
ಪುತ್ತೂರು: ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡ ಅಪೂರ್ವ ಕೆ. ಭಟ್ ಚಿಕಿತ್ಸೆ ಫಲಕಾರಿಯಾಗದೆ ಸಾವು
ಪುತ್ತೂರು: ಕೆಲ ತಿಂಗಳ ಹಿಂದೆ ಪುತ್ತೂರು ತಾಲೂಕಿನ ಮುರ ಎಂಬಲ್ಲಿನ ತಿರುವಿನಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು ಸಾವು-ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದ ಕೆದಿಲ ನಿವಾಸಿ ಅಪೂರ್ವ ಕೆ. ಭಟ್ (32) ಚಿಕಿತ್ಸೆ ಫಲಿಸದೆ ಮಂಗಳವಾರ ರಾತ್ರಿ ನಿಧನರಾದರು. ಮೇ 27ರಂದು ಪುತ್ತೂರಿನ ಹೊರವಲಯದ ಮುರ ಜಂಕ್ಷನ್ ಬಳಿ ಈ ದುರ್ಘಟನೆ ನಡೆದಿತ್ತು. ಮಾಣಿ-ಮೈಸೂರು ಹೆದ್ದಾರಿಯಲ್ಲಿ ಪುತ್ತೂರು ಪೇಟೆಯಿಂದ ತಮ್ಮ ತಂದೆ ಈಶ್ವರ್ ಭಟ್ ಅವರ ಜತೆ ಕಾರಿನಲ್ಲಿ ಮನೆಗೆ ತೆರಳುತ್ತಿದ್ದಾಗ, ಪಡ್ನರಿಗೆ ತಿರುಗುವ ಒಳರಸ್ತೆಯಲ್ಲಿ…