30 ವರ್ಷ ಹಿಂದೆ 200 ರೂ.ಪಡೆದು ವಂಚಿಸಿದ್ದ ಆರೋಪಿ ಸೆರೆ

ಉಡುಪಿ: ಸರಕಾರಿ ಕೆಲಸ ಕೊಡಿಸುತ್ತೇನೆ ಎಂದು ನಂಬಿಸಿ 30 ವರ್ಷಗಳ ಹಿಂದೆ 200 ರೂಪಾಯಿ ಪಡೆದು ಮೋಸ ಮಾಡಿದ್ದ ಆರೋಪಿಯನ್ನು ಉತ್ತರ ಕನ್ನಡ ಜಿಲ್ಲೆಯ ಸಿರ್ಸಿ ಗ್ರಾಮೀಣ ಠಾಣೆ ಪೊಲೀಸರು ಬಂಧಿಸಿದ್ದಾರೆ. ಬೈಂದೂರಿನ ಮಯ್ಯಾಡಿಯ ಬಿ.ಕೆ. ರಾಮಚಂದ್ರ ರಾವ್ ಬಂಧಿತ ಆರೋಪಿ. ಸಿರ್ಸಿಯ ಬಿಳಿಗಿರಿ ಕೊಪ್ಪದ ವೆಂಕಟೇಶ ಅವರಿಗೆ ಪದವಿ ಓದುತ್ತಿರುವಾಗ ರಾಮಚಂದ್ರನ ಪರಿಚಯವಾಗಿತ್ತು. ಆತ ಸರಕಾರಿ ನೌಕರಿ ಕೊಡಿಸುವುದಾಗಿ 200 ರೂಪಾಯಿ ಪಡೆದು ಕೆಲಸ ಕೊಡಿಸದೆ ವಂಚಿಸಿರುವ ಕುರಿತು ಪ್ರಕರಣ ದಾಖಲಾಗಿತ್ತು. ಆರೋಪಿ ನ್ಯಾಯಾಲಯಕ್ಕೆ ಹಾಜರಾಗದೆ…

Read More

ಮಂಗಳೂರು ಪಾಲಿಕೆಯಲ್ಲಿ ನಕಲಿ ತೆರಿಗೆ ನೋಂದಣಿ ಜಾಲ : ಮಧ್ಯವರ್ತಿಯಿಂದ ಲಕ್ಷಾಂತರ ರೂ. ದೋಖಾ

 ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ನಕಲಿ ತೆರಿಗೆ ನೋಂದಣಿ ಜಾಲವೊಂದು ಪತ್ತೆ ಆಗಿದ್ದು, ನಕಲಿ ಪ್ರಮಾಣಪತ್ರಗಳನ್ನು ಸೃಷ್ಟಿಸಿ ಲಕ್ಷಾಂತರ ರೂ. ವಂಚನೆ ಮಾಡಿರುವಂತಹ ಘಟನೆ ಬೆಳಕಿಗೆ ಬಂದಿದೆ. ಮಹಾನಗರ ಪಾಲಿಕೆಯಿಂದ ನೀಡುವ ಸರ್ಟಿಫಿಕೇಟ್ನ್ನೇ ವಂಚಕರು ಕಂಪ್ಯೂಟರ್ ತಂತ್ರಜ್ಞಾನ ಬಳಸಿ ನಕಲಿ ಮಾಡಿ ವಂಚಿಸಿದ್ದಾರೆ. ಅಷ್ಟೇ ಅಲ್ಲದೆ ಉದ್ದಿಮೆದಾರರಿಂದ ಹಣ ಸಂಗ್ರಹಿಸಿ ಪಾಲಿಕೆಗೆ ಕಟ್ಟದೆ ಕೆಲ ಏಜೆಂಟರು ದೋಖಾ ಮಾಡಿದ್ದಾರೆ. ಸದ್ಯ ಪಾಲಿಕೆಯಿಂದ ಕಂಕನಾಡಿ ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ. ಈ ನಕಲಿ ಸರ್ಟಿಫಿಕೇಟ್ ಮೇಲ್ನೋಟಕ್ಕೆ ನೋಡಿದರೆ ಯಾವುದೇ…

Read More

ಮಂಗಳೂರು: ವಿವಿಧ ಸಾರ್ವಜನಿಕ ಕಾರ್ಯಕ್ರಮ, ಮೆರವಣಿಗೆಗಳ ಆಚರಣೆ- ಷರತ್ತು ವಿಧಿಸಿದ ಪೊಲೀಸ್ ಇಲಾಖೆ

ಮಂಗಳೂರು: ಹಬ್ಬಗಳ ಹಿನ್ನೆಲೆಯಲ್ಲಿ ನಗರದಲ್ಲಿ ಹಲವು ಸಾರ್ವಜನಿಕ ಕಾರ್ಯಕ್ರಮಗಳು ಮತ್ತು ಮೆರವಣಿಗೆಗಳು ನಡೆಯಲಿದೆ. ಅವುಗಳಲ್ಲಿ ಮೊಹರಂ, ಶ್ರೀಕೃಷ್ಣ ಜನ್ಮಾಷ್ಟಮಿ ಮತ್ತು ಮೊಸರು ಕುಡಿಕೆ, ಗಣೇಶ ಚತುರ್ಥಿ, ಈದ್ ಮಿಲಾದ್‌, ನವರಾತ್ರಿ ಉತ್ಸವ, ದೀಪಾವಳಿ, ಕ್ರಿಸ್ಮಸ್ ಪ್ರಮುಖವಾದವುಗಳಾಗಿವೆ. ಈ ಸಂಬಂಧ, ಸಾರ್ವಜನಿಕ ಶಾಂತಿ, ಸುರಕ್ಷತೆ ಮತ್ತು ಕಾನೂನು ಪಾಲನೆಯ ಹಿತದೃಷ್ಠಿಯಿಂದ ಕೆಲವು ಷರತ್ತುಗಳನ್ನು ಪಾಲಿಸಲು ಮಂಗಳೂರು ನಗರ ಪೊಲೀಸ್ ಇಲಾಖೆ ಸೂಚಿಸಿದೆ. ಯಾವುದೇ ಕಾರ್ಯಕ್ರಮಕ್ಕೆ ಅನುಮತಿ ಪಡೆಯುವ ಎಲ್ಲಾ ಆಯೋಜಕರು ಷರತ್ತುಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು. ಪ್ರತಿ ಹಬ್ಬದ ಮುಂಚಿತವಾಗಿ…

Read More

ಮಂಗಳೂರು: ಬಸ್ಸುಗಳ ನಡುವೆ ಪರಸ್ಪರ ಡಿಕ್ಕಿ..!! ಹಲವರಿಗೆ ಗಾಯ

ಮಂಗಳೂರು: 2ಬಸ್ಸುಗಳ ನಡುವೆ ಪರಸ್ಪರ ಡಿಕ್ಕಿಯಾದ ಘಟನೆ ಮಂಗಳೂರಿನ ಸುರತ್ಕಲ್‌ನಲ್ಲಿ ನಡೆದಿದೆ. ಬಸ್ಸುಗಳು ಸಂಪೂರ್ಣ ನುಜ್ಜು ಗುಜ್ಜುವಾಗಿದ್ದು, 14 ವಿದ್ಯಾರ್ಥಿಗಳು ಸೇರಿ 25 ಜನ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಹತ್ತಿರದ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಪಘಾತಕ್ಕೆ ಸಂಬಂಧಿಸಿದಂತೆ ಮಂಗಳೂರು ಉತ್ತರ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ. ಮೂಲಗಳ ಪ್ರಕಾರ, ಮದ್ಯದಿಂದ ಚೆಲ್ಯಾರು ಕಡೆಗೆ ಒಂದು ಬಸ್ಸು ಪ್ರಯಾಣಿಸುತ್ತಿದ್ದಾಗ, ನಿರ್ಲಕ್ಷ್ಯದಿಂದ ತಪ್ಪು ದಿಕ್ಕಿನಲ್ಲಿ ಚಲಿಸುತ್ತಿದ್ದ ಇನ್ನೊಂದು ಬಸ್ ಅದಕ್ಕೆ ಡಿಕ್ಕಿ ಹೊಡೆದಿದೆ.

Read More

ಬೆಳ್ತಂಗಡಿ: ಫೇಸ್‌ಬುಕ್‌ನಲ್ಲಿ ಪ್ರಧಾನಿ, ಕೇಂದ್ರ ಗೃಹ ಸಚಿವರ ಬಗ್ಗೆ ಅಸಭ್ಯ ಪೋಸ್ಟ್..!!

ಬೆಳ್ತಂಗಡಿ: ಪ್ರಧಾನಿ ಹಾಗೂ ಕೇಂದ್ರ ಗೃಹ ಸಚಿವರ ಫೊಟೋಗಳೊಂದಿಗೆ ನಗ್ನ ಮಹಿಳೆಯ ಫೊಟೋವನ್ನು ಹಾಕಿ ಹಿಂದೂ ಧರ್ಮದ ದೇವರುಗಳ ಫೊಟೋಗಳನ್ನು ಬಿಂಬಿಸುವ ರೀತಿಯಲ್ಲಿ ಕಾರ್ಟೂನ್ ಚಿತ್ರಗಳಿರುವ ಫೊಟೋಗಳನ್ನು ಸಾಮಾಜಿಕ ಜಾಲತಾಣ ವಾಟ್ಸಪ್ ಸ್ಟೇಟಸ್ ಪೋಸ್ಟ್ ಮಾಡಿದ ಅಜಿ.ಎಂ ಜೋಸೆಫ್ ಎಂಬಾತನ ವಿರುದ್ದ ವೇಣೂರು ಠಾಣೆಯಲ್ಲಿ ಪ್ರಕರಣ‌ ದಾಖಲಿಸಲಾಗಿದೆ. ಈ ಪೋಸ್ಟ್ ನಿಂದ ಧಾರ್ಮಿಕ ಭಾವನೆಗೆ ದಕ್ಕೆಯುಂಟಾಗುತ್ತದೆ ಹಾಗೂ ದ್ವೇಷ ಭಾವನೆಗೆ ಕಾರಣವಾಗಿದೆ ಎಂದು ದೂರು ನೀಡಲಾಗಿದ್ದು ಅದರಂತೆ ವೇಣೂರು ಠಾಣೆಯಲ್ಲಿ 353(2)BNS 2023‌ ರಂತೆ ಪ್ರಕರಣ ದಾಖಲಿಸಲಾಗಿದೆ.

Read More

ದಿಢೀರ್ ಹೃದಯಘಾತಕ್ಕೆ ‘ಕೋವಿಡ್ ವ್ಯಾಕ್ಸಿನ್’ ಕಾರಣವಲ್ಲ: ಐಸಿಎಂಆರ್-ಏಮ್ಸ್ ವರದಿ

ನವದೆಹಲಿ: ಭಾರತದ ಉನ್ನತ ಆರೋಗ್ಯ ಸಂಶೋಧನಾ ಸಂಸ್ಥೆಗಳು ನಡೆಸಿದ ಸಮಗ್ರ ಅಧ್ಯಯನಗಳು, ವಿಶೇಷವಾಗಿ 18–45 ವರ್ಷ ವಯಸ್ಸಿನ ವಯಸ್ಕರಲ್ಲಿ, COVID-19 ಲಸಿಕೆಯನ್ನು ( COVID-19 vaccination ) ಹಠಾತ್ ಸಾವುಗಳಿಗೆ ಯಾವುದೇ ಪುರಾವೆಗಳಿಲ್ಲ ಎಂಬುದಾಗಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಬಿಡುಗಡೆ ಮಾಡಿದ ಸಂಶೋಧನೆಗಳು, ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (Indian Council of Medical Research -ICMR), ರಾಷ್ಟ್ರೀಯ ರೋಗ ನಿಯಂತ್ರಣ ಕೇಂದ್ರ (National Centre for Disease Control – NCDC) ಮತ್ತು…

Read More

30 ವರ್ಷದಿಂದ ತಲೆಮರೆಸಿಕೊಂಡಿದ್ದ ಬೆಂಗಳೂರು ಸ್ಫೋಟದ ಉಗ್ರ ಅರೆಸ್ಟ್

ಚೆನ್ನೈ : ಬೆಂಗಳೂರು ನಗರ ಸೇರಿ ದಕ್ಷಿಣ ಭಾರತದ ಹಲವು ಬಾಂಬ್ ಸ್ಫೋಟಗಳ ಪ್ರಮುಖ ಸೂತ್ರಧಾರಿಯನ್ನು 30 ವರ್ಷಗಳ ಬಳಿಕ ತಮಿಳುನಾಡು ಪೊಲೀಸರು ಬಂಧಿಸಿದ್ದಾರೆ. ತಮಿಳುನಾಡಿನ ನಾಗೂರು ನಿವಾಸಿ ಅಬೂಬಕರ್ ಸಿದ್ದಿಕ್ (60) ಬಂಧಿತ ಉಗ್ರ. ಬಂಧಿತ ಉಗ್ರನು 1995ರಿಂದ ತಲೆ ಮರೆಸಿಕೊಂಡಿದ್ದನು. ಇದೀಗ ಆತನನ್ನು ತacಮಿಳುನಾಡು ಪೊಲೀಸರು ಆಂಧ್ರಪ್ರದೇಶದ ಅನ್ನಮಯ ಜಿಲ್ಲೆಯಲ್ಲಿ ಬಂಧಿಸಿದ್ದಾರೆ. ಈತನು ನಿಷೇಧಿತ ಸಂಘಟನೆಗಳಾದ ತಮಿಳುನಾಡಿದ ಅಲ್ ಉಮ್ಮ ಸೇರಿ ಹಲವು ಸಂಘಟನೆಗಳಿಗೆ ನೇಮಕಾತಿ ಮಾಡುತ್ತಿದ್ದ ಆರೋಪಿಯಾಗಿದ್ದ. ಈತನ ಜೊತೆಗಿದ್ದ ಮೊಹಮ್ಮದ್ ಅಲಿಯನ್ನು ಕೂಡಾ…

Read More

ಬಂಟ್ವಾಳ: 8 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ

ಬಂಟ್ವಾಳ ; ಕೊಲೆಯತ್ನ ಪ್ರಕರಣದಲ್ಲಿ 8 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಟ್ವಾಳ ಗ್ರಾಮಾಂತರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಬಂಟ್ವಾಳ ತಾಲೂಕಿನ ಮೂಡ ಗ್ರಾಮದ ನಿವಾಸಿ ಅಕ್ಬರ್ ಸಿದ್ದಿಕ್ ಬಂಧಿತ ಆರೋಪಿ. 2011ರಲ್ಲಿ ಬಂಟ್ವಾಳ, ತುಂಬೆ  ಗ್ರಾಮದ  ಅರ್ಬನಗುಡ್ಡೆ  ಎಂಬಲ್ಲಿ ನಡೆದ ಕೊಲೆಯತ್ನ ಪ್ರಕರಣಕ್ಕೆ ಸಂಬಂಧಿಸಿದಂತೆ, ಈತನ ವಿರುದ್ಧ ಪ್ರಕರಣ ದಾಖಲಾಗಿತ್ತು. ಈತ ಸುಮಾರು 8 ವರ್ಷಗಳಿಂದ ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗದೇ ತಲೆಮರೆಸಿಕೊಂಡಿದ್ದ . ಈತನನ್ನು ಬಂಟ್ವಾಳ ಗ್ರಾಮಾಂತರ ಠಾಣಾ ಪೊಲೀಸರು ದಿನಾಂಕ:30-06-2025 ರಂದು ಧರ್ಮಸ್ಥಳದಲ್ಲಿ ದಸ್ತಗಿರಿ ಮಾಡಿ,…

Read More

ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ 4 ಮಹತ್ವದ ನಿರ್ಧಾರ, ELI ಯೋಜನೆಗೆ ಅಸ್ತು, 3.5 ಕೋಟಿ ಉದ್ಯೋಗ ಸೃಷ್ಟಿ

ನವದೆಹಲಿ : ಕೇಂದ್ರ ಸಚಿವ ಅಶ್ವಿನಿ ವೈಷ್ಣವ್ ಅವರು, ಉದ್ಯೋಗ ಸಂಬಂಧಿತ ಪ್ರೋತ್ಸಾಹಕ ಯೋಜನೆ – 1.07 ಲಕ್ಷ ಕೋಟಿ ರೂ., ಸಂಶೋಧನೆ ಅಭಿವೃದ್ಧಿ ಮತ್ತು ನಾವೀನ್ಯತೆ (RDI) ಯೋಜನೆ – 1 ಲಕ್ಷ ಕೋಟಿ ರೂ., ರಾಷ್ಟ್ರೀಯ ಕ್ರೀಡಾ ನೀತಿ 2025 ಮತ್ತು ಪರಮಕುಡಿ-ರಾಮನಾಥಪುರಂ ರಾಷ್ಟ್ರೀಯ ಹೆದ್ದಾರಿಯ ಚತುಷ್ಪಥ – 1,853 ಕೋಟಿ ರೂ. ಗೆ ಕೇಂದ್ರ ಸಚಿವ ಸಂಪುಟ ಅನುಮೋದನೆ ನೀಡಿದೆ ಎಂದು ಹೇಳಿದರು. ಯುವಜರಿಗೆ ಹೊಸ ಮಾರ್ಗಗಳನ್ನು ಒದಗಿಸುವ ಮೂರು ನಿರ್ಧಾರಗಳಿವೆ ಎಂದು…

Read More

ಹೃದಯಾಘಾತಕ್ಕೆ ಬೆಳ್ತಂಗಡಿಯಲ್ಲಿ ವ್ಯಕ್ತಿಯೊಬ್ಬರು ಬಲಿ..!

ಬೆಳ್ತಂಗಡಿಯಲ್ಲಿ ಹೃದಯಾಘಾತಕ್ಕೆ ಬೆಳ್ತಂಗಡಿಯಲ್ಲಿ ವ್ಯಕ್ತಿಯೊಬ್ಬರು ಬಲಿಯಾಗಿದ್ದಾರೆ. ಆರೋಗ್ಯವಾಗಿದ್ದ ವ್ಯಕ್ತಿಗೆ ಏಕಾಏಕಿ ಎದೆನೋವು ಕಾಣಿಸಿಕೊಂಡಿದ್ದು ಆಸ್ಪತ್ರೆಗೆ ಹೋದಾಗ ಸಾವನ್ನಪ್ಪಿದ್ದಾರೆ. ಬೆಳ್ತಂಗಡಿ ತಾಲೂಕಿನ ಇಂದಬೆಟ್ಟು ಗ್ರಾಮದ ಕಲ್ಲಾಜೆ ಗಂಪದಕೋಡಿ ನಿವಾಸಿ ವಜ್ರಾಕ್ಷ ಪೂಜಾರಿ(53) ಎಂಬವರಿಗೆ ಜೂ.30 ರಂದು ರಾತ್ರಿ ಎದೆನೋವು ಕಾಣಿಸಿದೆ ಬಳಿಕ ತನ್ನ ಸ್ಕೂಟರ್ ನಲ್ಲಿ ಉಜಿರೆ ಖಾಸಗಿ ಆಸ್ಪತ್ರೆಗೆ ಹೋಗಿ ಚಿಕಿತ್ಸೆ ಮುಂದಾದಾಗ ಸಾವನ್ನಪ್ಪಿದ್ದಾರೆ. ವಜ್ರಾಕ್ಷ ಪೂಜಾರಿ ಆರೋಗ್ಯವಾಗಿದ್ದು ದಿನನಿತ್ಯದಂತೆ ರಬ್ಬರ್ ಟ್ಯಾಪಿಂಗ್ ಕೆಲಸಕ್ಕೆ ಹೋಗಿ ಸಂಜೆ ಮನೆಗೆ ಬಂದಾಗ ಎದೆನೋವು ಕಾಣಿಸಿಕೊಂಡು ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. ಇವರು…

Read More