ಪಹಲ್ಗಾಮ್‌ ಉಗ್ರ ದಾಳಿಗೆ ಸಹಕಾರ ನೀಡಿದ್ದ ಶಿಕ್ಷಕನ ಬಂಧನ

0 0
Read Time:2 Minute, 30 Second

ಶ್ರೀನಗರ: ಏಪ್ರಿಲ್ 22ರಂದು ನಡೆದ ಪಹಲ್ಗಾಮ್‌ನಲ್ಲಿ ಅಮಾಯಕ ಪ್ರವಾಸಿಗರನ್ನು ಗುಂಡು ಹಾರಿಸಿ ಕೊಂದು ಹಾಕಿದ ಭಯೋತ್ಪಾದಕ ದಾಳಿಯ ಉಗ್ರರಿಗೆ ಸಹಾಯ ಮಾಡಿದ್ದ ಜಮ್ಮು ಮತ್ತು ಕಾಶ್ಮೀರದ‌ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ.

ಬಂಧಿತನನ್ನು 26 ವರ್ಷದ ಮೊಹಮ್ಮದ್ ಯೂಸುಫ್ ಕಟಾರಿ ಎಂದು ಗುರುತಿಸಲಾಗಿದೆ. ಗುಪ್ತಚರ ಮಾಹಿತಿ ಮೇರೆಗೆ ದಕ್ಷಿಣ ಕಾಶ್ಮೀರದ ಕುಲ್ಗಾಮ್‌ ಜಿಲ್ಲೆಯಲ್ಲಿ ಕಟಾರಿಯನ್ನು ಬಂಧಿಸಲಾಗಿದ್ದು, ವಿಚಾರಣೆ ವೇಳೆ ಜಮ್ಮು-ಕಾಶ್ಮೀರ ಪೊಲೀಸರು ಕಟಾರಿ ಬಗ್ಗೆ ಹಲವು ರಹಸ್ಯಗಳನ್ನು ಬಯಲಿಗೆಳೆದಿದ್ದಾರೆ.

ಕುಲ್ಗಾಮ್‌ ಜಿಲ್ಲೆಯಲ್ಲಿ ಕಾರ್ಮಿಕನಾಗಿ ಕೆಲಸ ಮಾಡುತ್ತಿದ್ದ ಕಟಾರಿ ಶಿಕ್ಷಕನಾಗಿಯೂ ಕೆಲಸ ಮಾಡಿದ್ದ. ಈತ ಪಾಕಿಸ್ತಾನದ ಲಷ್ಕರ್‌ ಎ ತೈಬಾ ಭಯೋತ್ಪಾದಕ ಗುಂಪಿನೊಂದಿಗೆ ಸಂಪರ್ಕದಲ್ಲಿದ್ದ. ಏಪ್ರಿಲ್‌ 22ರಂದು ನಡೆದ ಪಹಲ್ಗಾಮ್ ದಾಳಿಯಲ್ಲಿ ಭಾಗಿಯಾಗಿದ್ದ ಉಗ್ರರಿಗೆ ಎಲ್ಲಾ ರೀತಿಯ ಸಹಾಯ ಮಾಡಿದ್ದ ಅನ್ನೋದು ಗೊತ್ತಾಗಿದೆ.

ಪಹಲ್ಗಾಮ್‌ ಉಗ್ರರನ್ನ ಕೆಲ ದಿನಗಳ ಹಿಂದೆ ನಡೆದ ಆಪರೇಷನ್‌ ಮಹಾದೇವ್‌ ಕಾರ್ಯಾಚರಣೆಯಲ್ಲಿ ಚಿನಾರ್‌ ಕಾರ್ಪ್ಸ್‌ ಬೆಟಾಲಿಯನ್‌ ಹತ್ಯೆಗೈದಿತ್ತು. ಆ ಬಳಿಕ ಉಗ್ರರಿಗೆ ಸೇರಿದ್ದ ಉಪಕರಣಗಳನ್ನು ವಶಪಡಿಸಿಕೊಳ್ಳಲಾಗಿತ್ತು. ಇದೆಲ್ಲದರ ವಿಶ್ಲೇಷಣೆಯ ಬಳಿಕ ಕಟಾರಿಯನ್ನು ಬಂಧಿಸಲಾಗಿದೆ.

ಮೇ 22ರಿಂದ 2-3 ವಾರಗಳ ಕಾಲ ಸತತವಾಗಿ ಆಪರೇಷನ್‌ ಮಹಾದೇವ್‌ ಕಾರ್ಯಾಚರಣೆ ನಡೆಸಲಾಯಿತು. ಈ ವೇಳೆ ಶ್ರೀನಗರ ಬಳಿಯ ದಚಿಗಮ್‌ ಅರಣ್ಯ ಪ್ರದೇಶದಲ್ಲಿ ಉಗ್ರರನ್ನ ಹತ್ಯೆಗೈಯಲಾಗಿತ್ತು. ಪಹಲ್ಗಾಮ್ ದಾಳಿಯ ಮಾಸ್ಟರ್ ಮೈಂಡ್ ಸೇರಿ ಮೂವರು ಭಯೋತ್ಪಾದಕರು ಕಾರ್ಯಾಚರಣೆಯಲ್ಲಿ ಹತ್ಯೆಯಾಗಿದ್ದರು. ಹತ್ಯೆಗೀಡಾದ ಉಗ್ರರ ಬಳಿಯಿದ್ದ ಎಕೆ-47 ರೈಫಲ್‌ ಹಾಗೂ M-9 ಅಸಾಲ್ಟ್‌ ರೈಫಲ್‌ಗಳನ್ನು ವಶಪಡಿಸಿಕೊಳ್ಳಲಾಗಿತ್ತು. ಬಳಿಕ ಆ ರೈಫಲ್‌ಗಳನ್ನ ಪಹಲ್ಗಾಮ್‌ ದಾಳಿಯಲ್ಲಿ ಬಖಲೆ ಮಾಡಲಾಗಿದೆ ಅನ್ನುವುದು ಚಂಡೀಗಢದ ಪ್ರಯೋಗಾಲಯದಲ್ಲಿ ಪರೀಕ್ಷೆ ನಡೆಸಿದ ಬಳಿಕ ಗೊತ್ತಾಯಿತು.

Happy
Happy
0 %
Sad
Sad
0 %
Excited
Excited
0 %
Sleepy
Sleepy
0 %
Angry
Angry
0 %
Surprise
Surprise
0 %

Average Rating

5 Star
0%
4 Star
0%
3 Star
0%
2 Star
0%
1 Star
0%

Leave a Reply

Your email address will not be published. Required fields are marked *