Headlines

SDPI ಮುಖಂಡ ರಿಯಾಜ್ ಕಡಂಬುಗೆ ನ್ಯಾಯಾಂಗ ಬಂಧನ

ಉಡುಪಿ: ಉಡುಪಿ ನಗರ ಪೊಲೀಸ್ ಠಾಣೆಯಲ್ಲಿನ ದ್ವೇಷ ಭಾಷಣ ಪ್ರಕರಣಕ್ಕೆ ಸಂಬಂಧಿಸಿ ಜಾಮೀನು ಷರತ್ತು ಉಲ್ಲಂಘಿಸಿದ ಎಸ್ ಡಿ ಪಿ ಐ ಮುಖಂಡ ರಿಯಾಜ್ ಕಡಂಬು ಅವರನ್ನು ಉಡುಪಿ ಪೊಲೀಸರು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು ನ್ಯಾಯಾಲಯವು ಅವರನ್ನು 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ. ಈ ಹಿಂದೆ ದ್ವೇಷ ಭಾಷಣಕ್ಕೆ ಸಂಬಂಧಿಸಿ ರಿಯಾಜ್ ಕಡಂಬು ವಿರುದ್ಧ ಉಡುಪಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿತ್ತು ಈ ಬಗ್ಗೆ ಅವರು ಹೈಕೋರ್ಟ್ ನಿಂದ ಜಾಮೀನು ಪಡೆದಿದ್ದ ಅವರು,…

Read More

 ದಕ್ಷಿಣ ಫಿಲಿಪೈನ್ಸ್‌ನಲ್ಲಿ 7.6 ತೀವ್ರತೆಯ ಭೂಕಂಪ; ಅಪಾಯಕಾರಿ ಸುನಾಮಿಯ ಎಚ್ಚರಿಕೆ!

ದಕ್ಷಿಣ ಫಿಲಿಪೈನ್ಸ್ ಪ್ರಾಂತ್ಯದಲ್ಲಿ ಶುಕ್ರವಾರ ಬೆಳಗ್ಗೆ 7.6 ರ ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದ್ದು, ಅಪಾಯಕಾರಿ ಸುನಾಮಿ ಉಂಟಾಗುವ ಸಾಧ್ಯತೆಯಿದೆ. ದಾವೋ ಓರಿಯೆಂಟಲ್ ಪ್ರಾಂತ್ಯದ ಮನಾಯ್ ಪಟ್ಟಣದ ಆಗ್ನೇಯಕ್ಕೆ ಸುಮಾರು 62 ಕಿಲೋಮೀಟರ್ (38 ಮೈಲುಗಳು) ದೂರದಲ್ಲಿ 10 ಕಿಲೋ ಮೀಟರ್ ಆಳದಲ್ಲಿ ಭೂಕಂಪ ಸಂಭವಿಸಿದೆ. ಭೂಕಂಪದ ಕೇಂದ್ರದಿಂದ 300 ಕಿಲೋಮೀಟರ್ (186 ಮೈಲುಗಳು) ಒಳಗೆ ಅಪಾಯಕಾರಿ ಅಲೆಗಳು ಸುನಾಮಿ ಅಲೆಗಳು ಉಂಟಾಗುವ ಸಾಧ್ಯತೆ ಇರುವುದಾಗಿ ಹೊನೊಲುಲುವಿನ ಪೆಸಿಫಿಕ್ ಸುನಾಮಿ ಎಚ್ಚರಿಕೆ ಕೇಂದ್ರ ಹೇಳಿದೆ. ಭೂಕಂಪನದ ಸಮೀಪವಿರುವ…

Read More

ರಾಂಗ್ ನಂಬರ್ ಗೆ ಹಣ ಕಳುಹಿಸಿದ್ದೀರಾ.? ಟೆನ್ಷನ್ ಬೇಡ, ಹೀಗೆ ಮಾಡಿದ್ರೆ ತಕ್ಷಣ ಹಣ ರಿಟರ್ನ್ ಸಿಗುತ್ತೆ!

ಡಿಜಿಟಲ್ ಪಾವತಿಗಳಲ್ಲಿ ಭಾರತ ಜಗತ್ತಿಗೆ ಒಂದು ಮಾದರಿಯಾಗುತ್ತಿದೆ. ಈಗ, ಚಹಾ ಅಂಗಡಿಗಳಿಂದ ಶಾಪಿಂಗ್ ಮಾಲ್‌’ಗಳವರೆಗೆ, UPI ವಹಿವಾಟುಗಳು ಎಲ್ಲೆಡೆ ಇವೆ. UPIಯೊಂದಿಗೆ ರೀಚಾರ್ಜ್‌ಗಳು ಮತ್ತು ಬಿಲ್ ಪಾವತಿಗಳು ಸಹ ಸುಲಭವಾಗಿದೆ. ಆದರೆ ಕೆಲವೊಮ್ಮೆ, ನೀವು ಆಕಸ್ಮಿಕವಾಗಿ ಬೇರೆಯವರ ಸಂಖ್ಯೆಗೆ ಹಣವನ್ನ ಕಳುಹಿಸಿದ್ರೆ ನೋವು ಅನುಭವಿಸಬೇಕಾಗುತ್ತೆ. ಅನೇಕ ಜನರು ಆ ಹಣವನ್ನ ಹೇಗೆ ಮರಳಿ ಪಡೆಯಬಹುದು ಎಂದು ಚಿಂತಿಸುತ್ತಾರೆ. ನೀವು ಆಕಸ್ಮಿಕವಾಗಿ ಬೇರೆ ಸಂಖ್ಯೆಗೆ ಹಣವನ್ನ ಕಳುಹಿಸಿದರೆ ತಕ್ಷಣ ಏನು ಮಾಡಬೇಕೆಂದು ತಿಳಿಯಿರಿ. ಎಲ್ಲಿ ಮತ್ತು ಹೇಗೆ ದೂರು…

Read More

ಮಂಗಳೂರು : ವಿಮಾನ ನಿಲ್ದಾಣಕ್ಕೆ 2 ಅತ್ಯಾಧುನಿಕ ಅಗ್ನಿಶಾಮಕ ವಾಹನಗಳು

ಮಂಗಳೂರು: ಅಂತರ್‌ರಾಷ್ಟ್ರೀಯ ವಿಮಾನ ನಿಲ್ದಾಣ ಲಿಮಿಟೆಡ್‌ಗೆ ಎರಡು ಅತ್ಯಾಧುನಿಕ ಅಗ್ನಿಶಾಮಕ ವಾಹನಗಳನ್ನು ನಿಯೋಜಿಸಲಾಗಿದೆ. ಈ ಎರಡು ಅಗ್ನಿಶಾಮಕ ವಾಹನ(ಸಿಎಫ್‌ಟಿ)ಗಳ ಸೇರ್ಪಡೆಯೊಂದಿಗೆ ಮಂಗಳೂರು ಅಂತರ್‌ರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಗ್ನಿಶಾಮಕದ ಸಾಮರ್ಥ್ಯಗಳನ್ನು ಗಮನಾರ್ಹವಾಗಿ ಹೆಚ್ಚಿಸಿದಂತಾಗಿದೆ. ಅಗ್ನಿ ಶಾಮಕ ವಾಹನಗಳನ್ನು ಆಸ್ಟ್ರಿಯಾದಿಂದ ಆಮದು ಮಾಡಿಕೊಳ್ಳಲಾಗಿದ್ದು, ರೋಸೆನ್‌ಬೌರ್ ಈ ವಾಹನಗಳನ್ನು ತಯಾರಿಸಿದೆ. ಪ್ರಪಂಚದಾದ್ಯಂತದ ಪ್ರಮುಖ ವಿಮಾನ ನಿಲ್ದಾಣಗಳಲ್ಲಿ ಇಂತಹ ಅಗ್ನಿಶಾಮಕ ವಾಹನಗಳು ಇವೆ. ಇವುಗಳ ಸೇರ್ಪಡೆಯು ವಿಮಾನ ನಿಲ್ದಾಣದ ಸುರಕ್ಷತೆ ಮತ್ತು ಕಾರ್ಯಾಚರಣೆಯ ಶ್ರೇಷ್ಠತೆಗೆ ಬದ್ಧತೆಯನ್ನು ಬಲಪಡಿಸುತ್ತದೆ.ಈ ವಾಹನಗಳು 12,500 ಲೀಟರ್ ನೀರು ಮತ್ತು…

Read More

ವಕೀಲರಾಗಿ 7 ವರ್ಷಗಳ ವೃತ್ತಿ ಹೊಂದಿರುವ ನ್ಯಾಯಾಂಗ ಅಧಿಕಾರಿಗಳು ಜಿಲ್ಲಾ ನ್ಯಾಯಾಧೀಶರಾಗಲು ಅರ್ಹರು: ಸುಪ್ರೀಂ ಕೋರ್ಟ್

ಈಗಾಗಲೇ 7 ವರ್ಷಗಳ ವಕೀಲರ ವೃತ್ತಿ ಪೂರ್ಣಗೊಳಿಸಿರುವ ನ್ಯಾಯಾಂಗ ಅಧಿಕಾರಿಗಳು ಬಾರ್ ಕೋಟಾದಡಿ ಜಿಲ್ಲಾ ನ್ಯಾಯಾಧೀಶರಾಗಲು ಅರ್ಹರಾಗಿರುತ್ತಾರೆ ಎಂದು ಸುಪ್ರೀಂಕೋರ್ಟ್ ಗುರುವಾರ ಹೇಳಿದೆ. ನ್ಯಾಯಾಂಗ ಅಧಿಕಾರಿಗಳು ಈಗಾಗಲೇ ಏಳು ವರ್ಷಗಳನ್ನು ಬಾರ್ ನಲ್ಲಿ ಸೇವೆಗೆ ಒಳಪಡಿಸುವ ಮೊದಲು ಜಿಲ್ಲಾ ನ್ಯಾಯಾಧೀಶರಾಗಿ ನೇಮಕಗೊಳ್ಳಲು ಅರ್ಹರಾಗಿರುತ್ತಾರೆ” ಎಂದು ಐವರು ನ್ಯಾಯಾಧೀಶರ ಸುಪ್ರೀಂ ಕೋರ್ಟ್ ಪೀಠದ ನೇತೃತ್ವ ವಹಿಸಿದ್ದ ಮುಖ್ಯ ನ್ಯಾಯಮೂರ್ತಿ ಬಿ.ಆರ್.ಗವಾಯಿ ಹೇಳಿದರು. ಸಂವಿಧಾನದ ವ್ಯಾಖ್ಯಾನವು “ಸಾವಯವ” ಆಗಿರಬೇಕು ಮತ್ತು “ವಿದ್ವಾಂಸ” ಅಲ್ಲ ಎಂದು ಹೇಳಿದ ಸುಪ್ರೀಂ ಕೋರ್ಟ್, ಜಿಲ್ಲಾ…

Read More

ಮಂಗಳೂರು ಉತ್ತರ ವಿಧಾನ ಸಭಾ ಕುಲಾಲ ಕುಂಬಾರ ವೇದಿಕೆಯ ನೂತನ ಅಧ್ಯಕ್ಷರಾಗಿ ಚೆನ್ನಕೇಶವ ಕುಳಾಯಿ ಆವಿರೋಧ ಆಯ್ಕೆ

ಮಂಗಳೂರು: ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಸಂಸ್ಥೆಯಾದ ಕರ್ನಾಟಕ ರಾಜ್ಯ ಕುಲಾಲ ಕುಂಬಾರರ ಯುವ ವೇದಿಕೆ ಮತ್ತು ಮಹಿಳಾ ಸಂಘಟನೆ ಗಳ ಒಕ್ಕೂಟ (ರಿ ) ಇದರ ಮಂಗಳೂರು ಉತ್ತರ (ಸುರತ್ಕಲ್) ವಿಧಾನ ಸಭೆಯ ನೂತನ ಅಧ್ಯಕ್ಷರಾಗಿ ಶ್ರೀ ಚೆನ್ನಕೇಶವ ಕುಳಾಯಿ ಪ್ರಧಾನ ಕಾರ್ಯದರ್ಶಿಯಾಗಿ ಶ್ರೀ ಚೇತನ್ ತಡಂಬೈಲ್ ಆವಿರೋಧವಾಗಿ ಆಯ್ಕೆಯಾಗಿದ್ದಾರೆ.

Read More

ಗಾಜಾ ಕದನ ವಿರಾಮಕ್ಕೆ ಇಸ್ರೇಲ್–ಹಮಾಸ್ ಒಪ್ಪಿಗೆ; ಶೀಘ್ರದಲ್ಲೇ ಒತ್ತೆಯಾಳುಗಳ ಬಿಡುಗಡೆ

ಮಧ್ಯಪ್ರಾಚ್ಯದಲ್ಲಿ ಶಾಂತಿಯತ್ತ ಮಹತ್ವದ ಹೆಜ್ಜೆಯಾಗಿ, ಇಸ್ರೇಲ್ ಮತ್ತು ಹಮಾಸ್ ಗಾಝಾ ಕದನ ವಿರಾಮ ಯೋಜನೆಯ ಮೊದಲ ಹಂತಕ್ಕೆ ಒಪ್ಪಂದ ಮಾಡಿಕೊಂಡಿವೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅಧಿಕೃತವಾಗಿ ಘೋಷಿಸಿದ್ದಾರೆ. ಟ್ರಂಪ್ ಅವರು ಸಾಮಾಜಿಕ ಮಾಧ್ಯಮದ ಮೂಲಕ ಹಂಚಿಕೊಂಡಿರುವ ಪೋಸ್ಟ್ ನಲ್ಲಿ, “ಇಸ್ರೇಲ್ ಮತ್ತು ಹಮಾಸ್ ನಡುವೆ ಗಾಝಾದ ಕದನ ವಿರಾಮದ ಮೊದಲ ಹಂತಕ್ಕೆ ಒಪ್ಪಂದ ತಲುಪಿದೆ. ಇದು ಶಾಂತಿಯ ಪ್ರಾರಂಭದ ಹೊಸ ಅಧ್ಯಾಯವಾಗಿದೆ” ಎಂದು ಹೇಳಿದ್ದಾರೆ. ಈ ವಾರಾಂತ್ಯದಲ್ಲಿ ಕದನ ವಿರಾಮ ಒಪ್ಪಂದಕ್ಕೆ ಸಹಿ ಹಾಕಲು…

Read More

ಬಂಟ್ವಾಳ: ಸ್ವಚ್ಛವಿಲ್ಲದ ಟಾಯ್ಲೆಟ್, ಮುರಿದು ಬಿದ್ದ ಬಾಗಿಲು-ಮಿನಿ ವಿಧಾನಸೌಧ ಅವ್ಯವಸ್ಥೆ!

ಬಂಟ್ವಾಳ: ಮುರಿದು ಬಿದ್ದ ಬಾಗಿಲು, ಸ್ವಚ್ಛವಿಲ್ಲದ ಟಾಯ್ಲೆಟ್, ಪಾನ್ ಪರಾಗ್ ತಿಂದು ಉಗುಳಿದ ಗೋಡೆಗಳು, ತುಕ್ಕು ಹಿಡಿದ ಆಡಳಿತ ಯಂತ್ರಗಳು ಒಟ್ಟಾರೆಯಾಗಿ ಜಡತ್ವದ ಚೌಕಟ್ಟಿನಲ್ಲಿರುವ ಬಂಟ್ವಾಳ ಆಡಳಿತ ಸೌಧದ ಕಚೇರಿಯ ಅವ್ಯವಸ್ಥೆಯ ಬಗ್ಗೆ ಹೇಳಿದಷ್ಟು ಕಡಿಮೆಯೇ. ಜನಪ್ರತಿನಿಧಿಗಳು ಹಾಗೂ  ಸಂಬಂಧಿಸಿದ ಮೇಲಾಧಿಕಾರಿಗಳು ಒಮ್ಮೆ ಭೇಟಿ ಕೊಡಿ ಎಂಬ ಒತ್ತಾಯಗಳು ಸಾರ್ವಜನಿಕರಿಂದ ಕೇಳಿ ಬಂದಿವೆ. ಆಡಳಿತ ಸೌಧದ ಕಚೇರಿಗೆ ಪ್ರವೇಶ ಮಾಡಿದ ನಂತರ ಒಂದನೇ ಮತ್ತು ಎರಡನೇ ಮಹಡಿಗೆ  ಮೆಟ್ಟಿಲುಗಳ ಮೇಲೆ ಹತ್ತಿಕೊಂಡು ಹೋಗಬೇಕಾದರೆ ನಿಮ್ಮನ್ನು ಕೆಂಪು ಬಣ್ಣ…

Read More

ಉಳ್ಳಾಲ: ಮಾನವನ ಅಸ್ಥಿಪಂಜರ ಪತ್ತೆ ಪ್ರಕರಣ- ಕುರುಹು ಪತ್ತೆ ಹಚ್ಚಿದ ಪೊಲೀಸರು

ಉಳ್ಳಾಲ: ಉಳ್ಳಾಲ ಠಾಣಾ ವ್ಯಾಪ್ತಿಯ ತಲಪಾಡಿ ದೇವಿಪುರದ ಅಕ್ಷಯ ಫಾರ್ಮ್‌ನಲ್ಲಿ ಮಂಗಳವಾರ (ಅ.8) ಬೆಳಿಗ್ಗೆ ಬೆಳಕಿಗೆ ಮರದಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾದ ಮಾನವನ ಅಸ್ಥಿಪಂಜರ ಬಿಹಾರ ಮೂಲದಿಂದ ಬಂದು ಮಂಜೇಶ್ವರದಲ್ಲಿ ನೆಲೆಸಿದ್ದ ವ್ಯಕ್ತಿಯದ್ದಿರಬಹುದೆಂದು ಪೊಲೀಸರು ಸಿಕ್ಕ ದಾಖಲೆಗಳ ಆಧಾರದಲ್ಲಿ ಶಂಕಿಸಿದ್ದಾರೆ. ಬಿಹಾರ ಮೂಲದ ರಾಹುಲ್ ಕುಮಾರ್ ಎಂಬಾತ ಎರಡು ತಿಂಗಳ ಹಿಂದೆ ಕೇರಳದಲ್ಲಿ ನಾಪತ್ತೆಯಾದ ಕುರಿತು ಮಂಜೇಶ್ವರ ಠಾಣೆಯಲ್ಲಿ ಆಗಸ್ಟ್ 7ರಂದು ಪ್ರಕರಣ ದಾಖಲಾಗಿತ್ತು. ಆದರೆ ಈತ ಎಲ್ಲಿಗೆ ಹೋಗಿದ್ದಾನೆ ಎಂಬ ಯಾವ ಸುಳಿವೂ ಸಿಕ್ಕಿರಲಿಲ್ಲ. ಈತನ್ಮಧ್ಯೆ ಅ.8ರಂದು…

Read More

ಉಳ್ಳಾಲ: ಮಾನವ ಅಸ್ಥಿಪಂಜರ ಪತ್ತೆ- ಆತ್ಮಹತ್ಯೆ ಶಂಕೆ

ಮಂಗಳೂರು : ಮರದ ರೆಂಬೆಗೆ ಹಗ್ಗದಿಂದ ನೇಣು ಬಿಗಿದು ಮೃತಪಟ್ಟ ಸ್ಥಿತಿಯಲ್ಲಿ ಮಾನವನ ತಲೆ ಬುರುಡೆ, ಅಸ್ಥಿಪಂಜರ ಮತ್ತು ಇತರೆ ಅವಶೇಷಗಳು ಉಳ್ಳಾಲ ಠಾಣಾ ವ್ಯಾಪ್ತಿಯ ತಲಪಾಡಿ ದೇವಿಪುರದ ಅಕ್ಷಯ ಫಾರ್ಮ್ ನೊಳಗಡೆ ಮಂಗಳವಾರ ಬೆಳಗ್ಗೆ ಪತ್ತೆಯಾಗಿದೆ. ಅಕ್ಷಯ ಫಾರ್ಮ್ ಒಳಗಡೆಯ ಮರದ ಕೆಳಗಡೆ ಮಾನವನ ಅಸ್ಥಿ ತಲೆಬುರುಡೆ ಮತ್ತು ಅವಶೇಷಗಳು ಪತ್ತೆಯಾಗಿವೆ. ಫಾರ್ಮ್ ನೊಳಗಡೆ ತೋಟದ ಕೆಲಸ ಮಾಡುತ್ತಿದ್ದ ಸ್ಥಳೀಯ ಕಾರ್ಮಿಕರಿಗೆ ಇಂದು ಬೆಳಗ್ಗೆ ಅಸ್ಥಿಗಳು ಕಾಣಸಿಕ್ಕಿವೆ. ಸ್ಥಳದಲ್ಲಿ ಹಸಿರು ಬರ್ಮುಡ ಚಡ್ಡಿ, ಹಸಿರು ಟೀ…

Read More