
Read Time:1 Minute, 17 Second
ನವದೆಹಲಿ : ಕೊನೆಗೂ ಪಾಕಿಸ್ತಾನ ಕದನ ವಿರಾಮವನ್ನು ಘೋಷಿಸಿದೆ. ಪಲ್ಗಾಂ ನಲ್ಲಿ ನಡೆದ ಉಗ್ರರ ದಾಳಿಯ ಪ್ರತೀಕಾರವಾಗಿ ಭಾರತ ಪಾಕಿಸ್ತಾನದ ಮೇಲೆ ಕ್ಷಿಪಣಿ ದಾಳಿ ಮಾಡಿತ್ತು. ಹೀಗಾಗಿ ಭಾರತ ಮತ್ತು ಪಾಕಿಸ್ತಾನದ ನಡುವೆ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದ್ದು, ಪಾಕಿಸ್ತಾನದ ಮೇಲೆ ನಿರಂತರವಾಗಿ ಭಾರತ ದಾಳಿ ನಡೆಸಿದ್ದು ಇದೀಗ ಪಾಕಿಸ್ತಾನ ಕೊನೆಗೂ ಕದನ ವಿರಾಮ ಘೋಷಿಸಿದೆ.


ಈ ಕುರಿತು ಪಾಕಿಸ್ತಾನದ ವಿದೇಶಾಂಗ ಸಚಿವ ಇಶಾಕ್ ಧಾರ್ ಟ್ವೀಟ್ ನಲ್ಲಿ ಮಾಹಿತಿ ಹಂಚಿಕೊಂಡಿದ್ದು, ನಾವು ಕದನ ವಿರಾಮಕ್ಕೆ ಸಿದ್ದರಿದ್ದೇವೆ ಎಂದು ತಿಳಿಸಿದ್ದಾರೆ. ಪಾಕಿಸ್ತಾನ ಮತ್ತು ಭಾರತ ತಕ್ಷಣದಿಂದ ಜಾರಿಗೆ ಬರುವಂತೆ ಕದನ ವಿರಾಮಕ್ಕೆ ಒಪ್ಪಿಕೊಂಡಿವೆ. ಪಾಕಿಸ್ತಾನವು ತನ್ನ ಸಾರ್ವಭೌಮತ್ವ ಮತ್ತು ಪ್ರಾದೇಶಿಕ ಸಮಗ್ರತೆಗೆ ಧಕ್ಕೆಯಾಗದಂತೆ ಈ ಪ್ರದೇಶದಲ್ಲಿ ಶಾಂತಿ ಮತ್ತು ಭದ್ರತೆಗಾಗಿ ಯಾವಾಗಲೂ ಶ್ರಮಿಸಿದೆ ಎಂದು ಬರೆದುಕೊಂಡಿದ್ದಾರೆ.