ಧರ್ಮಸ್ಥಳ ದೇವಾಲಯಕ್ಕೆ ಬಾಂಬ್ ಇರಿಸಿ ಸ್ಫೋಟಿಸಲು ಶಂಕಿತ ಉಗ್ರನ ಸಂಚು: ಇ.ಡಿ.ತನಿಖೆಯಲ್ಲಿ ಬಯಲು
ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣದ ಪ್ರಮುಖ ಆರೋಪಿ ಸೈಯದ್ ಯಾಸಿನ್‌ನ ಬ್ಯಾಂಕ್ ಖಾತೆಯಲ್ಲಿದ್ದ 29 ಸಾವಿರ ರೂಪಾಯಿ ಹಣವನ್ನು ಜಾರಿ ನಿರ್ದೇಶನಾಲಯವು(ಇ.ಡಿ.) ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆಯಡಿ (ಪಿಎಂಎಲ್‌ಎ) ಮುಟ್ಟುಗೋಲು ಹಾಕಿಕೊಂಡಿದೆ. ಮತ್ತೊಂದೆಡೆ ಶಂಕಿತ ಉಗ್ರರು ಧರ್ಮಸ್ಥಳ ದೇವಾಲಯದಲ್ಲಿ ಬಾಂಬ್ ಇರಿಸಿ ಸ್ಫೋಟಿಸಲು ಸಂಚು ರೂಪಿಸಿದ್ದರು ಎಂಬ ಸ್ಫೋಟಕ ವಿಚಾರವನ್ನ ಇ.ಡಿ. ಬಯಲಿಗೆಳೆದಿದೆ. ಪ್ರಮುಖ ಆರೋಪಿ ಮೊಹಮ್ಮದ್ ಶಾರಿಕ್ ಈ ಬಾಂಬ್ ಅನ್ನು ಧರ್ಮಸ್ಥಳದ ಮಂಜುನಾಥಸ್ವಾಮಿ ದೇವಾಲಯದಲ್ಲಿ ಇರಿಸಿ ಸ್ಫೋಟಿಸಲು ಸಂಚು ರೂಪಿಸಿದ್ದ. ಬಾಂಬ್…

