ಉಡುಪಿ: ಸೈಫ್ ಕೊಲೆ, ಮೂವರು ಆರೋಪಿಗಳ ಬಂಧನ..!!
ಮಲ್ಪೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಖಾಸಗಿ ಬಸ್ ಮಾಲಕ ಸೈಯಿಪುದ್ದಿನ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಆರೋಪಿಗಳಾದ ಮಿಷನ್ ಕಂಪೌಂಡ್ ನಿವಾಸಿ ಮಹಮದ್ ಫೈಸಲ್ ಖಾನ್ (27), ಕರಂಬಳ್ಳಿ ಜನತಾ ಕಾಲೊನಿಯ ಮೊಹಮದ್ ಶರೀಫ್ (37) ಮತ್ತು ಮಂಗಳೂರಿನ ಕೃಷ್ಣಾಪುರದ ಅಬ್ದುಲ್ ಶುಕುರ್ (43) ಎಂಬವರನ್ನು ದಸ್ತಗಿರಿ ಮಾಡಲಾಗಿದೆ. ಆರೋಪಿಗಳನ್ನು ಉಡುಪಿಯ ಜೆ ಎಂ ಎಫ್ ಸಿ ನ್ಯಾಯಾಧೀಶರೆದುರು ಹಾಜರುಪಡಿಸಲಾಗಿದ್ದು ಪೊಲೀಸ್ ಕಸ್ಟಡಿ ವಿಧಿಸಲಾಗಿದೆ. ಕೊಲೆ, ಹಲ್ಲೆ ಪ್ರಕಣಗಳಲ್ಲಿ ತೊಡಗಿ ರೌಡಿ ಶೀಟರ್ ಆಗಿದ್ದ ಸೈಫುದ್ದೀನ್ ಅವರನ್ನು ಆರೋಪಿಗಳು…

