ಬಂಟ್ವಾಳ: ರಸ್ತೆ ಡಿವೈಡರ್‌ಗೆ ಕಾರು ಢಿಕ್ಕಿ- ಯುವಕ ಮೃತ್ಯು

ಬಂಟ್ವಾಳ: ಕಾರೊಂದು ರಸ್ತೆ ಡಿವೈಡರ್‌ಗೆ ಡಿಕ್ಕಿ ಹೊಡೆದು ಪಲ್ಟಿಯಾಗಿ ಚಾಲಕ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಕೆಳಗಿನ ತುಂಬೆ ಎಂಬಲ್ಲಿ  ಇಂದುಶನಿವಾರ ಮಧ್ಯಾಹ್ನ ನಡೆದಿದೆ. ನೌಫಲ್ ಶನಿವಾರ ಬೆಳಿಗ್ಗೆ ಬಿ.ಸಿ.ರೋಡ್ ಕೈಕಂಬ ನಿವಾಸಿ ಉಸ್ಮಾನ್ ಎಂಬವರಿಗೆ ಸೇರಿದ ಸ್ವಿಫ್ಟ್ ಕಾರು ಖರೀದಿಸಿ ಅದನ್ನು ತೆಗೆದುಕೊಂಡು ಹೋಗುವ ವೇಳೆ ಕಾರು ಡಿವೈಡರ್ ಗೆ ಡಿಕ್ಕಿ ಹೊಡೆದು ಪಲ್ಟಿಯಾಗಿದೆ. ಪರಿಣಾಮ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾರೆ.    

Read More

ಪುತ್ತೂರು: ನಾಪತ್ತೆಯಾಗಿದ್ದ ವಿದ್ಯಾರ್ಥಿನಿ ಬೆಂಗಳೂರಿನಲ್ಲಿ ಪತ್ತೆ..!

ಪುತ್ತೂರು: ಪಡ್ನೂರು ಗ್ರಾಮದ ಮುಂಡಾಜೆಯಿಂದ ನಾಪತ್ತೆಯಾಗಿದ್ದ ವಿದ್ಯಾರ್ಥಿನಿ ಬೆಂಗಳೂರಿನಲ್ಲಿ ಪತ್ತೆಯಾಗಿದ್ದಾರೆ. ಪುತ್ತೂರು ಪಡ್ನೂರು ಮುಂಡಾಜೆ ನಿವಾಸಿ ಗಿರಿಜಾ ದೇವಿ, ಮಂಟು ಪಾಸ್ವಾನ ದಂಪತಿ ಪುತ್ರಿ ರೂಪ (19) ಜು.1ರಂದು ನಾಪತ್ತೆಯಾಗಿದ್ದರು. ಇದೀಗ ಅವರು ಬೆಂಗಳೂರಿನಲ್ಲಿ ಪತ್ತೆಯಾಗಿರುವ ಕುರಿತು ಮಾಹಿತಿ ಲಭ್ಯವಾಗಿದೆ. ರೂಪ ಅವರ ತಾಯಿ ಮಂಗಳೂರಿನ ನರ್ಸಿಂಗ್ ಹೋಂ ನಲ್ಲಿ ಕೆಲಸ ನಿರ್ವಹಿಸುತ್ತಿದ್ದು, ತಂದೆ ಉಡುಪಿಯಲ್ಲಿ ಗಾರೆ ಕೆಲಸ ನಿರ್ವಹಿಸುತ್ತಿದ್ದು, ಮನೆಯಲ್ಲಿ ರೂಪ ಹಾಗೂ ಆಕೆಯ ಸಹೋದರ ಮಾತ್ರ ವಾಸವಿದ್ದರು. ಜು.1 ಜೆರಾಕ್ಸ್ ಮಾಡಿಸಲು ಪೇಟೆಗೆ ಹೋಗಿ…

Read More

ಧರ್ಮಸ್ಥಳ ಘಟನೆಗೆ ಸಂಬಂಧಿಸಿ ಪ್ರಕರಣ ದಾಖಲು: ದ.ಕ. ಜಿಲ್ಲಾ ಎಸ್ಪಿ ಅರುಣ್ ಕುಮಾರ್

ಮಂಗಳೂರು: ಧರ್ಮಸ್ಥಳದಲ್ಲಿ ಈ ಹಿಂದೆ ನಡೆದ ಅಪರಾಧ ಪ್ರಕರಣಗಳಿಗೆ ಸಂಬಂಧಿಸಿದಂತೆ ಪ್ರಕರಣ ದಾಖಲಿಸಲಾಗಿದ್ದು, ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ದ.ಕ.ಜಿಲ್ಲಾ ಎಸ್ಪಿ ಡಾ. ಅರುಣ್ ಕುಮಾರ್ ತಿಳಿಸಿದ್ದಾರೆ. ಈ ಹಿಂದೆಯೇ ಧರ್ಮಸ್ಥಳದಲ್ಲಿ ಹಲವು ಅಪರಾಧ ಕೃತ್ಯಗಳು ನಡೆದಿದೆ. ತನಗೆ ಜೀವ ಬೆದರಿಕೆ ಒಡ್ಡಿ ಈ ಕೃತ್ಯಗಳ ಮೃತದೇಹಗಳನ್ನು ರಹಸ್ಯವಾಗಿ ವಿಲೇವಾರಿ ಮಾಡಿಸಿದ್ದಾರೆ. ಪ್ರಸಕ್ತ ತನಗೆ ಪಾಪಪ್ರಜ್ಞೆ ಕಾಡುತ್ತಿದೆ. ತನಗೆ ಹಾಗೂ ತನ್ನ ಕುಟುಂಬಕ್ಕೆ ಕಾನೂನಾತ್ಮಕವಾಗಿ ರಕ್ಷಣೆ ದೊರೆತ ಕೂಡಲೇ ಈ ಅಪರಾಧ ಕೃತ್ಯಗಳನ್ನು ನಡೆಸಿದವರ ಸಂಪೂರ್ಣ ಮಾಹಿತಿಯನ್ನು…

Read More

ಪುತ್ತೂರು: ಯುವತಿ ಗರ್ಭವತಿ ಪ್ರಕರಣ- ಆರೋಪಿ ಶ್ರೀ ಕೃಷ್ಣ ಜೆ ರಾವ್ ಅರೆಸ್ಟ್

ಯುವತಿಯೊಬ್ಬಳನ್ನು ಮದುವೆಯಾಗುವುದಾಗಿ ನಂಬಿಸಿ ಆಕೆಯ ಜೊತೆ ದೈಹಿಕ ಸಂಪರ್ಕ ಬೆಳೆಸಿ ಆಕೆಯನ್ನು ಗರ್ಭಿಣಿ ಮಾಡಿ ಮಗು ಕರುಣಿಸಿ ಇದೀಗ ಯುವಕ ಪುತ್ತೂರಿನ ಬಿಜೆಪಿ ಮುಖಂಡ ಜಗನ್ನಿವಾಸ್‌ ರಾವ್ ಎಂಬವರ ಪುತ್ರ ಕೃಷ್ಣ ಜೆ ರಾವ್ ನಾಪತ್ತೆಯಾಗಿದ್ದ. ಮಂಗಳೂರಿನ ಎಸ್ಪಿ ಅವರು ತನಿಖೆಯನ್ನು ಚುರುಕು ಗೊಳಿಸಿದ್ದು, ಈಗ ಪೊಲೀಸರ ಶೀಘ್ರ ಕಾರ್ಯಚರಣೆಯಲ್ಲಿ ಆರೋಪಿ ಶ್ರೀಕೃಷ್ಣ ಜೆ.ರಾವ್‌ನ್ನು ಪೊಲೀಸರು ಬಂಧಿಸಿದ್ದಾರೆ. ಪುತ್ತೂರಿನಿಂದ ತೆರಳಿರುವ ಪೊಲೀಸರ ತಂಡವೊಂದು ಮೈಸೂರು ಸಮೀಪ ಆರೋಪಿ ಇರುವುದನ್ನು ಪತ್ತೆ ಮಾಡಿ ಅಲ್ಲಿಂದ ವಶಕ್ಕೆ ಪಡೆದುಕೊಂಡು ಆಗಮಿಸುತ್ತಿರುವುದಾಗಿ…

Read More

ಪ್ರವೀಣ್ ನೆಟ್ಟಾರ್ ಹತ್ಯೆ ಪ್ರಕರಣದ ಆರೋಪಿ ಅಬ್ದುಲ್ ರಹಿಮಾನ್ ಎನ್‌ಐಎ ವಶಕ್ಕೆ

ಪುತ್ತೂರು ತಾಲೂಕಿನ ಬೆಳ್ಳಾರೆಯಲ್ಲಿ ನಡೆದ ಪ್ರವೀಣ್‌ ನೆಟ್ಟಾರು ಹತ್ಯೆ ಪ್ರಕರಣದಲ್ಲಿ ಪ್ರಮುಖ ಆರೋಪಿಗಳಿಗೆ ಆಶ್ರಯ ನೀಡಿದ್ದ ಕೊಡಗಿನ ಸೋಮವಾರಪೇಟೆ ತಾಲೂಕಿನ ಅಬ್ದುಲ್ ರೆಹಮಾನ್ ಕಲ್ಕಂದೂರು ಎಂಬಾತನನ್ನು ಎನ್. ಐ.ಎ. ಅಧಿಕಾರಿಗಳು ಕೇರಳದ ವಿಮಾನ ನಿಲ್ದಾಣದಲ್ಲಿ ಬಂಧಿಸಿದಿದ್ದಾರೆ. ಪ್ರವೀಣ್ ನೆಟ್ಟಾರು ಹತ್ಯೆ ಬಳಿಕ ವಿದೇಶಕ್ಕೆ ತೆರಳಿ ಕತಾರ್ ನ ದೋಹಾದಲ್ಲಿ ತಲೆಮರೆಸಿಕೊಂಡಿದ್ದ ಎಲ್ಲಾ ಆರೋಪಿಗಳಿಗಾಗಿ ಲುಕ್ ಔಟ್ ನೋಟೀಸ್ ಕೂಡ ಜಾರಿ ಮಾಡಲಾಗಿತ್ತು. ಅಬ್ದುಲ್ ರೆಹಮಾನ್ ಕಲ್ಕಂದೂರ್ ಹಾಗೂ ತಲೆಮರೆಸಿಕೊಂಡಿರುವ ಇತರರ ಬಗ್ಗೆ ಮಾಹಿತಿ ನೀಡಿದವರಿಗೆ ನಗದು ಬಹುಮಾನವನ್ನು…

Read More

ಉಳ್ಳಾಲ: ನಾಪತ್ತೆ ಆಗಿದ್ದ ತೇಜಸ್ ನ  ಮೃತದೇಹ ರೈಲ್ವೇ ಹಳಿಯಲ್ಲಿ ಪತ್ತೆ..!!

ಉಳ್ಳಾಲ: ಜು. 2 ರಂದು ರಾತ್ರಿ ನಾಪತ್ತೆಯಾದ ಬೀರಿ ನಿವಾಸಿ ಯುವಕನ ಮೃತದೇಹ ಉಚ್ಚಿಲ ರೈಲ್ವೇ ಗೇಟ್ ಸಮೀಪ ಪತ್ತೆಯಾಗಿದೆ. ಮೃತಪಟ್ಟ ಯುವಕನನ್ನು ಕೋಟೆಕಾರು ಬೀರಿ ನಿವಾಸಿ, ಮೋಹದಾಸ್ ಅಮೀನ್ ಎಂಬವರ ಪುತ್ರ ತೇಜಸ್(25) ಎಂದು ಗುರುತಿಸಲಾಗಿದೆ. ಜು. 02 ರಂದು ರಾತ್ರಿ ಮಲಗುವ ಕೋಣೆಯಿಂದ ತೇಜಸ್ ನಾಪತ್ತೆಯಾಗಿದ್ದ. ಈ ಕುರಿತು ಆತನ ತಂದೆ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಿಸಿದ್ದರು. ಇಂದು(ಜು.04) ಬೆಳಿಗ್ಗೆ ರೈಲ್ವೇ ಹಳಿಯಲ್ಲಿ ಮೃತದೇಹ ಪತ್ತೆಯಾಗಿದೆ. ತೇಜಸ್ ಮಣಿಪಾಲ ಶಿಕ್ಷಣ ಸಂಸ್ಥೆಯೊಂದರ…

Read More

ಉಳ್ಳಾಲ: ದೇಹದಾರ್ಢ್ಯ ಪಟು ಹೃದಯಾಘಾತದಿಂದ ಮೃತ್ಯು..!!

ಉಳ್ಳಾಲ: ಭಾರತ್ ಕಿಶೋರ್ ಟೈಟಲ್ ವಿಜೇತ ದೇಹದಾರ್ಢ್ಯ ಪಟು ರೈಲ್ವೇ ಉದ್ಯೋಗಿ ಜಲ್ಲಿಗುಡ್ಡೆ ನಿವಾಸಿ ಸಂತೋಷ್ ಕುಮಾರ್ ಉಳ್ಳಾಲ್ (52) ಹುಬ್ಬಳ್ಳಿಯಲ್ಲಿ ಗುರುವಾರ ಹೃದಯಾಘಾತದಿಂದ ನಿಧನ ಹೊಂದಿದರು. ಮೂಲತ: ಉಳ್ಳಾಲ ಉಳಿಯ ನಿವಾಸಿಯಾಗಿದ್ದ ಸಂತೋಷ್ ಕುಮಾರ್ ತೊಕ್ಕೊಟ್ಟಿನ ಶಕ್ತಿಭಾರತ್ ವ್ಯಾಯಾಮ ಶಾಲೆಯಲ್ಲಿ ತರವೇತಿ ಪಡೆದು ರಾಜ್ಯ ರಾಷ್ಟ ಮಟ್ಟದ ದೇಹದಾರ್ಢ್ಯ ಸ್ಪರ್ಧೆಯಲ್ಲಿ ಭಾಗವಹಿಸಿ ಪ್ರಶಸ್ತಿಯನ್ನು ಪಡೆದಿದ್ದರು. ಕರ್ನಾಟಕ ಉದಯ, ಭಾರತ್ ಕಿಶೋರ್ ಟೈಟಲ್ ವಿಜೇತರಾಗಿದ್ದರು. ರೈಲ್ವೇ ಇಲಾಖೆಯಲ್ಲಿ ಉದ್ಯೋಗದಲ್ಲಿದ್ದ ಅವರು ದೇಹದಾರ್ಢ್ಯ ಪಟುವಾಗಿ ರೈಲ್ವೇಯನ್ನು ಪ್ರತಿನಿಧಿಸಿದ್ದರು. ಮಂಗಳೂರು ರೈಲ್ವೇ…

Read More

ಪ್ರಚೋದನಕಾರಿ ಹೇಳಿಕೆ : ಶರಣ್ ಪಂಪ್ ವೆಲ್ ವಿರುದ್ಧ ಪ್ರಕರಣ ದಾಖಲು

ಉಡುಪಿ: ಪ್ರಚೋದನಕಾರಿ ಹೇಳಿಕೆ ನೀಡಿದ್ದಕ್ಕಾಗಿ ಶರಣ್ ಪಂಪವೆಲ್ ವಿರುದ್ಧ ಉಡುಪಿ ಪೊಲೀಸರು ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಪ್ರಕರಣ ಸಾರಾಂಶ : ದಿನಾಂಕ 03/07/2025 ರಂದು ಭರತೇಶ್‌ ಕಂಕಣವಾಡಿ, ಪೊಲೀಸ್‌ ಉಪನಿರೀಕ್ಷಕರು (ಕಾ ಮತ್ತು ಸು), ಉಡುಪಿ ನಗರ ಪೊಲೀಸ್‌ ಠಾಣೆ ಇವರು ಸೋಷಿಯಲ್‌ ಮೀಡಿಯಾವನ್ನು ವೀಕ್ಷಿಸುತ್ತಿದ್ದಾಗ ವಾಟ್ಸಾಪ್‌ ಮುಖಾಂತರ ವಿಡಿಯೋ ಬಂದಿದ್ದು, ವಿಡಿಯೋದಲ್ಲಿ ಶರಣ್‌ ಪಂಪವೆಲ್‌ ಟೈಮ್ಸ್‌ ಚಾನೆಲ್‌ ನಲ್ಲಿ ಮಾಧ್ಯಮದೊಂದಿಗೆ ಮಾತನಾಡುತ್ತಾ ಕುಂಜಾಲುವಿನಲ್ಲಿ ನಡೆದ ಗೋ ಹತ್ಯೆ ಯನ್ನು ಉದ್ದೇಶಿಸಿ ಸಾರ್ವಜನಿಕವಾಗಿ ಧರ್ಮಗಳ ನಡುವೆ…

Read More

ಮಂಗಳೂರು: ಇನ್ಸ್ಟಾಗ್ರಾಂ ನಲ್ಲಿ  ಕೋಮು ಪ್ರಚೋದನಾಕಾರಿ ಸ್ಟೇಟಸ್ ಹಾಕಿದ ಯುವಕ ಅರೆಸ್ಟ್

ಮಂಗಳೂರು: ವಾಟ್ಸಾಪ್ ಲ್ಲಿ ಕೋಮು ಪ್ರಚೋದನಾಕಾರಿ ಸ್ಟೇಟಸ್ ಹಾಕಿದ ಯುವಕನನ್ನು ಅರೆಸ್ಟ್ ಮಾಡಲಾಗಿದೆ.ಕಾರ್ಕಳ ತಾಲೂಕಿನ ಇರ್ವತ್ತೂರು ಗ್ರಾಮದ ಆಶಿಕ್ ಎಸ್ ಕೋಟ್ಯಾನ್ (25) ಬಂಧಿತ ಆರೋಪಿ. ಸಾಮಾಜಿಕ ಜಾಲತಾಣವಾದ  ಇನ್ ಸ್ಟಾ ಗ್ರಾಂ ನಲ್ಲಿ  “ನಮಗೆ ಯಾವುದೇ ರೀತಿಯ ಉತ್ತರಗಳು  ಬೇಡ, ರಕ್ತಕ್ಕೆ ರಕ್ತವೇ ಉತ್ತರವಾಗಬೇಕು, ಜೀವಕ್ಕೆ ಜೀವವೇ ಬೇಕು “ ಎಂಬುದಾಗಿ ಸ್ಟೇಟಸ್  ಹಾಕಿದ್ದು,  ಈ ದಿನ ದಿನಾಂಕ: 03-07-2025 ರಂದು ಈತನನ್ನು ಪತ್ತೆಹಚ್ಚಿ ವಿಚಾರಣೆ ನಡೆಸಿ  ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯ ಆತನಿಗೆ ನ್ಯಾಯಾಂಗ ಬಂಧನ…

Read More

ಮಂಗಳೂರು: ಮಾದಕ ವಸ್ತುಗಳನ್ನು ಮಾರಾಟ ಮಾಡಲು ಯತ್ನ..! ಆರೋಪಿಗಳ ಬಂಧನ

ಮಂಗಳೂರಿನ ಪಡುಶೆಡ್ಡೆ ಗ್ರಾಮದ ಹಾಲಾಡಿ ಎಂಬ ಸ್ಥಳದಲ್ಲಿ ಮಾದಕ ವಸ್ತುಗಳನ್ನು ಮಾರಾಟ ಮಾಡಲು ತಯಾರಿ ನಡೆಸುತ್ತಿರುವ  ವೇಳೆಗೆ   ದಾಳಿ ಮಾಡಿದ ಪೊಲೀಸರು ಐವರು ಆರೋಪಿಗಳನ್ನು ಜುಲೈ 2 ರಂದು ಬಂಧಿಸಿದ್ದಾರೆ.  ಆರೋಪಿಗಳ ವಿವರ ಇಂತಿದೆ.. 1) ತುಷಾರ್ @ ಸೋನು ಪ್ರಾಯ 21 ವರ್ಷ ತಂದೆ: ರಾಜೇಶ್ ತಾರನಾಥ್ ವಾಸ: ಅಡು ಮರೋಳಿ, ಬಿಕರ್ನಕಟ್ಟೆ, ಮಂಗಳೂರು  2) ಧನ್ವಿ ಶೆಟ್ಟಿ ಪ್ರಾಯ 20 ವರ್ಷ ತಂದೆ: ಬಾಲಕೃಷ್ಣ ಶೆಟ್ಟಿ ವಾಸ: ನಾಗುರಿ, ಮಂಗಳೂರು  3) ಸಾಗರ್ ಕರ್ಕೇರಾ…

Read More