ಮಂಗಳೂರು: ಉಸ್ತುವಾರಿ ಸಚಿವರು ಮತ್ತು ಗಣ್ಯರಿಂದ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಸ್ವೀಕರಿಸಿದ ಲ. ಅನಿಲ್ ದಾಸ್

ಮಂಗಳೂರು: ಸಮಾಜ ಸೇವೆಗೆ ಕನ್ನಡ ರಾಜ್ಯೋತ್ಸವದ ಪ್ರಯುಕ್ತ ಲ. ಅನಿಲ್ ದಾಸ್ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆಯಾಗಿದ್ದರು ಸಮಾಜ ಸೇವೆ, ಶೈಕ್ಷಣಿಕ, ಧಾರ್ಮಿಕ ಸಾಮಾಜಿಕ ಸೇವೆಯಗಳಲ್ಲಿ ಮುಂಚೂಣಿಯಲ್ಲಿರುವ ಲ.ಅನಿಲ್ ದಾಸ್ ರವರು ದಾಸ್ ಚಾರಿಟೇಬಲ್ ಟ್ರಸ್ಟ್ ಮೂಲಕ ಹಲವಾರು ಯುವಕ, ಯುವತಿಯರಿಗೆ ಉದ್ಯೋಗ ಸೃಷ್ಟಿಸಿ, ವಯಸ್ಕರ ಸೇವಾ ಕಾರ್ಯಗಳಲ್ಲಿ ಕರ್ನಾಟಕದಲ್ಲೆ ಮೊದಲ ಸ್ಥಾನ ಪಡೆದಿದೆ.ಇವರ ಈ ಸೇವೆಗೆ ಕರ್ನಾಟಕ ಸರ್ಕಾರವು ಗುರುತಿಸಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಯನ್ನು ನೀಡಿದೆ. ಇಂದು ಲ. ಅನಿಲ್ ದಾಸ್ ರವರು ಉಸ್ತುವಾರಿ ಸಚಿವರು…

Read More

ನಟೋರಿಯಸ್ ರೌಡಿಶೀಟರ್ ನೌಫಲ್ ಬಜಾಲ್ ಬರ್ಬರ ಹತ್ಯೆ

ಮಂಜೇಶ್ವರ: ಕುಖ್ಯಾತ ರೌಡಿಶೀಟರ್ ಮಂಗಳೂರು ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಹಲವಾರು ಪ್ರಕರಣಗಳಲ್ಲಿ ಆರೋಪಿಯಾಗಿರುವ ನಟೋರಿಯಸ್ ರೌಡಿ ನೌಫಲ್ ಬಜಾಲ್ ನನ್ನು ದುಷ್ಕರ್ಮಿಗಳು ಮಂಜೇಶ್ವರ ಠಾಣೆ ವ್ಯಾಪ್ತಿಯ ಉಪ್ಪಳ ರೈಲ್ವೇ ಗೇಟ್ ಬಳಿ ಬರ್ಬರವಾಗಿ ಕಡಿದು ಕೊಲೆ ಮಾಡಿದ್ದಾರೆ. ಮಂಗಳೂರಿನ ಬಜಾಲ್ ಫೈಝಲ್ ನಗರ ನಿವಾಸಿಯಾಗಿದ್ದ ಈತ ಹಲವು ಅಪರಾಧ ಪ್ರಕರಣದಲ್ಲಿ ಭಾಗಿಯಾಗಿದ್ದ ಎಂದು ತಿಳಿದು ಬಂದಿದೆ. ‌ ಇಂದು ಬೆಳಗ್ಗೆ 8 ಗಂಟೆ ವೇಳೆಗೆ ಉಪ್ಪಳ ಗೇಟ್ ಬಳಿಗೆ ಕರೆಸಿದ್ದ ತಂಡ ಅಲ್ಲಿಯೇ ತಲವಾರುಗಳಿಂದ ಕಡಿದು ಹಾಕಿದೆ…

Read More

ಭಯೋತ್ಪಾದನೆಗೆ ನೆರವು : ಮೌಲ್ವಿ ಸಹಿತ ಐವರ ಬಂಧನ

ನವದೆಹಲಿ : ಭಯೋತ್ಪಾದನೆಗೆ ಹಣಕಾಸು ನೆರವು ನೀಡಿದ ಐವರು ಶಂಕಿತರನ್ನು ರಾಜಸ್ಥಾನ ರಾಜಸ್ಥಾನ ಭಯೋತ್ಪಾದನಾ ನಿಗ್ರಹ ದಳ ಬಂಧಿಸಿದೆ. ಬಂಧಿತ ಮೌಲ್ವಿ ಅಯೂಬ್, ಮಸೂದ್ ಮತ್ತು ಉಸ್ಮಾನ್ ಎಂದು ಗುರುತಿಸಲಾಗಿದೆ. ಕರೌಲ್‌ನಲ್ಲಿ ಜುನೈದ್ ಎಂಬಾತನನ್ನು ಬಂಧಿಸಲಾಗಿದ್ದು, ಇನ್ನೋರ್ವನ ಗುರುತು ಪತ್ತೆಯಾಗಿಲ್ಲ. ಬಂಧಿತರಲ್ಲಿ ಒಬ್ಬನಾದ ಜೋಧ್‌ಪುರದ ಚೋಖಾದ ಅರೇಬಿಯಾ ಮದರಸಾದ ಧರ್ಮಗುರು ಆಯೂಬ್‌ನಿಂದ ಕೆಲವು ದಾಖಲೆಗಳನ್ನು ಎಟಿಎಸ್‌ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಆತ 13 ವರ್ಷಗಳಿಂದ ಮದರಸಾದಲ್ಲಿ ಕೆಲಸ ಮಾಡುತ್ತಿದ್ದ. ಎಟಿಎಸ್‌ ಅಧಿಕಾರಿಗಳು ಆರೋಪಿಯ ಮನೆಯಿಂದ 3 ಮೊಬೈಲ್‌ಗಳನ್ನು…

Read More

ಮಂಗಳೂರು : ಡಿಜಿಟಲ್ ಅರೆಸ್ಟ್ ಪ್ರಕರಣ-ಪೊಲೀಸರ ತ್ವರಿತ ಕಾರ್ಯಾಚರಣೆ, ಕಳೆದುಕೊಂಡಿದ್ದ ಹಣ ಸಂತ್ರಸ್ತೆಗೆ ಹಸ್ತಾಂತರ

ಮಂಗಳೂರು : ಡಿಜಿಟಲ್ ಅರೆಸ್ಟ್ ಪ್ರಕರಣವೊಂದರಲ್ಲಿ ಪೊಲೀಸರ ತ್ವರಿತ ಕಾರ್ಯಾಚರಣೆಯ ಮೂಲಕ ಸಂತ್ರಸ್ತೆಯು ಕಳೆದುಕೊಂಡಿದ್ದ ಹಣವನ್ನು ಸಂತ್ರಸ್ತೆಗೆ ಹಸ್ತಾಂತರಿಸಿದ್ದಾರೆ. ಪೊಲೀಸ್ ಆಯುಕ್ತರ ಕಚೇರಿಯಲ್ಲಿ ಡಿಸಿಪಿಗಳಾದ ಮಿಥುನ್ ಹಾಗೂ ರವಿಶಂಕರ್ ಅವರ ಸಮ್ಮುಖದಲ್ಲಿ ಸಂತ್ರಸ್ತೆಗೆ ಆಕೆ ಕಳೆದುಕೊಂಡಿದ್ದ 17 ಲಕ್ಷ ರೂ.ಗಳ ಹಣದ ಸಾಂಕೇತಿಕ ವರ್ಗಾವಣೆ ನಡೆಯಿತು. ಬಳಿಕ ಸುದ್ದಿಗೋಷ್ಟಿಯಲ್ಲಿ ಪ್ರಕರಣದ ಬಗ್ಗೆ ಮಾಹಿತಿ ನೀಡಿದ ಡಿಸಿಪಿ ಮಿಥುನ್, ಅ. 23ರಂದು ಬಿಜೈ ನಿವಾಸಿ 79ರ ಹರೆಯದ ಮಹಿಳೆಗೆ ಪೊಲೀಸ್ ಸಮಸ್ತ್ರದಲ್ಲಿದ್ದ ವ್ಯಕ್ತಿ ವಾಟ್ಸಾಪ್ ಕರೆ ಮಾಡಿ ಮಹಿಳೆಯ ಮೇಲೆ…

Read More

ರೇವ್ ಪಾರ್ಟಿ ಅಡ್ಡೆ ಮೇಲೆ ಪೊಲೀಸರು ದಾಳಿ : 35 ಯುವತಿಯರು ಸೇರಿ 115 ಜನರು ವಶಕ್ಕೆ.!

ಬೆಂಗಳೂರಿನಲ್ಲಿ ಪೊಲೀಸರು ರೇವ್ ಪಾರ್ಟಿ ಅಡ್ಡೆ ಮೇಲೆ ದಾಳಿ ನಡೆಸಿದ್ದು, 35 ಯುವತಿಯರು ಸೇರಿದಂತೆ 115 ಜನರನ್ನು ವಶಕ್ಕೆ ಪಡೆಯಲಾಗಿದೆ. ಬೆಂಗಳೂರು ದಕ್ಷಿಣ ತಾಲೂಕಿನ ದೇವಿಗೆರೆ ಕ್ರಾಸ್ ಬಳಿ ಇರುವ ಅಯಾನಾ ರೆಸಾರ್ಟ್ ನಲ್ಲಿ ರೇವ್ ಪಾರ್ಟಿ ನಡೆಯುತ್ತಿದ್ದಾಗ ಪೊಲೀಸರು ದಾಳಿ ನಡೆಸಿದ್ದಾರೆ. ಬೆಂಗಳೂರು ದಕ್ಷಿಣ ಎಸ್ ಪಿ ಶ್ರೀನಿವಾಸ್ ಗೌಡ ನೇತೃತ್ವದಲ್ಲಿ ದಾಳಿ ನಡೆಸಲಾಗಿದೆ. ದಾಳಿ ವೇಳೆ 35 ಯುವತಿಯರು ಸೇರಿದಂತೆ 115 ಜನರನ್ನು ವಶಕ್ಕೆ ಪಡೆಯಲಾಗಿದೆ. 115 ಜರಿಗೂ ಬೆಂಗಳೂರು ದಕ್ಷಿಣ ಜಿಲ್ಲಾಸ್ಪತ್ರೆಯಲ್ಲಿ ಮೆಡಿಕಲ್…

Read More

ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಗೆ ಲ.ಅನಿಲ್ ದಾಸ್ ಆಯ್ಕೆ-ಇವರ ಸಮಾಜ ಸೇವೆಗೆ ಸಂದ ಗೌರವ

ಮಂಗಳೂರು: ಲ.ಅನಿಲ್ ದಾಸ್ ಅವರು ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ – 2025 ಪುರಸ್ಕಾರಕ್ಕೆ ಆಯ್ಕೆಯಾಗಿದ್ದಾರೆ. ಸಮಾಜ ಸೇವೆ, ಶೈಕ್ಷಣಿಕ, ಧಾರ್ಮಿಕ ಸಾಮಾಜಿಕ ಸೇವೆಯಗಳಲ್ಲಿ ಮುಂಚೂಣಿಯಲ್ಲಿರುವ ಲ.ಅನಿಲ್ ದಾಸ್ ರವರು ದಾಸ್ ಚಾರಿಟೇಬಲ್ ಟ್ರಸ್ಟ್ ಮೂಲಕ ಹಲವಾರು ಯುವಕ, ಯುವತಿಯರಿಗೆ ಉದ್ಯೋಗ ಸೃಷ್ಟಿಸಿ, ವಯಸ್ಕರ ಸೇವಾ ಕಾರ್ಯಗಳಲ್ಲಿ ಕರ್ನಾಟಕದಲ್ಲೆ ಮೊದಲ ಸ್ಥಾನ ಪಡೆದಿದೆ.ನಾಳೆ ಮಂಗಳೂರಿನ ಕೇಂದ್ರ ಮೈದಾನದಲ್ಲಿ ನಡೆಯಲಿರುವ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಗಣ್ಯರ ಸಮ್ಮುಖದಲ್ಲಿ ಪ್ರಶಸ್ತಿ ಸ್ವೀಕರಿಸಲಿದ್ದಾರೆ. ಇವರ ಸಾಧನೆಗಳು ದಾಸ್ ಪ್ರಮೋಷನ್ಸ್ ಹೋಂ ನರ್ಸಿಂಗ್ ಎಂಬ ನರ್ಸಿಂಗ್…

Read More

ಮಂಗಳೂರು: ಶರಣ್ ಪಂಪ್‌ವೆಲ್ ಬಂಧನ ಕುರಿತು ಪೊಲೀಸರ ನಡೆಗೆ ಶಾಸಕ ವೇದವ್ಯಾಸ ಕಾಮತ್ ಗರಂ

ಮಂಗಳೂರು: ಆರ್‌ಎಸ್ಎಸ್‌(RSS) ಮುಖಂಡರೊಬ್ಬರ ಭಾಷಣದ ತುಣುಕನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡ ಆರೋಪದಡಿ ವಿಶ್ವ ಹಿಂದೂ ಪರಿಷತ್ ಮುಖಂಡ ಶರಣ್ ಪಂಪ್‌ವೆಲ್ ಅವರನ್ನು ಇಂದು ಕದ್ರಿ ಪೊಲೀಸರು ವಶಕ್ಕೆ ಪಡೆದಿದ್ದರು. ಆದರೆ ಪಂಪ್‌ವೆಲ್‌ಗೆ ಯಾವುದೇ ನೋಟೀಸ್‌ ನೀಡದೆ ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂದು ಹಿಂದೂ ಕಾರ್ಯಕರ್ತರು ಆರೋಪಿಸಿದ್ದು, ಪೊಲೀಸ್‌ ಸ್ಟೇಷನ್‌ ಮುಂದೆ ಜಮಾಯಿಸಿದ್ದರು. ಆದರೆ ಪೊಲೀಸರು ಅವರನ್ನು ಒಳಗಡೆ ಹೋಗಲು ಬಿಟ್ಟಿರಲಿಲ್ಲ. ಮಾಹಿತಿ ಪಡೆದ ಮಂಗಳೂರು ದಕ್ಷಿಣ ಶಾಸಕ ವೇದವ್ಯಾಸ ಕಾಮತ್‌ ಕದ್ರಿ ಠಾಣೆಗೆ ಆಗಮಿಸಿದ್ದರು. ಕದ್ರಿ ಪೊಲೀಸರು…

Read More

 ಶರಣ್ ಪಂಪ್ ವೆಲ್  ಅವರನ್ನು ವಶಕ್ಕೆ ಪಡೆದ ಕದ್ರಿ ಪೊಲೀಸರು..!

ಮಂಗಳೂರು; ವಿಶ್ವ ಹಿಂದೂ ಪರಿಷತ್ ಪ್ರಾಂತ ಸಹ ಕಾರ್ಯದರ್ಶಿ ಶರಣ್ ಪಂಪ್ ವೆಲ್  ಅವರನ್ನು ವಶಕ್ಕೆ ಪಡೆಯಲಾಗಿದೆ. ಫೇಸ್ ಬುಕ್ ನಲ್ಲಿ ಪ್ರಚೋದನಕಾರಿ ಪೋಸ್ಟ್ ಶೇರ್ ಮಾಡಿದ ಆರೋಪದಡಿ ಮಂಗಳೂರಿನ ಕದ್ರಿ ಠಾಣೆ ಪೊಲೀಸರು ಶರಣ್ ಪಂಪ್ ವೆಲ್ ಅವರನ್ನು ವಶಕ್ಕೆ ಪಡೆದಿದ್ದಾರೆ. ಆರ್ ಎಸ್ ಎಸ್ ಮುಖಂಡರೊಬ್ಬರ ಭಾಷಣದ ವಿಡಿಯೋ ಶೇರ್ ಮಾಡಿದ್ದಾರೆ ಎಂಬ ಆರೋಪದಡಿ ಶರಣ್ ಪಂಪ್ ವೆಲ್ ವಿರುದ್ದ ಎಫ್ಐಆರ್ ದಾಖಲಿಸಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಕದ್ರಿ ಪೊಲೀಸ್ ಠಾಣೆಗೆ ಆಗಮಿಸಿದ ಬಿಜೆಪಿ…

Read More

ಸುಹಾಸ್‌ ಶೆಟ್ಟಿ ಹತ್ಯೆ ಮಾಡಿರುವುದು PFI : NIA ಚಾರ್ಜ್‌ಶೀಟ್‌ನಲ್ಲಿ ಉಲ್ಲೇಖ

ಮಂಗಳೂರು: ಮಂಗಳೂರಿನ ಬಜ್ಬೆ ಬಳಿ ಕಳೆದ ಮೇ 1ರಂದು ನಡೆದಿದ್ದ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣದ ತನಿಖೆ ನಡೆಸುತ್ತಿರುವ ಎನ್‌ಐಎ ಇದೀಗ ಬೆಂಗಳೂರಿನ ವಿಶೇಷ ನ್ಯಾಯಾಲಯಕ್ಕೆ ಚಾರ್ಜ್‌ಶೀಟ್ ಸಲ್ಲಿಕೆ ಮಾಡಿದೆ. ಈ ಚಾರ್ಜ್‌ಶೀಟ್‌ನಲ್ಲಿ ಸ್ಫೋಟಕ ಅಂಶಗಳನ್ನು ಎನ್ಐಎ ಉಲ್ಲೇಖಿಸಿದ್ದು, ಸುಹಾಸ್ ಶೆಟ್ಟಿ ಹತ್ಯೆ ಹಿಂದೆ ಭಾರತದಲ್ಲಿ ಭಯೋತ್ಪಾದಕ ಚಟುವಟಿಕೆ ನಡೆಸಿ ನಿಷೇಧಗೊಂಡಿರುವ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್‌ಐ) ಸಂಘಟನೆ ಸದಸ್ಯರ ಕೈವಾಡ ಸ್ಪಷ್ಟವಾಗಿದೆ ಎಂದು ತಿಳಿಸಿದೆ. ಬೆಂಗಳೂರಿನ ಎನ್‌ಐಎ ವಿಶೇಷ ನ್ಯಾಯಾಲಯದಲ್ಲಿ ಚಾರ್ಜ್‌ಶೀಟ್…

Read More

ಬಂಟ್ವಾಳ: ಆಂಬ್ಯುಲೆನ್ಸ್‌ ಗೆ ದಾರಿ ಬಿಟ್ಟು ಕೊಡದೇ ಹುಚ್ಚಾಟ..! ಪುತ್ತೂರು ಬೆಟ್ಟಂಪಾಡಿಯ ಮನ್ಸೂರ್ ಬಂಟ್ವಾಳ ಪೊಲೀಸರ ವಶಕ್ಕೆ

ಬಂಟ್ವಾಳ: ಅಪಘಾತದ ಗಾಯಾಳುಗಳನ್ನು ಮಂಗಳೂರಿಗೆ ಕರೆದೊಯ್ಯುತ್ತಿದ್ದ ಅಂಬ್ಯುಲೆನ್ಸ್ಗೆ ದಾರಿ ಬಿಡದೆ ಸಂಚಾರಕ್ಕೆ ಅಡಚಣೆ ಉಂಟುಮಾಡಿದ ಘಟನೆ ಬಂಟ್ವಾಳ ತಾಲೂಕು ಬಿ.ಸಿ.ರೋಡ್ ಎನ್.ಜಿ. ಸರ್ಕಲ್ ಬಳಿ ನಡೆದಿದೆ. ಮಾಹಿತಿಯ ಪ್ರಕಾರ, ಅಕ್ಟೋಬರ್ 30, 2025 ರಂದು ಬಿಸಿಲೆ ಘಾಟ್ನಲ್ಲಿ ಸಂಭವಿಸಿದ ಅಪಘಾತದ ಗಾಯಾಳುಗಳನ್ನು ಪುತ್ತೂರು ಸರಕಾರಿ ಆಸ್ಪತ್ರೆಗೆ ಕರೆತಂದು, ತುರ್ತು ಚಿಕಿತ್ಸೆಯ ನಂತರ ಗಂಭೀರ ಸ್ಥಿತಿಯೊಬ್ಬರನ್ನು ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿಗೆ ಕಳುಹಿಸಲಾಗುತ್ತಿತ್ತು. KA-22-C-1382 ನಂಬರಿನ ಅಂಬ್ಯುಲೆನ್ಸ್ ಪುತ್ತೂರಿನಿಂದ ಮಂಗಳೂರಿನತ್ತ ಸಾಗುತ್ತಿದ್ದಾಗ ಮಧ್ಯಾಹ್ನ ಸುಮಾರು 1.30 ಗಂಟೆಗೆ ಬಿ.ಸಿ.ರೋಡ್ ಎನ್.ಜಿ. ಸರ್ಕಲ್…

Read More