ಉಳ್ಳಾಲ ಮೊಸರು ಕುಡಿಕೆ ಮೆರವಣಿಗೆಯಲ್ಲಿ ಮಹಿಳಾ ಪೊಲೀಸರ ಜೊತೆ ಅಸಭ್ಯ ವರ್ತನೆ – ಇಬ್ಬರ ಬಂಧನ
ಉಳ್ಳಾಲ: ತೊಕ್ಕೊಟ್ಟಿನಲ್ಲಿ ಶನಿವಾರ ರಾತ್ರಿ ನಡೆದಿದ್ದ ಮೊಸರು ಕುಡಿಕೆ ಉತ್ಸವದ ಶೋಭಾಯಾತ್ರೆಯಲ್ಲಿ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿ ಮಹಿಳಾ ಪೊಲೀಸ್ ಸಿಬ್ಬಂದಿಗೆ ಅಶ್ಲೀಲ ಕೈ ಸನ್ನೆ ಮಾಡಿ, ಕಿರುಕುಳ ನೀಡಿದ ಆರೋಪದಲ್ಲಿ ಇಬ್ಬರು ಆರೋಪಿಗಳನ್ನು ಉಳ್ಳಾಲ ಪೊಲೀಸರು ಬಂಧಿಸಿದ್ದಾರೆ. ಅಸೈಗೋಳಿ ನಿವಾಸಿ ದೀಪಕ್ ಮತ್ತು ತೊಕ್ಕೊಟ್ಟು ನಿವಾಸಿ ಕಿರಣ್ ಬಂಧಿತ ಆರೋಪಿಗಳು. ತೊಕ್ಕೊಟ್ಟುವಿನ ಜೈ ವೀರ ಮಾರುತಿ ವ್ಯಾಯಾಮ ಶಾಲೆಯ ವತಿಯಿಂದ ನಡೆದ ಮೊಸರು ಕುಡಿಕೆ ಉತ್ಸವದ ಶೋಭಾಯಾತ್ರೆಯ ಸಂದರ್ಭದಲ್ಲಿ ಈ ಘಟನೆ ನಡೆದಿದೆ ಎಂದು ತಿಳಿದು ಬಂದಿದೆ….

