Headlines

ಬೆಳ್ತಂಗಡಿ: ಅಕ್ರಮ ಗಾಂಜಾ ದಾಸ್ತಾನು ಮತ್ತು ಮಾರಾಟ ಪ್ರಕರಣ- ತಲೆಮರೆಸಿಕೊಂಡಿದ್ದ ಆರೋಪಿ ಅರೆಸ್ಟ್..!

ಬೆಳ್ತಂಗಡಿ: ಅಕ್ರಮ ಗಾಂಜಾ ದಾಸ್ತಾನು ಮತ್ತು ಮಾರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಳ್ತಂಗಡಿ ಪೊಲೀಸರಿಂದ ತುಂಬಾ ಸಮಯದಿಂದ ತಲೆಮರಿಸಿಕೊಂಡಿದ್ದ ಆರೋಪಿಯನ್ನು ಆ.14 ರಂದು ಕಾರ್ಕಳದಲ್ಲಿ ಬಂಧಿಸಿ, ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ನ್ಯಾಯಾಲಯವು ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿ ಆದೇಶ ಹೊರಡಿಸಿದೆ. ಬಂಧಿತ ಆರೋಪಿಯನ್ನು ಬೆಳ್ತಂಗಡಿ ತಾಲೂಕಿನ ಕುವೆಟ್ಟು ಗ್ರಾಮದ ನಿವಾಸಿ ಮಹಮ್ಮದ್ ರಫೀಕ್ ಅಲಿಯಾಸ್ ಮದ್ದಡ್ಕ ರಫೀಕ್ (39) ಎಂದು ಗುರುತಿಸಲಾಗಿದೆ. ಬೆಳ್ತಂಗಡಿ ಪೊಲೀಸ್‌ ಠಾಣೆಯ ಇನ್ಸ್ ಪೆಕ್ಟರ್ ಸುಬ್ಬಾಪುರ್ ಮರ್ ನೇತೃತ್ವದ ಪೊಲೀಸರ ತಂಡ ಆರೋಪಿಯನ್ನು ಬಂಧಿಸುವ…

Read More

ಬಹುಕೋಟಿ ವಂಚನೆ ಪ್ರಕರಣ: ಆರೋಪಿ ರೋಶನ್ ಸಲ್ದಾನ ವಿರುದ್ಧದ ನಾಲ್ಕು ಪ್ರಕರಣಗಳು ಮತ್ತೆ ಸಿಐಡಿಗೆ ಹಸ್ತಾಂತರ

ಮಂಗಳೂರು: ಬಹುಕೋಟಿ ವಂಚನೆ ಪ್ರಕರಣದ ಆರೋಪಿ ರೋಶನ್ ಸಲ್ದಾನನ ವಿರುದ್ಧ ದಾಖಲಾಗಿದ್ದ ನಾಲ್ಕು ಪ್ರಕರಣಗಳನ್ನು ಮತ್ತೆ ಸಿಐಡಿಗೆ ಹಸ್ತಾಂತರಿಸಿ ಡೈರೆಕ್ಟರ್ ಜನರಲ್ ಆ್ಯಂಡ್ ಇನ್‌ಸ್ಪೆಕ್ಟರ್ ಜನರಲ್ ಆಫ್ ಪೊಲೀಸ್ (ಡಿಜಿ-ಐಜಿಪಿ) ಪಿ. ಹರಿಶೇಖರನ್ ಬುಧವಾರ ಆದೇಶ ಹೊರಡಿಸಿದ್ದಾರೆ. ಉದ್ಯಮಿಗಳಿಗೆ ಸಾಲ ಕೊಡುವುದಾಗಿ ಹೇಳಿ ಬಳಿಕ ವಂಚಿಸುತ್ತಿದ್ದ ರೋಶನ್ ಸಲ್ದಾನನನ್ನು ಮಂಗಳೂರು ಪೊಲೀಸರು ಬಂಧಿಸಿದ್ದರು. ಆ ಬಳಿಕ ಆತನ ವಿರುದ್ಧ ವಂಚನೆಗೊಳಗಾದವರು ದೂರು ನೀಡಿದ್ದರು. ಇದೀಗ ಈತನ ವಿರುದ್ಧ ಮಂಗಳೂರಿನ ಸೆನ್ ಮತ್ತು ಕಂಕನಾಡಿ ನಗರ ಠಾಣೆಯಲ್ಲಿ ದಾಖಲಾಗಿದ್ದ ನಾಲ್ಕು…

Read More

79ನೇ ಸ್ವಾತಂತ್ರ್ಯ ದಿನಾಚರಣೆ : ಪ್ರಧಾನಿ ಮೋದಿಯಿಂದ ದೇಶದ ಜನತೆಗೆ 5 ಪ್ರಮುಖ ಯೋಜನೆಗಳ ಘೋಷಣೆ.!

ನವದೆಹಲಿ : ದೇಶಾದ್ಯಂತ ಇಂದು ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮ ಮನೆ ಮಾಡಿದ್ದು, ದೆಹಲಿಯ ಕೆಂಪುಕೋಟೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಸತತ 12 ನೇ ಬಾರಿಗೆ ಸ್ವಾತಂತ್ರ್ಯ ದಿನಾಚರಣೆಯ ಧ್ವಜಾರೋಹಣ ನೆರವೇರಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರು ದೆಹಲಿಯ ಐತಿಹಾಸಿಕ ಕೆಂಪು ಕೋಟೆಯಿಂದ 79 ನೇ ಸ್ವಾತಂತ್ರ್ಯ ದಿನಾಚರಣೆಗೆ ಅಂಗವಾಗಿ ಧ್ವಜಾರೋಹಣ ನೆರವೇರಿಸಿ ದೇಶವನ್ನುದ್ದೇಶಿಸಿ ಮಾತನಾಡಿದ್ದಾರೆ. ಈ ಬಾರಿಯ ಸ್ವಾತಂತ್ರ್ಯ ದಿನಾಚರಣೆಗೆ ನಯಾ ಭಾರತ್ ಧ್ಯೇಯವಾಕ್ಯವಾಗಿದೆ. ಸ್ವಾತಂತ್ರ್ಯದ ಮಹಾನ್ ಹಬ್ಬವು ಸಂಕಲ್ಪ. ಇದು ಸಾಮೂಹಿಕ ಸಾಧನೆಗಳ ಮಹಾನ್…

Read More

ಕುಲಾಲ ವೇದಿಕೆ ಹೋಸಬೆಟ್ಟು ಮಂಜೇಶ್ವರ ಇದರ ಅಶ್ರಯದಲ್ಲಿ 79 ನೇ ಸ್ವಾತಂತ್ರೋತ್ಸವ

ಕುಲಾಲ ವೇದಿಕೆ ಹೋಸಬೆಟ್ಟು ಮಂಜೇಶ್ವರ ಇದರ ಅಶ್ರಯದಲ್ಲಿ 79 ನೇ ಸ್ವಾತಂತ್ರೋತ್ಸವ 79 ನೇ ಸ್ವಾತಂತ್ರೋತ್ಸವದ ಪ್ರಯುಕ್ತ ಧ್ವಜಾರೋಹಣ ಕಾರ್ಯಕ್ರಮವು ಮಂಜೇಶ್ವರ ಹೊಸಬೆಟ್ಟು ಕುಲಾಲಸಮಾಜ ಮಂದಿರ ವಠಾರದಲ್ಲಿ ಜರುಗಿತು. ಮಂಜೇಶ್ವರ ಪಂಚಾಯತ್ ಸ್ಥಾಯಿ ಸಮಿತಿ ಅಧ್ಯಕ್ಷರಾದ ಶ್ರೀಯುತ ಯಾಧವ ಬಡಾಜೆ ಧ್ವಜಾರೋಹಣಗೈದರು ಮಜಿಬೈಲ್ ಕೊ_ಒಪರೆಟಿವ್ ಭ್ಯಾಂಕ್ ಕಾರ್ಯದರ್ಶಿಯಾದ ಶ್ರೀಯುತ ರಾಮ್ ದಾಸ್ ಶುಭಸಂನಗೈದರು ಹಿರಿಯರಾದ ಶ್ರೀಯುತ ಶಿವಾನಂದ ಹೊಸಬೆಟ್ಟು ಹಾಗೂ ವೇದಿಕೆ ಸದಸ್ಯರು ಉಪಸ್ಥಿತರಿದ್ದರು ಈಶ್ವರ ಮಾಸ್ಟರ್ ಸ್ವಾಗತಿಸಿದರು.

Read More

12 ವರ್ಷದ ಹಿಂದೆ ಬಂಟ್ವಾಳದ ಬಾಲಕಿ ನಾಪತ್ತೆ- ಎಸ್‌ಐಟಿಗೆ ದೂರು

ಧರ್ಮಸ್ಥಳದ ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡಕ್ಕೆ (ಎಸ್‌ಐಟಿ), ಬಂಟ್ವಾಳ ತಾಲ್ಲೂಕಿನ ಕಾವಳ ಮೂಡೂರು ಗ್ರಾಮದ ಬಾಲಕಿಯೊಬ್ಬಳು 2012ರಲ್ಲಿ ನಾಪತ್ತೆಯಾದ ಬಗ್ಗೆ ಬಾಲಕಿಯ ಸಹೋದರರು ಗುರುವಾರ ದೂರು ಸಲ್ಲಿಕೆ ಆಗಿದೆ. ಬಾಲಕಿ ಹೇಮಾವತಿಯ ಅಣ್ಣ ನಿತಿನ್‌ ದೇವಾಡಿಗ ಅವರು ಬೆಳ್ತಂಗಡಿಯಲ್ಲಿರುವ ಎಸ್‌ಐಟಿ ಕಚೇರಿಗೆ ತೆರಳಿ ದೂರು ನೀಡಿದರು. ಬಳಿಕ ಸುದ್ದಿಗಾರರ ಜೊತೆ ಮಾತನಾಡಿದ ಅವರು, ‘ನಮ್ಮ ತಂಗಿ ಧರ್ಮಸ್ಥಳಕ್ಕೆ ಹೋಗುತ್ತೇನೆ ಎಂದು ಹೇಳಿ 12 ವರ್ಷ ಹಿಂದೆ ಮನೆ ಸಮೀಪದ ಮಹಿಳೆಯೊಬ್ಬರ ಜೊತೆ ಹೋಗಿದ್ದವಳು ಇವರೆಗೂ ಮನೆಗೆ…

Read More

ಆರ್‌ಬಿಐನಿಂದ ಹೊಸ ನಿಯಮ: ಇಂದಿನಿಂದ ಚೆಕ್‌ಗಳು ಕೆಲವೇ ಗಂಟೆಗಳಲ್ಲಿ ಕ್ಲಿಯರ್!

ಬೆಂಗಳೂರು: ಭಾರತೀಯ ರಿಸರ್ವ್ ಬ್ಯಾಂಕ್ (ಆರ್‌ಬಿಐ) ಚೆಕ್ ಕ್ಲಿಯರೆನ್ಸ್ ಪ್ರಕ್ರಿಯೆಯಲ್ಲಿ ಮಹತ್ವದ ಬದಲಾವಣೆಯನ್ನು ತರುತ್ತಿದ್ದು, ಇಂದಿನಿಂದ (ಆಗಸ್ಟ್ 14) ಹೊಸ ನಿಯಮ ಜಾರಿಗೆ ಬರಲಿದೆ. ಈ ಹೊಸ ವ್ಯವಸ್ಥೆಯಡಿ, ಚೆಕ್‌ ಸಲ್ಲಿಸಿದ ಕೆಲವೇ ಗಂಟೆಗಳಲ್ಲಿ ಹಣ ವರ್ಗಾವಣೆಯಾಗಲಿದೆ. ಪ್ರಸ್ತುತ, ಚೆಕ್ ನಗದೀಕರಣಕ್ಕೆ ಎರಡು ದಿನಗಳವರೆಗೆ ಕಾಯಬೇಕಾಗುತ್ತದೆ. ಆದರೆ, ಹೊಸ ನಿಯಮದ ಪ್ರಕಾರ, ಬ್ಯಾಂಕ್‌ಗಳು ಚೆಕ್‌ಗಳನ್ನು ಸ್ವೀಕರಿಸಿದ ತಕ್ಷಣ ಸ್ಕ್ಯಾನ್ ಮಾಡಿ, ನಿರಂತರವಾಗಿ ಪರಿಶೀಲನೆಗೆ ಕಳುಹಿಸುತ್ತವೆ. ಇದರಿಂದಾಗಿ ಕೆಲವೇ ಗಂಟೆಗಳಲ್ಲಿ ಹಣ ವರ್ಗಾವಣೆಗೆ ಅನುಮೋದನೆ ದೊರೆಯಲಿದೆ. ಈ ಬದಲಾವಣೆಯ ಕುರಿತು…

Read More

ಮಂಗಳೂರಿನಲ್ಲಿ ಮತ್ತೆ ಮಳೆ ಅಬ್ಬರ: ಆಗಸ್ಟ್ 20 ರವರೆಗೂ ಭಾರಿ ಮಳೆ ಮುನ್ಸೂಚನೆ

ಮಂಗಳೂರು: ಕರಾವಳಿ ಜಿಲ್ಲೆಗಳಲ್ಲಿ ಕಳೆದ ಕೆಲವು ದಿನಗಳಿಂದ ತಗ್ಗಿದ ಮಳೆ ಮತ್ತೆ ಪ್ರಾರಂಭವಾಗಿದೆ. ಮಂಗಳೂರಿನಲ್ಲಿ ಬೆಳಿಗ್ಗೆಯಿಂದಲೇ ಭಾರೀ ಮಳೆಯಾಗುತ್ತಿದೆ. ಅಲ್ಲದೆ ಉತ್ತರ ಹಾಗೂ ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಿಗೆ ಭಾರಿ ಮಳೆ ಮುನ್ಸೂಚನೆ ಇರುವ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಕೊಡಲಾಗಿದೆ. ಒಂದು ವಾರ ನೈಋುತ್ಯ ಮಾನ್ಸೂನ್‌ ಚುರುಕಾಗಲಿದ್ದು, ಕರಾವಳಿ ಸೇರಿದಂತೆ ಒಳನಾಡಿನ ಕೆಲವು ಜಿಲ್ಲೆಗಳಿಗೆ ಹವಾಮಾನ ಇಲಾಖೆ ಎಚ್ಚರಿಕೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ , ಉಡುಪಿ, ಉತ್ತರ ಕನ್ನಡ, ಬೆಳಗಾವಿ ,ಬೀದರ್, ಕಲಬುರ್ಗಿ, ವಿಜಯಪುರ, ಚಿಕ್ಕಮಗಳೂರು ಹಾಗೂ…

Read More

ಮಂಗಳೂರು : ಅನೈತಿಕ ಪೊಲೀಸ್ ಗಿರಿ ಪ್ರಕರಣ – 6 ಮಂದಿ ಸೆರೆ

ಮಂಗಳೂರು : ಮಂಗಳೂರಲ್ಲಿ ಮತ್ತೆ ಅನೈತಿಕ ಪೊಲೀಸ್ ಗಿರಿ ನಡೆದಿದ್ದು, ಯುವತಿಯೊಂದಿಗೆ ಮಾತನಾಡುತ್ತಿದ್ದ ಯುವಕನ ಮೇಲೆ ನೈತಿಕ ಪೊಲೀಸ್‌ಗಿರಿ ನಡೆಸಿದ ಘಟನೆ ನಡೆದಿದೆ. ಘಟನೆ ಸಂಬಂಧ ಪಾಂಡೇಶ್ವರ ಪೊಲೀಸರು ಆರು ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ. ಆರೋಪಿಗಳನ್ನು ಗಣೇಶ್, ಶ್ರೇಯಸ್, ಚಿಂಚು, ಚಂದನ್, ನಾಗರಾಜ್ ಹಾಗು ರಾಮಚಂದ್ರ ಎಂದು ಗುರುತಿಸಲಾಗಿದೆ.ಆಗಸ್ಟ್ 11ರಂದು ಕಾಲೇಜು ವಿದ್ಯಾರ್ಥಿನಿ ಮತ್ತು ಯುವಕನೊಬ್ಬ ನಗರದ ಸ್ಟೇಟ್‌ಬ್ಯಾಂಕ್ ಸಮೀಪದ ಸರ್ವಿಸ್ ಬಸ್ ನಿಲ್ದಾಣದ ಬಳಿ ನಡೆದುಕೊಂಡು ಹೋಗುತ್ತಿದ್ದ ವೇಳೆ ಆರೋಪಿಗಳು ತಡೆದು ಅಡ್ಡಿಪಡಿಸಿ ಜೀವಬೆದರಿಕೆ ಹಾಕಿದ್ದರು…

Read More

ಸಾಮಾಜಿಕ ಜಾಲತಾಣದಲ್ಲಿ ನಿಂದನೆ ಆರೋಪ: ಬೆಳ್ತಂಗಡಿ, ವೇಣೂರು ಠಾಣೆಯಲ್ಲಿ 6 ಪ್ರತ್ಯೇಕ ಪ್ರಕರಣಗಳು ದಾಖಲು

ಬೆಳ್ತಂಗಡಿ; ಸಾಮಾಜಿಕ ಜಾಲತಾಣಗಳಲ್ಲಿ ನಿಂದಿಸಿರುವ ಬಗ್ಗೆ ಬೆಳ್ತಂಗಡಿ ಹಾಗೂ ವೇಣೂರು ಪೊಲೀಸ್ ಠಾಣೆಗಳಲ್ಲಿ ಆರು ಪ್ರತ್ಯೇಕ ಪ್ರಕರಣಗಳನ್ನು ದಾಖಲಿಸಲಾಗಿದೆ. ಹುಬ್ಬಳ್ಳಿ ನಿವಾಸಿ ಅಜಿತ್ ನಾಗಪ್ಪ ಬಸಾಪುರ್ ಎಂಬವರು ದೂರು ನೀಡಿದ್ದು, ಗಿರೀಶ್ ಮಟ್ಟಣ್ಣನವರ್ ಕುಡ್ಲ ರಾಂ ಪೇಜ್ ಗೆ ನೀಡಿದ ಸಂದರ್ಶನದಲ್ಲಿ ಜೈನರ ಬಗ್ಗೆ ತುಚ್ಚವಾಗಿ ಮಾತನಾಡಿರುವುದಾಗಿ ಗಿರೀಶ್ ಮಟ್ಟಣ್ಣನವರ್ ಹಾಗೂ ಕುಡ್ಲ ರಾಂ ಪೇಜ್ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಅದೇ ರೀತಿ ಬೆಳ್ತಂಗಡಿ ನಿವಾಸಿ ವಿಜಯ ಎಂಬವರ ದೂರಿನಂತೆ ವಿಕಾಸ್ ವಿಕ್ಕಿ ಹಿಂದು ಎಂಬ ಫೇಸ್…

Read More

ಧರ್ಮಸ್ಥಳ ಪ್ರಕರಣ: ಅನಾಮಿಕನಿಗೆ ಮಂಪರ್‌ ಪರೀಕ್ಷೆ ನಡೆಸಲು ಎಸ್‌ಐಟಿ ಚಿಂತನೆ?

ಮಂಗಳೂರು: ಧರ್ಮಸ್ಥಳ ಸ್ನಾನಘಟ್ಟದ ಬಳಿ ಅನಾಮಿಕನ ಮಾಹಿತಿದಾರರಿಂದ ಗುರುತಿಸಲ್ಪಟ್ಟ 13 ನೇ ಸ್ಥಳದಲ್ಲಿ ವಿಶೇಷ ತನಿಖಾ ತಂಡ (ಎಸ್‌ಐಟಿ) ಮಂಗಳವಾರ ಜಿಪಿಆರ್ ಬಳಸಿ ಶೋಧ ನಡೆಸಿತು. ಆದರೆ ಯಾವುದೇ ಅಸ್ಥಿಪಂಜರದ ಅವಶೇಷಗಳು ಪತ್ತೆಯಾಗಿಲ್ಲ. ಮಾಹಿತಿದಾರರು ಗುರುತಿಸಿದ ಹೆಚ್ಚಿನ ಸ್ಥಳಗಳು ಯಾವುದೇ ಅವಶೇಷಗಳನ್ನು ಸಿಗದ ಕಾರಣ ಎಸ್‌ಐಟಿ ದೂರುದಾರರನ್ನು ಮಂಪರ್‌ ಪರೀಕ್ಷೆಗೆ ಒಳಪಡಿಸುವ ಬಗ್ಗೆ ಚಿಂತಿಸಿದೆ ಎಂದು ವರದಿಯಾಗಿದೆ. ಕೆಲವು ಪ್ರದೇಶಗಳನ್ನು ಅಗೆಯುವ ಯಂತ್ರಗಳನ್ನು ಬಳಸಿ ಅಗೆದಾಗಲೂ ಯಾವುದೇ ಪುರಾವೆಗಳು ಸಿಗಲಿಲ್ಲ. ಜುಲೈ 28 ರಿಂದ, ಮಾಹಿತಿದಾರರು 16 ಸ್ಥಳಗಳನ್ನು…

Read More