ಭಾರತೀಯ ವಾಯುಪಡೆ: ಅಗ್ನಿವೀರ್‌ ಹುದ್ದೆಗೆ ಅರ್ಜಿ ಆಹ್ವಾನ

ವಾಯುಪಡೆ ಅಗ್ನಿಪಥ್ ಯೋಜನೆಯಡಿಯಲ್ಲಿ ಅಗ್ನಿವೀರ್ ಏರ್ ಇಂಟೇಕ್ 1/2026 ನೇಮಕಾತಿ ಪ್ರಕ್ರಿಯೆಯ ಪ್ರಾರಂಭವನ್ನು ವಾಯುಪಡೆ ಘೋಷಿಸಿದೆ. ಆಸಕ್ತ ಅಭ್ಯರ್ಥಿಗಳು agnipathvayu.cdac.in ಅರ್ಜಿ ಸಲ್ಲಿಸಬಹುದು. ವಯೋಮಿತಿ: ಜನವರಿ 1, 2005 ರಿಂದ ಜನವರಿ 1, 2008 ರ ನಡುವಿನ ವಯಸ್ಸಿನ ಯುವಕರು ಮಾತ್ರ ಈ ನೇಮಕಾತಿಯಲ್ಲಿ ಭಾಗವಹಿಸಬಹುದು. ಅಂದರೆ, ಅರ್ಜಿದಾರರ ಕನಿಷ್ಠ ವಯಸ್ಸು 17.5 ವರ್ಷಗಳು ಮತ್ತು ಗರಿಷ್ಠ 21 ವರ್ಷಗಳು ಆಗಿರಬೇಕು. ನಿಯಮಗಳ ಪ್ರಕಾರ ಕೆಲವು ವರ್ಗಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುವುದು. ಶೈಕ್ಷಣಿಕ ಅರ್ಹತೆ: ಮೂರು ರೀತಿಯ…

Read More

ಡ್ರಗ್ಸ್ ಚಟಕ್ಕೆ ತುತ್ತಾದವರ ಬಗ್ಗೆ ಮಾಹಿತಿ ನೀಡಲು ಇಲಾಖೆಯಿಂದ ಕ್ಯೂಆರ್ ಕೋಡ್ – ಸುಧೀರ್ ಕುಮಾರ್ ರೆಡ್ಡಿ

ಮಂಗಳೂರು : ಮಂಗಳೂರು ನಗರ ಪೊಲೀಸ್ ಮತ್ತು ದ.ಕ ಜಿಲ್ಲಾ ಪೊಲೀಸ್ ರಾಷ್ಟ್ರೀಯ ಸೇವಾ ಯೋಜನೆ ಘಟಕದ ವತಿಯಿಂದ ಅಂತರಾಷ್ಟ್ರೀಯ ಮಾಧಕ ಮತ್ತು ವಸ್ತು ವಿರೋಧಿ ದಿನ 2025 ಕಾರ್ಯಕ್ರಮ ಮಂಗಳೂರಿನ ಪುರಭವನದಲ್ಲಿ ನೆರವೇತು. ಕಾರ್ಯಕ್ರಮಕ್ಕೆ ಮಂಗಳೂರು ನಿಟ್ಟೆ ವಿಶ್ವ ವಿದ್ಯಾನಿಲಯದ ಉಪಕುಲಪತಿ ಡಾ. ಎಂ ಎಸ್ ಮುಡಿತ್ತಾಯ, ತುಳು ಚಲನ ಚಿತ್ರ ನಟ ರೂಪೇಶ್ ಶೆಟ್ಟಿ, ಮಂಗಳೂರು ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ, ದ.ಕ ಜಿಲ್ಲಾಧಿಕಾರಿ ಎಚ್ ವಿ ದರ್ಶನ್, ದ.ಕ ಜಿಲ್ಲಾ ಎಸ್ಪಿ ಡಾ….

Read More

ಮಂಗಳೂರು: ನಕಲಿ ಚಿನ್ನ ಅಡವಿಟ್ಟು ಬ್ಯಾಂಕಿಗೆ ಪಂಗನಾಮ ಹಾಕಿ ಪರಾರಿ..!! ದೂರು ದಾಖಲು

ಮಂಗಳೂರು: ನಗರದ ಪ್ರತಿಷ್ಠಿತ ಸಹಕಾರಿ ಬ್ಯಾಂಕ್ ಒಂದರಲ್ಲಿ ನಕಲಿ ಚಿನ್ನಾಭರಣಗಳನ್ನು ಅಡವಿಟ್ಟು ಲಕ್ಷಾಂತರ ರೂ. ಸಾಲ ಪಡೆದು ವಂಚಿಸಿರುವ ಘಟನೆಯೊಂದು ಬೆಳಕಿಗೆ ಬಂದಿದೆ. ಗುರುಪುರದ ಅದ್ದೂರು ನಿವಾಸಿ ಮುಹಮ್ಮದ್ ಆಸೀಫ್ ಎಂಬಾತನೇ ಈ ಕೃತ್ಯ ಎಸಗಿದಾತ. ಈತ ತನ್ನ ಎರಡು ಸಾಲದ ಖಾತೆಗಳಲ್ಲಿ ಐವತ್ತಾರು ಗ್ರಾಂ ತೂಕದ ಚಿನ್ನಾಭರಣ ಅಡವಿಟ್ಟಿದ್ದಾನೆ. ಅಸಲಿ ಚಿನ್ನವೆಂದು ನಂಬಿಸಿ ಒಟ್ಟು ಮೂರು ಲಕ್ಷದ ಮೂವತ್ತಾರು ಸಾವಿರ ರೂ. ಸಾಲ ಪಡೆದು ಎಸ್ಕೇಪ್ ಆಗಿದ್ದಾನೆ. ಬ್ಯಾಂಕ್ ಗೆ ವಂಚಿಸಿರುವ ಮುಹಮ್ಮದ್ ಆಸೀಫ್ ವಿರುದ್ಧ…

Read More

ಮಂಜೇಶ್ವರ: ತಾಯಿಯನ್ನು ಬೆಂಕಿ ಹಚ್ಚಿ ಕೊಲೆಗೈದ ಪ್ರಕರಣ-  ಆರೋಪಿಯ ಬಂಧನ

ಮಂಜೇಶ್ವರ: ತಾಯಿಯನ್ನು ಕೊಲೆಗೈದ ಪ್ರಕರಣದ ಆರೋಪಿ ಪುತ್ರನನ್ನು ಮಂಜೇಶ್ವರ ಠಾಣೆ ಪೊಲೀಸರು ಉಡುಪಿ ಜಿಲ್ಲೆಯ ಕೊಲ್ಲೂರಿನಲ್ಲಿ ಬಂಧಿಸಿದ್ದಾರೆ. ವರ್ಕಾಡಿ ಸಮೀಪದ ನಿವಾಸಿ ಹಿಲ್ಡಾ ಮೊಂತೆರೋ ಅವರ ಪುತ್ರ ಮೆಲ್ವಿನ್ (33) ಬಂಧಿತ ಆರೋಪಿ.ಮೊಬೈಲ್ ಲೋಕೇಶನ್ ಕೇಂದ್ರೀಕರಿಸಿ ನಡೆಸಿದ ತನಿಖೆಯಿಂದ ಆರೋಪಿಯನ್ನು ಕೊಲ್ಲೂರಿನಲ್ಲಿ ಬಂಧಿಸಲಾಗಿದ್ದು, ಮಂಜೇಶ್ವರ ಪೊಲೀಸರಿಗೆ ಹಸ್ತಾಂತರಿಸಲಾಗಿದೆ. ಶ್ರೀ ವಿನಯ್ . ಕೆ ಹಾಗೂ ಸಿಬ್ಬಂದಿಗಳಾದ ನಾಗೇಂದ್ರ ಕೊಲ್ಲೂರು ಸ್ಟೇಶನ್ ಪರಯ್ಯ ಮಠಪತಿ. ಮಾಳಪ್ಪ ದೇಸಾಯಿ. ಚಿದಾನಂದ ಬೈಂದೂರು ಪೊಲೀಸ್ ಸ್ಟೇಶನ್ ರವರು ಪಾಲ್ಗೊಂಡಿರುತ್ತಾರೆ. ಗುರುವಾರ ಮುಂಜಾನೆ ಘಟನೆ…

Read More

ಮಂಗಳೂರು: ತಾನು ಕೆಲಸ ಮಾಡಿದ ಬ್ಯಾಂಕ್‌ನಲ್ಲೇ ನಿವೃತ್ತ ಉದ್ಯೋಗಿ ಆತ್ಮಹತ್ಯೆ

ಮಂಗಳೂರು, ಜೂ. 26 : ಬ್ಯಾಂಕ್ ನ ನಿವೃತ್ತ ಉದ್ಯೋಗಿಯೊಬ್ಬರು ತಾನು ಕೆಲಸ ನಿರ್ವಹಿಸಿದ್ದ ಬ್ಯಾಂಕ್ ನಲ್ಲೇ ಆತ್ಮಹತ್ಯೆಗೆ ಶರಣಾದ ಘಟನೆ ಮಂಗಳೂರಿನ ಕೊಡಿಯಾಲ್ ಬೈಲ್ ನಲ್ಲಿರುವ ಕೆನರಾ ಬ್ಯಾಂಕ್ ನಲ್ಲಿ ನಡೆದಿದೆ. ಮೃತರನ್ನು ಅಳಕೆ ನಿವಾಸಿ ಗಿರಿದರ್ ಯಾದವ್ (61) ಎಂದು ಗುರುತಿಸಲಾಗಿದೆ. ಇವರು ಕೊಡಿಯಾಲ್ ಬೈಲ್ ಕೆನರಾ ಬ್ಯಾಂಕ್ ನಲ್ಲಿ ಸುಮಾರು 40 ವರ್ಷಗಳ ಕಾಲ ಕಾರ್ಯನಿರ್ವಹಿಸಿದ್ದರು. ಇತ್ತೀಚೆಗೆ ನಿವೃತ್ತಿ ಹೊಂದಿದ್ದರು. ಆದರೂ ಬ್ಯಾಂಕ್ ನ ಮೇಲಿನ ಪ್ರೀತಿಗೆ ಬ್ಯಾಂಕ್ ಗೆ ಬಂದು ಹೋಗುತ್ತಿದ್ದರು ಎಂದು…

Read More

ಮಂಜೇಶ್ವರ: ಬೆಂಕಿ ಹಚ್ಚಿ ತಾಯಿಯನ್ನು ಕೊಲೆಗೈದ ಮಗ..!!

ಮಂಜೇಶ್ವರ : ರಾತ್ರಿ ಹೊತ್ತು ಮನೆಯಲ್ಲಿ ಮಲಗಿದ ತಾಯಿಗೆ ಬೆಂಕಿ ಹಚ್ಚಿ ಆಕೆಯನ್ನು ಕೊಂದು ಬಳಿಕ, ನೆರೆಮನೆಯ ಮಹಿಳೆಯನ್ನು ಮನೆಗೆ ಕರೆಸಿ, ಆಕೆಗೂ ಬೆಂಕಿ ಹಚ್ಚಿದ ಘಟನೆ ವರ್ಕಾಡಿಯಲ್ಲಿ ನಡೆದಿದೆ. ತಾಯಿ ಸಾವನ್ನಪ್ಪಿದ್ದು ನೆರೆಮನೆಯ ಮಹಿಳೆ ಗಂಭೀರವಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ವರ್ಕಾಡಿ ನಲ್ಲಂಗಿ ನಿವಾಸಿ ದಿ.ಲೂಯಿಸ್ ಮೊಂತೇರೋರವರ ಪತ್ನಿ ಹಿಲ್ಡಾ (60) ಮೃತಪಟ್ಟ ಮಹಿಳೆ. ಪುತ್ರ ಮೇಲ್ವಿನ್ ಈ ಕೃತ್ಯವೆಸಗಿದ್ದಾನೆ. ನೆರೆಮನೆಯ ವಿಕ್ಟರ್ ರವರ ಪತ್ನಿ ಲೊಲಿಟಾ (30) ಗಂಭೀರಾವಸ್ಥೆಯಲ್ಲಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಜೂನ್ 26…

Read More

ಪುತ್ತೂರು: ಮದುವೆಯಾಗುವುದಾಗಿ ನಂಬಿಸಿ ದೈಹಿಕ ಸಂಪರ್ಕ- ಯುವಕನ ವಿರುದ್ಧ ಪ್ರಕರಣ ದಾಖಲು

ಪುತ್ತೂರು: ತನ್ನ ಸಹಪಾಠಿ ವಿದ್ಯಾರ್ಥಿನಿಯನ್ನು ಪ್ರೀತಿಸಿ ಬಳಿಕ ದೈಹಿಕ ಸಂಪರ್ಕ ಬೆಳೆಸಿ ಆಕೆಯನ್ನು ಗರ್ಭವತಿಯನ್ನಾಗಿ ಮಾಡಿ ವಿವಾಹವಾಗಲು ನಿರಾಕರಿಸಿ ತಪ್ಪಿಸಿಕೊಳ್ಳಲು ಯತ್ನಿಸಿದ ಯುವಕನೋರ್ವನ ವಿರುದ್ಧ ಸಂತ್ರಸ್ತ ಯುವತಿ ಪೊಲೀಸರಿಗೆ ದೂರು ನೀಡಿದ್ದಾಳೆ. ಯುವತಿಯ ದೂರಿನಂತೆ ಆರೋಪಿ ಯುವಕನ ವಿರುದ್ಧ ದಕ್ಷಿಣ ಕನ್ನಡ ಜಿಲ್ಲಾ ಮಹಿಳಾ ಠಾಣೆಯಲ್ಲಿ ಅತ್ಯಾಚಾರ ಮತ್ತು ನಂಬಿಕೆ ದ್ರೋಹದ ಪ್ರಕರಣ ದಾಖಲಾಗಿದೆ. ಪುತ್ತೂರಿನ ಬಪ್ಪಳಿಗೆ ನಿವಾಸಿ ಬಿಜೆಪಿ ಮುಖಂಡ ಹಾಗೂ ವಾಸ್ತುಶಿಲ್ಪಿ ಪಿ.ಜಿ ಜಗನ್ನಿವಾಸ್ ರಾವ್ ಎಂಬವರ ಪುತ್ರ ಪಿ.ಜಿ ಕೃಷ್ಣ ಜೆ. ರಾವ್ (21)…

Read More

ಮಳೆಯಿಂದ ಭೂಕುಸಿತ : ಶಿರಾಡಿ ಘಾಟ್ ಮಾರ್ಗದಲ್ಲಿ ವಾಹನ ಸಂಚಾರ ಬಂದ್..!!

 ಹಾಸನ ಜಿಲ್ಲೆಯಲ್ಲಿ ಮಳೆಯ ಆರ್ಭಟ ಮುಂದುವರೆದಿದ್ದು, ಸಕಲೇಶಪುರ ತಾಲೂಕಿನ ಹೆಗ್ಗದ್ದೆ ಮಾರನಹಳ್ಳಿ ಬಳಿ ಮಣ್ಣು ಕುಸಿತವಾಗಿದ್ದು, ಶಿರಾಡಿಘಾಟ್ ಮಾರ್ಗದಲ್ಲಿ ವಾಹನಗಳ ಸಂಚಾರ ಬಂದ್ ಮಾಡಲಾಗಿದೆ. ಸಕಲೇಶಪುರ ತಾಲೂಕಿನ ಹೆಗ್ಗದ್ದೆ ಮಾರನಹಳ್ಳಿ ಬಳಿ ಮಣ್ಣು ಕುಸಿತವಾಗಿದ್ದು,ರಾಷ್ಟ್ರೀಯ ಹೆದ್ದಾರಿ 75ರ ಶಿರಾಡಿ ಮಾರ್ಗದಲ್ಲಿ ವಾಹನಗಳ ಸಂಚಾರವನ್ನು ಬಂದ್ ಮಾಡಲಾಗಿದೆ.ಪರ್ಯಾಯ ಸಂಚಾರ ಮಾರ್ಗವನ್ನು ಜಿಲ್ಲಾಧಿಕಾರಿಗಳು ಸೂಚಿಸಿದ್ದು, ಮಂಗಳೂರು ಕಡೆಗೆ ತೆರಳುವ ವಾಹನಗಳಿಗೆ ಬೇಲೂರು ಮೂಲಕ ಚಾರ್ಮಾಡಿ ಘಾಟ್ ರಸ್ತೆ ಬಳಸುವಂತೆ ಸೂಚನೆ ನೀಡಲಾಗಿದೆ. ಮಂಗಳೂರು ಕಡೆಯಿಂದ ಬರುವ ವಾಹನ ಸವಾರರು ಕೊಡಗಿನ…

Read More

ಶೀಘ್ರದಲ್ಲಿ ಪುತ್ತೂರು – ಮಂಗಳೂರು ನಡುವೆ ನಾನ್ ಸ್ಟಾಪ್ KSRTC ಬಸ್

ಪುತ್ತೂರು: ಶೀಘ್ರದಲ್ಲಿ ಪುತ್ತೂರು ಮಂಗಳೂರು ನಡುವೆ ನಾನ್ ಸ್ಟಾಪ್ ಕೆಎಸ್ ಆರ್ ಟಿಸಿ ಬಸ್ ಸಂಚಾರ ಆರಂಭವಾಗಲಿದೆ. ಶಾಸಕ ಅಶೋಕ್‌ ರೈ ಅವರ ಅಧ್ಯಕ್ಷತೆಯಲ್ಲಿ ನಡೆದ ಕೆಎಸ್‌ಆರ್‌ಟಿಸಿ ಅಧಿಕಾರಿಗಳ ಸಭೆಯಲ್ಲಿ ಈ ಬಗ್ಗೆ ನಿರ್ಧರಿಸಲಾಗಿದೆ. ಪುತ್ತೂರಿನಿಂದ ನೇರವಾಗಿ ಮಂಗಳೂರಿಗೆ ತೆರಳುವ ಮತ್ತು ಮಂಗಳೂರಿನಿಂದ ನೇರವಾಗಿ ಪುತ್ತೂರಿಗೆ ಆಗಮಿಸುವ ಪ್ರಯಾಣಿಕರ ಅನುಕೂಲಕ್ಕಾಗಿ ಪುತ್ತೂರು – ಸ್ಟೇಟ್‌ಬ್ಯಾಂಕ್‌ ನಾನ್‌ಸ್ಟಾಪ್‌ ಬಸ್‌ಗಳನ್ನು ಶೀಘ್ರದಲ್ಲೇ ಸಂಚಾರ ಆರಂಭಿಸಿವೆ. ಆರಂಭದಲ್ಲಿ 6 ಬಸ್‌ಗಳು ಈ ಸೇವೆಗೆ ಲಭ್ಯವಾಗಲಿವೆ. ಇವು ಪುತ್ತೂರು ಬಿಟ್ಟ ಬಳಿಕ ಮಂಗಳೂರಿನಲ್ಲಿ…

Read More

ಉಪ್ಪಿನಂಗಡಿ : ರಾಷ್ಟ್ರೀಯ ಹೆದ್ದಾರಿಗೆ ಗುಡ್ಡ ಕುಸಿತ..! ವಾಹನ ಸಂಚಾರಕ್ಕೆ ಅಡಚಣೆ

ಉಪ್ಪಿನಂಗಡಿ: ಕೌಕ್ರಾಡಿ ಗ್ರಾಮದ ಮಣ್ಣಗುಂಡಿಯಲ್ಲಿ ನಿನ್ನೆ ಸಂಜೆ ಗುಡ್ಡ ಜರಿದು ಮಣ್ಣು ರಸ್ತೆಗೆ ಬಿದ್ದ ಪರಿಣಾಮ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರಲ್ಲಿ ವಾಹನ ಸಂಚಾರಕ್ಕೆ ಅಡಚಣೆ ಉಂಟಾಗಿದೆ. ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಬಿ.ಸಿ.ರೋಡ್‍ನಿಂದ ಅಡ್ಡಹೊಳೆ ತನಕ ಚತುಷ್ಪಥ ರಸ್ತೆ ನಿರ್ಮಾಣ ಕಾಮಗಾರಿ ನಡೆಯುತ್ತಿದ್ದು ಮಣ್ಣಗುಂಡಿಯಲ್ಲಿ ರಸ್ತೆ ನಿರ್ಮಾಣ ಸಂದರ್ಭ ಗುಡ್ಡ ಅಗೆಯಲಾಗಿದೆ. ಇಲ್ಲಿ ನೇರವಾಗಿ ಗುಡ್ಡ ಅಗೆದಿರುವುದರಿಂದ ಕೆಲ ದಿನಗಳಿಂದ ಮಣ್ಣು ಜರಿಯುತ್ತಿದ್ದು ಒಂದು ಬದಿಯಲ್ಲಿ ಮಾತ್ರ ವಾಹನ ಸಂಚಾರಕ್ಕೆ ಅವಕಾಶ ಮಾಡಿಕೊಡಲಾಗಿತ್ತು. ಇಂದು ಸುರಿದ…

Read More