ಸರ್ಕಾರದಿಂದ ‘ಮಹಿಳೆಯರ ಗರ್ಭಕಂಠದ ಕ್ಯಾನ್ಸರ್ ತಡೆಗೆ ಮಹತ್ವದ ಕ್ರಮ: 14 ವರ್ಷದ ಹೆಣ್ಣುಮಕ್ಕಳಿಗೆ HPV ಲಸಿಕೆ

ರಾಜ್ಯದಲ್ಲಿ ಮಹಿಳೆಯರಲ್ಲಿನ ಗರ್ಭಕಂಠದ ಕ್ಯಾನ್ಸರ್ ತಡೆಗೆ ಸರ್ಕಾರ ಮಹತ್ವದ ಕ್ರಮ ಕೈಗೊಂಡಿದೆ. 14 ವರ್ಷದ ಹೆಣ್ಣುಮಕ್ಕಳಿಗೆ ಗರ್ಭಕಂಠ ಕ್ಯಾನ್ಸರ್ ತಡೆಗಾಗಿ ಹೆಚ್ ಪಿ ವಿ ಲಸಿಕಾಕರಣ ನೀಡಲಾಗುವುದು ಅಂತ ಘೋಷಿಸಿದೆ. ಈ ಕುರಿತಂತೆ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ನಡವಳಿಯನ್ನು ಹೊರಡಿಸಿದ್ದು, ಮುಖ್ಯ ಮಂತ್ರಿಯವರ 2025-26ನೇ ಸಾಲಿನ ಆಯವ್ಯಯ ಘೋಷಣೆ ಕಂಡಿಕೆ-42ರಲ್ಲಿ “ಮಹಿಳೆಯರಲ್ಲಿ ಗರ್ಭಕಂಠದ ಕ್ಯಾನ್ಸರ್ ಅನ್ನು ತಡೆಗಟ್ಟಲು ಪಥಮ ಹಂತದಲ್ಲಿ ಗಣಿ ಭಾದಿತ ಮತ್ತು ಕಲ್ಯಾಣ ಕರ್ನಾಟಕ ಪುದೇಶದ 20…

Read More

ಆಧಾರ್ ಎಂದಿಗೂ ಮೊದಲ ಗುರುತಲ್ಲ: `UIDAI’ ಮುಖ್ಯಸ್ಥರಿಂದ ಮಹತ್ವದ ಮಾಹಿತಿ

ಬಿಹಾರದ ವಿಶೇಷ ತೀವ್ರ ಪರಿಷ್ಕರಣೆ (SIR) ಮತದಾರರ ಪಟ್ಟಿಗೆ ಸ್ವೀಕಾರಾರ್ಹ ಗುರುತಿನ ದಾಖಲೆಗಳ ಪಟ್ಟಿಯಿಂದ ಆಧಾರ್ ಅನ್ನು ಹೊರಗಿಡುವ ಬಗ್ಗೆ ನಡೆಯುತ್ತಿರುವ ಗದ್ದಲದ ನಡುವೆ, ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರ (UIDAI) ಸಿಇಒ ಭುವನೇಶ್ ಕುಮಾರ್ ಅವರು ಆಧಾರ್ “ಎಂದಿಗೂ ಮೊದಲ ಗುರುತು ಅಲ್ಲ” ಎಂದು ಹೇಳಿದ್ದಾರೆ. ಸಂದರ್ಶನವೊಂದರಲ್ಲಿ ಮಾತನಾಡಿದ ಕುಮಾರ್, ನಕಲಿ ಆಧಾರ್ ಕಾರ್ಡ್ ಉದ್ಯಮವನ್ನು ಪರಿಶೀಲಿಸಲು UIDAI ನಡೆಸುತ್ತಿರುವ ಪ್ರಯತ್ನಗಳ ಬಗ್ಗೆ ಹೇಳಿದ್ದು, ಆಧಾರ್ ಕಾರ್ಡ್ಗಳು QR ಕೋಡ್ ಮೂಲಕ ಅಂತರ್ನಿರ್ಮಿತ ಭದ್ರತಾ ಕಾರ್ಯವಿಧಾನವನ್ನು…

Read More

ಭಾರತ ಮೂಲದ ನರ್ಸ್‌ ನಿಮಿಷಾ ಪ್ರಿಯಾಗೆ ಜುಲೈ 16 ರಂದು ಯೆಮೆನ್ ನಲ್ಲಿ ಗಲ್ಲು ಶಿಕ್ಷೆ..!!

ಯೆಮೆನ್‌ ಪ್ರಜೆಯ ಕೊಲೆ ಪ್ರಕರಣದಲ್ಲಿ ಮರಣದಂಡನೆ ಶಿಕ್ಷೆಗೆ ಗುರಿಯಾಗಿರುವ ಭಾರತೀಯ ನರ್ಸ್‌ ನಿಮಿಷಾ ಪ್ರಿಯಾರನ್ನು ಜು.16 ರಂದು ಗಲ್ಲಿಗೇರಿಸಲಾಗುವುದು. ಕಳೆದ ವರ್ಷ, ಕೇರಳದ ನಿಮಿಷಾ ಪ್ರಿಯಾ ಅವರ ಮರಣದಂಡನೆಗೆ ಯೆಮೆನ್ ಅಧ್ಯಕ್ಷರು ಅನುಮೋದನೆ ನೀಡಿದ್ದರು. ಅಂದಿನಿಂದಲೂ ಈ ವಿಷಯವನ್ನು ನಿಕಟವಾಗಿ ಗಮನಿಸುತ್ತಿದ್ದೇವೆ. ಸ್ಥಳೀಯ ಅಧಿಕಾರಿಗಳು ಮತ್ತು ಅವರ ಕುಟುಂಬ ಸದಸ್ಯರೊಂದಿಗೆ ನಿರಂತರ ಸಂಪರ್ಕದಲ್ಲಿದ್ದು, ಸಾಧ್ಯವಿರುವ ಎಲ್ಲ ಸಹಾಯವನ್ನು ನೀಡಿದ್ದೇವೆ ಎಂದು ವಿದೇಶಾಂಗ ಸಚಿವಾಲಯದ ಮೂಲಗಳು ತಿಳಿಸಿವೆ. ನಿಮಿಷಾ ಪ್ರಿಯಾ ತನ್ನ ಹೆತ್ತವರನ್ನು ಪೋಷಿಸಲು 2008 ರಲ್ಲಿ ಯೆಮನ್‌ಗೆ…

Read More

ಪುತ್ತೂರು: ತಾಯಿ ಜೊತೆಗೆ ಬಸ್ಸಿಗೆಂದು ಕಾಯುತ್ತಿದ್ದ ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ- ಆರೋಪಿಯ ಬಂಧನ

ಪುತ್ತೂರು: ತನ್ನ ತಾಯಿ ಜೊತೆಗೆ ಬಸ್ಸಿಗೆಂದು ಕಾಯುತ್ತಿದ್ದ ಅಪ್ರಾಪ್ತ ಬಾಲಕಿಗೆ ವ್ಯಕ್ತಿಯೊಬ್ಬ ಲೈಂಗಿಕ ಕಿರುಕುಳ ನೀಡಿದ ಪ್ರಕರಣ ಪುತ್ತೂರಿನ ನೆಹರೂನಗರ ಬಸ್ಸು ನಿಲ್ದಾಣದಲ್ಲಿ ಮಂಗಳವಾರ ನಡೆದಿದ್ದು, ಆರೋಪಿಯನ್ನು ಬಂಧಿಸಿದ ಪೊಲೀಸರು ಪೋಕ್ಸೋ ಪ್ರಕರಣ ದಾಖಲಿಸಿದ್ದಾರೆ. ಪುತ್ತೂರಿನ ಕಬಕ ನಿವಾಸಿ ನವೀನ್ ಚಂದ್ರ (49) ಬಂಧಿತ ಆರೋಪಿ ಎಂದು ಪೊಲೀಸರು ತಿಳಿಸಿದ್ದು, ಈತನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಲಯವು ಆರೋಪಿ ನವೀನ್ ಚಂದ್ರನಿಗೆ 15 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ. ಬಾಲಕಿ ತನ್ನ ತಾಯಿಯೊಂದಿಗೆ ನಿಂತಿರುವ ಸಂದರ್ಭ ನವೀನ್ ಚಂದ್ರ ಅಸಭ್ಯ…

Read More

NIA ಭರ್ಜರಿ ಕಾರ್ಯಾಚರಣೆ : ಉಗ್ರರಿಗೆ ನೆರವು ನೀಡಿದ್ದ ವೈದ್ಯ,ಎಎಸ್ಐ ಸೇರಿ ಮೂವರು ಅರೆಸ್ಟ್

ಬೆಂಗಳೂರು : ರಾಜ್ಯದಲ್ಲಿ ಎನ್ ಐಎ ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಜೈಲಿನಲ್ಲಿರುವ ಶಂಕಿತ ಉಗ್ರರೊಂದಿಗೆ ನಿರಂತರ ಸಂಪರ್ಕ ಮತ್ತು ನೆರವು ನೀಡಿದ ಆರೋಪದಡಿ ಮೂವರನ್ನು ಬಂಧಿಸಿದೆ. ರಾಜ್ಯದ ಕೋಲಾರ ಮತ್ತು ಬೆಂಗಳೂರು ನಗರ ಜಿಲ್ಲೆಯ ಐದು ಸ್ಥಳಗಳ ಮೇಲೆ ರಾಷ್ಟ್ರೀಯ ತನಿಖಾ ದಳ(ಎನ್ಐಎ) ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಮನೋವೈದ್ಯ ಡಾ. ನಾಗರಾಜ್, ಉತ್ತರ ವಿಭಾಗದ ನಗರ ಶಶಸ್ತ್ರ ಮೀಸಲು ಪಡೆ ಎಎಸ್ಐ ಚಾಂದ್ ಪಾಷಾ ಮತ್ತು ತಲೆ ಮರೆಸಿಕೊಂಡಿರುವ ಶಂಕಿತ ಉಗ್ರ…

Read More

ಪುತ್ತೂರು: ಬಸ್ ಚಲಾಯಿಸುತ್ತಿದ್ದಾಗಲೇ ಅಸ್ವಸ್ಥಗೊಂಡ ಕೆಎಸ್ ಆರ್ ಟಿಸಿ ಬಸ್ ಚಾಲಕ

ಪುತ್ತೂರು: ಬಸ್ ಚಲಾಯಿಸುತ್ತಿದ್ದಾಗಲೇ ಕೆಎಸ್ ಆರ್ ಟಿಸಿ ಬಸ್ ಚಾಲಕ ಅಸ್ವಸ್ಥಗೊಂಡ ಘಟನೆ ಪುತ್ತೂರು ತಾಲೂಕಿನ ಒಳಮೊಗ್ರು ಗ್ರಾಮದ ಕುಂಬ್ರದ ಮಾಣಿ-ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ  ನಡೆದಿದೆ. ಪುತ್ತೂರಿನಿಂದ ಸುಳ್ಯಕ್ಕೆ ಚಾಲಕ ದಯಾನಂದ ಎಂಬುವರು ಬಸ್ ಚಲಾಯಿಸಿಕೊಂಡು ಹೋಗುತ್ತಿದ್ದ ವೇಳೆ ಘಟನೆ ನಡೆದಿದೆ. ಅಸ್ವಸ್ಥಗೊಂಡು ಸ್ಟಿಯರಿಂಗ್ ಮೇಲೆ ಬಿದ್ದರೂ ತಕ್ಷಣ ಬಸ್ ನಿಲ್ಲಿಸಿ ಪ್ರಯಾಣಿಕರನ್ನು ಅವರು ಪಾರು ಮಾಡಿದ್ದಾರೆ. ಬಸ್‌ ಕಂಬ್ರಕ್ಕೆ ತಲುಪುತ್ತಿದ್ದಂತೆ ದಯಾನಂದ ಅವರು ಅಸ್ವಸ್ಥಗೊಂಡಿದ್ದಾರೆ. ಸ್ಥಳೀಯರು ಅವರನ್ನು ಸ್ಥಳೀಯ ಕ್ಲಿನಿಕ್ ಒಂದಕ್ಕೆ ಕರೆದೊಯ್ದಿದ್ದು, ಪರೀಕ್ಷಿಸಿದ ವೈದ್ಯರು…

Read More

ಜನೌಷಧ ಕೇಂದ್ರಗಳನ್ನು ಸ್ಥಗಿತಗೊಳಿಸಿದ್ದ, ರಾಜ್ಯ ಸರ್ಕಾರದ ಆದೇಶಕ್ಕೆ ಮಧ್ಯಂತರ ತಡೆ ನೀಡಿದ ಹೈಕೋರ್ಟ್

 ಕಳೆದ ಕೆಲವು ದಿನಗಳ ಹಿಂದೆ ರಾಜ್ಯದ ಎಲ್ಲಾ ಸರ್ಕಾರಿ ಆಸ್ಪತ್ರೆ ಆವರಣಗಳಲ್ಲಿ ಇರುವಂತಹ ಜನೌಷಧ ಕೇಂದ್ರ ಸ್ಥಗಿತಗೊಳಿಸಿ ರಾಜ್ಯ ಸರ್ಕಾರ ಆದೇಶಿಸಿತ್ತು. ಇದೀಗ ಜನೌಷಧ ಕೇಂದ್ರಗಳನ್ನು ಸ್ಥಗಿತಗೊಳಿಸಿದ್ದ ರಾಜ್ಯ ಸರ್ಕಾರದ ಆದೇಶಕ್ಕೆ ತಡೆ ನೀಡಿದ್ದು, 16 ಅರ್ಜಿದಾರರಿಗೆ ಸಂಬಂಧಿಸಿದಂತೆ ಹೈಕೋರ್ಟ್ ಇದೀಗ ಮಧ್ಯಂತರ ಆದೇಶ ತಡೆ ನೀಡಿದೆ. ಹೌದು, ಜನೌಷಧ ಕೇಂದ್ರಗಳನ್ನು ಸ್ಥಗಿತಗೊಳಿಸಿದ ರಾಜ್ಯ ಸರ್ಕಾರದ ಆದೇಶಕ್ಕೆ ಹೈಕೋರ್ಟ್ ತಡೆ ನೀಡಿದೆ. 16 ಅರ್ಜಿದಾರರಿಗೆ ಸಂಬಂಧಿಸಿದಂತೆ ಹೈಕೋರ್ಟ್ ಮಧ್ಯಂತರ ದಡಿ ನೀಡಿ ಆದೇಶ ಹೊರಡಿಸಿದೆ. ಸರಕಾರಿ ಆಸ್ಪತ್ರೆಯ…

Read More

ಬಂಟ್ವಾಳ: ಅಪ್ರಾಪ್ತ ಬಾಲಕ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ..!!

ಬಂಟ್ವಾಳ : ಅಪ್ರಾಪ್ತ ಬಾಲಕನೊರ್ವ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ತುಂಬೆ ಗ್ರಾಮದ ಪರ್ಲಕ್ಕೆ ಎಂಬಲ್ಲಿ ಜುಲೈ 7 ರಂದು ಸಂಜೆ ವೇಳೆ ನಡೆದಿದೆ. ತುಂಬೆ ಪರ್ಲಕ್ಕೆ ನಿವಾಸಿ ಕರುಣಾಕರ ಗಟ್ಟಿ ಅವರ ಏಕೈಕ ಪುತ್ರ ತೇಜಸ್ ಆತ್ಮಹತ್ಯೆ ಮಾಡಿಕೊಂಡ ಬಾಲಕನಾಗಿದ್ದಾನೆ. ತೇಜಸ್ ಮೊಡಂಕಾಪು ಕಾಲೇಜೊಂದರಲ್ಲಿ ಪಿಯುಸಿ ವಿದ್ಯಾರ್ಥಿಯಾಗಿದ್ದಾನೆ ಎಂದು ತಿಳಿದು ಬಂದಿದೆ. ಆತನಿಗೆ ಪರೀಕ್ಷೆ ಇದ್ದು, ಸಂಜೆ ವೇಳೆ ಕ್ಲಾಸಿನಿಂದ ಮನೆಗೆ ಬಂದಿದ್ದಾನೆ. ತಂದೆ ತಾಯಿ ಇಬ್ಬರು ‌ಖಾಸಗಿ ಕೆಲಸದಲ್ಲಿರುವ ಕಾರಣ ಅವರು ಮನೆಗೆ…

Read More

ಮಂಗಳೂರು: ಬಾಲಕಿಯ ಅಪಹರಣ ಪ್ರಕರಣ- ದಂಪತಿ ಸೇರಿ ಮೂವರ ಬಂಧನ

ಮಂಗಳೂರು: ಬಾಲಕಿಯ ಅಪಹರಣ ಪ್ರಕರಣಕ್ಕೆ ಸಂಬಂಧಪಟ್ಟಂತೆ ದಂಪತಿ ಸೇರಿ ಮೂವರನ್ನು ಪೊಲೀಸರು ಬಂಧಿಸಿರುವ ಘಟನೆ ಮಂಗಳೂರಿನ ಉಳ್ಳಾಲದಲ್ಲಿ ನಡೆದಿದೆ. ಬಾಲಕಿಯನ್ನು ಅಪಹರಿಸಿದ ದೇರಳಕಟ್ಟೆ ಸಮೀಪದ ರೆಂಜಾಡಿ ನಿವಾಸಿ ಶಹಬಾಝ್ (27) ಹಾಗೂ ಆತನಿಗೆ ಸಹಕರಿಸಿದ ಕೊಣಾಜೆ ನಿವಾಸಿಗಳಾದ ಅಮೀರ್ ಸೊಹೈಲ್ ಆತನ ಪತ್ನಿ ನಿಶಾ ಬಂಧಿತರು. ಜುಲೈ 5 ರಂದು ಸಂಜೆ 4 ಗಂಟೆಗೆ ಉಳ್ಳಾಲ ಠಾಣಾ ವ್ಯಾಪ್ತಿಯ ಬಾಡಿಗೆಯ ಮನೆಯಲ್ಲಿ ವಾಸವಿರುವ 16 ವರ್ಷದ ಬಾಲಕಿಯೊಬ್ಬಳು ಮನೆಯಿಂದ ಹೊರ ಹೋದವಳು ಹಿಂತಿರುಗಿರಲಿಲ್ಲ. ಈ ಬಗ್ಗೆ ಬಾಲಕಿಯ…

Read More

ಮಂಗಳೂರು: ಇಂಜಿನಿಯರಿಂಗ್ ವಿದ್ಯಾರ್ಥಿ ಹೃದಯಾಘಾತದಿಂದ ನಿಧನ

ಮಂಗಳೂರು; ಇಂಜಿನಿಯರಿಂಗ್ ವಿದ್ಯಾರ್ಥಿಯೊಬ್ಬ ಹೃದಯಾಘಾತದಿಂದ ನಿಧನವಾಗಿರುವ ಘಟನೆ ಸುರತ್ಕಲ್ ಕೃಷ್ಣಾಪುರ ಹಿಲ್ ಸೈಡ್ ಬಳಿ ನಡೆದಿದೆ. ಹಿಲ್ ಸೈಡ್ ನಿವಾಸಿ ಅಸ್ಲರ್ ಅಲಿ ಎಂಬವರ ಪುತ್ರ ಅಫ್ತಾಬ್ (18) ಮೃತ ವಿದ್ಯಾರ್ಥಿ. ಈತ ಸುರತ್ಕಲ್ ಸೆಕ್ರೆಡ್ ಹಾರ್ಟ್ ನಲ್ಲಿ ಇಲೆಕ್ಟಿಕಲ್ ಇಂಜಿನಿಯರಿಂಗ್ ಡಿಪ್ಲೋಮಾ ಕಲಿಯುತ್ತಿದ್ದ ಎನ್ನಲಾಗಿದೆ. ಮಧ್ಯಾಹ್ನ 12 ಗಂಟೆಯ ಸುಮಾರಿಗೆ ಮನೆಯಲ್ಲಿ ಸ್ನಾನಕ್ಕೆಂದು ಹೋಗುತ್ತಿದ್ದ ವೇಳೆ ಹೃದಯಾಘಾತಕ್ಕೊಳಗಾಗಿ ಕುಸಿದು ಬಿದ್ದು ಮೃತಪಟ್ಟಿದ್ದಾನೆ. ಅಸ್ಲರ್ ಅಲ್ಲಿ ಅವರ ನಾಲ್ಕು ಮಂದಿ ಮಕ್ಕಳ ಪೈಕಿ ಅಫ್ತಾಬ್ ಏಕೈಕ ಗಂಡು…

Read More