Headlines

ರಾಷ್ಟ್ರೀಯ ಹೆದ್ದಾರಿ 75 ರ ಮೇಲೆ ಗುಡ್ಡ ಕುಸಿತ: ಬೆಂಗಳೂರು-ಮಂಗಳೂರು ಸಂಚಾರ ಬಂದ್‌..!

ನೆಲ್ಯಾಡಿ: ಮಣ್ಣಗುಡ್ಡ ಬಳಿ ರಾಷ್ಟ್ರೀಯ ಹೆದ್ದಾರಿ 75 ರ ಮೇಲೆ ಗುಡ್ಡ ಕುಸಿತವಾಗಿದ್ದು ಪರಿಣಾಮ ಬೆಂಗಳೂರು-ಮಂಗಳೂರು ಸಂಚಾರ ಬಂದ್ ಆಗಿ ವಾಹನ ಸವಾರರು ಪರದಾಡುವಂತಾಗಿತ್ತು. ರಸ್ತೆಗೆ ರಾಶಿ ರಾಶಿ ಮಣ್ಣು ಹಾಗೂ ಮರ ಬಿದ್ದಿರುವುದರಿಂದ ಇಂದು ಬೆಳಗಿನ ಜಾವದಿಂದ ನೂರಾರು ವಾಹನಗಳು ನಿಂತಲ್ಲೇ ನಿಂತಿದ್ದವು. ಮಣ್ಣು ತೆರವು ಕಾರ್ಯಾಚರಣೆ ಬಳಿಕ ಸದ್ಯ ವಾಹನಗಳು ಸಂಚರಿಸುತ್ತಿವೆ ಎನ್ನಲಾಗಿದೆ. ಕಳೆದ ವಾರ ಕೂಡ ಅದೇ ಜಾಗದಲ್ಲಿ ಎರಡು ಭಾರೀ ಗುಡ್ಡ ಕುಸಿತವಾಗಿದ್ದು ಸ್ಥಳೀಯರು NHAI ವಿರುದ್ಧ ಅಕ್ರೋಶ ಹೊರಹಾಕಿದ್ದಾರೆ.    

Read More

ಮಂಗಳೂರು: ಹತ್ತು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಶೂಟೌಟ್ ಆರೋಪಿ ಬಂಧನ

ಮಂಗಳೂರು: ಉರ್ವ ಠಾಣೆಯಲ್ಲಿ 2014ರಲ್ಲಿ ಆರ್ಮ್ಸ್ ಆ್ಯಕ್ಟ್‌ನಡಿ ದಾಖಲಾಗಿದ್ದ ಶೂಟೌಟ್ ಪ್ರಕರಣವೊಂದರಲ್ಲಿ ಪ್ರಮುಖ ಆರೋಪಿಯಾಗಿದ್ದು, 10 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಗಣೇಶ ಲಕ್ಷ್ಮಣ್ ಸಕಟ್ ಎಂಬಾತನನ್ನು ಉರ್ವ ಠಾಣೆ ಪೊಲೀಸರು ಬಂಧಿಸಿದ್ದಾರೆ. ಭೂಗತ ಪಾತಕಿ ರವಿ ಪೂಜಾರಿ ಸಹಚರನಾಗಿದ್ದ ಈತ 2014ರಲ್ಲಿ ಉರ್ವ ಠಾಣೆ ವ್ಯಾಪ್ತಿಯ ಬಿಜೈನ ಭಾರತಿ ಬಿಲ್ಡ‌ರ್ ಕಚೇರಿಯಲ್ಲಿ ನಡೆದ ಶೂಟೌಟ್ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿದ್ದ. 2015ರಿಂದ ವರ್ಷದಿಂದ ತಲೆಮರೆಸಿಕೊಂಡಿದ್ದ ಈತನನ್ನು ಮಹಾರಾಷ್ಟ್ರದ ಪಂಡರಾಪುರದಿಂದ ಉರ್ವ ಠಾಣಾ ಎಎಸ್‌ಐ ವೇಣುಗೋಪಾಲ್ ಮತ್ತು ಸಿಬಂದಿಯವರಾದ…

Read More

ಧರ್ಮಸ್ಥಳ, ಉಡುಪಿ, ಕೊಲ್ಲೂರು ಕ್ಷೇತ್ರಗಳ ಅವಹೇಳನಕಾರಿ ವೀಡಿಯೋ: ಇಬ್ಬರು ಯುಟ್ಯೂಬರ್‌ಗಳ ವಿರುದ್ಧ ಪ್ರಕರಣ ದಾಖಲು

ಧಾರ್ಮಿಕ ಭಾವನೆಗಳಿಗೆ ಧಕ್ಕೆತಂದ ಕರಾವಳಿಯ ಧರ್ಮಸ್ಥಳ, ಉಡುಪಿ, ಕೊಲ್ಲೂರು ಕ್ಷೇತ್ರಗಳ ಬಗ್ಗೆ ಅವಹೇಳನಕಾರಿ ವೀಡಿಯೋ ಮಾಡಿ ಹರಿದುಬಿಟ್ಟ ಕೇರಳದ ಇಬ್ಬರು ವ್ಯಕ್ತಿಗಳ ಮೇಲೆ ಹಿರಿಯಡ್ಕದ ಬೆಳ್ಳರ್ಪಾಡಿ ನಿವಾಸಿ, ಶ್ರೀಕುಮಾರ್ ಅವರು ನೀಡಿದ ದೂರಿನಂತೆ ಉಡುಪಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮಲ್ಲು ಮಾರ್ಟ್ ಟ್ರಾವೆಲರ್ ಮತ್ತು ಮಾನಫ್ ಎಂಬ ವ್ಯಕ್ತಿಗಳು ಫೇಸ್‌ಬುಕ್ ಹಾಗೂ ಯೂಟ್ಯೂಬ್‌ಗಳಲ್ಲಿ ಈ ಧಾರ್ಮಿಕ ಕ್ಷೇತ್ರಗಳ ಬಗ್ಗೆ ಅವಹೇಳನಕಾರಿಯಾಗಿ ಹೇಳಿಕೆಗಳನ್ನು ನೀಡಿ ವೀಡಿಯೋ ಅಪ್ ಲೋಡ್ ಮಾಡಿದ್ದರು. ಕುಟುಂಬ ಸಹಿತರಾಗಿ ಕರಾವಳಿಯ ಧಾರ್ಮಿಕ ಕ್ಷೇತ್ರಗಳಿಗೆ…

Read More

ಮಹಿಳಾ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆಗೆ ಯತ್ನಿಸಿ ಅವಾಜ್ ಹಾಕಿದ ಆರೋಪಿ ಅರೆಸ್ಟ್

ಮಣಿಪಾಲ : ಅನುಮಾನಾಸ್ಪದವಾಗಿ ಓಡಾಡುತ್ತಿದ್ದ ಹಿನ್ನಲೆ  ವಿಚಾರಣೆ ವೇಳೆ ಮಹಿಳಾ ಪೊಲೀಸ್ ಸಿಬ್ಬಂದಿಗೆ ಏಕವಚನದಲ್ಲಿ ನಿಂದಿಸಿ ಹಲ್ಲೆಗೆ ಯತ್ನಿಸಿದ ಆರೋಪಿಯನ್ನು ಮಣಿಪಾಲ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಉಡುಪಿಯ ಕೊಡವೂರು ಗ್ರಾಮದ ಜುಮಾದಿನಗರದ ಸಾಗರ್ (25) ಬಂಧಿತ ವ್ಯಕ್ತಿ. ಜುಲೈ 26ರ ಶನಿವಾರ ಬೆಳಿಗ್ಗೆ ಸುಮಾರು 2.30 ಕ್ಕೆ ಅನುಮಾನಸ್ಪದವಾಗಿ ಓಡಾಡುತ್ತಿದ್ದ ಸಾಗರ್ ನನ್ನು ಮಹಿಳಾ ಪೊಲೀಸ್ ಅಧಿಕಾರಿ ವಿಚಾರಣೆ ನಡೆಸಿದಾಗ ಈ ಘಟನೆ ನಡೆದಿದೆ. ಬಂಧಿತನನ್ನು ನಿನ್ನೆ (ಜು.26) ಉಡುಪಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಆತನಿಗೆ ನ್ಯಾಯಾಂಗ ಬಂಧನ…

Read More

ಧರ್ಮಸ್ಥಳ ಪ್ರಕರಣ: ದೂರುದಾರನ ವಿಚಾರಣೆಗೆ ಮಂಗಳೂರಿಗೆ ಆಗಮಿಸಿದ ಪ್ರಣಬ್ ಮೊಹಾಂತಿ

ಬೆಳ್ತಂಗಡಿ : ‌ಧರ್ಮಸ್ಥಳ ಗ್ರಾಮದಲ್ಲಿ ಹೂತು ಹಾಕಲಾಗಿರುವ ಶವಗಳ ಕುರಿತಂತೆ ರಾಜ್ಯ ಸರಕಾರ ನಡೆಸುತ್ತಿರುವ ಎಸ್ಐಟಿ ತನಿಖೆ ಚುರುಕುಗೊಂಡಿದೆ. ಈಗಾಗಲೇ ಎಸ್ ಐಟಿ ದೂರುದಾರನ ವಿಚಾರಣೆ ಪ್ರಾರಂಭಿಸಿದ್ದು. ಇಂದು ಎರಡನೇ ಮತ್ತೆ ದೂರುದಾರನ ವಿಚಾರಣೆ ಪ್ರಾರಂಭಿಸಿದೆ. ಎಸ್‌ಐಟಿ ತಂಡದ ಮುಖ್ಯಸ್ಥ ಪ್ರಣಬ್ ಮೊಹಾಂತಿ ನೇತೃತ್ವದಲ್ಲಿ ರವಿವಾರ ಎಸ್‌ಐಟಿ ತಂಡವು ದೂರುದಾರನ ವಿಚಾರಣೆ ನಡೆಸುತ್ತಿದೆ. ರವಿವಾರ ಬೆಳಗ್ಗೆ 10.30ರ ಸುಮಾರಿಗೆ ದೂರುದಾರ ತನ್ನ ವಕೀಲರೊಂದಿಗೆ ಮಂಗಳೂರಿನ ಎಸ್.ಐ.ಟಿ ಕಚೇರಿಗೆ ಆಗಮಿಸಿದ್ದಾರೆ ಎನ್ನಲಾಗಿದ್ದು, ಮಧ್ಯಾಹ್ನ 12 ಗಂಟೆಯ ವೇಳೆಗೆ ಪ್ರಣಬ್…

Read More

`RSS’ ಇಲ್ಲದಿದ್ದರೆ ಭಾರತ ಮುಸ್ಲಿಂ ರಾಷ್ಟ್ರವಾಗುತ್ತಿತ್ತು : ಸಂಸದ ಜಗದೀಶ್ ಶೆಟ್ಟರ್

ಒಂದು ವೇಳೆ ಆರ್ಎಸ್ಎಸ್ ಇರದಿದ್ದರೇ ಭಾರತ ಮುಸ್ಲಿಂ ರಾಷ್ಟ್ರವಾಗುತ್ತಿತ್ತು ಎಂದು ಬೆಳಗಾವಿ ಬಿಜೆಪಿ ಸಂಸದ ಜಗದೀಶ ಶೆಟ್ಟರ್ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ನಾಯಕರಾದ ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ ಅವರು ಪ್ರಧಾನಿ ನರೇಂದ್ರ ಮೋದಿ ಮತ್ತು ಆರ್ಎಸ್ಎಸ್ ಬಗ್ಗೆ ಕೆಟ್ಟ ಭಾಷೆ ಬಳಕೆ ಮಾಡುತ್ತಿದ್ದಾರೆ. ಪ್ರಧಾನಿ ವಿರುದ್ಧ ಖರ್ಗೆ, ರಾಹುಲ್ ಗಾಂಧಿ ಈಗ ವಿಷಕಾರುತ್ತಿದ್ದಾರೆ ಎಂದು ಕಿಡಿಕಾರಿದ್ದಾರೆ. ನೆಹರು ಅವರಿಂದ ಹಿಡಿದು ಇಂದಿರಾ ಗಾಂಧಿ, ರಾಹುಲ್ ಗಾಂಧಿ ಸೇರಿ ಅವರ ಕುಟುಂಬ ದೇಶಕ್ಕಾಗಿ ಯಾವುದೇ…

Read More

ಉಡುಪಿ: ದೇವಸ್ಥಾನದಲ್ಲಿ ಕಳ್ಳತನಕ್ಕೆ ಯತ್ನ- ಮೂರ್ಛೆ ಹೋಗಿ ಸಿಕ್ಕಿಬಿದ್ದ ಕಳ್ಳರು

ಉಡುಪಿ: ಕಡಿಯಾಳಿ ಮಹಿಷಮರ್ಧಿನಿ ದೇವಸ್ಥಾನದ ಮುಖ್ಯ ಬಾಗಿಲಿನ ಬೀಗ ಮುರಿದು ಕಳ್ಳತನಕ್ಕೆ ಯತ್ನಿಸಿದ ಘಟನೆ ಶುಕ್ರವಾರ ಮಧ್ಯರಾತ್ರಿ 3 ಗಂಟೆ ಸುಮಾರಿಗೆ ನಡೆದಿದೆ. ದೇವಸ್ಥಾನದ ಕಾವಲುಗಾರ ಈ ಕೃತ್ಯವನ್ನು ಗಮನಿಸಿದಾಗ, ಕಳ್ಳರು ಚಾಕು ತೋರಿಸಿ ಜೀವ ಬೆದರಿಕೆ ಹಾಕಿ ಪರಾರಿಯಾಗಿದ್ದಾರೆ. ಕಾವಲುಗಾರ ತಕ್ಷಣ ಸ್ಥಳೀಯ ಭಕ್ತರಿಗೆ ಮಾಹಿತಿ ನೀಡಿದ್ದು. ದೇವಸ್ಥಾನದ ಸುತ್ತಮುತ್ತಲಿನ ಜನರು ಒಟ್ಟಾಗಿ ಸೇರಿದ್ದಾರೆ. ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿದಾಗ ಇಬ್ಬರು ಕಳ್ಳರು ಆಗಮಿಸಿ, ಪರಾರಿಯಾದ ಮಾರ್ಗ ತಿಳಿದುಬಂದಿದೆ. ಸ್ಥಳೀಯರು ತಕ್ಷಣ ಹುಡುಕಾಟ ನಡೆಸಿ. ಕಡಿಯಾಳಿ ಪೆಟ್ರೋಲ್…

Read More

ಧರ್ಮಸ್ಥಳ ಪ್ರಕರಣ: SIT ಮುಂದೆ ದೂರುದಾರನ ಹೇಳಿಕೆ ದಾಖಲು

 ಧರ್ಮಸ್ಥಳದಲ್ಲಿ ಶವಗಳನ್ನು ಹೂತಿಟ್ಟ ಪ್ರಕರಣದ ತನಿಖೆ ಚುರುಕುಗೊಂಡಿದ್ದು, ದೂರುದಾರ ಎಸ್ ಐ ಟಿ ಎದುರು ವಿಚಾರಣೆಗೆ ಹಾಜರಾಗಿದ್ದಾನೆ. ರಾಜ್ಯ ಸರ್ಕಾರ ನಿಯೋಜಿಸಿರುವ ಎಸ್ ಐ ಟಿ ( ವಿಶೇಷ ತನಿಖಾ ತಂಡ) ದ ಎದುರು ಈತ ವಿಚಾರಣೆಗೆ ಹಾಜರಾಗಿದ್ದಾನೆ. ಕದ್ರಿಯಲ್ಲಿರುವ ಐಬಿ ಕಚೇರಿಯಲ್ಲಿ ತೆರೆದಿರುವ ಎಸ್ ಐ ಟಿ ಕಚೇರಿಗೆ ದೂರುದಾರ ತನ್ನ ವಕೀಲರ ಜೊತೆ ಆಗಮಿಸಿದ್ದಾನೆ. ಡಿಐಜಿ ಎಂಎನ್ ಅನುಚೇತ್ ಸಮ್ಮುಖದಲ್ಲಿ ದೂರುದಾರನ ವಿಚಾರಣೆ ನಡೆಯಲಿದೆ. ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತಿಟ್ಟಿರುವ ಪ್ರಕರಣದ ತನಿಖೆಗೆ ಇಂದು…

Read More

ಅತ್ಯಾಚಾರ, ವಂಚನೆ ಪ್ರಕರಣ: ಆರೋಪಿ ಶ್ರೀಕೃಷ್ಣರಾವ್ ಜಾಮೀನು ಅರ್ಜಿ ತಿರಸ್ಕೃತ

ಪುತ್ತೂರು: ಸಹಪಾಠಿಯನ್ನು ವಿವಾಹವಾಗುವುದಾಗಿ ನಂಬಿಸಿ ಗರ್ಭಿಣಿಯಾಗಿಸಿ ಬಳಿಕ ಮದುವೆಯಾಗದೆ ವಂಚಿಸಿದ ಪ್ರಕರಣದಲ್ಲಿ ಬಂಧಿತನಾಗಿರುವ ಬಿಜೆಪಿ ಮುಖಂಡ ಪಿ.ಜಿ. ಜಗನ್ನಿವಾಸ್ ರಾವ್ ಪುತ್ರ ಶ್ರೀಕೃಷ್ಣ ಜೆ. ರಾವ್ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ವಿಚಾರಣೆ ನಡೆಸಿದ ಮಂಗಳೂರು 6ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಜಾಮೀನು ಅರ್ಜಿಯನ್ನು ತಿರಸ್ಕೃತಗೊಳಿಸಿ ಆದೇಶಿಸಿದೆ. ಆರೋಪಿ ಶ್ರೀಕೃಷ್ಣರಾವ್ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಶುಕ್ರವಾರ ತನಿಖೆಗೆತ್ತಿಕೊಂಡ ನ್ಯಾಯಾಲಯವು ವಾದ-ವಿವಾದವನ್ನು ಆಲಿಸಿ ತನ್ನ ಅಂತಿಮ ತೀರ್ಪನ್ನು ಪ್ರಕಟಿಸಿದ್ದು ಜಾಮೀನು ನಿರಾಕರಿಸಿ ಅರ್ಜಿಯನ್ನು ವಜಾಗೊಳಿಸಿ ಆದೇಶಿಸಿದೆ. ಆರೋಪಿ ಶ್ರೀಕೃಷ್ಣರಾವ್…

Read More

ದ.ಕ.ಜಿಲ್ಲೆಯಲ್ಲಿ ಮರಳು ಖರೀದಿ, ಸಾಗಾಟದ ಹೊಸ ಆ್ಯಪ್ ಚಾಲನೆ

ಮಂಗಳೂರು: ದ.ಕ.ಜಿಲ್ಲೆಯಲ್ಲಿ ನಾನ್-ಸಿಆರ್‌ಝಡ್ ಪ್ರದೇಶದಲ್ಲಿ ಗುರುತಿಸಿ ಮಂಜೂರಾಗಿರುವ 15 ಮರಳು ಬ್ಲಾಕ್‌ಗಳಲ್ಲಿನ ಮರಳು ದಾಸ್ತಾನನ್ನು ಸಾರ್ವಜನಿಕರಿಗೆ, ಅಭಿವೃದ್ಧಿ ಕಾಮಗಾರಿಗಳಿಗೆ ಡಿಕೆ ಸ್ಯಾಂಡ್ ಬಝಾರ್ ಆ್ಯಪ್ ಮೂಲಕ ಪೂರೈಸಲು ಮರಳು ಉಸ್ತುವಾರಿಯ ಜಿಲ್ಲಾ ಸಮಿತಿಯಲ್ಲಿ ತೀರ್ಮಾನಿಸಲಾಗಿದೆ. ಮರಳನ್ನು ಸಾಗಾಟ ಮಾಡಲು ಇಚ್ಚಿಸುವವರು ತಮ್ಮ ವಾಹನವನ್ನು ಜಿಲ್ಲಾ ವ್ಯಾಪ್ತಿಯಲ್ಲಿ ಅಭಿವೃದ್ಧಿಪಡಿಸಿ ರುವ DK SAND BAZAAR APPನಲ್ಲಿ ನೋಂದಾಯಿಸಬಹುದು. 15 ಮರಳು ಬ್ಲಾಕ್‌ಗಳಲ್ಲಿ 3,30,405 ಮೆ.ಟನ್ ಪರಿಸರ ವಿಮೋಚನಾ ಪತ್ರದಲ್ಲಿ ಮರಳು ಗಣಿಗಾರಿಕೆ ಮಾಡಲು ಲಭ್ಯವಿದ್ದು, ಪರಿಸರ ವಿಮೋಚನಾ ಪತ್ರದನ್ವಯ ಪ್ರತಿ…

Read More