Headlines

ದೇವಾಲಯದ ಸುತ್ತ ಮಾಂಸಾಹಾರ ಸೇವನೆ ನಿಷೇಧ : ರಾಜ್ಯ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್ ನೋಟಿಸ್.!

ಬೆಂಗಳೂರು: ತುಮಕೂರು ಜಿಲ್ಲೆ ಮಧುಗಿರಿ ತಾಲೂಕಿನ ಶಿವನಗೆರೆ ಗ್ರಾಮದ ಶ್ರೀ ಹೊನ್ನೇಶ್ವರಸ್ವಾಮಿ ದೇವಸ್ಥಾನದ ಸುತ್ತ 200 ಮೀಟರ್ ವ್ಯಾಪ್ತಿಯಲ್ಲಿ ಮಾಂಸಾಹಾರ ಸೇವನೆ ನಿಷೇಧಿಸಿ ಪೊಲೀಸರು ಹೊರಡಿಸಿರುವ ನೋಟಿಸ್ ಪ್ರಶ್ನಿಸಿ ಸಲ್ಲಿಸಿರುವ ಅರ್ಜಿ ಸಂಬಂಧ ರಾಜ್ಯ ಸರಕಾರ ಮತ್ತು ಜಿಲ್ಲಾಡಳಿತಕ್ಕೆ ಹೈಕೋರ್ಟ್ ನೋಟಿಸ್ ಜಾರಿಗೊಳಿಸಿದೆ. ದೇವಸ್ಥಾನದ ಬಳಿ ಮಾಂಸಾಹಾರ ಸೇವಿಸುವ ಬಗ್ಗೆ ಶ್ರೀ ಹೊನ್ನೇಶ್ವರಸ್ವಾಮಿ ದೇವಸ್ತಾನ ಜೀರ್ಣೋದ್ಧಾರ ಸೇವಾ ಸಮಿತಿ ಟ್ರಸ್ಟ್ ಸಲ್ಲಿಸಿದ್ದ ಅರ್ಜಿಗೆ ಪ್ರತಿಕ್ರಿಯೆಯಾಗಿ ಕರ್ನಾಟಕ ಹೈಕೋರ್ಟ್ ಗುರುವಾರ ರಾಜ್ಯ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದೆ. ತುಮಕೂರು…

Read More

ಉಡುಪಿ : ಆನ್‌ಲೈನ್ ಟ್ರೇಡಿಂಗ್ ವಂಚನೆ- ಆರು ಮಂದಿ ಬಂಧನ

ಉಡುಪಿ: ಎರಡು ಪ್ರತ್ಯೇಕ ಆನ್‌ಲೈನ್ ವಂಚನೆ ಪ್ರಕರಣಗಳಲ್ಲಿ ಒಟ್ಟು ಆರು ಮಂದಿ ಆರೋಪಿಗಳನ್ನು ಉಡುಪಿ ಸೆನ್ ಪೊಲೀಸರು ಬಂಧಿಸಿ, ಒಟ್ಟು ೬ಲಕ್ಷ ರೂ. ನಗದು ಹಾಗೂ ಮೊಬೈಲ್‌ಗಳನ್ನು ವಶಪಡಿಸಿಕೊಂಡಿದ್ದಾರೆ. ಕಾಪು ತಾಲೂಕಿನ ಶಂಕರಪುರದ ಜೊಸ್ಸಿ ರವೀಂದ್ರ ಡಿಕ್ರೂಸ್(೫೪), ಎಂಬವರಿಗೆ ಹೂಡಿಕೆ ಹೆಸರಿನಲ್ಲಿ ಒಟ್ಟು ೭೫,೦೦,೦೦೦ರೂ. ಹಣವನ್ನು ಆನ್‌ಲೈನ್ ವಂಚನೆ ಮಾಡಲಾಗಿತ್ತು. ಈ ಪ್ರಕರಣದಲ್ಲಿ ಸೆನ್ ಪೊಲೀಸರು, ಸುರತ್ಕಲ್ ಕೋಡಿಕೆರೆಯ ಮೊಹಮದ್ ಕೈಸ್(೨೦), ಹೆಜಮಾಡಿ ಕನ್ನಂಗಾರಿನ ಅಹಮದ್ ಅನ್ವೀಜ್ (೨೦), ಬಂಟ್ವಾಳ ಜೋಡುಮಾರ್ಗದ ಸಫ್ವಾನ್(೩೦), ತಾಸೀರ್(೩೧) ಎಂಬವರನ್ನು ಬಂಧಿಸಿ,…

Read More

ಪುತ್ತೂರು: ವಿದ್ಯಾರ್ಥಿನಿ ಮಗುವಿಗೆ ಜನ್ಮ ನೀಡಿದ ಪ್ರಕರಣ :ಆರೋಪಿ ಶ್ರೀಕೃಷ್ಣ ಜೆ ರಾವ್ ಗೆ ಹೈಕೋರ್ಟ್‌ ಜಾಮೀನು

ಪುತ್ತೂರು:ಮದುವೆಯಾಗುವುದಾಗಿ ನಂಬಿಸಿ ಯುವತಿಯನ್ನು ಗರ್ಭವತಿಯನ್ನಾಗಿ ಮಾಡಿ ಮದುವೆಯಾಗಲು ನಿರಾಕರಿಸಿ ವಂಚಿಸಿರುವ ಆರೋಪದಲ್ಲಿ ಬಂಧಿತನಾಗಿ ನ್ಯಾಯಾಂಗ ಬಂಧನದಲ್ಲಿದ್ದ ಬಪ್ಪಳಿಗೆ ನಿವಾಸಿ ಶ್ರೀಕೃಷ್ಣ ಜೆ.ರಾವ್ ಇದೀಗ ಜೈಲಿನಿಂದ ಬಿಡುಗಡೆಗೊಂಡಿದ್ದಾನೆ. ಆರೋಪಿಗೆ ಕರ್ನಾಟಕ ಹೈಕೋರ್ಟ್ ಸೆ.3ರಂದು ಜಾಮೀನು ಮಂಜೂರು ಮಾಡಿತ್ತು. ಬಳಿಕ ಪುತ್ತೂರು ನ್ಯಾಯಾಲಯದಲ್ಲಿ ಜಾಮೀನಿಗೆ ಸಂಬಂಧಿಸಿದ ಭದ್ರತೆ ಮತ್ತಿತರ ಪ್ರಕ್ರಿಯೆಗಳನ್ನು ಸೆ.4ರಂದು ಮುಗಿಸಿ ಆರೋಪಿಯನ್ನು ಮಂಗಳೂರು ಜೈಲಿನಿಂದ ಬಿಡುಗಡೆಗೊಳಿಸಿ ಕರೆತರಲಾಗುತ್ತಿದೆ ಎಂದು ಮಾಹಿತಿ ಲಭಿಸಿದೆ.ಆರೋಪಿ ಪರ ಹೈಕೋರ್ಟ್‌ನಲ್ಲಿ ಖ್ಯಾತ ನ್ಯಾಯವಾದಿ ಪಿ.ಪಿ.ಹೆಗ್ಡೆ ವಾದಿಸಿದ್ದರು.ಪುತ್ತೂರು ನ್ಯಾಯಾಲಯದಲ್ಲಿ ಸುರೇಶ್ ರೈ ಪಡ್ಡಂಬೈಲು, ರಾಘವ…

Read More

ಉಡುಪಿ: ಏಕಾಏಕಿ ವಾಷಿಂಗ್ ಮೆಶಿನ್ ನಲ್ಲಿ ಬೆಂಕಿ ಕಾಣಿಸಿಕೊಂಡು ಸ್ಫೋಟ..!!

ಉಡುಪಿ: ಏಕಾಏಕಿ ವಾಷಿಂಗ್ ಮೆಶಿನ್ ನಲ್ಲಿ ಬೆಂಕಿ ಕಾಣಿಸಿಕೊಂಡು ಸ್ಫೋಟಗೊಂಡ ಘಟನೆ ಮಣಿಪಾಲದ ಅಪಾರ್ಟ್ಮೆಂಟ್ ನಲ್ಲಿ ಬುಧವಾರ ಮಧ್ಯಾಹ್ನ ವೇಳೆ ಸಂಭವಿಸಿದೆ. ಮಣಿಪಾಲ ಡಿಸಿ ಆಫೀಸ್ ರಸ್ತೆಯಲ್ಲಿರುವ ಅದಿತಿ ಪರ್ವ ಅಪಾರ್ಟ್ ಮೆಂಟ್ ನಲ್ಲಿ ಈ ಅವಘಡ ನಡೆದಿದೆ. ಸ್ಥಳಕ್ಕೆ ಅಗ್ನಿಶಾಮಕದಳದವರು ದೌಡಾಯಿಸಿದ್ದು, ಅಗ್ನಿಶಾಮಕ ಇಲಾಖೆಯ ಸಿಬ್ಬಂದಿ, ಸಾರ್ವಜನಿಕರ ಸಹಕಾರದೊಂದಿಗೆ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಈ ಅವಘಡದಲ್ಲಿ ಸುಮಾರು ಅಂದಾಜು 50 ಸಾವಿರ ರೂ. ನಷ್ಟ ಸಂಭವಿಸಿದೆ ಎನ್ನಲಾಗಿದೆ. ಫ್ಲ್ಯಾಟ್ ನಲ್ಲಿ ಸಿಲುಕಿದ್ದ ಮಹಿಳೆಯನ್ನು ಅಗ್ನಿಶಾಮಕ ದಳದವರು…

Read More

ಯೂಟ್ಯೂಬರ್ ಸಮೀರ್ ಎಂ.ಡಿ ಮನೆ ಮೇಲೆ ಪೊಲೀಸರ ದಾಳಿ – ದಾಖಲೆಗಳ ಪರಿಶೀಲನೆ.!

ಯೂಟ್ಯೂಬರ್ ಸಮೀರ್.ಎಂ.ಡಿ ವಿರುದ್ಧ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ದಾಖಲಾದ ಪ್ರಕರಣಕ್ಕೆ ಸಂಬ0ಧಿಸಿದ0ತೆ ಬೆಳ್ತಂಗಡಿ ಸರ್ಕಲ್ ಇನ್ಸ್ಪೆಕ್ಟರ್ ನಾಗೇಶ್ ಕದ್ರಿ ಮತ್ತು ತಂಡ ಎಫ್.ಎಸ್.ಎಲ್ ವಿಭಾಗದ ಸಿಬ್ಬಂದಿ ಜೊತೆಗೆ ಸೆ.4 ರಂದು ಮಧ್ಯಾಹ್ನ ಬೆಂಗಳೂರಿನ ಬನ್ನೇರುಘಟ್ಟದ ಹುಳ್ಳಹಲ್ಲಿಯಲ್ಲಿರುವ ಬಾಡಿಗೆ ಮನೆಗೆ ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ.  ಬೆಳ್ತಂಗಡಿ ನ್ಯಾಯಾಲಯದಿಂದ ಸೆ.3 ರಂದು ಸರ್ಚ್ ವಾರಂಟ್ ಪಡೆದುಕೊಂಡು ಪೊಲೀಸರು ಬೆಂಗಳೂರಿಗೆ ತೆರಳಿದ್ದು, ಪ್ರಕರಣಕ್ಕೆ ಸಂಬ0ಧಿಸಿದ0ತೆ ಆತನ ಮನೆಯಿಂದ ವಿಡಿಯೋ ಮಾಡಲು ಬಳಸಿದ ಕಂಪ್ಯೂಟರ್ ಮತ್ತು ಮೊಬೈಲ್ ಫೋನ್ ಜಪ್ತಿ ಮಾಡಿ…

Read More

ಉಡುಪಿ: ಮನೆಗೆ ಕರೆದು ವ್ಯಕ್ತಿಗೆ ಹನಿಟ್ರ್ಯಾಪ್, ಹಣ ಸುಲಿಗೆ- ಮಹಿಳೆ ಸಹಿತ 6 ಮಂದಿ ಅರೆಸ್ಟ್

ಉಡುಪಿ : ಹನಿಟ್ರ್ಯಾಪ್ ಜಾಲವೊಂದನ್ನು ಭೇದಿಸಿರುವ ಜಿಲ್ಲೆಯ ಕುಂದಾಪುರ ನಗರ ಠಾಣೆ ಪೊಲೀಸರು ಮಹಿಳೆ ಸಹಿತ ಒಟ್ಟು ಆರು ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತರಿಂದ ಹಣ ಹಾಗೂ ಕೃತ್ಯಕ್ಕೆ ಬಳಸಿದ ಎರಡು ಕಾರುಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಂ ಶಂಕರ್ ಮಾಹಿತಿ ನೀಡಿದ್ದಾರೆ. ನಾವುಂದ ಬಡಾಕೆರೆಯ ಸವದ್ ಯಾನೆ ಅಚ್ಚು (28), ಗುಲ್ವಾಡಿ ಗಾಂಧಿಕಟ್ಟೆಯ ಸೈಪುಲ್ಲಾ(38), ಹಂಗಳೂರು ಗ್ರಾಮದ ಮೊಹಮ್ಮದ್ ನಾಸೀರ್ ಶರೀಫ್ (36), ಕುಂಭಾಶಿ ಮೂಡುಗೋಪಾಡಿ ಜನತಾ ಕಾಲೋನಿಯ ಅಬ್ದುಲ್ ಸತ್ತಾರ್…

Read More

ಮಗು ಮಾರಾಟ : ಮಂಗಳೂರಿನ ಡಾಕ್ಟರ್ ಸೇರಿದಂತೆ ಮೂವರು ಅರೆಸ್ಟ್

ಉಡುಪಿ: ಮಂಗಳೂರಿನ ಕೊಲಾಸೋ ಆಸ್ಪತ್ರೆಯಲ್ಲಿ ಅತ್ಯಾಚಾರ ಸಂತ್ರಸ್ಥೆಯ ಮಗುವನ್ನು ಮಾರಾಟ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಡಾಕ್ಟರ್ ಸೇರಿದಂತೆ ಮೂವರನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಬಿಸಿ ರೋಡ್‌ನ‌ ವೈದ್ಯ ಡಾ| ಸೋಮೇಶ್‌ ಸೊಲೊಮನ್‌, ಮಂಗಳೂರಿನ ಪಿಜಿ ಮಾಲಕಿ ವಿಜಯಲಕ್ಷ್ಮಿ ಆಲಿಯಾಸ್‌ ವಿಜಯ ಮತ್ತು ಅತ್ಯಾಚಾರ ಆರೋಪಿ ನವನೀತ್‌ ನಾರಾಯಣ ಎಂದು ಗುರುತಿಸಲಾಗಿದೆ. ಕಾಪು ತಾಲ್ಲೂಕು ಕಲ್ಲುಗುಡ್ಡೆಯ ನಿವಾಸಿ ಪ್ರಭಾವತಿ– ರಮೇಶ್ ಮೂಲ್ಯ ದಂಪತಿ ಅಂಗನವಾಡಿಗೆ ಶಿಶುವನ್ನು ಕರೆದುಕೊಂಡು ಬಂದಿದ್ದರು. ಈ ವೇಳೆ ಅಂಗನವಾಡಿ ಕಾರ್ಯಕರ್ತೆಗೆ ಇದು ಇವರ ಮಗುವಲ್ಲ ಎಂದು…

Read More

ಸೆ.22ರಿಂದ ಹೊಸ ಜಿಎಸ್‌ಟಿ ನೀತಿ: ದಸರಾ ಸಂಭ್ರಮ ಹೆಚ್ಚಿಸಿದ ಕೇಂದ್ರ ಸರ್ಕಾರ, ಯಾವ್ಯಾವ ವಸ್ತು ಅಗ್ಗ? ಯಾವುದು ದುಬಾರಿ?

ನವದೆಹಲಿ: ದಸರಾಗೆ ಅಂದರೆ ಸೆಪ್ಟೆಂಬರ್ 22ರಂದು ಹೊಸ ಜಿಎಸ್‌ಟಿ ನೀತಿ ಜಾರಿಯಾಗುತ್ತಿದೆ. ಈ ಮೂಲಕ ಕೇಂದ್ರ ಸರ್ಕಾರ ದೇಶದ ಜನರಿಗೆ ದಸರಾ ಸಂಭ್ರಮ ಹೆಚ್ಚಿಸಿದೆ. ಕಳೆದ ಸ್ವಾತಂತ್ರ್ಯ ದಿನದಂದು ದೆಹಲಿಯ‌ ಕೆಂಪುಕೋಟೆಯ ಮೇಲೆ ಪ್ರಧಾನಿ ನರೇಂದ್ರ ಮೋದಿ ನಿಂತು ಜಿಎಸ್‌ಟಿ ತೆರಿಗೆ ಇಳಿಕೆ ಘೋಷಿಸಿದ್ದರು. ಇದೀಗ ಈ ಘೋಷಣೆ ಜಾರಿಗೆ ಬರುತ್ತಿದೆ. ದಸರಾಗೆ ಅಂದರೆ ಸೆಪ್ಟೆಂಬರ್ 22ರಂದು ಹೊಸ ಜಿಎಸ್‌ಟಿ ನೀತಿ ಜಾರಿಯಾಗುತ್ತಿದೆ. ಹಲವು ಜನಪರ ಸುಧಾರಣೆ ತರಲಾಗಿದೆ. ಈ ಕುರಿತು ನವದೆಹಲಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ಕೇಂದ್ರ…

Read More

 ಧರ್ಮಸ್ಥಳ ಪ್ರಕರಣ: ದೂರುದಾರ ಚಿನ್ನಯ್ಯ ಮತ್ತೆ 3 ದಿನ SIT ಕಸ್ಟಡಿಗೆ- ನ್ಯಾಯಾಲಯ ಆದೇಶ

 ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ದೂರುದಾರ ಮಾಸ್ಕ್ ಮ್ಯಾನ್ ನನ್ನು ಮತ್ತೆ 3 ದಿನ ಎಸ್ ಐ ಟಿ ಕಸ್ಟಡಿಗೆ ನೀಡಿ ಬೆಳ್ತಂಗಡಿ ನ್ಯಾಯಾಲಯ ಆದೇಶ ಹೊರಡಿಸಿದೆ. ಸುದೀರ್ಘ ವಿಚಾರಣೆ ನಡೆಸಿದ ಎಸ್ ಐ ಟಿ ಪೊಲೀಸರು ಮಾಸ್ಕ್ ಮ್ಯಾನ್ ನನ್ನು ಕೋರ್ಟ್ ಗೆ ಹಾಜರುಪಡಿಸಿ ನಂತರ ತಮ್ಮ ವಶಕ್ಕೆ ನೀಡುವಂತೆ ಕೇಳಿಕೊಂಡಿದ್ದರು. ಪೊಲೀಸರ ಮನವಿ ಸ್ವೀಕರಿಸಿದ ಕೋರ್ಟ್ ಮಾಸ್ಕ್ ಚಿನ್ನಯ್ಯನನ್ನು ಮತ್ತೆ 3 ದಿನ ಎಸ್ ಐ ಟಿ ವಶಕ್ಕೆ ನೀಡಿ ಬೆಳ್ತಂಗಡಿ ನ್ಯಾಯಾಲಯ ಆದೇಶ ಹೊರಡಿಸಿದೆ….

Read More

ಸೌಜನ್ಯ ಕೊಲೆ ಪ್ರಕರಣ: ಕುಟುಂಬಸ್ಥರು ಆರೋಪಿಸಿದವರಿಗೆ ಎಸ್‌ಐಟಿ ಬುಲಾವ್- ಕಚೇರಿಗೆ ಹಾಜರಾದ ಉದಯ್ ಜೈನ್

ಧರ್ಮಸ್ಥಳ: ರಾಜ್ಯಾದ್ಯಂತ ಭಾರೀ ಸಂಚಲನ ಮೂಡಿಸಿರುವ ಧರ್ಮಸ್ಥಳ ಸೌಜನ್ಯ ಕೊಲೆ ಪ್ರಕರಣದ ತನಿಖೆಯನ್ನು ವಿಶೇಷ ತನಿಖಾ ದಳ (SIT) ಕೈಗೆತ್ತಿಕೊಂಡಿದ್ದು, ಆರೋಪಕ್ಕೊಳಗಾಗಿರುವವರನ್ನು ವಿಚಾರಣೆ ನಡೆಸುತ್ತಿದೆ. ಈ ವಿಚಾರಣೆಗೆ ಒಳಗಾಗಿರುವವರಲ್ಲಿ ಒಬ್ಬರಾದ ಉದಯ್ ಜೈನ್, ತಾವು ಯಾವುದೇ ತನಿಖೆಗೂ ಸಿದ್ಧವಿದ್ದು, ಮತ್ತೊಮ್ಮೆ ತಮ್ಮ ಬ್ರೈನ್ ಮ್ಯಾಪಿಂಗ್ ಮಾಡಲು ಕೂಡ ಸಿದ್ಧರಿರುವುದಾಗಿ ತಿಳಿಸಿದ್ದಾರೆ. ಎಸ್‌ಐಟಿ ಕಚೇರಿಗೆ ಉದಯ್ ಜೈನ್ ಹಾಜರು:ಸೌಜನ್ಯ ಕುಟುಂಬಸ್ಥರು ಆರೋಪ ಮಾಡಿರುವವರಲ್ಲಿ ಒಬ್ಬರಾದ ಉದಯ್ ಜೈನ್, ಎಸ್‌ಐಟಿ ಕಚೇರಿಗೆ ಹಾಜರಾಗಿದ್ದಾರೆ. “ನಿನ್ನೆ ರಾತ್ರಿ ಎಸ್‌ಐಟಿ ನನಗೆ ಕರೆ…

Read More