Headlines

ಬೆಳ್ತಂಗಡಿ ತಾಲೂಕು ಕಚೇರಿಯ ಪ್ರಥಮ ದರ್ಜೆ ಸಹಾಯಕ ಕುಸಿದು ಬಿದ್ದು ಸಾವು..!!

ಬೆಳ್ತಂಗಡಿ: ಹೃದಯಾಘಾತದಿಂದ ತಾಲೂಕು ಕಚೇರಿಯ ಪ್ರಥಮ ದರ್ಜೆ ಸಹಾಯಕ ಕುಸಿದು ಬಿದ್ದು ಮೃತಪಟ್ಟ ಘಟನೆ ಬೆಳ್ತಂಗಡಿಯಲ್ಲಿ ನಡೆದಿದೆ. ಮೃತಪಟ್ಟವರನ್ನು ಬೆಳ್ತಂಗಡಿ ತಾಲೂಕು ಆಡಳಿತ ಸೌಧದ ಪ್ರಥಮ ದರ್ಜೆ ಸಹಾಯಕರಾಗಿದ್ದ ಸತೀಶ್(46) ಎಂದು ಗುರುತಿಸಲಾಗಿದೆ. ಅವರು ಮಂಗಳವಾರ ಬೆಳಗ್ಗೆ ಲಾಯಿಲದಲ್ಲಿರುವ ತನ್ನ ಮನೆಯಲ್ಲಿ ಸ್ನಾನ ಮಾಡಿ ಬಾತ್ ರೂಮ್ ನಿಂದ ಹೊರಬರುತ್ತಿದ್ದ ವೇಳೆ ಏಕಾಕಿ ಕುಸಿದು ಬಿದ್ದರೆನ್ನಲಾಗಿದೆ. ತಕ್ಷಣ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಆಸ್ಪತ್ರೆಯಲ್ಲಿ ಪರೀಕ್ಷಿಸಿದ ವೈದ್ಯರು ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆಂದು ತಿಳಿಸಿದ್ದಾರೆ. ಸತೀಶ್ ಮೂಲತಃ ಹಾಸನ ಜಿಲ್ಲೆಯವರಾಗಿದ್ದು, ಲಾಯಿಲದಲ್ಲಿ…

Read More

ಪುತ್ತೂರು: ತಲವಾರು ಪ್ರದರ್ಶಿಸಿ ಬೆದರಿಕೆ-ಆರೋಪಿಯ ಬಂಧನ

ಪುತ್ತೂರು: ತಲವಾರು ಹಿಡಿದುಕೊಂಡು ಸಾರ್ವಜನಿಕರಿಗೆ ಬೆದರಿಕೆ ಒಡ್ಡಿದ ಪ್ರಕರಣವೊಂದು ಪುತ್ತೂರು ನಗರ ಬೊಳುವಾರು ಮಸೀದಿ ಬಳಿಯಲ್ಲಿ ಸೋಮವಾರ ನಡೆದಿದ್ದು, ಸಾರ್ವಜನಿಕರ ದೂರಿನ ಹಿನ್ನೆಲೆಯಲ್ಲಿ ನಗರ ಪೊಲೀಸರು ತಲವಾರು ಸಹಿತ ಆರೋಪಿಯನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಸಕಲೇಶಪುರ ಮೂಲದ ಪ್ರಸ್ತುತ ಬಂಟ್ವಾಳದಲ್ಲಿ ವಾಸ್ತವ್ಯವಿರುವ ರಾಜು ಯಾನೆ ರಾಜೇಶ್ (45) ಎಂದು ಗುರುತಿಸಲಾಗಿದೆ. ಆರೋಪಿ ರಾಜೇಶ್ ತಲವಾರು ಹಿಡಿದುಕೊಂಡು ಮಸೀದಿ ಬಳಿಯ ಗೇಟಿನ ಹೊರ ಭಾಗದಲ್ಲಿ ನಿಂತಿದ್ದ ಎನ್ನಲಾಗಿದ್ದು, ಇದನ್ನು ಗಮನಿಸಿದ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದರು. ಪುತ್ತೂರು ನಗರ ಠಾಣೆ…

Read More

ಕಾರ್ಕಳ: ಹಾಸ್ಟೆಲ್‌ನ ಶೌಚಾಲಯದ ಗೋಡೆಯ ಮೇಲೆ ದ್ವೇಷದ ಬರಹ- ವಿದ್ಯಾರ್ಥಿನಿ ಅರೆಸ್ಟ್

ಕಾರ್ಕಳ : ಕಾಲೇಜು ಮಹಿಳಾ ಹಾಸ್ಟೆಲ್‌ನ ಶೌಚಾಲಯದ ಗೋಡೆಯ ಮೇಲೆ ಎರಡು ಸಮುದಾಯಗಳ ನಡುವೆ ದ್ವೇಷ ಹರಡುವ ರೀತಿಯಲ್ಲಿ ಪ್ರಚೋದನಕಾರಿ ಬರಹ ಬರೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ವಿದ್ಯಾರ್ಥಿನಿಯನ್ನು ಕಾರ್ಕಳ ಗ್ರಾಮಾಂತರ ಪೊಲೀಸರು ಬಂಧಿಸಿದ್ದಾರೆ. ಬಂಧಿತ ವಿಧ್ಯಾರ್ಥಿನಿಯನ್ನು ಕಾಸರಗೋಡು ಜಿಲ್ಲೆ ನಿವಾಸಿ ಫಾತಿಮ ಶಬ್ದಾ (21) ಎಂದು ಗುರುತಿಸಲಾಗಿದ್ದು, ಆರೋಪಿಯನ್ನು ಕಾರ್ಕಳ ನ್ಯಾಯಾಲಯಕ್ಕೆ ಪೊಲೀಸರು ಹಾಜರುಪಡಿಸಿದ್ದರು. ಮೇ 7 ರಂದು ಸಂಜೆ 6 ಗಂಟೆ ಸುಮಾರಿಗೆ, ಎರಡು ಸಮುದಾಯಗಳ ನಡುವೆ ದ್ವೇಷವನ್ನು ಹರಡುವ ಉದ್ದೇಶದಿಂದ ಹಾಸ್ಟೆಲ್‌ನ ಕೆಲವು…

Read More

ಮಂಗಳೂರು: ನಾಲ್ವರಿಗೆ ತಂಡದಿಂದ ಹಲ್ಲೆ..!! ಪ್ರಕರಣ ದಾಖಲು

ಕೇರಳ ನಾಲ್ಕು ಮಂದಿಯನ್ನು ವ್ಯವಹಾರ ಉದ್ದೇಶಕ್ಕೆ ಕರೆಸಿಕೊಂಡು ಬಳಿಕ ಮಲ್ಲೂರಿಗೆ ಕರೆದೊಯ್ದ ತಂಡವೊಂದು ಹಲ್ಲೆಗೈದ ಬಗ್ಗೆ ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕೋಝಿಕ್ಕೋಡ್ ನಿವಾಸಿ ಅಬ್ದುಲ್ ಮನಾಫ್ ಮತ್ತವರ ಸ್ನೇಹಿತರಾದ ಅರ್ಶಕ್ ಅಹ್ಮದ್, ಯಾಸರ್ ಅರಫತ್ ವಿ.ಪಿ., ಮುಹಮ್ಮದ್ ಸಾಹಿರ್ ಎಂಬವರು ದುಬೈಯಲ್ಲಿ ವ್ಯವಹಾರ ಮತ್ತು ಲ್ಯಾಂಡ್ ಪ್ರೋಕರಿಂಗ್ ಕೆಲಸ ಮಾಡುತ್ತಿದ್ದರು. ಮೂರು ತಿಂಗಳಿನಿಂದ ತನ್ನೂರಾದ ಕೋಝಿಕೋಡ್‌ನಲ್ಲಿ ಪ್ರೋಕರಿಂಗ್ ಕೆಲಸ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಮನಾಫ್‌ರ ಪರಿಚಯದ ಮಂಗಳೂರಿನಲ್ಲಿರುವ ಸರ್ಫರಾಝ್ ಎಂಬಾತ ವ್ಯವಹಾರಕ್ಕೆ ಸಂಬಂಧಿಸಿದಂತೆ ನಾಲ್ಕು…

Read More

ಉಡುಪಿ ಸರ್ಕಾರಿ ಬಾಲಕರ ವೀಕ್ಷಣಾ ಗೃಹದಿಂದ ಇಬ್ಬರು ಬಾಲಕರು ನಾಪತ್ತೆ

ಉಡುಪಿ : ಉಡುಪಿಯ ಸರ್ಕಾರಿ ಬಾಲಕರ ವೀಕ್ಷಣಾ ಕೇಂದ್ರದಿಂದ ಇಬ್ಬರು ಬಾಲಕರು ಭಾನುವಾರ ಮಧ್ಯಾಹ್ನದಿಂದ ನಾಪತ್ತೆಯಾಗಿರುವ ಬಗ್ಗೆ ಮಾಹಿತಿ ಲಭಿಸಿದೆ. ಕಾಣೆಯಾದ ಮಕ್ಕಳನ್ನು ಬೆಂಗಳೂರಿನ ಜ್ಞಾನ ಮಂದಿರ ಸರ್ಕಾರಿ ಶಾಲೆಯ ವಿದ್ಯಾರ್ಥಿ ದಿಲೀಪ್ (14) ಮತ್ತು ಬೆಂಗಳೂರಿನ ಕುಮಾರಸ್ವಾಮಿ ಲೇಔಟ್‌ನ ರಾಜೇಶ್ವರಿ ನಗರ ಗಾರ್ಡನ್ ನಿವಾಸಿ ಧನರಾಜ್ (13) ಎಂದು ಗುರುತಿಸಲಾಗಿದೆ. ಇಬ್ಬರೂ ಬಾಲಕರನ್ನು 2025ರ ಜುಲೈ 7ರಂದು ಸ್ವಾಗತ ಕೇಂದ್ರದ ಮೂಲಕ ಸಂಸ್ಥೆಗೆ ದಾಖಲಿಸಲಾಗಿತ್ತು. 2025ರ ಜುಲೈ 13 ರಂದು ಮಧ್ಯಾಹ್ನ 1:40 ರ ಸುಮಾರಿಗೆ,…

Read More

ವೈವಾಹಿಕ ಪ್ರಕರಣಗಳಲ್ಲಿ ಸಂಗಾತಿಯ “ರಹಸ್ಯ ಕಾಲ್ ರೆಕಾರ್ಡ್” ಸಾಕ್ಷ್ಯವಾಗಿ ಬಳಸಬಹುದು : ಸುಪ್ರೀಂಕೋರ್ಟ್ ಮಹತ್ವದ ತೀರ್ಪು

ನವದೆಹಲಿ : ವೈವಾಹಿಕ ಪ್ರಕರಣಗಳಲ್ಲಿ ಸಂಗಾತಿಗಳ ರಹಸ್ಯವಾಗಿ ದಾಖಲಿಸಲಾದ ಸಂಭಾಷಣೆಗಳನ್ನು ಸಾಕ್ಷ್ಯವಾಗಿ ಒಪ್ಪಿಕೊಳ್ಳಬಹುದು ಎಂದು ಸುಪ್ರೀಂ ಕೋರ್ಟ್ ಸೋಮವಾರ ಅಭಿಪ್ರಾಯಪಟ್ಟಿದೆ.  ಸಂಗಾತಿಗಳು ಪರಸ್ಪರ ಕಣ್ಣಿಡುತ್ತಿರುವುದು ವಿವಾಹವು ಬಲವಾಗಿಲ್ಲ ಎಂಬುದಕ್ಕೆ ಪುರಾವೆಯಾಗಿದೆ ಮತ್ತು ಆದ್ದರಿಂದ ನ್ಯಾಯಾಂಗ ವಿಚಾರಣೆಯಲ್ಲಿ ಬಳಸಬಹುದು ಎಂದು ಹೇಳಿದೆ. ಈ ಮೂಲಕ ಪತ್ನಿಯ ಅರಿವಿಗೆ ಬಾರದಂತೆ ಆಕೆಯ ದೂರವಾಣಿ ಸಂಭಾಷಣೆಯನ್ನು ರೆಕಾರ್ಡ್ ಮಾಡುವುದು ಆಕೆಯ ಗೌಪ್ಯತೆಯ ಮೂಲಭೂತ ಹಕ್ಕಿನ ‘ಸ್ಪಷ್ಟ ಉಲ್ಲಂಘನೆ’ ಮತ್ತು ಕುಟುಂಬ ನ್ಯಾಯಾಲಯದ ಮುಂದೆ ಅದನ್ನು ಸಾಕ್ಷ್ಯವಾಗಿ ಒಪ್ಪಿಕೊಳ್ಳಲಾಗುವುದಿಲ್ಲ ಎಂದು ತೀರ್ಪು ನೀಡಿದ್ದ…

Read More

ಶಿರಾಡಿಘಾಟ್ ನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಜಲಪಾತಕ್ಕೆ ಬಿದ್ದ ಕಾರು..!

 ಶಿರಾಡಿಘಾಟ್ ನಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ಚಾಲಕನ ನಿಯಂತ್ರಣ ತಪ್ಪಿ ಕಾರು ಜಲಪಾತಕ್ಕೆ ಬಿದ್ದಿದೆ. ಬೆಂಗಳೂರು ಮೂಲದ ಪ್ರವಾಸಿಗರು ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಶಿರಾಡಿಘಾಟ್ ನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಜಲಪಾತಕ್ಕೆ ಬಿದ್ದಿದ್ದು ಅದೃಷ್ಟವಶಾತ್ ಕಾರಿನಲ್ಲಿದ್ದವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಜಲಪಾತ ವೀಕ್ಷಣೆಗೆ ಕಾರು ನಿಲ್ಲಿಸುವಾಗ ಚಾಲಕನ ನಿಯಂತ್ರಣ ತಪ್ಪಿ ರಾಷ್ಟ್ರೀಯ ಹೆದ್ದಾರಿ ಪಕ್ಕದ ಫಾಲ್ಸ್ಗೆ ಕಾರು ಉರುಳಿ ಬಿದ್ದಿದ್ದು, ಚಾಲಕನಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಸಕಲೇಶಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ…

Read More

ಉಡುಪಿ: ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ- ಮಹಜರು ವೇಳೆ ಪೊಲೀಸರಿಗೆ ಹಲ್ಲೆ ನಡೆಸಿ ತಪ್ಪಿಸಿಕೊಳ್ಳಲು ಯತ್ನ

ಉಡುಪಿ: ಸ್ಥಳ ಮಹಜರು ವೇಳೆ ಪೊಲೀಸರಿಗೆ ಹಲ್ಲೆ ನಡೆಸಿ ಪರಾರಿಯಾಗಲು ಯತ್ನಿಸಿದ ಪೋಕ್ಸೊ ಪ್ರಕರಣದ ಆರೋಪಿಯನ್ನು ಲಾಠಿ ಏಟು ಕೊಟ್ಟು ವಶಕ್ಕೆ ಪಡೆದುಕೊಂಡ ಘಟನೆ ರವಿವಾರ ನಡೆದಿದೆ. ಈ ವೇಳೆ ಗಾಯಗೊಂಡ ಉಡುಪಿ ಮಹಿಳಾ ಠಾಣೆಯ ಪೊಲೀಸ್ ಸಿಬ್ಬಂದಿ ರಿತೇಶ್ ಹಾಗೂ ಪೊಲೀಸರ ಲಾಠಿ ಏಟಿನಿಂದ ಗಾಯಗೊಂಡಿರುವ ಉತ್ತರ ಪ್ರದೇಶ ಮೂಲದ ಮಣಿಪಾಲ ವಿ.ಪಿ.ನಗರದ ನಿವಾಸಿ ಮುಹಮ್ಮದ್ ದಾನೀಶ್(29) ಎಂಬವರನ್ನು ಉಡುಪಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಉಡುಪಿ ಮಹಿಳಾ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಕಾಯ್ದೆ ಯಡಿ ದಾಖಲಾಗಿದ ಪ್ರಕರಣಕ್ಕೆ…

Read More

ಕೇಂದ್ರ ಸರ್ಕಾರದಿಂದ ಮಂಗಳೂರಿಗೆ 100 ಹೊಸ ಇಲೆಕ್ಟ್ರಿಕ್‌ ಬಸ್‌ ಮಂಜೂರು, ಶೀಘ್ರದಲ್ಲೇ ಸಂಚಾರ ; ಸಂಸದ ಕ್ಯಾ.ಬ್ರಿಜೇಶ್‌ ಚೌಟ

ಮಂಗಳೂರು : ಪ್ರಧಾನ ಮಂತ್ರಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವು ಪ್ರಧಾನಮಂತ್ರಿ ಇ-ಬಸ್ ಸೇವಾ ಯೋಜನೆಯಡಿ ಮಂಗಳೂರಿಗೆ ಒಟ್ಟು 100 ಹೊಸ ಇಲೆಕ್ಟ್ರಿಕ್‌ ಬಸ್‌ಗಳನ್ನು ಮಂಜೂರು ಮಾಡಿರುವುದಾಗಿ ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್‌ ಚೌಟ ತಿಳಿಸಿದ್ದಾರೆ.  ಮುಡಿಪು ಕಂಬಳಪದವಿನಲ್ಲಿ ನಿರ್ಮಾಣಗೊಂಡ ವಿದ್ಯುನ್ಮಾನ ವಾಹನ ಚಾಲನಾ ಪರೀಕ್ಷಾ ಪಥಗಳ ಕೇಂದ್ರದ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಅವರು, ದೇಶದಲ್ಲಿ ವಾಹನಗಳಿಂದಾಗುವ ವಾಯುಮಾಲಿನ್ಯ ತಡೆಗಟ್ಟುವುದಕ್ಕೆ ಕೇಂದ್ರ ಸರ್ಕಾರವು ದೇಶದೆಲ್ಲೆಡೆ ಇಲೆಕ್ಟ್ರಿಕ್‌ ಬಸ್‌ಗಳ ಬಳಕೆಯನ್ನು ಹೆಚ್ಚು ಜನಪ್ರಿಯಗೊಳಿಸುತ್ತಿದೆ. ಅದರಂತೆ ವಸತಿ…

Read More

ಕುಲಾಲ ಸಂಘ ನಾನಿಲ್ತಾರ್ ಇದರ 37 ನೇ ವಾರ್ಷಿಕ ಮಹಾಸಭೆ

ಕುಲಾಲ ಸಂಘ ನಾನಿಲ್ತಾರ್ ಇದರ 37 ನೇ ವಾರ್ಷಿಕ ಮಹಾಸಭೆ ಸಾಮೂಹಿಕ ಸತ್ಯನಾರಾಯಣ ಪೂಜೆ, ಪ್ರತಿಭಾ ಪುರಸ್ಕಾರ ಹಾಗೂ ಸನ್ಮಾನ ಕಾರ್ಯಕ್ರಮವು ನಾನಿಲ್ತಾರ್ ಕುಲಾಲ ಸಮುದಾಯ ಭವನದಲ್ಲಿ ಶ್ರೀ ಜಯರಾಮ್ ಕುಲಾಲ್ ಅಧ್ಯಕ್ಷರು ಕುಲಾಲ ಸಂಘ ನಾನಿಲ್ತಾರ್ ಇವರ ಅಧ್ಯಕ್ಷತೆಯಲ್ಲಿ ನಡೆಯಿತು. ಸಮಾಜದ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಸಾಧಕರಿಗೆ ಸನ್ಮಾನಿಸಲಾಯಿತು. ಶೈಕ್ಷಣಿಕ ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನವನ್ನು ವಿತರಿಸಲಾಯಿತು. ಸಮಾಜದಲ್ಲಿರುವ ಅಶಕ್ತರಿಗೆ ಧನಸಹಾಯವನ್ನು ಮಾಡಲಾಯಿತು.. ಶ್ರೀ ಪ್ರೇಮಾನಂದ ಕುಲಾಲ್ ಮಾತಾಡಿ ಸಮುದಾಯದ ಧಾರ್ಮಿಕ ಶ್ರದ್ಧಾ ಕೇಂದ್ರವಾದ ಶ್ರೀ…

Read More