ಕಾರ್ಕಳ: ವೈದ್ಯರ ನಿರ್ಲಕ್ಷ್ಯ – ಮೂವರು ವೈದ್ಯರ ವಿರುದ್ಧ ಪ್ರಕರಣ ದಾಖಲು
ಕಾರ್ಕಳ : ವೈದ್ಯರ ನಿರ್ಲಕ್ಷ್ಯದ ಕುರಿತು ಉಡುಪಿ ಜಿಲ್ಲಾ ಸರ್ಜನ್ ನೀಡಿದ ವರದಿಯ ಆಧಾರದಂತೆ ಕಾರ್ಕಳ ಸ್ಪಂದನಾ ಆಸ್ಪತ್ರೆಯ ಮೂವರು ವೈದ್ಯರ ವಿರುದ್ಧ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ವಿಪರೀತ ಹೊಟ್ಟೆ ನೋವು ಕಾಣಿಸಿಕೊಂಡ ಕಾರಣಕ್ಕೆ ಝುಬೈದ(52) ಎಂಬವರು ಮೇ 10ರಂದು ಕಾರ್ಕಳ ಸ್ಪಂದನಾ ಆಸ್ಪತ್ರೆಗೆ ಹೋಗಿದ್ದು, ಅಲ್ಲಿ ಪರೀಕ್ಷಿಸಿದ ವೈದ್ಯರು ಡ್ರಿಪ್ಸ್ ಹಾಕಿದರು. ಈ ವೇಳೆ ವೈದ್ಯರು ಬಂದು ಪರಿಶೀಲಿಸುವಂತೆ ಝುಬೈದ ಅವರ ಮಗಳು ಮುಬೀನಾ ಕೇಳಿಕೊಂಡರು, ವೈದ್ಯರು ಬಂದಿರುವುದಿಲ್ಲ, ನಂತರ ಬಂದ…

