ಮಗಳೊಂದಿಗೆ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಶರಣಾದ ಮಹಿಳೆ..!
ವರದಕ್ಷಿಣೆ ಕಿರುಕುಳ ತಾಳಲಾರದೆ ಉಪನ್ಯಾಸಕಿಯೊಬ್ಬರು ಮಗಳೊಂದಿಗೆ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ರಾಜಸ್ಥಾನದ ಜೋಧ್ಪುರದಲ್ಲಿ ನಡೆದಿದೆ. ಮಹಿಳೆ ಮೂರು ವರ್ಷದ ಮಗಳೊಂದಿಗೆ ಬೆಂಕಿ ಹಚ್ಚಿಕೊಂಡಿದ್ದರು. ಸಂಜು ಬಿಷ್ಣೋಯ್ ಎಂಬ ಮಹಿಳೆ ತನ್ನ ಪತಿ ಮತ್ತು ಅತ್ತೆ-ಮಾವ ವರದಕ್ಷಿಣೆ ಕಿರುಕುಳದಿಂದ ಬೇಸತ್ತು ಈ ಭೀಕರ ಕೃತ್ಯ ಎಸಗಿದ್ದಾಳೆ. ಮಗು ಸ್ಥಳದಲ್ಲೇ ಸಾವನ್ನಪ್ಪಿದರೆ, ಸಂಜು ಶನಿವಾರ ಬೆಳಗ್ಗೆ ಚಿಕಿತ್ಸೆಯ ಸಮಯದಲ್ಲಿ ಸಾವನ್ನಪ್ಪಿದ್ದಾರೆ. ಜೋಧ್‌ಪುರದ ದಂಗಿಯಾವಾಸ್ ಪೊಲೀಸ್ ಠಾಣೆ ಪ್ರದೇಶದ ಸರ್ನಾದಾ ಗ್ರಾಮದಲ್ಲಿರುವ ಅವರ ನಿವಾಸದಲ್ಲಿ ಈ ಘಟನೆ ನಡೆದಿದೆ….

