Headlines

ಸಹೋದರರ ನಡುವೆ ಜಗಳ: ಓರ್ವನಿಗೆ ಕತ್ತಿಯಿಂದ ಹಲ್ಲೆ..!!

ಕಡಬ: ಸಹೋದರ ವ್ಯಕ್ತಿಗೆ ಕತ್ತಿಯಿಂದ ಹಲ್ಲೆ ನಡೆಸಿರುವ ಘಟನೆ ಕಡಬ ತಾಲೂಕಿನ ಕೌಕ್ರಾಡಿ ಗ್ರಾಮದ ಆಲಂಪಾಡಿ ಎಂಬಲ್ಲಿ ನಡೆದಿದೆ. ಕಡಬ ಕೌಕ್ರಾಡಿ ಗ್ರಾಮದ ನಿವಾಸಿ ರಾಜಶೇಖರ (37) ಹಲ್ಲೆಗೆ ಒಳಗಾದವರು. ಅವರ ಸಹೋದರ ಜಯರಾಜ್‌ ಹಲ್ಲೆ ನಡೆಸಿದವರು. ರಾಜಶೇಖರ (37) ಅವರು  ದಿನಾಂಕ: 16.07.2025 ರಂದು ರಾತ್ರಿ ಸಮಯ ತನ್ನ ಮನೆಯಾದ ಕಡಬ ತಾಲೂಕಿನ ಕೌಕ್ರಾಡಿ ಗ್ರಾಮದ ಆಲಂಪಾಡಿ ಎಂಬಲ್ಲಿದ್ದಾಗ, ಸ್ಥಳಕ್ಕೆ ಬಂದ ಆರೋಪಿ ರಾಜಶೇಖರ ಅವರ ಸಹೋದರ ಮನೋಜ್‌ಕುಮಾರ್‌ ಎಂಬವರು ರಾಜಶೇಖರ್ ಅವರನ್ನು ಉದ್ದೇಶಿಸಿ ಅವಾಚ್ಯ…

Read More

ಬೆಳ್ತಂಗಡಿ: ಗಂಡ – ಹೆಂಡತಿ ಜಗಳ ಕೊಲೆಯಲ್ಲಿ ಅಂತ್ಯ..!!

ಬೆಳ್ತಂಗಡಿ: ಪತಿ-ಪತ್ನಿಯರ ನಡುವೆ ಗಲಾಟೆ ನಡೆದಿದೆ. ಈ ವೇಳೆ ಗಲಾಟೆ ವಿಕೋಪಕ್ಕೆ ತಿರುಗಿ ಚಾಕುವಿನಿಂದ ಇರಿದು ಪತ್ನಿಯನ್ನು ಪತಿ ಭೀಕರವಾಗಿ ಕೊಲೆ ಮಾಡಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ತೆಕ್ಕಾರು ಗ್ರಾಮದಲ್ಲಿ ನಡೆದಿದೆ. ಪತಿ ಪತ್ನಿ ನಡುವೆ ನಡೆದ ಜಗಳದಲ್ಲಿ ಪತ್ನಿಯನ್ನು ಚಾಕುವಿನಿಂದ ಇರಿದು ಪತಿ ಭೀಕರವಾಗಿ ಕೊಲೆ ಮಾಡಿರುವ ಘಟನೆ ಬೆಳ್ತಂಗಡಿ ತಾಲೂಕಿನ ತೆಕ್ಕರು ಗ್ರಾಮದಲ್ಲಿ ಈ ಒಂದು ಕೊಲೆ ನಡೆದಿದೆ. ಪತ್ನಿ ಜತೀನ್ ಳನ್ನು ಚಾಕುವಿನಿಂದ ಇರಿದು ಪತಿ ರಫೀಕ್ ಭೀಕರವಾಗಿ…

Read More

ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಮಣ್ಣಗುಂಡಿಯಲ್ಲಿ ಗುಡ್ಡ ಕುಸಿತ

ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ನಂ 75 ರ ಕಡಬ ತಾಲೂಕು ಕೌಕ್ರಾಡಿ ಗ್ರಾಮದ ಮಣ್ಣಗುಂಡಿ ಎಂಬಲ್ಲಿ, ಗುಡ್ಡ ಕುಸಿದ ಘಟನೆ ನಡೆದಿದ್ದು, ಪರಿಣಾಮ ರಾಷ್ಟ್ರೀಯ ಹೆದ್ದಾರಿ ವಾಹನ ಸಂಚಾರ ಸಂಪೂರ್ಣವಾಗಿ ಸ್ಥಗಿತಗೊಂಡಿದೆ. ಹೆದ್ದಾರಿಯಲ್ಲಿ ಬೃಹತ್‌ ಪ್ರಮಾಣದ ಮಣ್ಣು ಕುಸಿದು ಬಿದ್ದಿದ್ದು ಈಗಾಗಲೇ ಮಣ್ಣು ತೆಗೆಯುವ ಕಾರ್ಯ ಆರಂಭವಾಗಿರುತ್ತದೆ. ಇನ್ನಷ್ಟು ಮಣ್ಣು ಕುಸಿಯುತ್ತಿದ್ದು, ಮಣ್ಣು ತೆಗೆಯುವ ಕಾರ್ಯ ಮಧ್ಯಾಹ್ನದವರೆಗೆ ನಡೆಯಲಿದೆ ಎಂದು ತಿಳಿದು ಬಂದಿದೆ. ಈ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚರಿಸುವ ಪ್ರಯಾಣಿಕರು ಮತ್ತು ವಾಹನ ಚಾಲಕರು…

Read More

ಆರ್ ಜೆ ಪ್ರೊಡಕ್ಷನ್ ನಿರ್ಮಾಣದ ನೂತನ ತುಳು ಚಲನಚಿತ್ರದ ಟೈಟಲ್ ಮತ್ತು ಮೋಶನ್ ಪೋಸ್ಟರ್ ಬಿಡುಗಡೆ

ಕಳೆದ ಕೆಲ ದಿವಸಗಳಿಂದ ಜನಮಾನಸದಲ್ಲಿ ಕುತೂಹಲ ಕೆರಳಿಸಿದ್ದ, ಬಹು ನಿರೀಕ್ಷಿತ ಆರ್ ಜೆ ಪ್ರೊಡಕ್ಷನ್ ನಿರ್ಮಾಣದಲ್ಲಿ ಚಿತ್ರೀಕರಣಗೊಳ್ಳುತ್ತಿರುವ ತುಳು ಚಲನಚಿತ್ರದ ಟೈಟಲ್ ಮತ್ತು ಮೋಷನ್ ಪೋಸ್ಟರ್ ಬಿಡುಗಡೆ ಕಾರ್ಯಕ್ರಮವು ಇಂದು ನಡೆಯಿತು. ಕೊನೆಗೂ ಚಿತ್ರದ ಹೆಸರನ್ನು ತುಳು ರಂಗಭೂಮಿ ಮತ್ತು ಚಲನಚಿತ್ರ ನಟ ಹಾಗೂ ನಿರ್ದೇಶಕರಾಗಿರುವ ತೆಲಿಕೆದ ಬೊಳ್ಳಿ ಡಾ. ದೇವದಾಸ್ ಕಾಪಿಕಾಡ್ ಇವರು ಅಧಿಕೃತವಾಗಿ ಅನಾವರಣಗೊಳಿಸಿದರು. ಇಷ್ಟು ದಿವಸ ಕಲಾಭಿಮಾನಿಗಳ ಹಲವಾರು ಪ್ರಶ್ನೆಗಳಿಗೆ ಉತ್ತರ ಖುಷಿ ಟೈಲರ್ಸ್ ಎಂಬ ಚಿತ್ರದ ಹೆಸರು. ನಂತರ ಮಾತನಾಡಿದ ದೇವದಾಸ್…

Read More

ಉಡುಪಿ: ಹೃದಯಾಘಾತದಿಂದ ವಿದ್ಯಾರ್ಥಿ ಸಾವು..!!

ಉಡುಪಿ: ಶಾಲಾ ಬಾಲಕನೋರ್ವ ಮನೆಯಲ್ಲೇ ಕುಸಿದು ಬಿದ್ದು ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ಉಡುಪಿಯಲ್ಲಿ ನಡೆದಿದೆ. ಖಾಸಗಿ ಶಾಲೆಯಲ್ಲಿ ಕಲಿಯುತ್ತಿರುವ ಆರನೇ ತರಗತಿಯ ವಿದ್ಯಾರ್ಥಿ ರ್ಯಾನ್ಸ್ ಕ್ಯಾಥಲ್ ಡಿಸೋಜಾ ಮೃತ ದುರ್ದೈವಿ. ಆರೋಗ್ಯದಿಂದಿದ್ದ ಬಾಲಕ ಇದ್ದಕಿದ್ದಂತೆ ಮನೆಯಲ್ಲಿ ಕುಸಿದು ಬಿದ್ದಿದ್ದಾನೆ. ತೊಟ್ಟಂನ ಅಶ್ವಿನ್ ಮತ್ತು ಸರೀತಾ ಡಿಸೋಜಾ ದಂಪತಿಯ ಪುತ್ರನಾದ ಈತ ಹನ್ನೊಂದು ವರ್ಷದ ಬಾಲಕ. ಮಗನನ್ನು ಕಳೆದುಕೊಂಡ ಹೆತ್ತವರ ಆಕ್ರಂದನ ಮುಗಿಲು ಮುಟ್ಟಿದೆ. ಮಲ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಸೌತ್ ಕೆನರಾ ಚಿಟ್ ಫಂಡ್ ಅಸೋಸಿಯೇಷನ್ ಮಂಗಳೂರು ಇದರ ಮಾಲೀಕರ ವಿಶೇಷ ಸಭೆ

ಸೌತ್ ಕೆನರಾ ಚಿಟ್ ಫಂಡ್ ಅಸೋಸಿಯೇಷನ್ ಮಂಗಳೂರು ಇದರ ಮಾಲೀಕರ ವಿಶೇಷ ಸಭೆಯು ಇಂದು ನಗರದ ಕುಡ್ಲ ಹೋಟೆಲ್ ನ ಸಿಲ್ವರ್ ಸಭಾಂಗಣದಲ್ಲಿ ನಡೆಯಿತು. ಸಭೆಯ ಅಧ್ಯಕ್ಷತೆಯನ್ನು ನವಚೇತನ ಚಿಟ್ಸ್ ಪ್ರೈವೇಟ್ ಲಿಮಿಟೆಡ್ ನ ಪಾಲುದಾರರು ಹಾಗೂ ಸೌತ್ ಕೆನರಾ ಚಿಟ್ ಫಂಡ್ ಅಸೋಸಿಯೇಷನ್ ಅಧ್ಯಕ್ಷ ರು ಶ್ರೀ ಲೋಕೇಶ್ ಶೆಟ್ಟಿ ವಹಿಸಿದ್ದರು. ಹಿರಿಯ ಸಲಹೆಗಾರ ದ ಶ್ರೀ ಚಂದ್ರಹಾಸ ಶೆಟ್ಟಿ. ಜಿ.ಆರ್. ಶೆಟ್ಟಿ( ಮಕರ ಜ್ಯೋತಿ ಚಿಟ್ಸ್ ಪ್ರೈವೇಟ್ ಲಿಮಿಟೆಡ್ ) ಹಾಗೂ ಶ್ರೀ ಸುರೇಶ್…

Read More

ಉಳ್ಳಾಲ: ಒಂಟಿ ಮಹಿಳೆಯ ಕೊಲೆ ಪ್ರಕರಣ- ಆರೋಪಿ ಅರೆಸ್ಟ್

ಉಳ್ಳಾಲ: ಮೊಂಟೆಪದವು ಸಮೀಪ ಒಂಟಿಯಾಗಿ ವಾಸವಿದ್ದ ಮಹಿಳೆಯನ್ನು ಹತ್ಯೆಗೈದು ಮೃತದೇಹವನ್ನು ಬಾವಿಗೆ ಎಸೆದ ಪ್ರಕರಣಕ್ಕೆ ಸಂಬಂಧಿಸಿದ ಆರೋಪಿಯನ್ನು ಕೃತ್ಯ ನಡೆದ ಎರಡು ತಿಂಗಳ ಬಳಿಕ ಕೊಣಾಜೆ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಆರೋಪಿಯು ಬಿಹಾರ ಮೂಲದ ವ್ಯಕ್ತಿಯಾಗಿದ್ದು, ಸ್ಥಳೀಯವಾಗಿ ಗಾರೆ ಕಾರ್ಮಿಕನಾಗಿ ಕೆಲಸ ಮಾಡುತ್ತಿದ್ದ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಮೊಂಟೆಪದವು ಸಮೀಪ ಮೇ 29ರಂದು ಬಾವಿಯೊಂದರಲ್ಲಿ ಸೊಂಟಕ್ಕೆ ಕಲ್ಲುಗಳನ್ನು ಕಟ್ಟಿದ ಸ್ಥಿತಿಯಲ್ಲಿ ಸಕಲೇಶಪುರ ಮೂಲದ ಸುಂದರಿ(36) ಎಂಬವರ ಮೃತದೇಹ ಪತ್ತೆಯಾಗಿತ್ತು. ಅತ್ಯಾಚಾರ ಎಸಗಿ ಹತ್ಯೆ ನಡೆಸಿರುವ ಬಗ್ಗೆ…

Read More

ಮಂಗಳೂರು: ವಾಟ್ಸಪ್‌ನಲ್ಲಿ ಕೋಮುದ್ವೇಷ ಹರಡಿದ್ದ ಆರೋಪಿಯ ಬಂಧನ!!

ಮಂಗಳೂರು: ವಾಟ್ಸಪ್ ಗ್ರೂಪ್‌ಗಳಲ್ಲಿ ಕೋಮುದ್ವೇಷ ಹರಡುವ ಹಾಗೂ ಸುಳ್ಳು ಆರೋಪಗಳನ್ನು ಪ್ರಚಾರ ಮಾಡುವ ಪ್ರಕರಣಕ್ಕೆ ಸಂಬಂಧಿಸಿದಂತೆ ಸುರತ್ಕಲ್ ಪೊಲೀಸರು ಓರ್ವ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ರಾಮ್ ಪ್ರಸಾದ್ ಅಲಿಯಾಸ್ ಪೋಚ (42) ಬಂಧಿತ ಆರೋಪಿಯಾಗಿದ್ದು, ನ್ಯಾಯಾಲಯವು ಆತನಿಗೆ ನ್ಯಾಯಾಂಗ ಬಂಧನ ವಿಧಿಸಿದೆ. ಹೊಸಬೆಟ್ಟು ಸುರತ್ಕಲ್‌ನಲ್ಲಿ RV ಎಂಟರ್‌ಪ್ರೈಸಸ್ ಸಂಸ್ಥೆಯನ್ನು ನಡೆಸುತ್ತಿರುವ ರಾಜೇಶ್ ಎಂಬುವರು, ತಮ್ಮ ವಿರುದ್ಧ ವಾಟ್ಸಪ್ ಗ್ರೂಪ್‌ಗಳಲ್ಲಿ ಕೋಮುದ್ವೇಷ ಹರಡುವ ಸುಳ್ಳು ಆರೋಪಗಳನ್ನು ಹರಡಲಾಗುತ್ತಿದೆ ಎಂದು ಸುರತ್ಕಲ್ ಪೊಲೀಸ್ ಠಾಣೆಗೆ ದೂರು ನೀಡಿದ್ದರು. “ರಾಜೇಶ್ ಅವರು…

Read More

ಧರ್ಮಸ್ಥಳದಲ್ಲಿ‌ ಎಂಬಿಬಿಎಸ್ ವಿದ್ಯಾರ್ಥಿನಿ ನಾಪತ್ತೆ; 2 ದಶಕಗಳ ಬಳಿಕ ಎಸ್ಪಿಗೆ ದೂರು ನೀಡಿದ ತಾಯಿ 

ಧರ್ಮಸ್ಥಳದಲ್ಲಿ 2003ರಲ್ಲಿ ನಾಪತ್ತೆಯಾಗಿದ್ದಾಳೆ ಎನ್ನಲಾದ ಎಂಬಿಬಿಎಸ್ ವಿದ್ಯಾರ್ಥಿನಿ ಅನನ್ಯಾ ಭಟ್, ವಿಚಾರವಾಗಿ ಎರಡು ದಶಕಗಳ ನಂತರ ಆಕೆಯ ತಾಯಿ ಸುಜಾತಾ ಭಟ್ ಎಂಬುವರು ಎಸ್ಪಿ ಕಚೇರಿಗೆ ದೂರು ನೀಡಿದ್ದಾರೆ. ತಮ್ಮ ವಕೀಲರೊಂದಿಗೆ ಎಸ್ಪಿ ಕಚೇರಿಗೆ ಆಗಮಿಸಿದ ಅವರು, ಎಸ್ಪಿ ಡಾ . ಅರುಣ್ ಅವರನ್ನು ಭೇಟಿ ಮಾಡಿ ದೂರು ನೀಡಿದ್ದಾರೆ. ದೂರುದಾರರ ದೂರಿನ ಬಗ್ಗೆ ಧರ್ಮಸ್ಥಳ ಠಾಣೆಯಲ್ಲಿ ದೂರು ಅರ್ಜಿ ದಾಖಲಿಸಲಾಗಿದ್ದು, ಈ ಬಗ್ಗೆ ವಿಚಾರಣೆ ನಡೆಸಿ, ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ದಕ್ಷಿಣ ಕನ್ನಡ…

Read More

ಮೂಡುಬಿದಿರೆಯ ಕಾಲೇಜು ಉಪನ್ಯಾಸಕರು ಸೇರಿ ಮೂವರಿಂದ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ

ಮೂಡುಬಿದಿರೆಯ ಕಾಲೇಜೊಂದರ ಇಬ್ಬರು ಉಪನ್ಯಾಸಕರು ಹಾಗೂ ಅವರ ಸ್ನೇಹಿತ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಎಸಗಿದ ಆರೋಪ ಸಂಬಂಧ ಬೆಂಗಳೂರಿನ ಮಾರತಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ ಬಂಧಿತರನ್ನು ಕಾಲೇಜಿನ ಭೌತಶಾಸ್ತ್ರ ಉಪನ್ಯಾಸಕ ನರೇಂದ್ರ, ಜೀವಶಾಸ್ತ್ರ ಉಪನ್ಯಾಸಕ ಸಂದೀಪ್ ಹಾಗೂ ಅವರ ಗೆಳೆಯ ಅನೂಪ್ ಎಂದು ಗುರುತಿಸಲಾಗಿದೆ. ಭೌತಶಾಸ್ತ್ರ ಉಪನ್ಯಾಸಕ ನರೇಂದ್ರ ನೋಟ್ಸ್ ನೀಡುವ ನೆಪದಲ್ಲಿ ವಿದ್ಯಾರ್ಥಿನಿ ಜತೆ ಸಲುಗೆ ಬೆಳೆಸಿಕೊಂಡಿದ್ದ. ಬಳಿಕ ವಾಟ್ಸಾಪ್ ನಲ್ಲಿ ಚಾಟ್ ಮಾಡುತ್ತಿದ್ದ, ವಿದ್ಯಾರ್ಥಿನಿ ನಂಬಿ ಆಗಾಗ…

Read More