Headlines

ಧರ್ಮಸ್ಥಳ ಕೇಸ್ : ಚಿನ್ನಯ್ಯನಿಗೆ ಬುರುಡೆ ಕೊಟ್ಟಿದ್ದೆ ಸೌಜನ್ಯಳ ಸೋದರ ಮಾವ

ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಸ್ಪೋಟಕ ಟ್ವಿಸ್ಟ್ ಸಿಕ್ಕಿದೆ. ಮಾಸ್ಕ್ ಮ್ಯಾನ್ ಚಿನ್ನಯ್ಯನಿಗೆ ಬುರುಡೆಯನ್ನು ತಂದುಕೊಟ್ಟಿದ್ದೇ ಸೌಜನ್ಯ ಮಾವ ಎಂಬುದಾಗಿ ತಿಳಿದು ಬಂದಿದೆ. ಮಾಸ್ಕ್ ಮ್ಯಾನ್ ಚಿನ್ನಯ್ಯಗೆ ಬುರುಡೆ ತಂದು ಕೊಟ್ಟಿದ್ದೇ ಸೌಜನ್ಯ ಮಾವ ವಿಠಲ್ ಗೌಡ ಎಂಬುದಾಗಿ ಎಸ್‌ಐಟಿ ವಿಚಾರಣೆ ವೇಳೆಯಲ್ಲಿ ತಿಳಿದು ಬಂದಿದೆ.ಹೀಗಾಗಿ ಯಾವುದೇ ಕ್ಷಣದಲ್ಲಿ ಎಸ್‌ಐಟಿಯಿಂದ ವಿಠಲ್ ಗೌಡ ಅರೆಸ್ಟ್ ಆಗುವ ಸಾಧ್ಯತೆ ಇದೆ. ಅಂದಹಾಗೇ ಚಿನ್ನಯ್ಯ ಹಾಗೂ ವಿಠಲ್ ಗೌಡ ಜೊತೆಗೆ ಹಳೆಯ ಸ್ನೇಹ ಸಂಬಂಧವಿತ್ತಂತೆ. ನೇತ್ರಾವತಿ ನದಿ ತೀರದಲ್ಲಿ ಚಿಕ್ಕ ಹೋಟೆಲ್…

Read More

7 ವರ್ಷಗಳ ಬಳಿಕ ಭಾರತದಲ್ಲಿ ಇಂದು ಅಪರೂಪದ ರಕ್ತ ಚಂದ್ರ ಗ್ರಹಣ

ಬೆಂಗಳೂರು: ಇಂದು ರಾತ್ರಿ ನಭೋ ಮಂಡಲದಲ್ಲಿ  ಅಪರೂಪದ ಕೌತುಕದ ರಕ್ತ ಚಂದನ ಚಂದ್ರಗ್ರಹಣ ಸಂಭವಿಸಲಿದೆ. ಸುದೀರ್ಘ 3 ಗಂಟೆ 28 ನಿಮಿಷಗಳ ಕಾಲ ನಡೆಯುವ ಭೂಮಿ, ಸೂರ್ಯ ಹಾಗೂ ಚಂದ್ರನ ನಡುವಿನ ನೆರಳಿನಾಟಕ್ಕೆ ಭಾರತ ಕೂಡ ಸಾಕ್ಷಿಯಾಗಲಿದೆ. ಭಾರತವಲ್ಲದೇ , ಏಷ್ಯಾ, ಆಫ್ರಿಕಾ,  ಆಸ್ಟ್ರೇಲಿಯಾ, ಯೂರೋಪ್ ಸೇರಿ ಬಹುತೇಕ ವಿಶ್ವದ ಶೇ .85ರಷ್ಟು ಮಂದಿ ಸೆ. 7ರ ರವಿವಾರ ತಡರಾತ್ರಿ ಸಂಭವಿಸಲಿರುವ ಅತೀ ಅಪರೂಪದ ರಕ್ತ ಚಂದ್ರಗ್ರಹಣವನ್ನು ವೀಕ್ಷಿಸಬಹುದಾಗಿದೆ. ಏಷ್ಯಾ ಹಾಗೂ ಆಸ್ಟ್ರೇಲಿಯಾದಲ್ಲಿ ಆರಂಭದಿಂದ ಅಂತ್ಯದವರೆಗೂ ಉತ್ತಮವಾಗಿ…

Read More

ಸೆ.22ರಿಂದ ರಾಜ್ಯದಲ್ಲಿ ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ ಆರಂಭ: ಈ ದಾಖಲೆ ರೆಡಿ ಇಟ್ಟುಕೊಟ್ಟಿ

ಬೆಂಗಳೂರು: ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದಿಂದ ರಾಜ್ಯದ ಎಲ್ಲಾ ಸಾರ್ವಜನಿಕರ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಕೈಗೊಳ್ಳಲಾಗುತ್ತಿದ್ದು, ರಾಜ್ಯದಲ್ಲಿ ಎಸ್ಕಾಂ ಇಲಾಖೆಯಿಂದ ಪ್ರತಿ ಮನೆಗೂ ಯು.ಹೆಚ್.ಐ.ಡಿ (UHID) ನಂಬರ್ ಜನರೇಟ್ ಮಾಡಿ, ಸ್ಟಿಕ್ಕರ್ ಅಂಟಿಸುವ ಕಾರ್ಯ ನಡೆಯುತ್ತಿದೆ. ಸೆಪ್ಟೆಂಬರ್.22ರಿಂದ ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ ಆರಂಭಗೊಳ್ಳಲಿದ್ದು, ನೀವು ಈ ದಾಖಲೆಗಳನ್ನು ಸಿದ್ಧವಾಗಿಟ್ಟುಕೊಳ್ಳುವಂತೆ ಸರ್ಕಾರ ಸೂಚಿಸಿದೆ. ಈಗಾಗಲೇ ಪ್ರತಿ ಮನೆಗೂ ಸರ್ಕಾರದಿಂದ ನಿಯೋಜಿತವಾಗುವ ಗಣತಿದಾರರು ಮುಂದಿನ ದಿನಗಳಲ್ಲಿ ಮೊಬೈಲ್ ಆಪ್ ಮುಖೇನ ಸಮೀಕ್ಷೆ ಕೈಗೊಳ್ಳಲಿದ್ದು, ಆ ಸಮಯದಲ್ಲಿ ಸಾರ್ವಜನಿಕರು…

Read More

ಮಾಸ್ಕ್ ಮ್ಯಾನ್ ಚಿನ್ನಯ್ಯಗೆ 14 ದಿನ ನ್ಯಾಯಾಂಗ ಬಂಧನ..!! ಶಿವಮೊಗ್ಗ ಜೈಲಿಗೆ ಶಿಫ್ಟ್

ಧರ್ಮಸ್ಥಳದಲ್ಲಿ ಶವ ಹೂತಿದ್ದಾಗಿ ತಪ್ಪೊಪ್ಪಿಗೆ ಹೇಳಿಕೆ ಪ್ರಕರಣದಲ್ಲಿ ಆರೋಪಿ ಮಾಸ್ಕ್ ಮ್ಯಾನ್ ಚಿನ್ನಯ್ಯ ಅವರನ್ನು 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ನೀಡಿ ಕೋರ್ಟ್ ಆದೇಶಿಸಿದೆ. ಇಂದು ಎಸ್ಐಟಿ ವಶಕ್ಕೆ ನೀಡಿದ್ದಂತ ಅವಧಿ ಮುಕ್ತಾಯಗೊಂಡ ಹಿನ್ನಲೆಯಲ್ಲಿ ಅವರನ್ನು ಬೆಳ್ತಂಗಡಿಯ ಕೋರ್ಟ್ ಗೆ ಹಾಜರುಪಡಿಸಲಾಗಿತ್ತು. ಈ ಪ್ರಕರಣದ ವಿಚಾರಣೆ ನಡೆಸಿದಂತ ಕೋರ್ಟ್, ಮಾಸ್ಕ್ ಮ್ಯಾನ್ ಚಿನ್ನಯ್ಯ ಅವರನ್ನು 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ನೀಡಿ ಆದೇಶಿಸಿದೆ. ಈ ಹಿನ್ನಲೆಯಲ್ಲಿ ಧರ್ಮಸ್ಥಳ ಪ್ರಕರಣದಲ್ಲಿ ಬುರುಡೆ ಚಿನ್ನಯ್ಯಗೆ 14 ದಿನ…

Read More

ಬೆಳ್ತಂಗಡಿ: ಅಕ್ರಮ ಕಸಾಯಿಖಾನೆ ಅಡ್ಡೆ ಮೇಲೆ ಪೊಲೀಸರ ದಾಳಿ- 9 ಜಾನುವಾರುಗಳ ತಲೆ ವಶ

ಬೆಳ್ತಂಗಡಿ: ಅಕ್ರಮವಾಗಿ ಜಾನುವಾರುಗಳನ್ನು ಹತ್ಯೆ ಮಾಡಿ ಮಾಂಸ ಮಾಡುತ್ತಿರುವ ಬಗ್ಗೆ ಬೆಳ್ತಂಗಡಿ ಇನ್‌ಸ್ಪೆಕ್ಟರ್ ಸುಬ್ಬಾಪುರ್ ಮಠ್ ಅವರಿಗೆ ಲಭಿಸಿದ ಖಚಿತ ಮಾಹಿತಿ ಮೇರೆಗೆ ಅಕ್ರಮ ಕಸಾಯಿಖಾನೆ ಮೇಲೆ ದಾಳಿ ನಡೆಸಿ, ಒಂಬತ್ತು ಜಾನುವಾರುಗಳ ತಲೆಯನ್ನು ವಶಪಡಿಸಿಕೊಂಡಿದ್ದಾರೆ. ಬೆಳ್ತಂಗಡಿ ತಾಲೂಕಿನ ಕುವೆಟ್ಟು ಗ್ರಾಮದ ಪಿಲಿಚಂಡಿಕಲ್ಲು ಎಂಬಲ್ಲಿ ಮೊಹಮ್ಮದ್ ರಫೀಕ್ ಅಲಿಯಾಸ್ ಅಪ್ಪಿ ಎಂಬಾತನ ಮನೆ ಮೇಲೆ ಈ ದಾಳಿ ನಡೆದಿದೆ. ಕಳವು ಮಾಡಿದ ಜಾನುವಾರುಗಳನ್ನು ಇಲ್ಲಿಗೆ ತಂದು ಅಕ್ರಮವಾಗಿ ಹತ್ಯೆ ಮಾಡಲಾಗುತ್ತಿದೆ ಎಂದು ಪೊಲೀಸರಿಗೆ ಮಾಹಿತಿ ಸಿಕ್ಕಿತ್ತು. ಈ ಹಿನ್ನೆಲೆಯಲ್ಲಿ ಉನ್ನತ…

Read More

ಬೆಳ್ತಂಗಡಿ: ಅಡಿಕೆ ವರ್ತಕರ ಜಿಲ್ಲಾ ಸಂಘಟನೆಯ ಅಧ್ಯಕ್ಷರಾಗಿ ಪ್ರಶಾಂತ್ ಶೆಟ್ಟಿ, ಕಾರ್ಯದರ್ಶಿಯಾಗಿ ತೇಜಸ್ವಿ ರಾಜ್ ಆಯ್ಕೆ

ಬೆಳ್ತಂಗಡಿ : ಸುಳ್ಯ, ಪುತ್ತೂರು, ಕಡಬ, ಬೆಳ್ತಂಗಡಿ, ಮಂಗಳೂರು, ಬಂಟ್ವಾಳ, ಮೂಡುಬಿದಿರೆ ಅಡಿಕೆ ವರ್ತಕರ ಜಿಲ್ಲಾ ಸಂಘಟನೆಯ ನೂತನ ಅಧ್ಯಕ್ಷರಾಗಿ ಮಡಂತ್ಯಾರು ಪ್ರಶಾಂತ್ ಶೆಟ್ಟಿ ಮೂಡಯೂರು ಅವಿರೋಧ ಆಯ್ಕೆಗೊಂಡರು. ಕಾರ್ಯದರ್ಶಿಯಾಗಿ ತೇಜಸ್ವಿ ರಾಜ್ ( ಮಾಜಿ ರಾಜ್ಯ ಅಧ್ಯಕ್ಷರು ಕರ್ನಾಟಕ ರಾಜ್ಯ ಕುಲಾಲ ಕುಂಬಾರರ ಯುವವೇಧಿಕೆ ಹಾಗು ಮಹಿಳಾ ಸಂಘಟನೆಗಳ ಒಕ್ಕೂಟ ರಿ.ಮಂಗಳೂರು) ಆಯ್ಕೆಯಾದರು. ಅಡಿಕೆ ವರ್ತಕರ ಜಿಲ್ಲಾ ಸಂಘಟನೆಯ ಸಭೆಯು ಮೊಟ್ಟ ಮೊದಲ ಬಾರಿಗೆ ಸೆ.2ರಂದು ಬಿ. ಸಿ. ರೋಡ್ ನ ರಂಗೋಲಿ ಭವನದಲ್ಲಿ ನಡೆಯಿತು. ಸಭೆಯಲ್ಲಿ…

Read More

ಪುತ್ತೂರು: ಪಿಲಿ ರಾಧಣ್ಣ ಖ್ಯಾತಿಯ ರಾಧಾಕೃಷ್ಣ ಶೆಟ್ಟಿ ನಿಧನ

ಪುತ್ತೂರು: ಪುತ್ತೂರಿನ ಪಿಲಿ ಪರಂಪರೆಗೆ ತನ್ನದೇ ಶೈಲಿಯ ಹೆಜ್ಜೆಯ ಹೆಗ್ಗುರುತಿನ ಬ್ರ‍್ಯಾಂಡ್ ತಂದುಕೊಟ್ಟ ಪಿಲಿ ರಾಧಣ್ಣ ಅವರು ಅನಾರೋಗ್ಯದ ಹಿನ್ನೆಲೆ ಶನಿವಾರ ನಸುಕಿನ ಜಾವ ಕೊನೆಯುಸಿರೆಳೆದಿದ್ದಾರೆ. ಕೆಮ್ಮಾಯಿ ನಿವಾಸಿ ರಾಧಾಕೃಷ್ಣ ಶೆಟ್ಟಿ (59) ಅವರನ್ನು ಅನಾರೋಗ್ಯದ ಹಿನ್ನಲೆ ಸೆ.5 ರಂದು ಪುತ್ತೂರು ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಅಲ್ಲಿಂದ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ಅವರು ಚಿಕಿತ್ಸೆಗೆ ಸ್ಪಂದಿಸದೆ ನಿಧನರಾದರು.ಪುತ್ತೂರಿನಲ್ಲಿ ಪಿಲಿ ರಾಧಣ್ಣ ಎಂದೇ ಹೆಸರಾದ ರಾಧಾಕೃಷ್ಣ ಶೆಟ್ಟಿಯವರು ಹುಲಿ ಆಚರಣೆಯ ಸಂಪ್ರದಾಯಕ್ಕೆ ಎಳ್ಳಷ್ಟು ಚ್ಯುತಿ ಬಾರದ…

Read More

ಉಪ್ಪಿನಂಗಡಿ: ದನ ಕಳವು ಪ್ರಕರಣ: ಮೂವರು ಆರೋಪಿಗಳ ಬಂಧನ

ಉಪ್ಪಿನಂಗಡಿ: ಹಟ್ಟಿಯಿಂದ ದನವನ್ನು ಕದ್ದುಕೊಂಡು ಹೋಗಿ ದನದ ಮಾಲಕನ ತೋಟದಲ್ಲೇ ಅದನ್ನು ಕೊಂದು ಅದರ ಕರುಳು ಸಹಿತ ಹೊಟ್ಟೆಯೊಳಗಿನ ತ್ಯಾಜ್ಯವನ್ನು ಅಲ್ಲೇ ಬಿಸಾಡಿದ ಪ್ರಕರಣಕ್ಕೆ ಸಂಬಂಧಿಸಿ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಉಳ್ಳಾಲ ಚೆಂಬುಗುಡ್ಡೆ ನಿವಾಸಿ ಇರ್ಷಾದ್ (34), ಮಂಗಳೂರು ಕುದ್ರೋಳಿ ನಿವಾಸಿ ಮಹಮ್ಮದ್ ಮನ್ಸೂರ್ (48), ಮಂಗಳೂರು ಕಣ್ಣೂರು ನಿವಾಸಿ ಅಬ್ದುಲ್ ಅಝೀಮ್ (18) ಬಂಧಿತ ಆರೋಪಿಗಳು ಎಂದು ಪೊಲೀಸರು ತಿಳಿಸಿದ್ದಾರೆ. ಅವರು ಸೆ.4ರಂದು ನಸುಕಿನ ವೇಳೆ ಪೆರ್ನೆಯ ಕಡಂಬು ನಿವಾಸಿ ದೇಜಪ್ಪ ಮೂಲ್ಯರ ಹಟ್ಟಿಯಿಂದ…

Read More

ಧರ್ಮಸ್ಥಳ ಪ್ರಕರಣ: ಗಿರೀಶ್‌ ಮಟ್ಟಣ್ಣನವರ್‌ ನಮಗೆ ಬುರುಡೆ ಕೊಟ್ಟಿದ್ದು- ಜಯಂತ್‌ SIT ಮುಂದೆ ಹೇಳಿಕೆ

ಬೆಳ್ತಂಗಡಿ : ಬುರುಡೆ ಪ್ರಕರಣದ ತನಿಖೆಯನ್ನು ಸೆ.5 ರಂದು ಎಸ್.ಐ.ಟಿ ಮುಖ್ಯಸ್ಥ ಪ್ರಣವ್ ಮೊಹಂತಿ ಮಾಡುತ್ತಿದ್ದಾರೆ. ಬೆಳ್ತಂಗಡಿ ಎಸ್.ಐ.ಟಿ ಕಚೇರಿಯಲ್ಲಿ ನಡೆಸುತ್ತಿರುವ ತನಿಖೆ ವೇಳೆ ಬುರುಡೆಗೆ ಸಂಬಂಧಿಸಿದ ಜಯಂತ್.ಟಿ ಸ್ಫೋಟಕ ಮಾಹಿತಿಗಳನ್ನು ಬಿಚ್ಚಿಟ್ಟಿದ್ದಾನೆ ಎನ್ನಲಾಗಿದೆ. ಬುರುಡೆಯನ್ನು ಜಯಂತ್.ಟಿಗೆ ತಂದು ಕೊಟ್ಟಿದ್ದು ಗಿರೀಶ್ ಮಟ್ಟಣ್ಣವರ್ ಎಂದು ತನಿಖೆ ವೇಳೆ ಬಾಯಿಬಿಟ್ಟಿದ್ದಾನೆ.

Read More

ಉಪ್ಪಿನಂಗಡಿ: ಹಟ್ಟಿಯಿಂದ ದನ ಕದ್ದು ಮಾಂಸ ಮಾಡಿದ ದುರುಳರು-ಆರೋಪಿಗಳನ್ನು ಶೀಘ್ರ ಬಂಧಿಸುವಂತೆ ಹಿಂದೂಪರ ಸಂಘಟನೆಗಳ ಆಗ್ರಹ

ಉಪ್ಪಿನಂಗಡಿ : ದನದ ಹಟ್ಟಿಯಿಂದ ಗಬ್ಬದ ದನವನ್ನು ಕದ್ದು , ಬಳಿಕ ಕಟುಕರು ದನದ ಮಾಲೀಕನ ಜಮೀನಿನಲ್ಲಿಯೇ ಹತ್ಯೆ ಮಾಡಿ ಅದನ್ನು ಮಾಂಸ ಮಾಡಿ ಸಾಗಿಸಿದ ಘಟನೆ ಉಪ್ಪಿನಂಗಡಿ ಪೊಲೀಸ್‌ ಠಾಣೆ ವ್ಯಾಪ್ತಿಯ ಪೆರ್ನೆ ಗ್ರಾಮದ ಕಡಂಬು ಎಂಬಲ್ಲಿ ನಡೆದಿದೆ. ದೇಜಪ್ಪ ಮೂಲ್ಯ ಅವರ ಹಟ್ಟಿಯಿಂದ ಗಬ್ಬದ ದನವನ್ನು ಕದ್ದೊಯ್ದ ಕಟುಕರು ಅವರ ಜಮೀನಿನಲ್ಲಿಯೇ ಹತ್ಯೆ ಮಾಡಿ ಮಾಂಸವನ್ನು ಸಾಗಿಸಿದ್ದಾರೆ. ಈ ಬಗ್ಗೆ ಪೊಲೀಸರಿಗೆ ದೂರು ನೀಡಿದ್ದಾರೆ.ಗುರುವಾರ ನಸುಕಿನ 2.30ರ ವೇಳೆಗೆ ಹಸು ಹಟ್ಟಿಯಲ್ಲಿಯೇ ಇರುವುದನ್ನು ಕಂಡಿದ್ದು,…

Read More