Headlines

ಉಗ್ರ ಸಂಘಟನೆ ಅಲ್ ಖೈದಾ ಜೊತೆ ನಂಟು: ಮಹಿಳೆಯ ಬಂಧನ

ಬೆಂಗಳೂರು: ಉಗ್ರ ಸಂಘಟನೆ ಅಲ್‌ ಖೈದಾ ಜೊತೆಗೆ ನಂಟು ಹೊಂದಿದ್ದ ಆರೋಪದಲ್ಲಿ ಮಹಿಳೆಯೊಬ್ಬಳನ್ನು ಗುಜರಾತ್ ಪೊಲೀಸ್ ಭಯೋತ್ಪಾದನ ನಿಗ್ರಹ ದಳ ಬಂಧಿಸಿದೆ. ಆರೋಪಿಯನ್ನು ಜಾರ್ಖಂಡ್ ಮೂಲದ ಶಮಾ ಪರ್ವೀನ್(30) ಎಂದು ಗುರುತಿಸಲಾಗಿದೆ. ಈಕೆ ಹೆಬ್ಬಾಳದ ಮನೋರಾಯಪಾಳ್ಯದಲ್ಲಿ ಬಾಡಿಗೆ ಮನೆಯೊಂದರಲ್ಲಿ ವಾಸವಾಗಿದ್ದಳು. ಈಕೆ ಭಯೋತ್ಪಾದನೆ ಕಡೆಗೆ ಯುವ ಜನರನ್ನು ಸೆಳೆಯುವುದಕ್ಕಾಗಿ ‌ಸಾಮಾಜಿಕ ಮಾಧ್ಯಮ ಖಾತೆಗಳ ಮೂಲಕ ಪೋಸ್ಚ್‌ಗಳನ್ನು ಬಿತ್ತರಿಸುವ ಕೆಲಸ ಮಾಡುತ್ತಿದ್ದಳು ಎಂದು ತಿಳಿದು ಬಂದಿದೆ.    

Read More

ಶವ ಹೂತಿಟ್ಟ ಪ್ರಕರಣ: ಇಂದು 2ನೇ ಸ್ಥಳದ ಕಾರ್ಯಾಚರಣೆ 

ಧರ್ಮಸ್ಥಳ ಗ್ರಾಮದ ವ್ಯಾಪ್ತಿಯಲ್ಲಿ ಶವ ಹೂತಿಟ್ಟ ಪ್ರಕರಣದ ತನಿಖೆಯ ಭಾಗವಾಗಿ ಮಂಗಳವಾರ ನಡೆದ ಪಾಯಿಂಟ್ 1 ಸಮಾಧಿ ಅಗೆಯುವ ಪ್ರಕ್ರಿಯೆ ಸಂಜೆಗೆ ಪೂರ್ಣಗೊಂಡಿದೆ.ಈ ಕಾರ್ಯಾಚರಣೆಯಲ್ಲಿ ಯಾವುದೇ ಮಾನವ ದೇಹದ ಅವಶೇಷ ಸಿಕ್ಕಿಲ್ಲ. ಅನಾಮಿಕ ದೂರುದಾರ ನೀಡಿದ ಮಾಹಿತಿ ಹಿನ್ನೆಲೆಯಲ್ಲಿ ಎಸ್ ಐಟಿ ಅಧಿಕಾರಿಗಳ ತಂಡದಿಂದ ಆತ ತಿಳಿಸಿದ ಮೊದಲ ಸ್ಥಳದಲ್ಲಿ ದಿನವಿಡೀ ಅಗೆತ ನಡೆಸಿದ್ದರು. ಆದರೆ ಯಾವುದೇ ರೀತಿಯ ಕುರುಹು ಪತ್ತೆಯಾಗಿಲ್ಲ. ಮಂಗಳವಾರ ನೇತ್ರಾವತಿ ಸ್ನಾನ ಘಟ್ಟದಲ್ಲಿ ಗುರುತಿಸಲಾದ ಸ್ಥಳದಲ್ಲಿ ಪುತ್ತೂರು ಎ.ಸಿ. ಸಮ್ಮುಖದಲ್ಲಿ ದೂರುದಾರರ ಉಪಸ್ಥಿತಿಯಲ್ಲಿ ಅಧಿಕಾರಿಗಳ…

Read More

ಬೆಳ್ತಂಗಡಿ: ಅನುಮತಿ ಇಲ್ಲದೆ ಟ್ರಕ್ಕಿಂಗ್- ಬೆಂಗಳೂರಿನ 103 ಮಂದಿ ಟೆಕ್ಕಿಗಳು ಅರೆಸ್ಟ್

ಅನುಮತಿ ಇಲ್ಲದೆ ಟ್ರಕ್ಕಿಂಗ್ ಮಾಡುತ್ತಿದ್ದ 103 ಮಂದಿ ಪ್ರವಾಸಿಗರನ್ನು ಪೊಲೀಸರು ಬಂಧಿಸಿರುವ ಘಟನೆ ಬೆಳ್ತಂಗಡಿಯ ಬಿದಿರುತಳದಲ್ಲಿ ನಡೆದಿದೆ. ಬೆಂಗಳೂರು ಮೂಲದ ಪ್ರಮುಖ ಐಟಿ ಕಂಪನಿಯ ಉದ್ಯೋಗಿಗಗಳು ನಿಷೇಧಿತ ಅರಣ್ಯ ಪ್ರದೇಶದಲ್ಲಿ ಟ್ರಕ್ಕಿಂಗ್‌ ಮಾಡುತ್ತಿರುವ ಮಾಹಿತಿ ತಿಳಿದ ಬಣಕಲ್ ಮತ್ತು ಬಾಳೂರು ಪೊಲೀಸ್ ಠಾಣೆ ಪೊಲೀಸರು ಕಾರ್ಯಾಚರಣೆ ನಡೆಸಿದ್ದಾರೆ. ಎಲ್ಲರನ್ನು ಬಂಧಿಸಿ 2 ಪ್ರವಾಸಿ ಬಸ್‌ಗಳು ಮತ್ತು 2 ಪಿಕಪ್ ವಾಹನಗಳನ್ನು ವಶಕ್ಕೆ ಪಡೆದಿದ್ದಾರೆ. ನಿಷೇಧಿತ ಪ್ರದೇಶಕ್ಕೆ ಟ್ರಕ್ಕಿಂಗ್‌ ಕರೆದುಕೊಂಡು ಹೋಗಿದ್ದು ಸ್ಥಳೀಯ ವ್ಯಕ್ತಿ ಎಂದು ತಿಳಿದು ಬಂದಿದೆ….

Read More

ಪುತ್ತೂರು: ಅಪ್ರಾಪ್ತ ವಯಸ್ಸಿನವರ ವೀಡಿಯೊ ಸಾಮಾಜಿಕ ಜಾಲತಾಣದಲ್ಲಿ ಪ್ರಸಾರ- ದೂರು ದಾಖಲು

ಪುತ್ತೂರು: ಅಪ್ರಾಪ್ತ ವಯಸ್ಸಿನ ಬಾಲಕ ಹಾಗೂ ಆತನ ಜೊತೆಗಿದ್ದ ಅಪ್ರಾಪ್ತ ವಯಸ್ಸಿನ ಬಾಲಕಿಯ ವೀಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಪ್ರಸಾರ ಮಾಡಿರುವ ಅರೋಪದಲ್ಲಿ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಜು.5ರಂದು ದಾಖಲಾಗಿದ್ದ ಪ್ರಕರಣವೊಂದಕ್ಕೆ ಸಂಬಂಧಿಸಿ ಈ ವೀಡಿಯೊವನ್ನು ವೈರಲ್ ಮಾಡಲಾಗಿದೆ ಎಂದು ಆರೋಪಿಸಲಾಗಿದೆ. ಅಪ್ರಾಪ್ತ ವಯಸ್ಸಿನವರ ವೀಡಿಯೋವನ್ನು ಮಾದ್ಯಮಗಳಲ್ಲಿ ವೈರಲ್ ಮಾಡುವುದಕ್ಕೆ ನಿರ್ಬಂಧವಿದ್ದರೂ ಕೆಲವು ಅಪರಿಚಿತ ವ್ಯಕ್ತಿಗಳು, ಅಪರಿಚಿತ ಮೀಡಿಯಾ ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ವೀಡಿಯೊ ಹರಿಯಬಿಟ್ಟಿರುವುದಾಗಿ ಈ ಪ್ರಕರಣದಲ್ಲಿನ ಬಾಲಕನ…

Read More

ಧರ್ಮಸ್ಥಳ: ಹೂತ ಮೃತದೇಹಗಳ ಅವಶೇಷ ಉತ್ಖನನ

ಧರ್ಮಸ್ಥಳ ಅರಣ್ಯದಲ್ಲಿ ಹಲವಾರು ಮೃತದೇಹ ಹೂತು ಹಾಕಿದ ಪ್ರಕರಣ ಸಂಬಂಧ ಜುಲೈ 29 ರಂದು ದೂರುದಾರನ ಸಮ್ಮುಖದಲ್ಲಿ ಎಸ್.ಐ.ಟಿ ಅಧಿಕಾರಿಗಳು ಹಾಗೂ ಇತರ ಅಧಿಕಾರಿಗಳಿಂದ ಹೆಣಗಳ ಕಳೆಬರ ಹೊರತೆಗೆಯುವ ಕಾರ್ಯಾಚರಣೆಗೆ ಎಸ್.ಐ.ಟಿ. ತಂಡದೊಂದಿಗೆ ವೈದ್ಯರ ತಂಡ ಜತೆಯಾಗಿದೆ. ಬೆಳ್ತಂಗಡಿ ಎಸ್.ಐ.ಟಿ ಕಚೇರಿಗೆ ಅಧಿಕಾರಿಗಳು ಮುಂಜಾನೆಯೇ ಹಾಜರಾಗಿದ್ದರು. ಈ ವೇಳೆ ಮಂಗಳೂರು ಕೆಎಂಸಿ ಆಸ್ಪತ್ರೆಯ ಇಬ್ಬರು ನುರಿತ ವೈದ್ಯರಾದ ಡಾ.‌ಜಗದೀಶ್ ರಾವ್ ಮತ್ತು ಡಾ.ರಶ್ಮಿ ತಂಡ ಎಸ್.ಐ.ಟಿ ಆದೇಶದ ಮೇರೆಗೆ ಬೆಳ್ತಂಗಡಿ ಎಸ್.ಐ.ಟಿ ಕಚೇರಿಗೆ ಆಗಮಿಸಿ ಸಭೆ ನಡೆದು…

Read More

ಪುತ್ತೂರು: ಮದುವೆಯಾಗಿ ನಂಬಿಸಿ ಯುವತಿಗೆ ವಂಚನೆ ಆರೋಪಿ ಮನೆಯಲ್ಲಿ ಪೊಲೀಸ್‌ ಮಹಜರು

ಪುತ್ತೂರು: ಮದುವೆಯಾಗುವುದಾಗಿ ನಂಬಿಸಿ ಯುವತಿಗೆ ವಂಚನೆ ಪ್ರಕರಣದ ಆರೋಪಿಯಾಗಿರುವ ಬಪ್ಪಳಿಗೆ ನಿವಾಸಿ ಶ್ರೀಕೃಷ್ಣಜೆ. ರಾವ್ ಮನೆಯಲ್ಲಿ ಪುತ್ತೂರು ಮಹಿಳಾ ಪೊಲೀಸ್ ಠಾಣೆಯ ಪೊಲೀಸರು ಸ್ಥಳ ಮಹಜರು ನಡೆಸಿದರು. ಇನ್ಸ್‌ಪೆಕ್ಟ‌ರ್ ಸುನಿಲ್ ಕುಮಾರ್ ನೇತೃತ್ವದಲ್ಲಿ ಜು.28ರಂದು ಸಂಜೆ ಮಹಜರು ನಡೆಯಿತು.ಆರೋಪಿಯು ತನ್ನನ್ನು ಮದುವೆಯಾಗುವುದಾಗಿ ನಂಬಿಸಿ, ಬಪ್ಪಳಿಗೆಯ ಆತನ ಮನೆಯಲ್ಲಿ ಯಾರೂ ಇಲ್ಲದ ಸಂದರ್ಭ ಕರೆಸಿಕೊಂಡು ಬಲವಂತದ ದೈಹಿಕ ಸಂಪರ್ಕ ಬೆಳೆಸಿದ್ದಾಗಿ ಸಂತ್ರಸ್ತೆ ದೂರು ನೀಡಿದ್ದರು. ಈ ಹಿನ್ನೆಲೆಯಲ್ಲಿ ಬಪ್ಪಳಿಗೆ ಮನೆಯಲ್ಲಿ ಮಹಜರು ನಡೆಯಿತು.ಈ ಸಂದರ್ಭ ಸಂತ್ರಸ್ತೆ, ಆಕೆಯ ಮಗು…

Read More

ಬೆಳ್ತಂಗಡಿ: ವಿಷ ಸೇವಿಸಿ ವಿವಾಹಿತ ಮಹಿಳೆ ಆತ್ಮಹತ್ಯೆ..!!

ಬೆಳ್ತಂಗಡಿ: ಗ್ರಾಮದ ಮೂಕಾಂಬಿಕಾ ನಿಲಯ ಪಚ್ಚಡಿ ಮನೆಯ ವಾಣಿಶ್ರೀ(26ವ) ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜು.28ರಂದು ನಡೆದಿದೆ. ಮದುವೆಯಾಗಿ ಒಂದು ವರ್ಷ ಮೂರು ತಿಂಗಳು ಆಗಿರುವ ವಿವಾಹಿತ ಮಹಿಳೆ ಜೀವನದಲ್ಲಿ ಜಿಗುಪ್ಸೆಗೊಂಡು ಮನೆಯಲ್ಲಿ ಯಾರು ಇಲ್ಲದ ವೇಳೆ ವಿಷವನ್ನು ಸೇವಿಸಿರುತ್ತಾರೆ. ಹೊಟ್ಟೆನೋವು ಎಂದು ಹೇಳಿದಾಗ ಪಕ್ಕದ ಮನೆಗೆ ತೆರಳಿದ್ದ ದೊಡ್ಡಮ್ಮರವರಿಗೆ ಅನುಮಾನ ಬಂದು ತಕ್ಷಣ ಗಂಡ ಯಾವುದೋ ಕಾರ್ಯಕ್ರಮಕ್ಕೆ ತೆರಳಿದ್ದ ಕಾರಣ ಮಹಿಳೆಯ ತಂದೆಗೆ ಕರೆ ಮಾಡಿರುತ್ತಾರೆ. ತಕ್ಷಣ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿದೆ. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ….

Read More

ಕೊರಗಜ್ಜ ಸೇವಾ ಸಮಿತಿ ಅಂಬಿಕಾ ರೋಡ್ ಇದರ ವಾರ್ಷಿಕ ಮಹಾ ಸಭೆ-ನೂತನ ಅಧ್ಯಕ್ಷರಾಗಿ ಶ್ರೀ ಲಯನ್ ದಾಸ್ ಅವಿರೋಧ ಆಯ್ಕೆ

ಮಂಗಳೂರು: ಸುಮಾರು ನಲವತ್ತು ವರುಷಗಳಿಂದ ಆರಾಧನೆ ಮಾಡಿಕೊಂಡು ಬಂದಿರುವ ಕೊರಗಜ್ಜನ ಕಾರ್ಣಿಕದ ಸಾನಿಧ್ಯ ನಂಬಿದ ಭಕ್ತರಿಗೆ ಸದಾ ಅಭಯ ನೀಡಿರುವ ಕೋರಗಜ್ಜನ ಕ್ಷೇತ್ರ ಅಂಬಿಕಾ ರೋಡ್ ಕೋರಗಜ್ಜ ಸೇವಾ ಸಮಿತಿಯ ವಾರ್ಷಿಕ ಮಹಾ ಸಭೆಯು ಅಂಬಿಕಾ ರೋಡ್ ಗಟ್ಟಿ ಸಮಾಜ ಭವನದ ಕೆಳ ಸಭಾಂಗಣ ದಲ್ಲಿ ನಡೆಯಿತು. ಸಭಾ ಅಧ್ಯಕ್ಷತೆಯನ್ನು ಶ್ರೀ ಹರೀಶ್ ರಂಗೋಲಿ ( ಸ್ಥಾಪಕ ಅಧ್ಯಕ್ಷ ರು ) ವಹಿಸಿದ್ದರು. ಹಾಗೂ ಸಮಿತಿಯ ಪ್ರಧಾನ ಕಾರ್ಯದರ್ಶಿ ಕೋಶಾಧಿಕಾರಿ ಮತ್ತು ಪದಾಧಿಕಾರಿಗಳು ಸದಸ್ಯರು ಭಾಗವಹಿಸಿದ್ದರು. ಸಭೆಯಲ್ಲಿ…

Read More

ಉಡುಪಿ: ಪಿಯುಸಿ ವಿದ್ಯಾರ್ಥಿ ಬೆಲ್ಟ್’ನಿಂದ ನೇಣು ಬಿಗಿದು ಆತ್ಮಹತ್ಯೆ..!

ಉಡುಪಿ: ದ್ವಿತೀಯ ಪಿಯುಸಿ ವಿದ್ಯಾರ್ಥಿ ಬೆಲ್ಟ್’ನಿಂದ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಆಘಾತಕಾರಿ ಸುದ್ದಿ ವರದಿಯಾಗಿದೆ. ಮೃತರನ್ನು ಕೆಳಾರ್ಕಳ ಬೆಟ್ಟಿನ ಸ್ವಸ್ತಿಕ್‌ (16) ಎಂದು ಗುರುತಿಸಲಾಗಿದೆ. ಮೃತನು ಉಡುಪಿಯ ಜ್ಞಾನ ಸುಧಾ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ವ್ಯಾಸಂಗ ಮಾಡುತ್ತಿದ್ದರು. ಜುಲೈ 27 ರಂದು ಅವರ ತಾಯಿ ಬಂದು ನೋಡಿದಾಗ ಮನೆಯ ಹಾಲ್‌ ನ ಉತ್ತರ ಬದಿಯ ಕಿಟಕಿಗೆ ನೇಣು ಹಾಕಿಕೊಂಡು ಸೋಫಾದ ಮೇಲೆ ಒರಗಿಕೊಂಡ ಸ್ಥಿತಿಯಲ್ಲಿ ಕಂಡುಬಂದಿದ್ದಾನೆ. ಕೂಡಲೆ ಸ್ವಸ್ತಿಕ್‌ ನ ಕುತ್ತಿಗೆಯಲ್ಲಿದ್ದ ಬೆಲ್ಟ್‌ ಅನ್ನು ಕಟ್‌…

Read More

ಧರ್ಮಸ್ಥಳ ಪ್ರಕರಣ: ಬಿಗಿ ಪೊಲೀಸ್ ಭದ್ರತೆಯಲ್ಲಿ ನೇತ್ರಾವತಿ ಸ್ನಾನಘಟ್ಟಕ್ಕೆ ಆಗಮಿಸಿದ ದೂರುದಾರ

ಧರ್ಮಸ್ಥಳ: ಧರ್ಮಸ್ಥಳದಲ್ಲಿ ನಡೆದಿದೆ ಎನ್ನಲಾದ ಸಾಮೂಹಿಕ ಹೂಳುವಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ, ದೂರುದಾರನನ್ನು ಇಂದು ಭಾರಿ ಪೊಲೀಸ್ ಭದ್ರತೆಯಲ್ಲಿ ನೇತ್ರಾವತಿ ಸ್ನಾನ ಘಟ್ಟಕ್ಕೆ ಕರೆತರಲಾಯಿತು. ತನಿಖೆಯ ಭಾಗವಾಗಿ ಅಧಿಕಾರಿಗಳು ಘಟನಾ ಸ್ಥಳವನ್ನು ಕೂಲಂಕಷವಾಗಿ ಪರಿಶೀಲಿಸಿದರು. 1995 ರಿಂದ 2014ರ ಅವಧಿಯಲ್ಲಿ ಧರ್ಮಸ್ಥಳ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ನೂರಾರು ಮೃತದೇಹಗಳನ್ನು ಬಲವಂತವಾಗಿ ಹೂತು ಹಾಕಿದ್ದೇನೆಂದು ವ್ಯಕ್ತಿಯೊಬ್ಬ ನ್ಯಾಯಾಲಯದಲ್ಲಿ ಹೇಳಿಕೆ ನೀಡಿದ್ದ. ಈ ಆರೋಪಗಳು ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದ್ದು, ಕರ್ನಾಟಕ ಸರ್ಕಾರವು ಪ್ರಕರಣದ ತನಿಖೆಗಾಗಿ ವಿಶೇಷ ತನಿಖಾ ತಂಡ (SIT) ರಚಿಸಿತ್ತು….

Read More