ಸೇನೆ ಸೇರಬಯಸುವವರಿಗೆ ಗುಡ್ ನ್ಯೂಸ್ : ನ.13 ರಿಂದ 19 ರ ವರೆಗೆ ಬಳ್ಳಾರಿಯಲ್ಲಿ ಅಗ್ನಿವೀರ್ ನೇಮಕಾತಿ ರ‍್ಯಾಲಿ
ಬೆಂಗಳೂರು ಪ್ರಧಾನ ಕಚೇರಿ ನೇಮಕಾತಿ ವಲಯದಿಂದ ನವೆಂಬರ್ 13 ರಿಂದ 19 ರ ವರೆಗೆ ಬಳ್ಳಾರಿ ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಅಗ್ನಿವೀರ್ ನೇಮಕಾತಿ ರ‍್ಯಾಲಿ ಏರ್ಪಡಿಸಲಾಗಿದೆ. ಕರ್ನಾಟಕ, ಕೇರಳ, ಲಕ್ಷದ್ವೀಪ ಮತ್ತು ಮಾಹೆ ರಾಜ್ಯದ ಅಭ್ಯರ್ಥಿಗಳಿಗೆ 30 ಜೂನ್ 2025 ರಿಂದ 10 ಜುಲೈ 2025 ರವರೆಗೆ ನಡೆಸಲಾದ ಆನ್‌ಲೈನ್ ಸಾಮಾನ್ಯ ಪ್ರವೇಶ ಪರೀಕ್ಷೆಯಲ್ಲಿ ಅರ್ಹತೆ ಪಡೆದ ಅಗ್ನಿವೀರ್ ವರ್ಗಗಳ ಅರ್ಜಿದಾರರನ್ನು (ಅನ್ವಯವಾಗುವಂತೆ) ವರ್ಗವಾರು ರ‍್ಯಾಲಿಗೆ ಕರೆಯಲಾಗಿದೆ. ಶಾರ್ಟ್ ಲಿಸ್ಟ್ ಮಾಡಿದ ಅಭ್ಯರ್ಥಿಗಳ ರಾಜ್ಯ ಮತ್ತು ಜಿಲ್ಲೆಗಳ…

