
Read Time:49 Second
ಪುತ್ತೂರು: ಕಾಂಗ್ರೇಸ್ ಸರಕಾರದ ಜನ ವಿರೋಧಿ ನೀತಿ ಖಂಡಿಸಿ ಪುತ್ತೂರು ಬಿಜೆಪಿಯಿಂದ ಪ್ರತಿಭಟನೆ ನಡೆಸಲಾಯಿತು.


ಪುತ್ತೂರಿನ ಖಾಸಗಿ ಬಸ್ ನಿಲ್ದಾಣದಿಂದ ಎಸಿ ಕಛೇರಿ ತನಕ ಪಾದಾಯಾತ್ರೆಯ ಮೂಲಕ ಸಾಗಿದ ಬಿಜೆಪಿ ಕಾರ್ಯಕರ್ತರು, ರಾಜ್ಯದಲ್ಲಿ ಕಾಂಗ್ರೇಸ್ ಪಕ್ಷ ಅಧಿಕಾರಕ್ಕೆ ಬಂದ ಬಳಿಕ ಜನರು ಕಂಗಾಲಾಗಿದ್ದಾರೆ. ಡಿಸೀಲ್,ಪೆಟ್ರೋಲ್ ಬೆಲೆ ಏರಿಕೆಯಿಂದ ಇತರ ವಸ್ತುಗಳಿಗೂ ಬೆಲೆ ಏರಿಕೆಯಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ರಾಜ್ಯ ಸರಕಾರದ ಈ ನಡೆಯನ್ನು ಕೇಂದ್ರ ಸರಕಾರದ ಗಮನಕ್ಕೆ ತರಬೇಕು ಎಂದು ರಾಜ್ಯಪಾಲರ ಮೂಲಕ ಮನವಿ ಸಲ್ಲಿಸಿದರು.

