ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಕೋಟ್ಯಂತರ ರೂ. ಹಣ ವಂಚನೆ: ಮಹಿಳೆ ಬಂಧನ
ಪ್ರಧಾನ ಮಂತ್ರಿ ಉದ್ಯೋಗ ಸೃಷ್ಟಿ ಯೋಜನೆಯಲ್ಲಿ ಸಬ್ಸಿಡಿ ಸಾಲ ತೆಗೆಸಿ ಕೊಡುವುದಾಗಿ ನಂಬಿಸಿ ಕೋಟ್ಯಂತರ ರೂಪಾಯಿ ವಂಚಿಸಿದ ಘಟನೆ ಬೆಳಕಿಗೆ ಬಂದಿದೆ. ಈ ಬಗ್ಗೆ ಮೋಸಕ್ಕೆ ಬಲಿಯಾದವರು ಉಡುಪಿ ನಗರ ಮತ್ತು ಬ್ರಹ್ಮಾವರ ಠಾಣೆಗಳಲ್ಲಿ ದೂರು ದಾಖಲಿಸಿದ್ದು , ವಂಚನೆ ಜಾಲ ಬೆನ್ನತ್ತಿರುವ ಪೊಲೀಸರು ಕಾರ್ಯಾಚರಣೆ ನಡೆಸಿ ವಂಚನೆ ಜಾಲದ ಕಿಂಗ್ ಪಿನ್ ಬ್ರಹ್ಮಾವರ ತಾಲ್ಲೂಕು ಆರೂರು ಗ್ರಾಮ ಕೌಸಲ್ಯಾ ಎಂಬ ಮಹಿಳೆಯನ್ನು ವಶಕ್ಕೆ ಪಡೆದಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ. ಅಲ್ಲದೆ ಈ ವಂಚನೆ ಜಾಲದ ಕೊಕ್ಕರ್ಣೆ…

