ಮಕ್ಕಳ ನಾಪತ್ತೆ, ಅಪಹರಣ ಪ್ರಕರಣ : ನಾಲ್ಕನೇ ಸ್ಥಾನದಲ್ಲಿ ದಕ್ಷಿಣ ಕನ್ನಡ ಜಿಲ್ಲೆ
ಬೆಂಗಳೂರು : ಕಳೆದ ಐದು ವರ್ಷದ ಅವಧಿಯಲ್ಲಿ ರಾಜ್ಯಾದ್ಯಂತ 14 ಸಾವಿರಕ್ಕಿಂತ ಹೆಚ್ಚು ಮಕ್ಕಳ ಅಪಹರಣವಾಗಿದ್ದು, ಈ ಪೈಕಿ 1,336 ಮಕ್ಕಳ ಅಪಹರಣ ಪ್ರಕರಣಗಳು ಇನ್ನೂ ನಿಗೂಢವಾಗಿ ಉಳಿದಿವೆ ಎಂದು ಗೃಹಸಚಿವ ಜಿ.ಪರಮೇಶ್ವರ್ ಮಂಗಳವಾರ ವಿಧಾನ ಪರಿಷತ್‌ನಲ್ಲಿ ತಿಳಿಸಿದ್ದಾರೆ. ಕಿಡ್ನಾಪ್ ಹಾಗೂ ನಿಗೂಢವಾಗಿ ನಾಪತ್ತೆಯಾದವರ ಪೈಕಿ ಹೆಣ್ಣು ಮಕ್ಕಳೇ ಹೆಚ್ಚು. ಮಕ್ಕಳ ನಾಪತ್ತೆ ಪ್ರಕರಣದಲ್ಲಿ ಬೆಂಗಳೂರು ಅಗ್ರಸ್ಥಾನದಲ್ಲಿದ್ದರೆ ಕರಾವಳಿ ಜಿಲ್ಲೆಗಳಾದ ಉಡುಪಿ ಮತ್ತು ದಕ್ಷಿಣ ಕನ್ನಡ ಕ್ರಮವಾಗಿ 3 ಮತ್ತು 4ನೇ ಸ್ಥಾನದಲ್ಲಿವೆ. ರಾಜ್ಯದಲ್ಲಿ ಮಕ್ಕಳ ಅಪಹರಣವು…

