ಉಳ್ಳಾಲ: BA ಸೈಕಾಲಜಿ ವಿದ್ಯಾರ್ಥಿನಿ ಡೆತ್‌ನೋಟ್ ಬರೆದಿಟ್ಟು ಆತ್ಮಹತ್ಯೆ..!
ಉಳ್ಳಾಲ: ದ್ವಿತೀಯ ವರ್ಷದ ಬಿಎ ಸೈಕಾಲಜಿ ವಿದ್ಯಾರ್ಥಿನಿಯೊಬ್ಬಳು ನೇಣಿಗೆ ಶರಣಾಗಿರುವ ಘಟನೆ ತಲಪಾಡಿಯ ಕಿನ್ಯದಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿಯನ್ನು ಶ್ರೇಯಾ (19) ಎಂದು ಗುರುತಿಸಲಾಗಿದೆ. ಶ್ರೇಯಾ ಓದಿನ ಒತ್ತಡ ಹಾಗೂ ತಲೆನೋವಿನಿಂದ ಬಳಲುತ್ತಿದ್ದಳು ಎಂದು ತಿಳಿದುಬಂದಿದೆ. ಶ್ರೇಯಾ ಬರೆದಿರುವ ಡೆತ್ ನೋಟ್ ಸಿಕ್ಕಿದ್ದು, ಅದರಲ್ಲಿ ಆಕೆಯನ್ನು ಕಪ್ಪು ಎಂದು ಅವಮಾನಿಸುತ್ತಿದ್ದ ಬಗ್ಗೆ ಬರೆದಿದ್ದಾಳೆ. ಅಲ್ಲದೇ, ಮೇ ತಿಂಗಳಿನಲ್ಲಿ ಶ್ರೇಯಾ ಬರೆದಿರುವ ಡೆತ್ ನೋಟೊಂದು ಸಿಕ್ಕಿದೆ. ನನ್ನನ್ನು ಯಾರೂ ಪ್ರೀತಿಸುವುದಿಲ್ಲ. ನಾನು ಬದುಕಬಾರದು, ಮನೆಯವರಿಗೆ ಕಷ್ಟವಾಗುತ್ತದೆ ಎಂದು…

