ಖಲೀಲ್ ಅಲಿಯಾಸ್‌ ತೌಸೀಫ್ (38) ಮತ್ತು ಮಹಮ್ಮದ್ ಸಿನಾನ್(25) ಸಿಕ್ಕಿ ಬಿದ್ದಿದ್ದರು. ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ದನ ನೀಡಿದ ಪಟ್ರಮೆ…

Read More

ಮಂಗಳೂರು: ಕೌಟುಂಬಿಕ ಕಲಹದಿಂದ ಮನನೊಂದು ಮಗಳೊಂದಿಗೆ ಆತ್ಮಹತ್ಯೆ ಮಾಡಿಕೊಳ್ಳಲು ಯತ್ನಿಸಿದ ವ್ಯಕ್ತಿಯ ರಕ್ಷಣೆ

ಮಂಗಳೂರು: ಕೌಟುಂಬಿಕ ಕಲಹದಿಂದ ಮನನೊಂದು ತನ್ನ ಮಗುವಿನೊಂದಿಗೆ ಆತ್ಮಹತ್ಯೆಗೆ ಮುಂದಾಗಿದ್ದ ಯುವಕನೊಬ್ಬನನ್ನು ಪಣಂಬೂರು ಪೊಲೀಸರು ಸಮಯಪ್ರಜ್ಞೆ ಮೆರೆದು ರಕ್ಷಿಸಿದ ಘಟನೆ ಸೋಮವಾರ ಮುಸ್ಸಂಜೆ ವೇಳೆಗೆ ಸಂಭವಿಸಿದೆ. ಕೂಳೂರು ಪಂಜಿಮೊಗರು ಅಂಬಿಕಾ ನಗರ ನಿವಾಸಿ ರಾಜೇಶ್(35) ಮತ್ತವರ ನಾಲ್ಕು ವರ್ಷದ ಪುತ್ರಿಯನ್ನು ರಕ್ಷಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಪತ್ನಿಯೊಂದಿಗೆ ಜಗಳ ಮಾಡಿಕೊಂಡಿದ್ದ ರಾಜೇಶ್ ತನ್ನ ಮಗಳೊಂದಿಗೆ ತಣ್ಣೀರುಬಾವಿ ಬೀಚ್‌ಗೆ ತೆರಳಿ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಸೆಲ್ಫಿ ವೀಡಿಯೊ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದರು. ಈ ವೀಡಿಯೊವನ್ನು ಸಾರ್ವಜನಿಕರೊಬ್ಬರು ಪಣಂಬೂರು…

Read More

ಕೊಲ್ಲೂರು ದೇವಸ್ಥಾನದ ಹೆಸರಿನಲ್ಲಿ ನಕಲಿ ವೆಬ್‌ಸೈಟ್ ಖಾತೆ ತೆರೆದು ವಂಚನೆ

ಕೊಲ್ಲೂರು ಮೂಕಾಂಬಿಕಾ ದೇವಸ್ಥಾನದ ಹೆಸರಿನಲ್ಲಿ ನಕಲಿ ವೆಬ್‌ಸೈಟ್ ಖಾತೆ ತೆರೆದು ಅತಿಥಿ ಗೃಹದ ಕೊಠಡಿಯನ್ನು ಕಾಯ್ದಿರಿಸುವುದಾಗಿ ಹಣ ಪಡೆದು ವಂಚಿಸಿರುವ ಪ್ರಕರಣ ಬೆಳಕಿಗೆ ಬಂದಿದೆ. ಮೂಕಾಂಬಿಕಾ ದೇವಸ್ಥಾನದ ಕಾರ್ಯನಿರ್ವಹಣಾಧಿಕಾರಿ ಪ್ರಶಾಂತ್ ಕುಮಾರ್ ಶೆಟ್ಟಿ ನೀಡಿದ ದೂರಿನಂತೆ ಕೊಲ್ಲೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.  ದೇವಸ್ಥಾನದ ಅಧಿಕೃತ ವೆಬ್‌ಸೈಟ್  http://karnatakatemplesaccommodation.com ಇದರ ಬದಲಿಗೆ ವೆಬ್‌ಸೈಟನ್ನು ತೆರೆದು, ನಕಲಿ ವೆಬ್‌ಸೈಟ್ karnataka temple accommodation ಮೂಲಕ ಲಲಿತಾಂಬಿಕಾ ಅತಿಥಿ ಗ್ರಹದ ಕೊಠಡಿಯನ್ನು ಕಾಯ್ದಿರಿಸುವುದಾಗಿ ನಂಬಿಸಿ, ಕ್ಯೂ ಆರ್‌ಕೋಡ್ ಮೂಲಕ ಹಣ ಪಡೆದು ವಂಚಿಸಲಾಗಿದೆ. ಈ ಬಗ್ಗೆ ಸೂಕ್ತ…

Read More

ಮಂಗಳೂರು: ಆನ್ ಲೈನ್ ಟ್ರೇಡಿಂಗ್‌ನಲ್ಲಿ ಹೆಚ್ಚು ಲಾಭದ ಆಮಿಷ – ವ್ಯಕ್ತಿಗೆ 32.06 ಲಕ್ಷ ರೂ. ವಂಚನೆ

ಮಂಗಳೂರು : ಆನ್ ಲೈನ್ ಟ್ರೇಡಿಂಗ್‌ನಲ್ಲಿ ಹೆಚ್ಚು ಲಾಭಾಂಶ ದೊರೆಯುವುದಾಗಿ ನಂಬಿಸಿ 32.06 ಲಕ್ಷ ರೂ. ವಂಚಿಸಿರುವ ಬಗ್ಗೆ ಮಂಗಳೂರಿನ ಸೆನ್ ಅಪರಾಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ದೂರುದಾರರು ಸೆ.9ರಂದು ಫೇಸ್ ಬುಕ್ ನೋಡುತ್ತಿರುವ ಸಂದರ್ಭದಲ್ಲಿ ಕಾವ್ಯ ಶೆಟ್ಟಿ ಹೆಸರಿನಲ್ಲಿ ಫ್ರೆಂಡ್ಸ್ ರಿಕ್ವೆಸ್ಟ್ ಬಂದಿದೆ. ಅದನ್ನು ಎಕ್ಸೆಪ್ಟ್ ಮಾಡಿ ಅವರೊಂದಿಗೆ ಚಾಟ್ ಮಾಡಿದ್ದಾರೆ. ಆಕೆ ತಾನು ಮುಂಬಯಿನಲ್ಲಿ ಟ್ರೇಡಿಂಗ್ ಕೆಲಸ ಮಾಡಿಕೊಂಡಿದ್ದು, ಅದರಿಂದ ಹೆಚ್ಚಿನ ಲಾಭ ಬರುತ್ತದೆ ಎಂದು ನಂಬಿಸಿರುವುದಾಗಿ ಪೊಲೀಸರಿಗೆ ನೀಡಿರುವ ದೂರಿನಲ್ಲಿ ತಿಳಿಸಿದ್ದಾರೆ….

Read More

 ಯುವತಿ ವಿಚಾರಕ್ಕೆ ಯುವಕನ ಬಟ್ಟೆ ಬಿಚ್ಚಿ ಮಾರಣಾಂತಿಕ ಹಲ್ಲೆ.!!

 ಕ್ಷುಲ್ಲಕ ಕಾರಣಕ್ಕೆ ಯುವಕನ ಮೇಲೆ ಮಾರಣಾಂತಿಕವಾಗಿ ಹಲ್ಲೆ ನಡೆಸಿರುವ ಘಟನೆ ವರದಿಯಾಗಿದೆ. ಹಾಸನ ಹೊರವಲಯದ ಗೆಂಡೆಕಟ್ಟೆ ಅರಣ್ಯದಲ್ಲಿ ಈ ಒಂದು ಘಟನೆ ನಡೆದಿದ್ದು, ಬಟ್ಟೆ ಬಿಚ್ಚಿ ಭರತ ಎನ್ನುವ ಯುವಕನ ಮೇಲೆ ಯುವಕರ ಗುಂಪು ಹಲ್ಲೆ ಮಾಡಿದೆ. ಈ ಒಂದು ಘಟನೆಗೆ ಯುವತಿ ಹಾಗು ಹಣದ ವಿಚಾರಕ್ಕೆ ಈ ಒಂದು ಗ್ಯಾಂಗ್ ಹಲ್ಲೆ ನಡೆಸಿರುವ ಅನುಮಾನ ವ್ಯಕ್ತವಾಗಿದೆ. ಯುವಕ ಭರತ್ ಎಷ್ಟೇ ಬೇಡಿಕೊಂಡರೂ ಕೂಡ ಕಿಡಿಗೇಡಿಗಳು ಆತನ ಮೇಲೆ ಮಾರಣಾಂತಿಕವಾಗಿ ಹಲ್ಲೆ ನಡೆಸಿದ್ದಾರೆ. ಘಟನೆ ಕುರಿತಂತೆ ಬಡಾವಣೆ…

Read More

ಮಂಗಳೂರು: ಅಕ್ರಮ ದನ ಸಾಗಾಟ ಪತ್ತೆ..! ಇಬ್ಬರು ಅರೆಸ್ಟ್

ಮಂಗಳೂರು: ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ಮಲ್ಲೂರು ಗ್ರಾಮದ ಬದ್ರಿಯಾನಗರ ಪರಿಸರದಲ್ಲಿ ಗೋವನ್ನು ಅಕ್ರಮವಾಗಿ ಗೂಡ್ಸ್ ವಾಹನದಲ್ಲಿ ತುಂಬಿಕೊಂಡು ಸಾಗಾಟ ಮಾಡುತ್ತಿರುವುದು ಪತ್ತೆಯಾಗಿದೆ. ಗ್ರಾಮಾಂತರ ಠಾಣೆಯ ಉಪ ನಿರೀಕ್ಷಕ ಅರುಣ್ ಕುಮಾರ್ ಅವರು ಖಚಿತ ಮಾಹಿತಿಯಂತೆ ಸಿಬಂದಿಯೊಂದಿಗೆ ಮಲ್ಲೂರು ಗ್ರಾಮದ ಕಂಜಿಲಕೋಡಿ ಎಂಬಲ್ಲಿ ಗೂಡ್ಸ್ ವಾಹನವನ್ನು ನಿಲ್ಲಿಸಿ ಪರಿಶೀಲಿಸಿದಾಗ ವಾಹನದ ಚಾಲಕ ಜೋಸೆಫ್‌ ನೀಲೇಶ್‌ ಡಿ’ಅಲ್ಮೆಡಾ ಮತ್ತು ಕಣ್ಣೂರಿನ ಮಜೀದ್ ಎಂಬವರು ಕಣ್ಣೂರಿನಿಂದ ಕಲಾಯಿ ಕಡೆಗೆ ಯಾವುದೇ ಪರವಾನಿಗೆ ಇಲ್ಲದೆ ಒಂದು ಹಸುವನ್ನು ಸಾಗಿಸುತ್ತಿರುವುದು ಕಂಡು ಬಂದಿದೆ….

Read More