ಬೆಳ್ತಂಗಡಿ: ನಿಯಂತ್ರಣ ತಪ್ಪಿ ಆಟೋ ರಿಕ್ಷಾ ಪಲ್ಟಿ..! ಚಾಲಕ ಸಾವು

ಬೆಳ್ತಂಗಡಿ: ಚಾಲಕನ ನಿಯಂತ್ರಣ ತಪ್ಪಿ ಆಟೋ ರಿಕ್ಷಾವೊಂದು ಪಲ್ಟಿಯಾದ ಪರಿಣಾಮ ಚಾಲಕ ಸಾವನ್ನಪ್ಪಿದ ಘಟನೆ ಬೆಳ್ತಂಗಡಿಯ ಬದ್ಯಾರ್ ಸಮೀಪ ನಡೆದಿದೆ. ಮೃತಪಟ್ಟ ಚಾಲಕನನ್ನು ಮಾಲಾಡಿ ನಿವಾಸಿ ಶಿವಾನಂದ ಪಿ. ಮಾಳವ (33) ಎಂದು ಗುರುತಿಸಲಾಗಿದೆ. ಗುರುವಾಯನಕೆರೆಯಿಂದ ಅಳದಂಗಡಿಗೆ ಪ್ರಯಾಣಿಸುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ. ಗಂಭೀರವಾಗಿ ಗಾಯಗೊಂಡ ಶಿವಾನಂದ ಅವರನ್ನು ಸ್ಥಳೀಯರ ಸಹಕಾರದೊಂದಿಗೆ ಮಂಗಳೂರಿನ ಆಸ್ಪತ್ರೆಗೆ ಕೊಂಡೊಯ್ದರೂ ಆ ವೇಳೆಗೆ ಮೃತಪಟ್ಟಿದ್ದರು. ಸಹಪ್ರಯಾಣಿಕ ಶಿವರಾಜ್ ಗಾಯಗೊಂಡಿದ್ದು, ಅವರನ್ನು ಉಜಿರೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಬೆಳ್ತಂಗಡಿ ಸಂಚಾರ ಠಾಣೆಯ…

Read More

ಬಂಟ್ವಾಳ: ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಸುದ್ದಿ ಪ್ರಸಾರ – ಪ್ರಕರಣ ದಾಖಲು

ಬಂಟ್ವಾಳ: ಸಾಮಾಜಿಕ ಜಾಲತಾಣದಲ್ಲಿ ಯುವಕರ ಮೇಲೆ ದಾಳಿಗೆ ಯತ್ನ ಎಂದು ಸುಳ್ಳು ಸುದ್ದಿ ಪ್ರಸಾರ ಮಾಡಿದ ಕುರಿತು ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ದಿನಾಂಕ 21.06.2025 ರಂದು ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಅ.ಕ್ರ:73/2025 ಕಲಂ: 125 ಬಿ ಎನ್ ಎಸ್ ಪ್ರಕರಣದ ಘಟನೆಗೆ ಸಂಬಂಧಿಸಿದಂತೆ, “ಮುಸ್ಲಿಂ ಯುವ ಬಳಗ” ಎಂಬ ಹೆಸರಿನ ವಾಟ್ಸಾಪ್ ಗ್ರೂಪಿನಲ್ಲಿ Ziyad Ummi ಎಂಬ ಹೆಸರಿನ ವ್ಯಕ್ತಿಯೋರ್ವ “ಸಜಿಪ ದೇರಾಜೆ ರಸ್ತೆಯ ಮಧ್ಯೆ ಯುವಕರಿಬ್ಬರ ಮೇಲೆ ದಾಳಿಗೆ ಯತ್ನ, ಘಟನಾ…

Read More

ಪುತ್ತೂರು: ಜೋಡಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನ…!!

ಪುತ್ತೂರು: ಯುವಕ ಮತ್ತು ಯುವತಿ ವಿಷ ಸೇವಿಸಿ ಒದ್ದಾಡುತ್ತಿದ್ದ ವೇಳೆ ಸ್ಥಳೀಯರು ಅವರನ್ನು ಆಸ್ಪತ್ರೆಗೆ ಕರೆತಂದ ಘಟನೆ ನೆಲ್ಯಾಡಿಯಲ್ಲಿ ನಡೆದಿದೆ. ಯುವಕ ಮತ್ತು ಯುವತಿ ಮೂಲತಃ ಯಲಹಂಕದವರಾಗಿದ್ದು ಶ್ರೀಶಾ ಮತ್ತು ಪ್ರಜ್ವಲ ಎಂದು ಗುರುತಿಸಲಾಗಿದೆ. ನೆಲ್ಯಾಡಿ ಬಳಿ ವಿಷ ಸೇವಿಸಿ ಒದ್ದಾಡುತ್ತಿದ್ದ ಅವರನ್ನು ಗಮನಿಸಿದ ಸ್ಥಳೀಯರು ಅವರನ್ನು ಪುತ್ತೂರು ಸರಕಾರಿ ಆಸ್ಪತ್ರೆಗೆ ಆಂಬ್ಯುಲೆನ್ಸ್ ಮೂಲಕ ಕರೆತಂದಿದ್ದು ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿಗೆ ರವಾನಿಸಲಾಗಿದೆ ಎಂದು ತಿಳಿದು ಬಂದಿದೆ.

Read More

‘ಪದೇ ಪದೇ ನಿಯಮ ಉಲ್ಲಂಘನೆ’ ಮಾಡಿದರೆ ಏರ್ ಇಂಡಿಯಾ ಪರವಾನಗಿ ರದ್ದು: DGCA ಎಚ್ಚರಿಕೆ

ನವದೆಹಲಿ: ಪೈಲಟ್ ಕರ್ತವ್ಯ ವೇಳಾಪಟ್ಟಿ ಮತ್ತು ಮೇಲ್ವಿಚಾರಣೆಗೆ ಸಂಬಂಧಿಸಿದ “ಪುನರಾವರ್ತಿತ ಮತ್ತು ಗಂಭೀರ ಉಲ್ಲಂಘನೆ”ಗಳಿಗಾಗಿ ನಿರ್ಣಾಯಕ ಕಾರ್ಯಾಚರಣೆಯ ಪಾತ್ರಗಳಿಂದ ಮೂವರು ಸಿಬ್ಬಂದಿಯನ್ನು ತೆಗೆದುಹಾಕುವಂತೆ ವಿಮಾನಯಾನ ಸಂಸ್ಥೆಗೆ ಆದೇಶಿಸಿದ ನಂತರ ನಾಗರಿಕ ವಿಮಾನಯಾನ ನಿರ್ದೇಶನಾಲಯ (DGCA) ಏರ್ ಇಂಡಿಯಾದ ಪರವಾನಗಿಯನ್ನು ಅಮಾನತುಗೊಳಿಸಬಹುದು ಅಥವಾ ಹಿಂತೆಗೆದುಕೊಳ್ಳಬಹುದು ಎಂದು ಎಚ್ಚರಿಸಿದೆ. ಇಂಟಿಗ್ರೇಟೆಡ್ ಆಪರೇಷನ್ಸ್ ಕಂಟ್ರೋಲ್ ಸೆಂಟರ್ (IOCC) ನ ವಿಭಾಗೀಯ ಉಪಾಧ್ಯಕ್ಷೆ ಚೂರ ಸಿಂಗ್, ಸಿಬ್ಬಂದಿ ವೇಳಾಪಟ್ಟಿಯ ಮುಖ್ಯ ವ್ಯವಸ್ಥಾಪಕಿ-DOPS ಪಿಂಕಿ ಮಿತ್ತಲ್; ಮತ್ತು ಸಿಬ್ಬಂದಿ ವೇಳಾಪಟ್ಟಿ-ಯೋಜನೆ ಪಾಯಲ್ ಅರೋರಾ ಅವರನ್ನು…

Read More

ಪಹಲ್ಗಾಮ್‌ ದಾಳಿ : ಉಗ್ರರಿಗೆ ಆಶ್ರಯ ನೀಡಿದ್ದ ಇಬ್ಬರ ಬಂಧನ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಕಳೆದ ಏ.22ರಂದು 26 ಪ್ರವಾಸಿಗರನ್ನು ಕೊಂದು ಹಾಕಿದ್ದ ಉಗ್ರರಿಗೆ ಆಶ್ರಯ ನೀಡಿದ್ದ ಇಬ್ಬರನ್ನು ಎನ್‌ಐಎ ಅಧಿಕಾರಿಗಳು ಬಂಧಿಸಿದ್ದಾರೆ. ಬಂಧಿತರನ್ನು ಪರ್ವೈಜ್ ಅಹ್ಮದ್ ಜೋಥರ್ ಮತ್ತು ಬಶೀರ್ ಅಹ್ಮದ್ ಜೋಥರ್ ಎಂದು ಗುರುತಿಸಲಾಗಿದೆ. ಬಂಧಿತರಿಬ್ಬರು ಪಹಲ್ಗಾಮ್ ನಿವಾಸಿಗಳಾಗಿದ್ದು, ಪಾಕಿಸ್ತಾನದ ಲಷ್ಕರ್-ಎ-ತೈಬಾ ಉಗ್ರ ಸಂಘಟನೆಗೆ ಸೇರಿದ ಮೂವರು ಉಗ್ರರಿಗೆ ಆಶ್ರಯ ನೀಡಿದ್ದರು. ತನಿಖೆ ವೇಳೆ ಬಂಧಿತರು ದಾಳಿಕೋರರ ಗುರುತುಗಳನ್ನು ಬಹಿರಂಗಪಡಿಸಿದ್ದು, ಉಗ್ರರು ಪಾಕಿಸ್ತಾನಿ ಪ್ರಜೆಗಳು ಎಂದು ದೃಢಪಟ್ಟಿದೆ. ಆರೋಪಿಗಳ ವಿರುದ್ಧ ಯುಎಪಿಎ ಅಡಿಯಲ್ಲಿ…

Read More

ಯಕ್ಷಗಾನ ಹಾಸ್ಯಗಾರ ಮುಖ್ಯಪ್ರಾಣ ಕಿನ್ನಿಗೋಳಿ ಇನ್ನಿಲ್ಲ…!

ಮಂಗಳೂರು: ಐವತ್ತೆಂಟು ವರ್ಷಗಳಿಗೂ ಮಿಕ್ಕಿ ತೆಂಕು ಮತ್ತು ಬಡಗುತಿಟ್ಟು ಯಕ್ಷಗಾನದಲ್ಲಿ ಸೈ ಎನಿಸಿಕೊಂಡ ಖ್ಯಾತ ಕಲಾವಿದ, ಯಕ್ಷಗಾನ ಹಾಸ್ಯಗಾರ ಮುಖ್ಯಪ್ರಾಣ ಕಿನ್ನಿಗೋಳಿ ಅವರು ನಿನ್ನೆ ರಾತ್ರಿ ನಿಧನರಾಗಿದ್ದಾರೆ. ಅವರಿಗೆ ಎಂಭತ್ತನಾಲ್ಕು ವರ್ಷ ವಯಸ್ಸಾಗಿತ್ತು. ವಯೋಸಹಜ ಖಾಯಿಲೆಯಿಂದ ಬಳಲುತ್ತಿದ್ದರು. ಹವ್ಯಾಸಿ ಕಲಾವಿದರಾಗಿ ನಾಲ್ಕು ವರ್ಷ, ಕಟೀಲು, ಸುಬ್ರಹ್ಮಣ್ಯ, ಮಂತ್ರಾಲಯ, ಮಂದಾರ್ತಿ ಹೀಗೆ ಅತ್ಯಂತ ಖ್ಯಾತ ಮೇಳಗಳಲ್ಲಿ ಇವರು ಯಕ್ಷಗಾನ ಪ್ರದರ್ಶನ ನೀಡಿದ್ದಾರೆ. ನವರಾತ್ರಿ ಸಂದರ್ಭ ಕಟೀಲಿನಲ್ಲಿ ಪ್ರತೀ ವರ್ಷ ಬಣ್ಣ ಹಚ್ಚುತ್ತಿದ್ದರು. ಯಕ್ಷಗಾನ ಸೇವೆಗಾಗಿ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ…

Read More

ಗ್ರಾಮ ಪಂಚಾಯತ್‌ ಸಭೆಯಲ್ಲಿ ತುಳುವಿಗೆ ನಿಷೇಧ ಆದೇಶ ವಾಪಸ್‌

ಮಂಗಳೂರು: ಗ್ರಾಮ ಪಂಚಾಯತ್ ಸಾಮಾನ್ಯ ಸಭೆಯಲ್ಲಿ ಇಲಾಖೆಯ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳು ಚರ್ಚಿಸುವಾಗ ತುಳು ಭಾಷೆ ಬಳಕೆ ಮಾಡಬಾರದು ಎಂದು ನೀಡಿದ್ದ ಸುತ್ತೋಲೆಯನ್ನು ತುಳುವರ ಆಕ್ರೋಶಕ್ಕೆ ಮಣಿದು ಜಿಲ್ಲಾ ಪಂಚಾಯತ್‌ ವಾಪಾಸು ತೆಗೆದುಕೊಂಡಿದೆ. ಗ್ರಾಮ ಪಂಚಾಯತ್‌ ಸಾಮಾನ್ಯ ಸಭೆಗಳಲ್ಲಿ ತುಳು ಭಾಷೆಯಲ್ಲಿ ಚರ್ಚೆ ಮಾಡಬಾರದು. ಕನ್ನಡ ಭಾಷೆಗೆ ಆದ್ಯತೆ ನೀಡಬೇಕು ಎಂದು ಸೂಚಿಸಿ ಜಿಲ್ಲಾ ಪಂಚಾಯತ್‌ ಹೊರಡಿಸಿದ ಸುತ್ತೋಲೆಗೆ ತುಳುವರಿಂದ ಭಾರಿ ಆಕ್ರೋಶ ವ್ಯಕ್ತವಾಗಿತ್ತು. ಸಂಸದರಾದ ಕೋಟ ಶ್ರೀನಿವಾಸ ಪೂಜಾರಿ, ಕ್ಯಾ.ಬ್ರಿಜೇಶ್‌ ಚೌಟ, ಶಾಸಕರು ಮತ್ತು ಜನಸಾಮಾನ್ಯರು…

Read More

ಸೌಜನ್ಯಾ ಹೆಸರಿನಲ್ಲಿ ಲಕ್ಷ ಲಕ್ಷ ವಂಚನೆ..!! ಪ್ರಕರಣ ದಾಖಲು

ಸೌಜನ್ಯ ಹೆಸರಿನಲ್ಲಿ ಹೆಲ್ಪ್ ಲೈನ್ ತೆರೆದು ಲಕ್ಷ ಲಕ್ಷ ರೂಪಾಯಿ ವಂಚನೆ ಮಾಡಿರುವ ಆರೋಪದ ಮೇಲೆ ಬೆಂಗಳೂರಿನ ಸಂಧ್ಯಾ ಪವಿತ್ರ ನಾಗರಾಜ್ ವಿರುದ್ಧ ದಕ್ಷಿಣ ಕನ್ನಡ ಜಿಲ್ಲೆಯ ಪುಂಜಾಲಕಟ್ಟೆ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬೆಳ್ತಂಗಡಿ ತಾಲೂಕಿನ ಮಡಂತ್ಯಾರ್​ನ ಮಾಲಾಡಿ ನಿವಾಸಿ ಕೆ.ರಾಜೇಶ್ ಎಂಬುವರು ನೀಡಿದ ದೂರಿನ‌ ಅನ್ವಯ ಪ್ರಕರಣ ದಾಖಲಾಗಿದೆ. ದೂರುದಾರ ರಾಜೇಶ್ ವೃತ್ತಿಯಲ್ಲಿ ಗಾಯಕರಾಗಿದ್ದು, ಅರವಿಂದ್ ವಿವೇಕ್​ ಎಂಬ ಫೇಸ್​ಬುಕ್​ ಪೇಜ್​​ನಲ್ಲಿ ರಾಜೇಶ್ ಲೈವ್ ಸಂಗೀತ ಕಾರ್ಯಕ್ರಮ ನೀಡುತ್ತಿದ್ದರು. ರಾಜೇಶ್​ ಅವರಿಗೆ ಸಂಧ್ಯಾ 2024ರಲ್ಲಿ…

Read More

ಬಂಟ್ವಾಳ: ತಲ್ವಾರ್ ದಾಳಿಯಾಗಿದೆ ಎಂದು ವಾಟ್ಸಾಪ್ ನಲ್ಲಿ ಸುಳ್ಳು ಸುದ್ದಿ..! ಸ್ಪಷ್ಟನೆ ನೀಡಿದ ಪೊಲೀಸರು

ಬಂಟ್ವಾಳ; ಸಜಿಪನಡು ಎಂಬಲ್ಲಿ ತಲ್ವಾರ್ ದಾಳಿಯಾಗಿದೆ ಎಂದು ವಾಟ್ಸಾಪ್ ನಲ್ಲಿ ಸುಳ್ಳು ಸುದ್ದಿ ಪ್ರಸಾರವಾದ ಬಗ್ಗೆ ಪೊಲೀಸರು ಸ್ಪಷ್ಟನೆ ನೀಡಿದ್ದಾರೆ. ಕಳೆದ ವಾರ ಬಂಟ್ವಾಳ ಸಜಿಪನಡು ಎಂಬಲ್ಲಿ ದಾಖಲಾಗಿದ್ದ ಕೊಲೆ ಯತ್ನ ಪ್ರಕರಣದಲ್ಲಿ, ಘಟನಾ ಸ್ಥಳದ ಸಮೀಪ ಸಿಕ್ಕಿರುವ ಸಿಸಿಟಿವಿ ದೃಶ್ಯಾವಳಿಗಳಿಗೂ ದೂರುದಾರರು ನೀಡಿರುವ ದೂರಿಗೂ ವ್ಯತ್ಯಾಸಗಳು ಕಂಡುಬಂದಿದ್ದು, ಈ ಬಗ್ಗೆ  ಪರಿಶೀಲನೆ ಮುಂದುವರಿದಿರುತ್ತದೆ.ಈ ನಡುವೆ, ಇಂದು ರಾತ್ರಿ ಸುಮಾರು 10 ಗಂಟೆ ಸಮಯದಲ್ಲಿ, ದೂರುದಾರರಾದ ಮೊಹಮ್ಮದ್ ಮುಕ್ಬುಲ್ (34) ರವರು ಸಂಬಂಧಿಯೊರ್ವರ ಸ್ಕೂಟರ್ ನಲ್ಲಿ ಸಹಪ್ರಯಾಣಿಕರಾಗಿ…

Read More

ಸೋಷಿಯಲ್ ಮೀಡಿಯಾದಲ್ಲಿ ಸುಳ್ಳು ಸುದ್ದಿ ಹಬ್ಬಿಸಿದ್ರೆ 7 ವರ್ಷ ಜೈಲು, 10 ಲಕ್ಷ ದಂಡ

ಬೆಂಗಳೂರು: ಸಾಮಾಜಿಕ ಜಾಲತಾಣಗಳಲ್ಲಿ ಇತ್ತೀಚೆಗೆ ಬೇಕಾಬಿಟ್ಟಿ ಸುಳ್ಳು ಸುದ್ದಿ ಪಸರಿಸುವುದು ಕಾಮನ್ ಆಗಿ ಬಿಟ್ಟಿದೆ. ತಪ್ಪು ಮಾಹಿತಿ ಹಂಚಿಕೊಂಡವರಿಗೆ ಬಿಸಿ ಮುಟ್ಟಿಸಲು ಇದೀಗ ರಾಜ್ಯ ಸರ್ಕಾರ ಮುಂದಾಗಿದೆ. ಹೌದು ಇನ್ಮುಂದೆ ಸೋಷಿಯಲ್ ಮೀಡಿಯಾದಲ್ಲಿ ತಪ್ಪು ಮಾಹಿತಿ ಹಂಚಿಕೊಂಡವರಿಗೆ ಏಳು ವರ್ಷ ಜೈಲು ಶಿಕ್ಷೆ ಮತ್ತು ಹತ್ತು ಲಕ್ಷ ರೂ ದಂಡ ವಿಧಿಸಲು ಸಜ್ಜಾಗಿದೆ. `ಕರ್ನಾಟಕ ತಪ್ಪು ಮಾಹಿತಿ ಮತ್ತು ಸುಳ್ಳು ಸುದ್ದಿ ಮಸೂದೆ’ ಸಿದ್ಧವಾಗಿದ್ದು ಗುರುವಾರ ನಡೆದ ಸಚಿವ ಸಂಪುಟ ಸಭೆಯ ಮುಂದೆ ಅದನ್ನು ಮಂಡಿಸಲಾಗಿತ್ತು. ಸಾರ್ವಜನಿಕ…

Read More