ಉದ್ಯೋಗ ಮೀಸಲಾತಿ: ಕನ್ನಡಿಗರ ಕ್ಷಮೆ ಕೋರಿದ ಫೋನ್‌ಪೇ ಸಿಇಒ ಸಮೀರ್ ನಿಗಮ್‌

0 0
Read Time:4 Minute, 42 Second

ಕನ್ನಡಿಗರಿಗೆ ಖಾಸಗಿ ಸಂಸ್ಥೆಗಳಲ್ಲಿ ನೀಡಲಾಗಿದ್ದ ಸರ್ಕಾರದ ಉದ್ಯೋಗ ಮೀಸಲಾತಿ ಕರುಡು ವಿರುದ್ಧ ಮಾತನಾಡಿದ್ದ ಫೋನ್‌ಪೇ ಸಿಇಒ ಸಮೀರ್ ನಿಗಮ್ ಬೇಷರತ್ ಕ್ಷಮೆಯಾಚಿಸಿದ್ದಾರೆ. ಕರ್ನಾಟಕ ಮತ್ತು ಜನರನ್ನು ಅವಮಾನಿಸುವ ಉದ್ದೇಶ ನನ್ನದಲ್ಲ ಎಂದು ಫೋನ್‌ಪೇ ಸಿಇಒ ಮತ್ತು ಸಂಸ್ಥಾಪಕ ಸಮೀರ್ ನಿಗಮ್‌ ತಿಳಿಸಿದ್ದಾರೆ.

ಖಾಸಗಿ ಕಂಪನಿಗಳಲ್ಲಿ ಕನ್ನಡಿಗರಿಗೆ ಉದ್ಯೋಗ ಕಲ್ಪಿಸುವ ಸಂಬಂಧ ರಾಜ್ಯ ಸರ್ಕಾರ ಸರ್ಕಾರವು ಮಸೂದೆ ಮಂಡಿಸಲು ನಿರ್ಧರಿಸಿತ್ತು. ಆದರೆ, ಖಾಸಗಿ ವಲಯದಿಂದ ವ್ಯಾಪಕ ವಿರೋಧ ವ್ಯಕ್ತವಾದ್ದರಿಂದ ತಾತ್ಕಾಲಿಕವಾಗಿ ತಡೆ ಹಿಡಿದಿದೆ.ಕಂಪನಿಗಳ ‘ಸಿ’ ಮತ್ತು ‘ಡಿ’ ದರ್ಜೆಯ ಹುದ್ದೆಗಳಿಗೆ ಕನ್ನಡಿಗರನ್ನು ನೇಮಿಸಿಕೊಳ್ಳುವ ಕುರಿತು ಫೋನ್‌ಪೇ ಸಿಇಒ ವಿರೋಧಿಸಿದ್ದರು. ಹೀಗಾಗಿ ಕನ್ನಡಿಗರ ಕೆಂಗಣ್ಣಿಗೆ ಗುರಿಯಾಗಿದ್ದರು. ಆಗ ರಾಜ್ಯಾದ್ಯಂತ ಕನ್ನಡಿಗರು ಫೋನ್‌ ಪೇ ಬಾಯ್ಕಾಟ್ ಆಕ್ರೋಶಕ್ಕೆ ಮಣಿದು ಸಿಇಒ ಸಮೀರ್ ನಿಗಮ್ ಕ್ಷಮೆಯಾಚನೆ ಮಾಡಿದ್ದಾರೆ.

ಮಸೂದೆ ಬಗ್ಗೆ ಪ್ರತಿಕ್ರಿಯಿಸಿದ್ದ ಫೋನ್‌ಪೇ ಸಿಇಒ ಮತ್ತು ಸಂಸ್ಥಾಪಕ ಸಮೀರ್ ನಿಗಮ್‌, ಸರ್ಕಾರದ ಈ ನಿರ್ಧಾರವು ನಾಚಿಕೆಗೇಡಿನ ಸಂಗತಿಯಾಗಿದೆ’ ಎಂದು ಪ್ರತಿಕ್ರಿಯಿಸಿದ್ದರು. ಇದಕ್ಕೆ ಸಾಮಾಜಿಕ ಜಾಲತಾಣಗಳಲ್ಲಿ ಕನ್ನಡಿಗರು ಆಕ್ರೋಶ ವ್ಯಕ್ತಪಡಿಸಿದ್ದರು. ಫೋನ್‌ ಪೇ ಬದಲಿಗೆ ಬೇರೆ ಯುಪಿಐ ಆಯಪ್‌ ಬಳಸುವಂತೆ ಅಭಿಯಾನ ಆರಂಭಿಸಿದ್ದರು. ‘ಬಾಯ್ಕಾಟ್‌ ಫೋನ್‌ಪೇ’ ಅಭಿಯಾನವು ತೀವ್ರಗೊಂಡಿತ್ತು. ಇದರಿಂದ ಎಚ್ಚೆತ್ತುಕೊಂಡಿರುವ ಸಿಇಒ ನಿಗಮ್‌ ಕನ್ನಡಿಗರ ಕ್ಷಮೆ ಕೋರಿದ್ದಾರೆ.

ಫೋನ್‌ಪೇ ಬೆಂಗಳೂರಿನಲ್ಲಿ ಆರಂಭಗೊಂಡಿತು. ಹೆಚ್ಚಿನ ಸಂಖ್ಯೆಯ ಬಳಕೆದಾರರನ್ನು ಹೊಂದಿದೆ. ಬೆಂಗಳೂರು ವಿಶ್ವದರ್ಜೆಯ ತಂತ್ರಜ್ಞಾನ ಮತ್ತು ವೈವಿಧ್ಯತೆಗೆ ಹೆಸರು ವಾಸಿಯಾಗಿರುವ ನಗರವಾಗಿದೆ. ಇಲ್ಲಿ ಫೋನ್‌ಪೇ ತನ್ನ ಬೇರುಗಳನ್ನು ಗಟ್ಟಿಯಾಗಿ ಹೊಂದಿರುವುದು ಹೆಮ್ಮೆಯ ವಿಷಯ. ‘ಕನ್ನಡಿಗರಿಗೆ ಉದ್ಯೋಗ ನೀಡುವ ಸಂಬಂಧ ಇತ್ತೀಚೆಗೆ ಮಾಧ್ಯಮಗಳಲ್ಲಿ ಪ್ರಕಟವಾಗಿದ್ದ ವರದಿಗಳನ್ನು ಓದಿದೆ. ಇದಕ್ಕೆ ಅನುಗುಣವಾಗಿ ಪ್ರತಿಕ್ರಿಯೆ ನೀಡಿದ್ದೇನೆ. ಕರ್ನಾಟಕ ಮತ್ತು ಕನ್ನಡಿಗರ ಭಾವನೆಗಳಿಗೆ ನೋವುಂಟು ಮಾಡುವ ಯಾವುದೇ ಉದ್ದೇಶ ಹೊಂದಿಲ್ಲ ಎಂದು ಹೇಳಿದ್ದಾರೆ.

ಬೆಂಗಳೂರಿನಲ್ಲಿ ಆರಂಭಗೊಂಡ ಫೋನ್‌ಪೇ ಕಂಪನಿಯ ಬೇರುಗಳು ದೇಶದಾದ್ಯಂತ ವಿಸ್ತರಿಸಿವೆ. 55 ಕೋಟಿಗೂ ಹೆಚ್ಚು ಬಳಕೆದಾರರ ಸುರಕ್ಷಿತ ಡಿಜಿಟಲ್‌ ಪಾವತಿಗೆ ನೆರವಾಗಿದೆ. ನನಗೆ ಕನ್ನಡ ಸೇರಿ ದೇಶದ ಎಲ್ಲ ಭಾರತೀಯ ಭಾಷೆಗಳ ಬಗ್ಗೆ ಅತೀವ ಗೌರವವಿದೆ. ಭಾಷಾ ವೈವಿಧ್ಯತೆ ಮತ್ತು ಸಾಂಸ್ಕೃತಿಕ ಶ್ರೀಮಂತಿಕೆ, ಪರಂಪರೆಯು ದೇಶದ ಆಸ್ತಿಯಾಗಿದೆ. ಇದಕ್ಕೆ ಎಲ್ಲ ಭಾರತೀಯರು ಹೆಮ್ಮೆಪಡಬೇಕಿದೆ ಎಂದು ತಿಳಿಸಿದ್ದಾರೆ.

ಬೆಂಗಳೂರು ಸೇರಿ ಕರ್ನಾಟಕದಾದ್ಯಂತ ಕನ್ನಡಿಗರಿಗೆ ಲಕ್ಷಾಂತರ ಉದ್ಯೋಗ ಗಳನ್ನು ಸೃಷ್ಟಿಸಲು ನಾನು ಸಹಾಯ ಮಾಡಲು ಸಿದ್ಧ. ಸುಸ್ಥಿರವಾದ ಉದ್ಯೋಗದ ದಾರಿಯನ್ನು ಸೃಷ್ಟಿಸ ಬೇಕಿದೆ. ಇದಕ್ಕಾಗಿ ಎಲ್ಲರೂ ಒಟ್ಟಾಗಿ ಕೆಲಸ ನಿರ್ವಹಿಸಬೇಕಿದೆ ಎಂದು ಹೇಳಿದ್ದಾರೆ.

ಕನ್ನಡಿಗರಿಗೆ ಮೀಸಲಾತಿ ಮಸೂದೆ ಕುರಿತು ಸಮೀರ್ ನಿಗಮ್‌ ಹೇಳಿದ್ದೇನು?

ನನಗೆ 46 ವರ್ಷ ವಯಸ್ಸು. 15 ವರ್ಷಗಳಿಗೂ ಹೆಚ್ಚು ಕಾಲ ಈ ರಾಜ್ಯದಲ್ಲಿ ವಾಸಿಸಲಿಲ್ಲ. ನಮ್ಮ ತಂದೆ ಭಾರತೀಯ ನೌಕಾಪಡೆಯಲ್ಲಿ ಸೇವೆ ಸಲ್ಲಿಸಿದ್ದವರು. ದೇಶದ ಎಲ್ಲ ಕಡೆ ನಿಯೋಜಿತರಾಗಿದ್ದವರು.ಇವರ ಮಕ್ಕಳು ಕರ್ನಾಟಕದ ಉದ್ಯೋಗಕ್ಕೆ ಅರ್ಹರಿಲ್ಲವೆ? ನಾನು ಹಲವು ಕಂಪನಿಗಳನ್ನು ನಿರ್ಮಿಸಿದ್ದೇನೆ. ದೇಶಾದ್ಯಂತ 25 ಸಾವಿರಕ್ಕೂ ಹೆಚ್ಚು ಉದ್ಯೋಗಗಳನ್ನು ಸೃಷ್ಟಿಸಿದ್ದೇನೆ. ನನ್ನ ಮಕ್ಕಳು ತಮ್ಮ ತವರು ನಗರದಲ್ಲಿ ಉದ್ಯೋಗಕ್ಕೆ ಅರ್ಹರಿಲ್ಲವೆ? ಸರ್ಕಾರದ ಈ ನಿರ್ಧಾರವು ನಾಚಿಕೆಗೇಡಿನ ಸಂಗತಿಯಾಗಿದೆ ಎಂದು ಹೇಳಿದ್ದರು.

Happy
Happy
0 %
Sad
Sad
0 %
Excited
Excited
0 %
Sleepy
Sleepy
0 %
Angry
Angry
0 %
Surprise
Surprise
0 %

Average Rating

5 Star
0%
4 Star
0%
3 Star
0%
2 Star
0%
1 Star
0%

Leave a Reply

Your email address will not be published. Required fields are marked *