ಸೌಜನ್ಯ ಪರ ಹೋರಾಟಗಾರರ ಮೇಲೆ ದೌರ್ಜನ್ಯ ಮಾಡುವಂತಿಲ್ಲ- SIT ಗೆ ಹೈಕೋರ್ಟ್ ಸೂಚನೆ
ತಮ್ಮ ವಿರುದ್ಧ ಎಸ್‌ಐಟಿ ದಾಖಲಿಸಿದ್ದ ಪ್ರಕರಣದ ರದ್ದು ಕೋರಿ ಸೌಜನ್ಯ ಪರ ಹೋರಾಟಗಾರರಾದ ಮಹೇಶ್ ಶೆಟ್ಟಿ ತಿಮರೋಡಿ, ಗಿರೀಶ್ ಮಟ್ಟಣ್ಣನವರ್, ಜಯಂತ್ ಟಿ, ವಿಠಲಗೌಡ ಅವರು ಹೈಕೋರ್ಟ್ ಮೊರೆ ಹೋಗಿದ್ದರು. ಅವರ ಅರ್ಜಿಯ ವಿಚಾರಣೆ ನಡೆಸಿರುವ ಹೈಕೋರ್ಟ್, ನಾಲ್ವರ ಮೇಲೆ ಎಸ್‌ಐಟಿ ದೌರ್ಜನ್ಯ ಮಾಡಬಾರದು ಎಂದು ಸೂಚಿಸಿ, ಪ್ರಕರಣಕ್ಕೆ ತಡೆಯಾಜ್ಞೆ ನೀಡಿದೆ. ಇದೇ ಪ್ರಕರಣದಲ್ಲಿ ಅಕ್ಟೋಬರ್ 27ರಂದು ವಿಚಾರಣೆಗೆ ಹಾಜರಾಗುವಂತೆ ನಾಲ್ವರಿಗೂ ಎಸ್‌ಐಟಿ ನೋಟಿಸ್ ನೀಡಿತ್ತು. ಆದರೆ, ಅಂದೇ ಬೆಳ್ತಂಗಡಿ ತಾಲೂಕು ಕಚೇರಿ ಎದುರು ಕಪ್ಪು ಪಟ್ಟಿ…

