ಮಂಗಳೂರು: ಬಹು ನಿರೀಕ್ಷಿತ “ಧರ್ಮಚಾವಡಿ” ಸಿನಿಮಾ ಕರಾವಳಿಯಾದ್ಯಂತ ಬಿಡುಗಡೆ!

ಮಂಗಳೂರು: ಕೃಷ್ಣವಾಣಿ ಪಿಕ್ಚರ್ಸ್ ಲಾಂಛನದಲ್ಲಿ ತಯಾರಾದ ನಡುಬೈಲ್ ಜಗದೀಶ್ ಅಮೀನ್ ನಿರ್ಮಾಣದ ನಿತಿನ್ ರೈ ಕುಕ್ಕವಳ್ಳಿ ನುಳಿಯಾಲು ನಿರ್ದೇಶನದಲ್ಲಿ ಮೂಡಿ ಬಂದಿರುವ “ಧರ್ಮ ಚಾವಡಿ” ತುಳು ಚಿತ್ರ ಭಾರತ್ ಮಾಲ್ ನ ಭಾರತ್ ಸಿನಿಮಾಸ್ ನಲ್ಲಿ ಬಿಡುಗಡೆಗೊಂಡಿತು. ದೀಪ ಬೆಳಗಿಸುವ ಮೂಲಕ ಸಿನಿಮಾಕ್ಕೆ ಚಾಲನೆ ನೀಡಿ ಮಾತಾಡಿದ ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್ ಅವರು “ಆತ್ಮೀಯ ಮಿತ್ರ ನಿತಿನ್ ರೈ ಕುಕ್ಕುವಳ್ಳಿ ಅವರು ಮಾಡಿರುವ ಮೊದಲ ಸಿನಿಮಾ “ಧರ್ಮ ದೈವ” ತುಳುವರ ಮನಗೆಲ್ಲುವಲ್ಲಿ ಯಶಸ್ವಿಯಾಗಿತ್ತು. ಇಂದು…

Read More

ಉಡುಪಿ: ಗರುಡ ಗ್ಯಾಂಗ್‌ನ ಸದಸ್ಯ ಕಬೀರ್ ಹುಸೇನ್ ಗೂಂಡಾ ಕಾಯ್ದೆಯಡಿ ಬಂಧನ

ಉಡುಪಿ: ಹಲವಾರು ಕ್ರಿಮಿನಲ್‌ ಅಪರಾಧ ಕೃತ್ಯಗಳಲ್ಲಿ ಭಾಗಿಯಾದ ಆರೋಪದ ಮೇಲೆ ಕಾರ್ಕಳದ ಕಂಪನ ಕೌಡೂರು ಗ್ರಾಮದ ಕಬೀರ್ ಯಾನೆ ಕಬೀರ್ ಹುಸೇನ್(46) ಎಂಬಾತನನ್ನು ಗೂಂಡಾ ಕಾಯ್ದೆ ಅಡಿ ಬಂಧಿಸಲು ಉಡುಪಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿಯವರು ಆದೇಶ ಹೊರಡಿಸಿದ್ದು, ಅದರಂತೆ ಆತನನ್ನು ಬಂಧಿಸಿ ಮೈಸೂರು ಸೆಂಟ್ರಲ್‌ ಜೈಲಿಗೆ ಕಳುಹಿಸಲಾಗಿದೆ. ಈತನ ಮೇಲೆ ಉಡುಪಿ ಜಿಲ್ಲೆಯ ಕಾರ್ಕಳ ನಗರ, ಹಿರಿಯಡ್ಕ, ಪಡುಬಿದ್ರಿ, ಮಣಿಪಾಲ, ಶಿರ್ವ, ಕಾಪು ಠಾಣೆಗಳ ವ್ಯಾಪ್ತಿಯಲ್ಲಿ 2005 ರಿಂದೀಚೆಗೆ ನಡೆದ ಹಲವಾರು ಕೊಲೆ, ಕೊಲೆ ಯತ್ನ,…

Read More

ಮಂಗಳೂರು: ಕ್ಲಾಕ್ ಟವರ್-ಸ್ಟೇಟ್ ಬ್ಯಾಂಕ್ ರಸ್ತೆಯ ದ್ವಿಮುಖ ಸಂಚಾರ ಬಗ್ಗೆ ತಕ್ಷಣವೇ ವರದಿ ಸಲ್ಲಿಸುವಂತೆ ಜಿಲ್ಲಾಧಿಕಾರಿ ನಿರ್ದೇಶನ

ಮಂಗಳೂರು:ದಕ್ಷಿಣ ಕನ್ನಡ ಜಿಲ್ಲೆಯ ಪ್ರಮುಖ ಪ್ರದೇಶದಲ್ಲಿ ಪ್ರಸ್ತುತ ಏಕಮುಖ ಸಂಚಾರಕ್ಕೆ ಬಳಸಲಾಗುತ್ತಿರುವ ಕ್ಲಾಕ್ ಟವರ್ – ಸ್ಟೇಟ್ ಬ್ಯಾಂಕ್ ರಸ್ತೆಯನ್ನು ದ್ವಿಮುಖ ಸಂಚಾರಕ್ಕೆ ಪರಿವರ್ತಿಸುವ ಬಗ್ಗೆ ವರದಿಯನ್ನು ತಕ್ಷಣವೇ ಸಲ್ಲಿಸುವಂತೆ ಜಿಲ್ಲಾಧಿಕಾರಿ (ಡಿಸಿ) ಎಚ್.ವಿ. ದರ್ಶನ್ ಸಂಬಂಧಪಟ್ಟ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ. ಗುರುವಾರ ಜಿಲ್ಲಾಧಿಕಾರಿ ಕಚೇರಿಯ ಪ್ರಜಾವಾಣಿ ಸಭಾಂಗಣದಲ್ಲಿ ನಡೆದ ಜಿಲ್ಲಾ ರಸ್ತೆ ಸುರಕ್ಷತಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಏಕಮುಖ ಸಂಚಾರ ನಿಯಮದಿಂದ ಸಾರ್ವಜನಿಕರಿಗೆ ಆಗುತ್ತಿರುವ ಅನಾನುಕೂಲತೆಯ ಕುರಿತು ಹಲವಾರು ದೂರುಗಳು ಬಂದಿವೆ…

Read More

SHOCKING : ಮೈಕ್ರೋ ಫೈನಾನ್ಸ್ ಕಿರುಕುಳ : ರೈಲಿಗೆ ತಲೆಕೊಟ್ಟು ತಾಯಿ- ಮಗಳು ಆತ್ಮಹತ್ಯೆ.!

ದಾವಣಗೆರೆಯಲ್ಲಿ ಘೋರವಾದ ದುರಂತ ಒಂದು ಸಂಭವಿಸಿದ್ದು, ತುಂಗಭದ್ರಾ ನದಿಗೆ ಅಡ್ಡಲಾಗಿ ನಿರ್ಮಿಸಿದ ರೈಲ್ವೇ ಸೇತುವೆ ಬಳಿ ತಾಯಿ ಮಗಳು ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ದಾವಣಗೆರೆ ಜಿಲ್ಲೆಯ ಹರಿಹರ ಬಳಿ ಇರುವ ತುಂಗಭದ್ರಾ ನದಿ ಸೇತುವೆ ಬಳಿ ಈ ಒಂದು ಘಟನೆ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ತಾಯಿ ಮಗಳನ್ನ ಗಂಗನರಸಿ ಗ್ರಾಮದ ಸುವರ್ಣಮ್ಮ (65) ಮತ್ತು ಗೌರಮ್ಮ (45) ಆತ್ಮಹತ್ಯೆಗೆ ಶರಣಾಗಿದ್ದಾರೆ. ರೈಲು ಡಿಕ್ಕಿ ಹೊಡೆದ ರಭಸಕ್ಕೆ ಮಹಿಳೆಯರಿಬ್ಬರ ರುಂಡ, ಮುಂಡ ಪ್ರತ್ಯೇಕವಾಗಿದ್ದು, ಅಂಗಾಂಗಗಳು…

Read More

ಮಂಗಳೂರು: ಲಂಚಕ್ಕೆ ಬೇಡಿಕೆ ಪ್ರಕರಣ- ಐವರು ಪೊಲೀಸರ ಅಮಾನತು

ಮಂಗಳೂರು: ವಾಹನ ಪರವಾನಗಿ ಮರಳಿ ನೀಡಲು 50ಸಾವಿರ ರೂ. ಲಂಚದ ಬೇಡಿಕೆಯಿರಿಸಿದ ಪ್ರಕರಣಕ್ಕೆ ಸಂಬಂಧಿಸಿ 5 ಮಂದಿ ಪೊಲೀಸರನ್ನು ಅಮಾನತುಗೊಳಿಸಿ ಮಂಗಳೂರು ನಗರ ಪೊಲೀಸ್ ಕಮಿಷನರ್ ಸುಧೀರ್ ಕುಮಾ‌ರ್ ರೆಡ್ಡಿ ಆದೇಶಿಸಿದ್ದಾರೆ. ಲಂಚದ ಬೇಡಿಕೆಯಿರಿಸಿದ ಪ್ರಕರಣದಲ್ಲಿ ತಸ್ಲಿಂ ಹಾಗೂ ಸಹಕರಿಸಿದ ವಿನೋದ್ ನೇರ ಆರೋಪಿಗಳಾಗಿದ್ದು, ಅವರನ್ನು ಅಮಾನತು ಮಾಡಲಾಗಿದೆ.ತಸ್ಲಿಂ ಮತ್ತು ವಿನೋದ್ ಅವರ ಲಂಚ ಬೇಡಿಕೆ ಬಗ್ಗೆ ಮಾಹಿತಿ ಗೊತ್ತಿದ್ದರೂ ಹಿರಿಯ ಅಧಿಕಾರಿಗಳಿಗೆ ಮಾಹಿತಿ ನೀಡದೆ ಮೌನವಹಿಸಿದ್ದ ಇತರ ಮೂವರನ್ನೂ ಕೂಡಾ ಅಮಾನತುಗೊಳಿಸಲಾಗಿದೆ ಎಂದು ತಿಳಿದು ಬಂದಿದೆ.

Read More

ಲಂಚ‌ಕ್ಕೆ ಬೇಡಿಕೆ ಆರೋಪ: ಟ್ರಾಫಿಕ್ ಹೆಡ್‌ಕಾನ್ಸ್‌ಟೇಬಲ್ ಲೋಕಾಯುಕ್ತ ಬಲೆಗೆ

ಮಂಗಳೂರು: ಕಾರು ಮತ್ತು ಸ್ಕೂಟರ್ ಮಧ್ಯೆ ಸಂಭವಿಸಿದ ಅಪಘಾತಕ್ಕೆ ಸಂಬಂಧಿಸಿ ಕಾರನ್ನು ಠಾಣೆಯಿಂದ ಬಿಡಿಸಿಕೊಳ್ಳಲು ಲಂಚಕ್ಕೆ ಬೇಡಿಕೆಯಿಟ್ಟ ಕದ್ರಿ ಟ್ರಾಫಿಕ್ ಠಾಣೆಯ ಹೆಡ್‌ಕಾನ್ಸ್‌ಟೇಬಲ್ ತಸ್ಲೀಂ ಎಂಬವರನ್ನು ಲೋಕಾಯುಕ್ತ ಪೊಲೀಸರು ಬಲೆಗೆ ಕೆಡವಿದ್ದಾರೆ.‌ ನಂತೂರು ಸರ್ಕಲ್‌ನಲ್ಲಿ ಸಂಭವಿಸಿದ ಅಪಘಾತದ ಬಗ್ಗೆ ಕದ್ರಿ ಟ್ರಾಫಿಕ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಕದ್ರಿ ಟ್ರಾಫಿಕ್ ಪೊಲೀಸ್ ಠಾಣೆಯ ಹೆಡ್‌ಕಾನ್ಸ್‌ಟೇಬಲ್ ತಸ್ಲಿಂ, ಕಾರು, ಕಾರಿನ ದಾಖಲಾತಿಗಳನ್ನು ಪೊಲೀಸ್ ಠಾಣೆಗೆ ತಂದು ಕೊಡುವಂತೆ ಸೂಚಿಸಿದ್ದು, ಅದರಂತೆ ಕಾರಿನ ಮಾಲಕರು ಎಲ್ಲವನ್ನೂ ಪೊಲೀಸ್ ಠಾಣೆಗೆ ಒಪ್ಪಿಸಿದ್ದರು….

Read More

ಸಿಎಂ, ಡಿಸಿಎಂ, ಸ್ಪೀಕರ್‌ ಯು.ಟಿ.ಖಾದರ್‌ ಹೆಸರಿನಲ್ಲಿ 30 ಕೋಟಿ ರೂ. ವಂಚನೆ: ಆರೋಪಿ ಮಹಿಳೆ ಬಂಧನ

ಬೆಂಗಳೂರು: ಸಿಎಂ, ಡಿಸಿಎಂ, ಸ್ಪೀಕರ್‌ ಹೆಸರಿನಲ್ಲಿ ಶ್ರೀಮಂತ ಕುಟುಂಬದ 20 ಮಹಿಳೆಯರಿಗೆ 30 ಕೋಟಿ ವಂಚನೆ ಮಾಡಿರುವ ಘಟನೆ ಬಸವೇಶ್ವರ ನಗರ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.ಹೆಚ್‌ವಿಕೆ ಗಾರ್ಡನ್‌ ನಿವಾಸಿ ಸವಿತಾ ಎಂಬಾಕೆ ಕಿಟ್ಟಿ ಪಾರ್ಟಿಯಲ್ಲಿ ಪರಿಚಯವಾದ ಶ್ರೀಮಂತ ಸ್ನೇಹಿತೆಯರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌, ಕೈಗಾರಿಕೆ ಸಚಿವ ಎಂ.ಬಿ.ಪಾಟೀಲ್‌, ವಿಧಾನಸಭೆ ಸ್ಪೀಕರ್‌ ಯು.ಟಿ.ಖಾದರ್‌ ಹೆಸರು ಬಳಸಿಕೊಂಡು 30 ಕೋಟಿ ವಂಚಿಸಿದ್ದಾರೆ. ಈ ಹಿನ್ನೆಲೆ ಆರೋಪಿ ಸವಿತಾ ಹಾಗೂ ಆಕೆಯ ಪರಿಚಯಸ್ಥ ಪುನೀತ್‌ ಎಂಬಾತನನ್ನು ಬಸವೇಶ್ವರ ನಗರ…

Read More

ಮಂಗಳೂರು : ಕರ್ನಾಟಕದ ಮೊದಲ ಸಮುದ್ರ ಆಂಬ್ಯುಲೆನ್ಸ್ ಮುಂದಿನ ಮೀನುಗಾರಿಕೆ ಋತುವಿನ ವೇಳೆಗೆ ಸಿದ್ಧ!

ಮಂಗಳೂರು: ಕರಾವಳಿ ಮೀನುಗಾರಿಕಾ ಸಮುದಾಯದ ಬಹುದಿನಗಳ ಕನಸು ನನಸಾಗುವ ಹಂತಕ್ಕೆ ತಲುಪಿದ್ದು, ಕರ್ನಾಟಕದ ಮೊದಲ ಸಮುದ್ರ ಆಂಬ್ಯುಲೆನ್ಸ್ 2026 ರ ಮುಂದಿನ ಮೀನುಗಾರಿಕೆ ಋತುವಿನ ವೇಳೆಗೆ ಸಿದ್ಧವಾಗುವ ನಿರೀಕ್ಷೆಯಿದೆ. ಮೀನುಗಾರಿಕೆ ಇಲಾಖೆಯು ಶೀಘ್ರದಲ್ಲೇ ಬಹುಕೋಟಿ ವೆಚ್ಚದ ತುರ್ತು ಹಡಗಿನ ನಿರ್ಮಾಣವನ್ನು ಪ್ರಾರಂಭಿಸಲಿದ್ದು, ಇದರ ಬೆಲೆ ಸುಮಾರು 7.85 ಕೋಟಿ ರೂ.ಗಳಷ್ಟಾಗುತ್ತದೆ. ಮೀನುಗಾರಿಕೆ ಇಲಾಖೆ ನಿರ್ದೇಶಕ ದಿನೇಶ್ ಕುಮಾರ್ ಕಲ್ಲರ್ ಅವರ ಪ್ರಕಾರ, ಸಮುದ್ರ ಆಂಬ್ಯುಲೆನ್ಸ್‌ಗಾಗಿ ಕೆಲಸದ ಆದೇಶವನ್ನು ಮುಂದಿನ ವಾರ ನೀಡಲಾಗುವುದು. ಸುಮಾರು ಏಳು ತಿಂಗಳಲ್ಲಿ ಹಡಗು ಸಿದ್ಧವಾಗಲಿದೆ…

Read More

ಸುಳ್ಯ: ಅರಂತೋಡು ಗ್ರಾ.ಪಂ. ಘನತ್ಯಾಜ್ಯ ಘಟಕಕ್ಕೆ ಬೆಂಕಿ

ಸುಳ್ಯ: ಅರಂತೋಡು ಗ್ರಾಮ ಪಂಚಾಯಿತಿಯ ಘನತ್ಯಾಜ್ಯ ಘಟಕಕ್ಕೆ ಆಕಸ್ಮಿಕವಾಗಿ ಬೆಂಕಿ ತಗುಲಿದ್ದು ಘಟಕ ಹೊತ್ತಿ ಉರಿದಿದೆ. ಬುಧವಾರ ಸಂಜೆ ಘಟನೆ ನಡೆದಿದ್ದು, ಘಟಕದಲ್ಲಿ ಪೂರ್ತಿಯಾಗಿ ತ್ಯಾಜ್ಯ ಬೇರ್ಪಡಿಸಿ ತುಂಬಿಡಲಾಗಿದ್ದು ಬೆಂಕಿ ತಗುಲಿ ಹೊತ್ತಿ ಉರಿದಿದೆ. ಕಟ್ಟಡ ಮತ್ತಿತರ ಸೇರಿ ಅಪಾರ ಹಾನಿ ಸಂಭವಿಸಿದೆ. ವಿದ್ಯುತ್ ಶಾರ್ಟ್ ಸಕ್ರ್ಯೂಟ್ ನಿಂದ ಬೆಂಕಿ ತಗುಲಿರಬಹುದು ಎಂದು ಶಂಕಿಸಲಾಗಿದೆ. ಅಗ್ನಿ ಶಾಮಕ ದಳದವರು ಬಂದು ಬೆಂಕಿ ನಂದಿಸಿದರು. ಘಟನೆಯಲ್ಲಿ ಘನತ್ಯಾಜ್ಯ ಸಂಪೂರ್ಣ ಹೊತ್ತಿ ಉರಿದಿದೆ. ಅಲ್ಲದೇ ಘನತ್ಯಾಜ್ಯ ವಿಲೇವಾರಿ ಮಾಡುವ ನಾಲ್ಕು…

Read More

ಉಳ್ಳಾಲ: ಕುಸಿದು ಬಿದ್ದು ನವ ವಿವಾಹಿತ ಸಾವು..!!

ಉಳ್ಳಾಲ : ರಕ್ತದೊತ್ತಡದಿಂದ ಕುಸಿದು ಬಿದ್ದು ಆಸ್ಪತ್ರೆಗೆ ದಾಖಲಾಗಿದ್ದ ವಿವಾಹಿತ ಯುವಕನೋರ್ವ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ ಘಟನೆ ಬುಧವಾರ ನಡೆದಿದೆ. ಮೃತ ಯುವಕನನ್ನು ಉಳ್ಳಾಲ ತಾಲೂಕಿನ ಮಂಜನಾಡಿ ಪೆರಡೆ ದಿ. ವೆಂಕಪ್ಪ ಹಾಗೂ ಪಾರ್ವತಿ ದಂಪತಿಯ ಪುತ್ರ ಭರತ್ (32) ಎಂದು ಗುರುತಿಸಲಾಗಿದೆ. ನಗರದಲ್ಲಿ ಟೈಲರ್ ಕೆಲಸ ಮಾಡುತ್ತಿದ್ದ ಭರತ್ ನಾಲ್ಕು ದಿನದ ಹಿಂದೆ ರಕ್ತದೊತ್ತಡದಿಂದ ಕುಸಿದು ಬಿದ್ದಿದ್ದರು. ತಕ್ಷಣ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಬುಧವಾರ ಮೃತಪಟ್ಟಿದ್ದಾರೆ. ಎಪ್ರಿಲ್ 22ರಂದು ಭರತ್ ವಿವಾಹ ಸಮಾರಂಭ…

Read More