Headlines

ರಾಜ್ಯದಲ್ಲಿ ಹೊಸ APL, BPL ಕಾರ್ಡ್ ಗೆ ಮತ್ತೆ ಅರ್ಜಿ ಸಲ್ಲಿಕೆ ಆರಂಭ!!

ಬೆಂಗಳೂರು : ರಾಜ್ಯದಲ್ಲಿ ಹೊಸ ಎಪಿಎಲ್, ಬಿಪಿಎಲ್ ಕಾರ್ಡ್ ಗೆ ಅರ್ಜಿ ಸಲ್ಲಿಕೆ ಆರಂಭವಾಗಿದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದಾಗಿದೆ. ಕುಟುಂಬದ ಆದಾಯವನ್ನು ಪರಿಗಣಿಸಿ ಎಪಿಎಲ್ ನೀಡಬೇಕೋ ಅಥವಾ ಬಿಪಿಎಲ್‌ ನೀಡಬೇಕೋ ಎಂಬುದನ್ನು ನಿರ್ಧಾರ ಮಾಡಲಾಗುತ್ತದೆ.ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಬಯಸುವವರು  ತಮ್ಮ ಮೊಬೈಲ್ ಮೂಲಕ ಅಥವಾ ಕಂಪ್ಯೂಟರ್ ಅಥವಾ ನಿಮ್ಮ ಹತ್ತಿರ ಇರುವಂತಹ ಆನ್ಲೈನ್ ಸೆಂಟರ್ ಗೆ ಭೇಟಿ ನೀಡಿ ಹೊಸ ರೇಷನ್‌ ಕಾರ್ಡ್‌ ಗೆ ಅರ್ಜಿ ಸಲ್ಲಿಸಬಹುದು.    

Read More

ಸುರತ್ಕಲ್ ಚೂರಿ ಇರಿತ ಪ್ರಕರಣ: ನಾಲ್ವರು ಆರೋಪಿಗಳು ಬಂಧನ

ಸುರತ್ಕಲ್: ಯುವಕರಿಬ್ಬರಿಗೆ ಚೂರಿಯಿಂದ ಇರಿದು ಕೊಲೆಗೆ ಯತ್ನಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ಕು ಮಂದಿ ಆರೋಪಿಗಳನ್ನು ಸುರತ್ಕಲ್‌ ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಸುರತ್ಕಲ್‌ ಕಟ್ಲ ನಿವಾಸಿಗಳಾದ ಸುಶಾಂತ್ ಯಾನೆ ಕಡವಿ (29), ಕೆ.ವಿ. ಅಲೆಕ್ಸ್ (27), ಸುರತ್ಕಲ್‌ ಇಂದಿರಾ ಕಟ್ಟೆ ನಿವಾಸಿ ನಿತಿನ್ (26) ಮತ್ತು ಆರೋಪಿಗಳಿಗೆ ಆಶ್ರಯ ನೀಡಿದ ಕುಳಾಯಿ ಹೊನ್ನಕಟ್ಟೆ ನಿವಾಸಿ ಅರುಣ್ ಶೆಟ್ಟಿ (56) ಎಂಬವರನ್ನು ಪೊಲೀಸರು ಬಂಧಿಸಿದ್ದಾರೆ. ಪ್ರಕರಣದ ಪ್ರಮುಖ ಆರೋಪಿ ಗುರುರಾಜ್‌ ಮತ್ತು ಆರೋಪಿ ಗಳಿಗೆ ಆಶ್ರಯ ನೀಡಿದ್ದ ಅಶೋಕ್ ಎಂಬವರು…

Read More

ಕೇಸ್ ಇದ್ದವರ ಜತೆ ತಿರುಗಾಡಿದ್ರೆ ನಿಮಗೆ ತೊಂದರೆ: ಮಂಗಳೂರು ಪೊಲೀಸ್‌ ಕಮಿಷನ‌ರ್ ಎಚ್ಚರಿಕೆ

ಮಂಗಳೂರು: ಈಗಾಗಲೇ ಪ್ರಕರಣದಲ್ಲಿ ಭಾಗಿಯಾದವರ ಜತೆ ಯಾವುದೇ ಪ್ರಕರಣ ಇಲ್ಲದವರು ತಿರುಗಾಡದಂತೆ ಈಗಾಗಲೇ ನಾವು ಎಚ್ಚರಿಕೆ ನೀಡಿದ್ದೇವೆ. ಸರಿಯಾಗಿ ಕೇಳಿಸಿದಂತೆ ಕಾಣುತ್ತಿಲ್ಲ. ಈಗಾಗಲೇ ಅಪರಾಧ ಪ್ರಕರಣಗಳಲ್ಲಿ ಭಾಗಿಯಾದವರ ಜತೆ ತಿರುಗಾಡುವವರಿಗೂ ತೊಂದರೆ ಆಗಲಿದೆ. ಇಲ್ಲ ನಾವು ತಿರುಗುತ್ತೇವೆ. ನಮ್ಮ ಇಷ್ಟ ಎಂದು ನೀವು ಬಯಸಿದರೆ ನಮಗೆ ಸಮಸ್ಯೆ ಇಲ್ಲ. ನೀವು ಮಾಡುವುದು ನೀವು ಮಾಡಿ, ನಾವು ಮಾಡುವುದು ನಾವು ಮಾಡುತ್ತೇವೆ ಎಂದು ಮಂಗಳೂರು ಪೊಲೀಸ್ ಆಯುಕ್ತ ಸುಧೀ‌ರ್ ರೆಡ್ಡಿ ಎಚ್ಚರಿಕೆ ನೀಡಿದ್ದಾರೆ.

Read More

ಮಂಗಳೂರು: ಹಿಂದೂ ಸಂಘಟನೆಯ ಕಾರ್ಯಕರ್ತ ಅಕ್ಷಯ್ ರಾಜ್‌ಪುತ್ ಅವರ ವಾಟ್ಸ್ಯಾಪ್ ನಂಬರ್‌ ಶಾಶ್ವತ ರದ್ದು!!

ಮಂಗಳೂರು: ಹಿಂದೂ ಸಂಘಟನೆಯ ಮುಂಚೂಣಿಯಲ್ಲಿರುವ ಅಕ್ಷಯ್ ರಾಜ್‌ಪುತ್ ಅವರ ವಾಟ್ಸ್ಯಾಪ್ ನಂಬರ್‌ (+91 9148949324) ಅನ್ನು ವಾಟ್ಸ್ಯಾಪ್ ಕಂಪನಿಯು ಶಾಶ್ವತವಾಗಿ ರದ್ದುಪಡಿಸಿದೆ ಎಂದು ವರದಿಯಾಗಿರುತ್ತದೆ. ಸುಮಾರು ಹತ್ತು ವರ್ಷಗಳಿಂದ ನಿರಂತರವಾಗಿ ಬಳಸುತ್ತಿದ್ದ ಈ ನಂಬರನ್ನು ಕಂಪನಿಯು ತನ್ನ ನೀತಿ ಹಾಗೂ ನಿಯಮಗಳಿಗನುಗುಣವಾಗಿ ಸ್ಥಗಿತಗೊಳಿಸಿದೆ ಎಂದು ವಾಟ್ಸ್ಯಾಪ್ ಮೂಲಗಳು ತಿಳಿಸಿವೆ. ಅಕ್ಷಯ್ ರಾಜ್‌ಪುತ್ ಅವರು ಇತ್ತೀಚೆಗೆ ಹಲವು ಹೋರಾಟಗಳಲ್ಲಿ ಸಕ್ರಿಯವಾಗಿ ಭಾಗವಹಿಸುತ್ತಿದ್ದು, ಜಿಲ್ಲೆಯ ಮಟ್ಟದಲ್ಲಿ ಹಿಂದೂ ಸಂಘಟನೆಯ ಗಡಿಪಾರದ ಪ್ರಮುಖರಲ್ಲಿ ಒಬ್ಬರು. ಈ ಹಿನ್ನೆಲೆ ಅವರ ಖಾತೆ ರದ್ದುಗೊಂಡಿರುವುದು…

Read More

ಬೆಳ್ತಂಗಡಿ: ಆಟೋ ರಿಕ್ಷಾದಲ್ಲಿ ಅಕ್ರಮವಾಗಿ ಗೋ ಮಾಂಸ ಸಾಗಾಟ- ಆರೋಪಿ ಪರಾರಿ

ಬೆಳ್ತಂಗಡಿ: ಆಟೋ ರಿಕ್ಷಾದಲ್ಲಿ ಅಕ್ರಮವಾಗಿ ಗೋ ಮಾಂಸ ಸಾಗಾಟ ಮಾಡುತ್ತಿದ್ದಾಗ ಬೆಳ್ತಂಗಡಿ ಪೊಲೀಸರು ದಾಳಿ ಮಾಡಿ ಪತ್ತೆ ಹಚ್ಚಿದ್ದು ಆಟೋ ರಿಕ್ಷಾ ಹಾಗೂ ಗೋ ಮಾಂಸವನ್ನು ವಶಪಡಿಸಿಕೊಂಡಿದ್ದಾರೆ. ಪರಿಶೀಲನೆ ವೇಳೆ ಆಟೋ ರಿಕ್ಷಾದೊಳಗೆ 85 ಕೆ.ಜಿ ಗೋಮಾಂಸ ಪತ್ತೆಯಾಗಿದ್ದು, ಆಟೋದ ಮೌಲ್ಯ 2,50,000 ಲಕ್ಷ ರೂ. ಮತ್ತು ಗೋಮಾಂಸ ವಶಪಡಿಸಿಕೊಂಡು ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬೆಳ್ತಂಗಡಿ ಪೊಲೀಸರಿಗೆ ಬಂದ ಖಚಿತ ಮಾಹಿತಿ ಮೇರೆಗೆ ಅ.23 ರಂದು ಮಧ್ಯಾಹ್ನ ಕಿಲ್ಲೂರು ರಸ್ತೆಯಿಂದ ಬರುತ್ತಿದ್ದ ಆಟೋ ರಿಕ್ಷಾವನ್ನು…

Read More

ಖಾಸಗಿ ಬಸ್ ಅಗ್ನಿ ದುರಂತ:  20ಕ್ಕೂ ಅಧಿಕ ಮಂದಿ ಸಾವು..! ದುರಂತಕ್ಕೆ ಕಾರಣವಾಯ್ತು ಸಣ್ಣದೊಂದು ತಪ್ಪು!

ಹೈದರಾಬಾದ್: ಆಂಧ್ರಪ್ರದೇಶದಿಂದ ಬೆಂಗಳೂರಿಗೆ ಹೊರಟಿದ್ದ ಕಾವೇರಿ ಟ್ರಾವೆಲ್ಸ್​​ನ ವೋಲ್ವೊ ಬಸ್ ಬೆಂಕಿಗಾಹುತಿಯಾಗಿ 20ಕ್ಕೂ ಹೆಚ್ಚು ಪ್ರಯಾಣಿಕರು ಸಾವನ್ನಪ್ಪಿದ್ದ ದುರ್ಘಟನೆ ಹೈದರಾಬಾದ್-ಬೆಂಗಳೂರು ಹೆದ್ದಾರಿಯ ಚಿನ್ನ ಟೆಕುರು ಗ್ರಾಮದ ಬಳಿ ಸಂಭವಿಸಿದ್ದು, ಇಡೀ ದೇಶವನ್ನೇ ಬೆಚ್ಚಿಬೀಳಿಸಿದೆ. ಬಸ್‌ನಲ್ಲಿ ಒಟ್ಟು 42 ಮಂದಿ ಪ್ರಯಾಣಿಕರಿದ್ದು, 12 ಮಂದಿ ಎಮೆರ್ಜೆನ್ಸಿ ಎಕ್ಸಿಟ್‌ ವಿಂಡೋ(ತುರ್ತು ನಿರ್ಗಮನ ದ್ವಾರ) ಮೂಲಕ ಹಾರಿ ಜೀವ ಉಳಿಸಿಕೊಂಡಿದ್ದಾರೆ. ಬೈಕ್‌ಗೆ ಢಿಕ್ಕಿಯಾಗುತ್ತಿದ್ದಂತೆ ಬಸ್‌ ಅಲ್ಲೇ ನಿಲ್ಲುತ್ತಿದ್ದರೆ ಇಂಥದೊಂದು ದುರಂತ ಸಂಭವಿಸುತ್ತಿರಲಿಲ್ಲ ಎನ್ನಲಾಗಿದೆ. ಬಸ್​ಗೆ ಬೆಂಕಿ ಹೊತ್ತಿಕೊಂಡಿದ್ದು ಹೇಗೆ? ಆರಂಭದಲ್ಲಿ ಬಸ್…

Read More

“ಸುವರ್ಣ ಗೃಹಮಂತ್ರಿ” 500ರ ಸಂಭ್ರಮ.. ರವಿಶಂಕರ್ ಗೌಡ ಕುಟುಂಬದ ಜೊತೆ ರವಿಶಂಕರ್ ಗೌಡ. ಇದೇ ಅಕ್ಟೋಬರ್ 27 ರಂದು ಸಂಜೆ 5 ಗಂಟೆಗೆ..!

ಕರ್ನಾಟಕದ ಗೃಹಿಣಿಯರ ಮನಗೆದ್ದು ಮನೆಮಾತಾಗಿರೋ ಜನಪ್ರಿಯ ಕಾರ್ಯಕ್ರಮ “ಸುವರ್ಣ ಗೃಹಮಂತ್ರಿ”. ಖ್ಯಾತ ನಟ ರವಿಶಂಕರ್ ಗೌಡ ನಿರೂಪಣೆಯಲ್ಲಿ ಮೂಡಿ ಬರುತ್ತಿರುವ ಈ ಕಾರ್ಯಕ್ರಮ ಕನ್ನಡ ಕಿರುತೆರೆಯಲ್ಲಿ ಪ್ರತಿದಿನ ಪ್ರಸಾರವಾಗುವ ಸಾಮಾನ್ಯ ಜನರ (ಕಾಮನ್ ಮ್ಯಾನ್) ರಿಯಾಲಿಟಿ ಶೋ. .ತನಗಾಗಿ ಏನನ್ನೂ ಬಯಸದೇ ತನ್ನವರ ಖುಷಿಗಾಗಿ ನಿರಂತರವಾಗಿ ಹಂಬಲಿಸುವ ಗೃಹಿಣಿಯರನ್ನು ಗೌರವಿಸುವ ನಿಟ್ಟಿನಲ್ಲಿ ಕರ್ನಾಟಕದ ಮನೆ ಮನೆಗೆ ಹೋಗಿ ದಿನಕ್ಕೊಂದು ಕುಟುಂಬವನ್ನು ಭೇಟಿ ಮಾಡಿ, ಗಂಡ ಹೆಂಡತಿ ಅವರನ್ನು ಆಟ ಆಡಿಸಿ , ಮಾತನಾಡಿಸಿ, ಆಕೆಯ ಕುಟುಂಬದವರ ಪರಿಚಯ…

Read More

ಧರ್ಮಸ್ಥಳ: ಶಿಕ್ಷಕಿಯ ಮೃತದೇಹ ಬಾವಿಯಲ್ಲಿ ಪತ್ತೆ !

ಧರ್ಮಸ್ಥಳ:  ಅನುದಾನಿತ ಶಾಲೆಯೊಂದರಲ್ಲಿ  ಕಳೆದ ಎರಡು ವರ್ಷಗಳಿಂದ ಶಿಕ್ಷಕಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಯುವ ಶಿಕ್ಷಕಿಯ ಶವ ಬಾವಿಯಲ್ಲಿ ಪತ್ತೆಯಾದ ಘಟನೆ ಅ.23ರಂದು ಬೆಳಕಿಗೆ ಬಂದಿದೆ.ಅರಸಿನಮಕ್ಕಿ  ಗ್ರಾಮದ ಬೂಡುಮುಗೇರು ನಿವಾಸಿ, ಪ್ರಸ್ತುತ ಅರಸಿನಮಕ್ಕಿ ಗೋಪಾಲಕೃಷ್ಣ ಅನುದಾನಿತ ಶಾಲೆಯಲ್ಲಿ ಕೆಲಸ ನಿರ್ವಹಿಸುತ್ತಿದ್ದ ಶಿಕ್ಷಕಿ ತೇಜಸ್ವಿನಿ (23) ಮೃತಪಟ್ಟವರು. ಕಳೆದ ಕೆಲವು ದಿನಗಳಿಂದ ಮಾನಸಿಕ ಖಿನ್ನತೆಯಿಂದ ಬಳಲುತ್ತಿರುವುದಾಗಿ ಹೇಳಲಾಗುತ್ತಿದೆ. ಶವ ಬಾವಿಯಲ್ಲಿ ಪತ್ತೆಯಾದ ಕಾರಣ   ಕಾಲು ಜಾರಿ ಬಾವಿಗೆ ಬಿದ್ದರೋ ಅಥವಾ ಆತ್ಮಹತ್ಯೆ ಮಾಡಿಕೊಂಡರೋ ಎಂಬ ಶಂಕೆ ವ್ಯಕ್ತವಾಗಿದೆ.ಘಟನಾ ಸ್ಥಳಕ್ಕೆ ಧರ್ಮಸ್ಥಳ ಪೊಲೀಸರು…

Read More

ಮಂಗಳೂರು: ತಂಡದಿಂದ ಇಬ್ಬರು ಯುವಕರಿಗೆ ಚೂರಿ ಇರಿತ.!

ಸುರತ್ಕಲ್: ಪೊಲೀಸ್ ಠಾಣಾ ವ್ಯಾಪ್ತಿಯ ಕಾನ ಎಂಬಲ್ಲಿನ ದೀಪಕ್ ಬಾರ್ ಮುಂಭಾಗ ಇಬ್ಬರು ಯುವಕರ ಮೇಲೆ ದುಷ್ಕರ್ಮಿಗಳ ತಂಡ ಚೂರಿಯಿಂದ ಇರಿದು ಪರಾರಿಯಾದ ಘಟನೆ ನಿನ್ನೆ ತಡರಾತ್ರಿ ನಡೆದಿದೆ. ಸುರತ್ಕಲ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ಆರೋಪಿಗಳ ಪತ್ತೆಗೆ ಶೋಧ ಕಾರ್ಯ ಕೈಗೊಂಡಿದ್ದಾರೆ. ಸುರತ್ಕಲ್‌ ಚೊಕ್ಕಬೆಟ್ಟು ನಿವಾಸಿ ನಿಝಾಮ್ (23) ಮತ್ತು ಕೃಷ್ಣಾಪುರ ಹಿಲ್ ಸೈಡ್ ನಿವಾಸಿ ಹಸನ್ ಮುರ್ಷಿದ್ (18) ಗಾಯಗೊಂಡವರು. ಆರೋಪಿಗಳನ್ನು ಬಜರಂಗದಳ ಕಾರ್ಯಕರ್ತ ಸುರತ್ಕಲ್ ಠಾಣೆಯ ರೌಡಿಶೀಟರ್ ಗುರುರಾಜ್, ಅಲೆಕ್ಸ್ ಸಂತೋಷ್, ಸುಶಾಂತ್…

Read More

ಕಾರ್ಕಳ: ನಕಲಿ ಚಿನ್ನಾಭರಣ ಅಡವಿಟ್ಟು ಬ್ಯಾಂಕಿಗೆ 10.58 ಲ.ರೂ ವಂಚನೆ!!

ಕಾರ್ಕಳ : ನಕಲಿ ಚಿನ್ನಾಭರಣವನ್ನು ಅಡಮಾನ ಇಟ್ಟು ಕಾರ್ಕಳದ ಗೋಕರ್ಣನಾಥ ಕೋ-ಅಪರೇಟಿವ್ ಬ್ಯಾಂಕಿಗೆ ಬರೋಬ್ಬರಿ 10.58 ಲಕ್ಷ ವಂಚಿಸಿದ ಪ್ರಕರಣ ಬೆಳಕಿಗೆ ಬಂದಿದೆ. ಈ ಪ್ರಕರಣದ ಕುರಿತು ನಕಲಿ ಚಿನ್ನ ಅಡಮಾನ ಇರಿಸಿದ ದಂಪತಿ ನಾಗರಾಜ ಹಾಗೂ ಆತನ ಪತ್ನಿ ರೇಣುಕಾ ಹಾಗೂ ಚಿನ್ನದ ಅಸಲಿಯತ್ತು ಪರೀಕ್ಷೆ ಮಾಡುವ ಅಕ್ಕಸಾಲಿಗ ಸತೀಶ್ ಆಚಾರ್ಯ ಎಂಬವರ ವಿರುದ್ಧ ಬ್ಯಾಂಕ್ ಮ್ಯಾನೇಜರ್ ಲಕ್ಷ್ಮಣ್ ಶೇಟ್ ಎಂಬವರು ಕಾರ್ಕಳ ನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಕಾರ್ಕಳದ ಗೋಕರ್ಣನಾಥ ಕೋ-ಅಪರೇಟಿವ್ ಬ್ಯಾಂಕಿಗೆ…

Read More