ಮಂಗಳೂರು: ಅಮೋನಿಯಾ ಸೋರಿಕೆ- ನಾಲ್ವರು ಗಂಭೀರ, 25ಕ್ಕೂ ಹೆಚ್ಚು ಕಾರ್ಮಿಕರು ಅಸ್ವಸ್ಥ
ಸುರತ್ಕಲ್: ಬೈಕಂಪಾಡಿ ಕೈಗಾರಿಕ ಪ್ರದೇಶದಲ್ಲಿರುವ ಕೈಗಾರಿಕೆಯೊಂದರ ಸ್ಥಾವರದಲ್ಲಿ ಅಮೋನಿಯಾ ಸೋರಿಕೆಯಿಂದ ಉಸಿರಾಟದ ಸಮಸ್ಯೆಗೆ ತುತ್ತಾಗಿ 25ಕ್ಕೂ ಅಧಿಕ ಮಂದಿ ಕಾರ್ಮಿಕರು ಅಸ್ವಸ್ಥಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತು. ಇವರಲ್ಲಿ ಉತ್ತರ ಭಾರತ ಮೂಲದ ನಾಲ್ವರು ಕಾರ್ಮಿಕರ ಸ್ಥಿತಿ ಗಂಭೀರವಾಗಿದ್ದು, ಅವರಿಗೆ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಈ ಕಂಪೆನಿಯಲ್ಲಿ 200ಕ್ಕೂ ಅಧಿಕ ಕಾರ್ಮಿಕರಿದ್ದು, ಪಾಳಿಯಲ್ಲಿ ಕೆಲಸ ನಡೆಯುತ್ತಿತ್ತು. ಗುರುವಾರ ಸಂಜೆ 4.30ರ ಸುಮಾರಿಗೆ ಸ್ಥಾವರದ ಒಳಗಿರುವ ಅಮೋನಿಯಾ ಸಾಗಾಟ ಪೈಪ್ ಒಂದರಲ್ಲಿ ಸೋರಿಕೆ ಕಂಡುಬಂತು. ಘಟಕದ ಸಮೀಪ…

