ಪುತ್ತೂರು: ಮೃತದೇಹವನ್ನು ರಸ್ತೆ ಬದಿ ಇರಿಸಿ ಹೋದ ಪ್ರಕರಣ; ಪ್ರಮುಖ ಆರೋಪಿ ಸಹಿತ ಮೂವರ ಬಂಧನ

0 0
Read Time:1 Minute, 36 Second

ಪುತ್ತೂರು: ಸಾಲ್ಮರ ಕೆರೆಮೂಲೆಯಲ್ಲಿ ಕೂಲಿ ಕಾರ್ಮಿಕನ ಮೃತದೇಹವನ್ನು ರಸ್ತೆ
ಬದಿಯಲ್ಲಿ ಇರಿಸಿ ಹೋಗಿರುವ ಪ್ರಕರಣಕ್ಕೆ ಸಂಬಂಧಿಸಿದ ಪ್ರಮುಖ ಆರೋಪಿ ಹೆನ್ರಿ
ತಾವೋ ಸಹಿತ ಮೂವರನ್ನು ಪುತ್ತೂರು ಪೊಲೀಸರು ಬಂಧಿಸಿದ್ದಾರೆ.

ಆರೋಪಿಗಳ ವಿರುದ್ಧ ದಲಿತ ದೌರ್ಜನ್ಯ ಪ್ರಕರಣ ದಾಖಲಾಗಿತ್ತು. ಓರ್ವ
ಆರೋಪಿಯನ್ನು ಈ ಹಿಂದೆಯೇ ಬಂದಿಸಿದ್ದರು.

ತನ್ನೊಂದಿಗೆ ಕೆಲಸಕ್ಕೆ ಬಂದಿದ್ದ ಕೂಲಿ ಕಾರ್ಮಿಕ ಶಿವಪ್ಪ ಅವರ ಮೃತ
ದೇಹವನ್ನು ಪಿಕಪ್ ವಾಹನದಲ್ಲಿ ತಂದು ಅವರ ಮನೆಯ ಮುಂದಿನ ರಸ್ತೆ ಸಮೀಪ ಇರಿಸಿ
ಹೋದ ಘಟನೆ ನ.16ರಂದು ಸಾಲ್ಮರ ಕೆರೆಮೂಲೆಯಲ್ಲಿ ನಡೆದಿತ್ತು.

ಈ ಹಿನ್ನೆಲೆಯಲ್ಲಿ ಶಿವಪ್ಪ ಅವರು ಕೆಲಸ ಮಾಡುತ್ತಿದ್ದ ಸಂಸ್ಥೆಯ ಮಾಲಕ
ಹೆನ್ರಿ ತಾವೋ ಅವರ ಸಹಿತ ಮೂವರ ವಿರುದ್ಧ ಪ್ರಕರಣ ದಾಖಲಾಗಿತ್ತು.

ತನಿಖೆ ನಡೆಸಿದ ಪೊಲೀಸರು ಸ್ಪ್ಯಾನಿ ಮೇಸ್ತ್ರಿ ಎಂಬವರನ್ನು ಆರಂಭದಲ್ಲಿ
ಬಂಧಿಸಿದ್ದರು. ಈ ನಡುವೆ ಪ್ರಕರಣಕ್ಕೆ ಸಂಬಂಧಿಸಿ ಹೆನ್ರಿ ತಾವೋ ಅವರ ಪುತ್ರನ
ವಿರುದ್ಧವೂ ಆದಿ ದ್ರಾವಿಡ ಸಂಘಟನೆ ಪೊಲೀಸರಿಗೆ ದೂರು ನೀಡಿತ್ತು.

ಪ್ರಕರಣ ದಾಖಲಿಸಿಕೊಂಡಿದ್ದ ಪೊಲೀಸರು ಇದೀಗ ಹೆನ್ರಿ ತಾವೋ, ಅವರ ಪುತ್ರ
ಕಿರಣ್ ಮತ್ತು ಸಹಾಯಕ ಪ್ರಕಾಶ್ ಎಂಬವರನ್ನು ಬಂಧಿಸಿದ್ದಾರೆ.

Happy
Happy
0 %
Sad
Sad
0 %
Excited
Excited
0 %
Sleepy
Sleepy
0 %
Angry
Angry
0 %
Surprise
Surprise
0 %

Average Rating

5 Star
0%
4 Star
0%
3 Star
0%
2 Star
0%
1 Star
0%

Leave a Reply

Your email address will not be published. Required fields are marked *