Headlines

ವಿಟ್ಲ: ಕಾಣಿಕೆ ಹುಂಡಿ ಒಡೆದು ಹಣ ದೋಚಿದ ಪ್ರಕರಣ- ಮೂವರು ಆರೋಪಿಗಳ ಬಂಧನ

ವಿಟ್ಲ: ಧಾರ್ಮಿಕ ಕೇಂದ್ರದ ಕಾಣಿಕೆ ಹುಂಡಿಯನ್ನು ಒಡೆದು ಹಣ ದೋಚಿದ ಪ್ರಕರಣಕ್ಕೆ ಸಂಬಂಧಿಸಿ ಮೂವರು ಆರೋಪಿಗಳನ್ನು ವಿಟ್ಲ ಪೊಲೀಸರು ಬಂಧಿಸಿದ್ದಾರೆ‌. ಬಂಧಿತರನ್ನು ವಿಟ್ಲ ಕಸಬಾ ಗ್ರಾಮದ ತ್ವಾಹಿದ್‌ (19), ಉಮ್ಮರ್‌ ಫಾರೂಕ್‌ (18), ನಬೀಲ್‌( 18) ಎಂದು ಗುರುತಿಸಲಾಗಿದೆ. ಕನ್ಯಾನ ಗ್ರಾಮದ ದೇಲಂತಬೆಟ್ಟು ನಿವಾಸಿ ಡಿ.ನಾರಾಯಣ ರಾವ್ ನೀಡಿದ ದೂರಿನಂತೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ನಾರಾಯಣ ಅವರು ಅಧ್ಯಕ್ಷರಾಗಿದ್ದ ಧಾರ್ಮಿಕ ಶ್ರಧ್ದಾ ಕೇಂದ್ರಕ್ಕೆ ಸಂಬಂಧಿಸಿದ ಕಾಣಿಕೆ ಕಟ್ಟೆಯನ್ನು ಕನ್ಯಾನ ಗ್ರಾಮದ ದೇಲಂತ ಬೆಟ್ಟು ಶಾಲಾ…

Read More

ಬೆಳ್ತಂಗಡಿ: 5 ವರ್ಷಗಳ ಹಿಂದೆ ಮೃತದೇಹ ಹೂತು ಹಾಕಿರುವುದಾಗಿ ಮತ್ತೋರ್ವ ವ್ಯಕ್ತಿಯಿಂದ ಎಸ್‌ಐಟಿಗೆ ಹೊಸ ದೂರು

ಬೆಳ್ತಂಗಡಿ: ಧರ್ಮಸ್ಥಳದಲ್ಲಿ ನಡೆದಿದೆ ಎನ್ನಲಾಗುತ್ತಿರುವ ಸಾಮೂಹಿಕ ಹೂತು ಹಾಕಿದ ಪ್ರಕರಣ ಸಂಬಂಧ ಸ್ಥಾಪಿಸಿರುವ ವಿಶೇಷ ತನಿಖಾ ದಳದ (ಎಸ್ಐಟಿ) ಕಚೇರಿಗೆ 15 ವರ್ಷಗಳ ಹಿಂದೆ ನಡೆದಿದ್ದ ಮತ್ತೊಂದು ಅನುಮಾನಾಸ್ಪದ ಸಾವಿನ ಕುರಿತು ದೂರು ನೀಡಲಾಗಿದೆ. ಸಾಮಾಜಿಕ ಹೋರಾಟಗಾರ ಮತ್ತು ಇಚಿಲಂಪಾಡಿ ನಿವಾಸಿ ಜಯಂತ್ ಟಿ. ಈ ದೂರು ಸಲ್ಲಿಸಿದ್ದಾರೆ. ಸುಮಾರು 15 ವರ್ಷಗಳ ಹಿಂದೆ ಸಾವಿಗೀಡಾದ ಬಾಲಕಿಯ ಶವವನ್ನು ಯಾವುದೇ ಕಾನೂನು ಪ್ರಕ್ರಿಯೆ ನಡೆಸದೆ ಧರ್ಮಸ್ಥಳ ಗ್ರಾಮದಲ್ಲಿ ಹೂಳಲಾಗಿತ್ತು ಎಂದು ಜಯಂತ್ ಟಿ. ಆರೋಪಿಸಿದ್ದಾರೆ. “ಅದು ಕೊಲೆಯೋ…

Read More

ಧರ್ಮಸ್ಥಳ: ಅನಾಮಿಕ ದೂರುದಾರನಿಗೆ ಪೊಲೀಸ್ ಇನ್ಸ್‌ಪೆಕ್ಟರ್‌ನಿಂದ ಬೆದರಿಕೆ?

ಧರ್ಮಸ್ಥಳ: ನೂರಾರು ಹೆಣಗಳನ್ನು ಹೂಳಲಾಗಿದೆ ಎಂಬ ಪ್ರಕರಣಕ್ಕೆ ಸಂಬಂಧಿಸಿದ ಹಾಗೆ SIT ತಂಡದ ಪೊಲೀಸ್ ಇನ್ಸ್‌ಪೆಕ್ಟರ್ ಮಂಜುನಾಥ್ ಅವರು ದೂರುದಾರನನ್ನು ಕೇಸ್ ಹಿಂಪಡೆಯುವಂತೆ ಬೆದರಿಸುತ್ತಿದ್ದಾರೆ ಎಂದು ದೂರುದಾರನ ಪರ ವಕೀಲ SIT ಮುಖ್ಯಸ್ಥ ಪ್ರಣವ್ ಮೊಹಂತಿ ಅವರಿಗೆ ದೂರು ನೀಡಿದ್ದಾರೆ. ಮಂಜುನಾಥ್ ಅವರು ಆ. 1 ರಂದು ದೂರುದಾರನನ್ನು ಕೋಣೆಯಲ್ಲಿ ಕೂಡಿ ಹಾಕಿ ಕೇಸನ್ನು ಹಿಂಪಡೆಯುವಂತೆ ಮತ್ತು ಜೈಲಿಗೆ ಕಳಿಸುವುದಾಗಿ ಬೆದರಿಕೆ ಹಾಕಲಾಗಿದೆ. ಹಾಗೆಯೇ ವಿಡಿಯೋ ರೆಕಾರ್ಡ್ ಮಾಡಲಾಗಿದೆ ಎಂದು ದೂರಿನಲ್ಲಿ ಹೇಳಲಾಗಿದೆ. ಈ ಸಂಬಂಧ SIT…

Read More

ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಕೇಸ್ : ಮಂಗಳೂರಿನ 14 ಕಡೆಗಳಲ್ಲಿ ‘NIA’ ದಾಳಿ

ಮಂಗಳೂರು : ಕಳೆದ ಕೆಲವು ತಿಂಗಳ ಹಿಂದೆ ಮಂಗಳೂರಿನಲ್ಲಿ ಹಿಂದೂ ಕಾರ್ಯಕರ್ತ ಹಾಗೂ ರೌಡಿಶೀಟರ್ ಸುಹಾಸ್ ಶೆಟ್ಟಿಯನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಭೀಕರವಾಗಿ ಕೊಲೆ ಮಾಡಲಾಗಿತ್ತು. ಇದೀಗ ಈ ಒಂದು ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮಂಗಳೂರಲ್ಲಿ ಇಂದು NIA ಅಧಿಕಾರಿಗಳು 14 ಕಡೆ ಏಕಕಾಲದಲ್ಲಿ ದಾಳಿ ಮಾಡಿದ್ದಾರೆ. ಹೌದು ಸುಹಾಸ್ ಶೆಟ್ಟಿ, ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇಂದು ಮಂಗಳೂರಿನ 14 ಕಡೆ ಎನ್ಐಎ ಅಧಿಕಾರಿಗಳು ಏಕಾಏಕಿ ದಾಳಿ ನಡೆಸಿದ್ದಾರೆ. ಮಂಗಳೂರಿನ 14 ಕಡೆ ದಾಳಿ ನಡೆಸಿ ದಾಖಲೆ ಪರಿಶೀಲನೆ…

Read More

ಮೂಡುಬಿದಿರೆ: ಫೈನಾನ್ಸ್‌ ಆಫೀಸ‌ರ್ ನೇಣು ಬಿಗಿದು ಆತ್ಮಹತ್ಯೆ!!

ಮೂಡುಬಿದಿರೆ: ಕಳೆದ ಹಲವು ವರುಷಗಳಿಂದ ಆಳ್ವಾಸ್ ಶಿಕ್ಷಣ ಸಂಸ್ಥೆಯಲ್ಲಿ ಫೈನಾನ್ಸ್‌ ಆಫೀಸ‌ರ್ ಆಗಿ ದುಡಿದಿದ್ದ ರಾಜೇಶ್ ನಾಯ್ಕ ಅವರು ಗುರುವಾರ ಬೆಳ್ಮ ಣ್ ಕಾಡಿನಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ. ಕಾರ್ಕಳ ಠಾಣೆಯ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ರಾಜೇಶ್ ನಾಯ್ಕ ಮೂಲತಃ ಕಾಪು ನಿವಾಸಿಯಾಗಿದ್ದಾರೆ. ಪತ್ನಿ, ಒಂದು ಮಗು ಹಾಗೂ ಬಂಧುಗಳನ್ನು ಅಗಲಿದ್ದಾರೆ.

Read More

ಕರ್ನಾಟಕದಲ್ಲಿ ಏಮ್ಸ್ ಸ್ಥಾಪನೆ ಇಲ್ಲ: ಲೋಕಸಭೆಗೆ ಕೇಂದ್ರ ಸರ್ಕಾರ ಮಾಹಿತಿ

ನವದೆಹಲಿ: ಕರ್ನಾಟಕದಲ್ಲಿ ಏಮ್ಸ್ ಸ್ಥಾಪನೆಗೆ ಅನುಮೋದನೆ ದೊರೆತಿಲ್ಲ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ರಾಜ್ಯ ಸಚಿವ ಪ್ರತಾಪರಾವ್ ಜಾಧವ್ ಶುಕ್ರವಾರ ಲೋಕಸಭೆಗೆ ಮಾಹಿತಿ ನೀಡಿದರು. ಕಾಂಗ್ರೆಸ್ ಸಂಸದರಾದ ಜಿ.ಕುಮಾರ ನಾಯಕ್ ಮತ್ತು ಇ.ತುಕಾರಾಂ ಅವರು ಕೇಳಿದ ಪ್ರಶ್ನೆಗಳಿಗೆ ಉತ್ತರಿಸಿದ ಸಚಿವರು, ಪ್ರಧಾನ ಮಂತ್ರಿ ಸ್ವಾಸ್ಥ್ಯ ಸುರಕ್ಷಾ ಯೋಜನೆ (ಪಿಎಂಎಸ್ಎಸ್ವೈ) ಅಡಿಯಲ್ಲಿ ದೇಶದ ವಿವಿಧ ರಾಜ್ಯಗಳಲ್ಲಿ 22 ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆ (ಏಮ್ಸ್) ಸ್ಥಾಪನೆಗೆ ಅನುಮೋದನೆ ನೀಡಲಾಗಿದೆ ಎಂದು ಹೇಳಿದರು. ಆದರೆ, ಕರ್ನಾಟಕದಲ್ಲಿ…

Read More

ಧರ್ಮಸ್ಥಳ ಕೇಸ್: ಮಾಧ್ಯಮಗಳ ಮೇಲಿನ ನಿರ್ಬಂಧ ರದ್ದುಗೊಳಿಸಿದ ಹೈಕೋರ್ಟ್

ಧರ್ಮಸ್ಥಳ: ನೂರಾರು ಶವಗಳನ್ನು ಹೂತು ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿ.ಹರ್ಷೇಂದ್ರ ಕುಮಾರ್ ಅವರ ಬಗ್ಗೆ ಯಾವುದೇ ಸುದ್ದಿ ಪ್ರಸಾರ/ಪ್ರಕಟ ಮಾಡದಂತೆ ಮಾಧ್ಯಮಗಳನ್ನು ನಿರ್ಬಂಧಿಸಿ ವಿಚಾರಣಾ ನ್ಯಾಯಾಲಯ ಹೊರಡಿಸಿದ್ದ ಏಕಪಕ್ಷೀಯ ಪ್ರತಿಬಂಧಕಾದೇಶವನ್ನು ಹೈಕೋರ್ಟ್‌ ವಜಾಗೊಳಿಸಿದೆ. ಮಾಧ್ಯಮಗಳನ್ನು ನಿರ್ಬಂಧಿಸಿ ವಿಚಾರಣಾ ನ್ಯಾಯಾಲಯ ಹೊರಡಿಸಿದ್ದ ಪ್ರತಿಬಂಧಕಾದೇಶ ಪ್ರಶ್ನಿಸಿ ದಕ್ಷಿಣ ಕನ್ನಡದ ‘ಕುಡ್ಲ ರ‍್ಯಾಂಪೇಜ್‌’ ಯೂಟ್ಯೂಬ್ ಚಾನಲ್‌ನ ಪ್ರಧಾನ ಸಂಪಾದಕ ಅಜಯ್‌ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ, ಅರ್ಜಿಯನ್ನು ಭಾಗಶಃ ಪುರಸ್ಕರಿಸಿದೆ. ಕುಡ್ಲ ರ‍್ಯಾಂಪೇಜ್‌ ಪ್ರಧಾನ…

Read More

ಪುತ್ತೂರು: ರಿಕ್ಷಾ ಡಿಕ್ಕಿ-ಹೋಟೆಲ್ ಮಾಲೀಕ ಸುಭಾಷ್ ಕುಲಾಲ್ ಮೃತ್ಯು..!

ಪುತ್ತೂರು: ಆಟೋರಿಕ್ಷಾದಿಂದ ಇಳಿದು ರಸ್ತೆ ದಾಟುತ್ತಿದ್ದ ಹೋಟೆಲ್ ಮಾಲೀಕರೊಬ್ಬರಿಗೆ ಎದುರಿನಿಂದ ಬಂದ ಇನ್ನೊಂದು ರಿಕ್ಷಾ ಡಿಕ್ಕಿ ಹೊಡೆದ ಪರಿಣಾಮ, ಅವರು ಸ್ಥಳದಲ್ಲೇ ಮೃತಪಟ್ಟ ದಾರುಣ ಘಟನೆ ತಾಲೂಕಿನ ಕೌಡಿಚ್ಚಾರ್ ಮೈಂದನಡ್ಕ ರಸ್ತೆಯ ಪಾಪೆಮಜಲು ಎಂಬಲ್ಲಿ ನಡೆದಿದೆ.ಪಾಪೆಮಜಲು ನಿವಾಸಿ ಸುಭಾಷ್ ಕುಲಾಲ್ (55) ಮೃತಪಟ್ಟವರು.ಸುಭಾಷ್ ಕುಲಾಲ್ ಅವರುಕೌಡಿಚ್ಚಾರ್‌ನಲ್ಲಿ ಹೋಟೆಲ್ ನಡೆಸುತ್ತಿದ್ದರು.ಎಂದಿನಂತೆ ತಮ್ಮ ಹೋಟೆಲ್ ವ್ಯವಹಾರ ಮುಗಿಸಿ ರಿಕ್ಷಾದಲ್ಲಿ ಮನೆಗೆ ವಾಪಸಾಗಿದ್ದರು. ಪಾಪೆಮಜಲು ಬಳಿ ರಿಕ್ಷಾದಿಂದ ಇಳಿದ ಅವರು, ರಸ್ತೆ ದಾಟಲು ಮುಂದಾಗಿದ್ದಾರೆ. ಎಂದು ಈ ಸಂದರ್ಭದಲ್ಲಿ ವೇಗವಾಗಿ ಬಂದ…

Read More

ಧರ್ಮಸ್ಥಳ ಕೇಸ್: ಮಾಧ್ಯಮಗಳ ಮೇಲಿನ ನಿರ್ಬಂಧ ರದ್ದುಗೊಳಿಸಿ ಹೈಕೋರ್ಟ್ ಮಹತ್ವದ ತೀರ್ಪು

ಬೆಂಗಳೂರು: ಧರ್ಮಸ್ಥಳದಲ್ಲಿನ ಕೊಲೆಯಾದ ನೂರಾರು ಶವಗಳನ್ನು ಹೂತಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ. ಈ ಪ್ರಕರಣ ಸಂಬಂಧ ಮಾಧ್ಯಮಗಳ ಮೇಲಿನ ನಿರ್ಬಂಧವನ್ನು ರದ್ದುಗೊಳಿಸಿ ಆದೇಶಿಸಿದೆ. ಧರ್ಮಸ್ಥಳದಲ್ಲಿ ಕೊಲೆಯಾದ ನೂರಾರು ಶವಗಳನ್ನು ಹೂತಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗಡೆ ಅವರ ಸಹೋದರ ಹರ್ಷೇಂದ್ರ ಕುಮಾರ್.ಡಿ ಅವರು ಮಾಧ್ಯಮಗಳ ವಿರುದ್ಧ ಪ್ರತಿಬಂಧಕಾದೇಶ ತಂದಿದ್ದರು. ಇಂದು ಈ ಪ್ರತಿಬಂಧಕಾದೇಶವನ್ನು ಪ್ರಶ್ನಿಸಿ ಹೈಕೋರ್ಟ್ ಗೆ ದಕ್ಷಿಣ ಕನ್ನಡದ ಕುಡ್ಲ ರ್ಯಾಂಪೇಜ್ ಪ್ರಧಾನ ಸಂಪಾದಕ ಅಜಯ್…

Read More

ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ಜೈಲೇ ಗತಿ : ಅತ್ಯಾಚಾರ ಕೇಸ್ ನಲ್ಲಿ ದೋಷಿ ಎಂದು ತೀರ್ಪು ನೀಡಿದ ಕೋರ್ಟ್

ಬೆಂಗಳೂರು : ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಮೈಸೂರಿನ ಕೆ ಆರ್ ನಗರದ ಮಹಿಳೆಯ ಮೇಲೆ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇಂದು ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯ ಅಂತಿಮ ತೀರ್ಪು ಪ್ರಕಟಿಸಿದ್ದು, ನ್ಯಾ. ಸಂತೋಷ್ ಗಜಾನನ ಭಟ್ ಕೆ ಆರ್ ನಗರ ಅತ್ಯಾಚಾರ ಪ್ರಕರಣದಲ್ಲಿ ಪ್ರಜ್ವಲ್ ರೇವಣ್ಣ ದೋಷಿ ಎಂದು ತೀರ್ಪು ಪ್ರಕಟಿಸಿದೆ. 4 ಕೇಸ್ ಗಳಿಗೆ ಸಂಬಂಧಿಸಿದಂತೆ ಇಂದು ಕೋರ್ಟ್ ಮೊದಲನೇ ಕೇಸಿಗೆ ತೀರ್ಪು ಇಂದು ಪ್ರಕಟಿಸಿದೆ. ಪ್ರಕರಣಕ್ಕೆ ಸಂಬಂಧಪಟ್ಟಂತೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ವಿಚಾರಣೆ…

Read More