
ವಯಸ್ಸಾದ ತಂದೆ- ತಾಯಿಯನ್ನು ನೋಡಿಕೊಳ್ಳದ ಮಕ್ಕಳಿಗೆ ಆಸ್ತಿ ಸಿಗುವುದಿಲ್ಲ ಎಂದು ಮಹತ್ವದ ತೀರ್ಪು ನೀಡಿದೆ. ಉಡುಗೊರೆ ರೂಪದಲ್ಲಿ ಮಗನಿಗೆ ನೀಡಿದ್ದ ಆಸ್ತಿ ವರ್ಗಾವಣೆಯನ್ನು ರದ್ದುಗೊಳಿಸಿತಾಯಿಗೆ ಆಸ್ತಿಯನ್ನು ವಾಪಸ್ಸು ನೀಡುವಂತೆ ಸುಪ್ರೀಂ ಕೋರ್ಟ್ ಆದೇಶ ಹೊರಡಿಸಿದೆ.


ನ್ಯಾಯಮೂರ್ತಿಗಳಾದ ಸಂಜಯ್ ಕರೋಲ್ ಮತ್ತು ಸಿ. ಟಿ. ರವಿಕುಮಾರ್ ಅವರ ನ್ಯಾಯಪೀಠವು ಈ ತೀರ್ಪು ನೀಡಿದೆ. ಮಕ್ಕಳು ತಮ್ಮ ಜವಾಬ್ದಾರಿಗಳನ್ನು ನಿಭಾಯಿಸಲು ವಿಫಲರಾದರೆ ಪಾಲಕರು ಮತ್ತು ಹಿರಿಯ ನಾಗರಿಕರ ನಿರ್ವಹಣೆ ಮತ್ತು ಕಲ್ಯಾಣ ಕಾಯ್ದೆ, 2007 ರ ಅಡಿಯಲ್ಲಿ ರಚಿಸಲಾದ ನ್ಯಾಯ ಮಂಡಳಿಗಳು ಪೋಷಕರನ್ನು ಸರಿಯಾಗಿ ನೋಡಿಕೊಳ್ಳದ ಮಕ್ಕಳು ಆಸ್ತಿಯನ್ನು ಹಿಂದಿರುಗಿಸಬೇಕು ಎಂದು ತಿಳಿಸಿದೆ.
ವ್ಯಕ್ತಿಯೋರ್ವ, ತನ್ನ ತಂದೆ ಹಾಗೂ ತಾಯಿಯನ್ನು ಚೆನ್ನಾಗಿ ನೋಡಿಕೊಳ್ಳುತ್ತೇನೆ ಎಂಬ ಷರತ್ತಿನೊಂದಿಗೆ ಆಸ್ತಿ ವರ್ಗಾವಣೆ ಮಾಡಿಸಿಕೊಂಡಿದ್ದ. ಆದರೆ ಆತ ತನ್ನ ತಾಯಿಯೊಂದಿಗೆ ಅನುಚಿತವಾಗಿ ವರ್ತಿಸಲು ಶುರು ಮಾಡಿದ್ದಾನೆ.


ಹೀಗಾಗಿ ಸಂತ್ರಸ್ತೆ ಡಿಸೆಂಬರ್ 24, 2020 ರಂದು ಛತ್ತರ್‌ಪುರದ ಉಪವಿಭಾಗೀಯ ಮ್ಯಾಜಿಸ್ಟ್ರೇಟ್‌ಗೆ ಕಾಯಿದೆಯ ಸೆಕ್ಷನ್ 22 ಮತ್ತು 23 ರ ಅಡಿಯಲ್ಲಿ ಅರ್ಜಿಯನ್ನು ಸಲ್ಲಿಸಿದರು. ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ಈ ಆದೇಶ ನೀಡಿದೆ. ಮಕ್ಕಳು ತಮ್ಮ ತಂದೆತಾಯಿಯನ್ನು ನೋಡಿಕೊಳ್ಳಲು ವಿಫಲವಾದರೆ ಪೋಷಕರು ಮತ್ತು ಹಿರಿಯ ನಾಗರಿಕರ ಕಲ್ಯಾಣ ಕಾಯ್ದೆಯಡಿ ಪೋಷಕರು ನೀಡಿದ ಆಸ್ತಿ ಮತ್ತು ಉಡುಗೊರೆಗಳನ್ನು ಹಿಂತೆಗೆದುಕೊಳ್ಳಬಹುದು ಎಂದು ಸುಪ್ರೀಂ ಕೋರ್ಟ್ ತಿಳಿಸಿದೆ.
