ಅಪಘಾತ ಪ್ರಕರಣದಲ್ಲಿ ಹೆಲ್ಮೆಟ್ ಧರಿಸದಿದ್ದಕ್ಕೆ 7 ಲಕ್ಷ ರೂ. ಪರಿಹಾರ ಕಡಿತ: ಹೈಕೋರ್ಟ್ ಆದೇಶ
ಬೆಂಗಳೂರು: ಅಪಘಾತ ಪ್ರಕರಣದಲ್ಲಿ ಮೃತಪಟ್ಟ ಬೈಕ್ ಸವಾರನೋರ್ವ ಹೆಲ್ಮೆಟ್ ಧರಿಸದ ಕಾರಣ ಪರಿಗಣಿಸಿ ಪರಿಹಾರ ಮೊತ್ತದಲ್ಲಿ ಏಳೂವರೆ ಲಕ್ಷ ರು. ಕಡಿತಗೊಳಿಸಿ ಹೈಕೋರ್ಟ್ ಆದೇಶಿಸಿದೆ. ಹೆಲ್ಮೆಟ್ ಧರಿಸದೆ ಇರುವುದು ಬೈಕ್ ಸವಾರನ ನಿರ್ಲಕ್ಷ್ಯವಾಗಿದೆ ಎಂದು ತೀರ್ಮಾನಿಸಿದ ಹೈಕೋರ್ಟ್, ನಿಗದಿಪಡಿಸಿದ ಒಟ್ಟು 19,64,400 ರು. ಪರಿಹಾರದಲ್ಲಿ ನಿರ್ಲಕ್ಷ್ಯದ ಭಾಗವಾಗಿ ಶೇ.40ರಷ್ಟು ಹಣ ಅಂದರೆ 7,85,760 ರು. ಕಡಿತಗೊಳಿಸಿದೆ. ಅಪಘಾತದಿಂದಾಗಿ 2019ರಲ್ಲಿ ಮೃತಪಟ್ಟ ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆ ತಾಲೂಕಿನ ಚಿಕ್ಕಂದವಾಡಿ ಗ್ರಾಮದ ನಿವಾಸಿ ಅವಿನಾಶ್‌ನ (23) ಕುಟುಂಬದವರಿಗೆ ಒಟ್ಟು 18,03,000…

